16 ಎರಡನೆಯ ಮೃಗವು ಸಹ ಎಲ್ಲರನ್ನು ಅಂದರೆ ಚಿಕ್ಕವರನ್ನು, ದೊಡ್ಡವರನ್ನು, ಶ್ರೀಮಂತರನ್ನು, ಬಡವರನ್ನು, ಗುಲಾಮರನ್ನು ಮತ್ತು ಸ್ವತಂತ್ರರನ್ನು, ತಮ್ಮ ಬಲಗೈಯ ಮೇಲಾಗಲಿ ಅಥವಾ ತಮ್ಮ ಹಣೆಗಳ ಮೇಲಾಗಲಿ ಗುರುತು ಹಾಕಿಕೊಳ್ಳಬೇಕೆಂದು ಒತ್ತಾಯಪಡಿಸಿತು.
16 ಈ ಎರಡನೆಯ ಮೃಗವು, ದೊಡ್ಡವರು, ಚಿಕ್ಕವರು, ಐಶ್ವರ್ಯವಂತರು, ಬಡವರು, ಸ್ವತಂತ್ರರು, ದಾಸರು ಎಲ್ಲರೂ ತಮ್ಮತಮ್ಮ ಬಲಗೈಯ ಮೇಲಾಗಲಿ, ಹಣೆಯ ಮೇಲಾಗಲಿ ಗುರುತನ್ನು ಹೊಂದಬೇಕೆಂದು ಒತ್ತಾಯ ಮಾಡಿತ್ತು.
ನಂತರ ನಾನು ಕೆಲವು ಸಿಂಹಾಸನಗಳನ್ನು ಮತ್ತು ಅವುಗಳ ಮೇಲೆ ಜನರು ಕುಳಿತಿರುವುದನ್ನು ನೋಡಿದೆನು. ಈ ಜನರು ತೀರ್ಪು ನೀಡುವ ಅಧಿಕಾರವನ್ನು ಹೊಂದಿದ್ದರು. ಯೇಸುವಿನ ಸತ್ಯಕ್ಕೆ ಮತ್ತು ದೇವರ ಸಂದೇಶಕ್ಕೆ ನಂಬಿಗಸ್ತರಾಗಿದ್ದರ ನಿಮಿತ್ತವಾಗಿ ಕೊಲ್ಲಲ್ಪಟ್ಟವರ ಜೀವಾತ್ಮಗಳನ್ನು ನಾನು ನೋಡಿದೆನು. ಆ ಜನರು ಮೃಗವನ್ನಾಗಲಿ ಅದರ ವಿಗ್ರಹವನ್ನಾಗಲಿ ಆರಾಧಿಸಿರಲಿಲ್ಲ. ಅವರು ತಮ್ಮ ಹಣೆಯ ಮೇಲಾಗಲಿ ಕೈಗಳ ಮೇಲಾಗಲಿ ಮೃಗದ ಗುರುತನ್ನು ಹಾಕಿಸಿಕೊಂಡಿರಲಿಲ್ಲ. ಆ ಜನರು ಮತ್ತೆ ಜೀವವನ್ನು ಪಡೆದು ಕ್ರಿಸ್ತನೊಂದಿಗೆ ಒಂದುಸಾವಿರ ವರ್ಷ ಆಳಿದರು.
ಆದರೆ ಆ ಮೃಗವನ್ನೂ ಸುಳ್ಳುಪ್ರವಾದಿಯನ್ನೂ ಸೆರೆಹಿಡಿಯಲಾಯಿತು. ಈ ಸುಳ್ಳುಪ್ರವಾದಿಯೇ ಮೃಗಕ್ಕಾಗಿ ಅದ್ಭುತಗಳನ್ನು ಮಾಡಿದವನು. ಈ ಸುಳ್ಳುಪ್ರವಾದಿಯು ಮೃಗದ ಗುರುತು ಹಾಕಿಸಿಕೊಂಡಿರುವ ಮತ್ತು ಅದರ ವಿಗ್ರಹವನ್ನು ಆರಾಧಿಸಿದ ಜನರನ್ನು ಮರುಳು ಮಾಡಲು ಈ ಅದ್ಭುತಗಳನ್ನು ಬಳಸಿದ್ದನು. ಈ ಸುಳ್ಳುಪ್ರವಾದಿಯನ್ನೂ ಮೃಗವನ್ನೂ, ಬೆಂಕಿ ಮತ್ತು ಗಂಧಕಗಳಿಂದ ಉರಿಯುವ ಕೆರೆಯಲ್ಲಿ ಜೀವಂತವಾಗಿ ಎಸೆಯಲಾಯಿತು.
ಆಗ ಯೆಹೋವನು ಅವನಿಗೆ, “ಜೆರುಸಲೇಮ್ ನಗರದಲ್ಲೆಲ್ಲಾ ತಿರುಗಾಡು. ಜೆರುಸಲೇಮಿನಲ್ಲಿ ನಡೆಯುತ್ತಿರುವ ಅಸಹ್ಯವಾದ ದುಷ್ಕೃತ್ಯಗಳ ಬಗ್ಗೆ ನರಳಾಡುತ್ತಿರುವವರ ಮತ್ತು ನಿಟ್ಟುಸಿರುಬಿಡುತ್ತಿರುವವರ ಹಣೆಯ ಮೇಲ್ಗಡೆ ಒಂದು ಗುರುತನ್ನಿಡು” ಎಂದು ಹೇಳಿದನು.
ನೀವು ರಾಜರುಗಳ ಮತ್ತು ಸಹಸ್ರಾಧಿಪತಿಗಳ ಮತ್ತು ಸುಪ್ರಸಿದ್ಧ ಜನರ ದೇಹಗಳನ್ನು ತಿನ್ನಲು ಒಟ್ಟಾಗಿ ಬನ್ನಿರಿ. ಕುದುರೆಗಳ, ಕುದುರೆ ಸವಾರರ, ಸ್ವತಂತ್ರರಾದವರ, ಗುಲಾಮರ, ಚಿಕ್ಕವರ ಮತ್ತು ದೊಡ್ಡವರ ದೇಹಗಳನ್ನು ತಿನ್ನಲು ಬನ್ನಿರಿ.”
“ನಾನು ಹೇಳಿದ ಆಜ್ಞೆಗಳನ್ನು ಯಾವಾಗಲೂ ಜ್ಞಾಪಕದಲ್ಲಿಡಿರಿ. ಅದನ್ನು ನಿಮ್ಮ ಹೃದಯದಲ್ಲಿಡಿರಿ. ಅವುಗಳನ್ನು ಬರೆದು ಕೈಗಳಲ್ಲಿ ಮತ್ತು ಹಣೆಯ ಮೇಲೆ ಕಟ್ಟಿರಿ. ಇದು ನಿಮಗೆ ಜ್ಞಾಪಕ ಕೊಡುವುದು.
“ಈ ಹಬ್ಬವು ನಿಮ್ಮ ಕೈಗಳಲ್ಲಿ ಜ್ಞಾಪಕಪಟ್ಟಿಯಂತಿದ್ದು ಯೆಹೋವನು ತನ್ನ ಮಹಾಶಕ್ತಿಯಿಂದ ನಿಮ್ಮನ್ನು ಈಜಿಪ್ಟಿನಿಂದ ಬಿಡಿಸಿದ್ದನ್ನು ಮತ್ತು ನಿಮಗೆ ಆತನು ನೀಡಿದ ಉಪದೇಶಗಳನ್ನು ನೆನಪಿಗೆ ತರುತ್ತದೆ.
ಆಗ ಸಿಂಹಾಸನದಿಂದ ಒಂದು ಧ್ವನಿಯು ಬಂದಿತು. ಆ ಧ್ವನಿಯು, “ನಮ್ಮ ದೇವರ ಸೇವೆ ಮಾಡುವ ಜನರೆಲ್ಲರೇ, ಆತನಿಗೆ ಸ್ತೋತ್ರ ಮಾಡಿರಿ! ನಮ್ಮ ದೇವರಿಗೆ ಗೌರವ ನೀಡುವ ಚಿಕ್ಕವರೇ, ದೊಡ್ಡವರೇ, ಆತನಿಗೆ ಸ್ತೋತ್ರ ಮಾಡಿರಿ!” ಎಂದು ಹೇಳಿತು.
ಸತ್ತುಹೋಗಿದ್ದ ಚಿಕ್ಕವರು ಮತ್ತು ದೊಡ್ಡವರು ಸಿಂಹಾಸನದ ಮುಂದೆ ನಿಂತಿದ್ದರು. ಆಗ ಜೀವಬಾಧ್ಯರ ಪುಸ್ತಕವನ್ನು ತೆರೆಯಲಾಯಿತು. ತೆರೆದಿದ್ದ ಇತರ ಪುಸ್ತಕಗಳೂ ಅಲ್ಲಿದ್ದವು. ಸತ್ತುಹೋಗಿದ್ದ ಈ ಜನರಿಗೆ ಅವರು ಮಾಡಿದ್ದ ಕಾರ್ಯಗಳ ಆಧಾರದ ಮೇಲೆ ತೀರ್ಪು ನೀಡಲಾಯಿತು. ಇವುಗಳು ಪುಸ್ತಕಗಳಲ್ಲಿ ಬರೆಯಲ್ಪಟ್ಟಿವೆ.
ಆಗ ಲೋಕದ ರಾಜರುಗಳೂ ಅಧಿಪತಿಗಳೂ ಸೇನಾಧಿಪತಿಗಳೂ ಶ್ರೀಮಂತರೂ ಬಲಿಷ್ಠರೂ ಪ್ರತಿಯೊಬ್ಬ ಗುಲಾಮನೂ ಸ್ವತಂತ್ರ ಪ್ರಜೆಯೂ ಗವಿಗಳಲ್ಲಿ ಮತ್ತು ಬೆಟ್ಟಗಳ ಮೇಲಿನ ಬಂಡೆಗಳ ಮರೆಯಲ್ಲಿ ಅಡಗಿಕೊಂಡರು.
ಆದರೆ ದೇವರು ನನಗೆ ಸಹಾಯಮಾಡಿದನು. ಆತನು ಇಂದಿನವರೆಗೂ ನನಗೆ ಸಹಾಯಮಾಡುತ್ತಿದ್ದಾನೆ. ಆದ್ದರಿಂದಲೇ ಇಂದು ಇಲ್ಲಿ ನಿಂತುಕೊಂಡಿದ್ದೇನೆ ಮತ್ತು ನಾನು ಕಂಡ ಸಂಗತಿಗಳ ಬಗ್ಗೆ ಜನರಿಗೆಲ್ಲಾ ಸಾಕ್ಷಿ ಹೇಳುತ್ತಿದ್ದೇನೆ. ಆದರೆ ನಾನು ಯಾವ ಹೊಸದನ್ನೂ ಹೇಳದೆ, ಮೋಶೆ ಮತ್ತು ಪ್ರವಾದಿಗಳು ಮುಂದೆ ನೆರವೇರುತ್ತವೆ ಎಂದು ಹೇಳಿದ ಸಂಗತಿಗಳನ್ನೇ ಹೇಳುತ್ತಿದ್ದೇನೆ.
ಬೆಂಕಿಯನ್ನು ಬೆರಸಿದ ಗಾಜಿನ ಸಮುದ್ರದಂತೆ ಕಾಣಿಸುವ ಏನೋ ಒಂದು ನನಗೆ ಕಾಣಿಸಿತು. ಮೃಗವನ್ನು, ಅದರ ವಿಗ್ರಹವನ್ನು ಮತ್ತು ಅದರ ಹೆಸರಿನ ಸಂಖ್ಯೆಯನ್ನು ಸೋಲಿಸಿ ಜಯಗಳಿಸಿದವರೆಲ್ಲರೂ ಸಮುದ್ರ ತೀರದಲ್ಲಿ ನಿಂತಿದ್ದರು. ದೇವರು ಅವರಿಗೆ ನೀಡಿದ ತಂತಿವಾದ್ಯಗಳು ಅವರಲ್ಲಿದ್ದವು.
ಲೋಕದ ಜನರು ಕೋಪಗೊಂಡಿದ್ದರು. ಆದರೆ ಇದು ನಿನ್ನ ಕೋಪದ ಸಮಯ. ಸತ್ತವರಿಗೆ ತೀರ್ಪು ನೀಡುವ ಸಮಯವಿದು. ನಿನ್ನ ಸೇವಕರಾದ ಪ್ರವಾದಿಗಳಿಗೂ ನಿನ್ನ ಪರಿಶುದ್ಧ ಜನರಿಗೂ ನಿನ್ನನ್ನು ಗೌರವಿಸುವ ದೊಡ್ಡವರಿಗೂ ಚಿಕ್ಕವರಿಗೂ ಪ್ರತಿಫಲ ನೀಡುವ ಸಮಯವಿದು. ಲೋಕನಾಶಕರನ್ನು ನಾಶಪಡಿಸುವ ಸಮಯವಿದು.”
ಈ ಹೊಸ ಜೀವನದಲ್ಲಿ ಗ್ರೀಕರ ಮತ್ತು ಯೆಹೂದ್ಯರ ಮಧ್ಯದಲ್ಲಾಗಲಿ, ಸುನ್ನತಿಯನ್ನು ಮಾಡಿಸಿಕೊಂಡಿರುವ ಮತ್ತು ಮಾಡಿಸಿಕೊಂಡಿಲ್ಲದ ಜನರ ಮಧ್ಯದಲ್ಲಾಗಲಿ ಪರದೇಶದವರ ಅಥವಾ ಅನಾಗರೀಕರ ಮಧ್ಯದಲ್ಲಾಗಲಿ, ಗುಲಾಮರ ಅಥವಾ ಸ್ವತಂತ್ರರಾದ ಜನರ ಮಧ್ಯದಲ್ಲಾಗಲಿ ಯಾವ ಭೇದವೂ ಇಲ್ಲ. ಎಲ್ಲಾ ವಿಶ್ವಾಸಿಗಳಲ್ಲಿಯೂ ಕ್ರಿಸ್ತನಿದ್ದಾನೆ. ಅವರಿಗೆ ಕ್ರಿಸ್ತನೊಬ್ಬನೇ ಅಗತ್ಯ.
ಒಳ್ಳೆಯದನ್ನು ಮಾಡುವ ಪ್ರತಿಯೊಬ್ಬನಿಗೂ ದೇವರು ಪ್ರತಿಫಲವನ್ನು ಕೊಡುತ್ತಾನೆಂಬುದನ್ನು ಜ್ಞಾಪಕದಲ್ಲಿಟ್ಟುಕೊಳ್ಳಿರಿ. ಪ್ರತಿಯೊಬ್ಬ ವ್ಯಕ್ತಿಯು ಅವನು ಸೇವಕನಾಗಿರಲಿ ಅಥವಾ ಸ್ವತಂತ್ರನಾಗಿರಲಿ ತಾನು ಮಾಡುವ ಒಳ್ಳೆಯ ಕಾರ್ಯಗಳಿಗೆ ಪ್ರತಿಫಲವನ್ನು ಹೊಂದುವನು.
ಈಗ ಕ್ರಿಸ್ತನಲ್ಲಿ ಯೆಹೂದ್ಯನು, ಗ್ರೀಕನು ಎಂಬ ವ್ಯತ್ಯಾಸವಿಲ್ಲ; ಸ್ವತಂತ್ರರು ಮತ್ತು ಗುಲಾಮರು ಎಂಬ ವ್ಯತ್ಯಾಸವಿಲ್ಲ; ಸ್ತ್ರೀಯರು ಮತ್ತು ಪುರುಷರು ಎಂಬ ವ್ಯತ್ಯಾಸವಿಲ್ಲ. ನೀವೆಲ್ಲರೂ ಕ್ರಿಸ್ತ ಯೇಸುವಿನಲ್ಲಿ ಒಂದೇ ಆಗಿದ್ದೀರಿ.
ನಮ್ಮಲ್ಲಿ ಕೆಲವರು ಯೆಹೂದ್ಯರಿದ್ದಾರೆ, ಕೆಲವರು ಗ್ರೀಕರಿದ್ದಾರೆ, ಕೆಲವರು ಗುಲಾಮರಿದ್ದಾರೆ, ಕೆಲವರು ಸ್ವತಂತ್ರರಿದ್ದಾರೆ, ಆದರೆ ನಾವೆಲ್ಲರೂ ಒಂದೇ ದೇಹವಾಗುವುದಕ್ಕಾಗಿ ಒಬ್ಬನೇ ಪವಿತ್ರಾತ್ಮನ ಮೂಲಕ ದೀಕ್ಷಾಸ್ನಾನ ಮಾಡಿಸಿಕೊಂಡೆವು. ನಮ್ಮೆಲ್ಲರಿಗೂ ಒಬ್ಬನೇ ಪವಿತ್ರಾತ್ಮನನ್ನು ಕೊಡಲಾಯಿತು.
ಯಾವನಾದರೂ ದೇವರಾದ ಯೆಹೋವನ ಸೇವೆಮಾಡಲು ನಿರಾಕರಿಸುವದಾದರೆ ಆ ವ್ಯಕ್ತಿಯು ಗಂಡಸಾಗಿದ್ದರೂ ಹೆಂಗಸಾಗಿದ್ದರೂ ಮುಖ್ಯವಾದವನಾಗಿದ್ದರೂ ಮುಖ್ಯವಲ್ಲದವನಾಗಿದ್ದರೂ ಕೊಲ್ಲಲ್ಪಡಬೇಕು ಎಂಬುದಾಗಿ ಹೇಳಿದರು.
ಯನ್ನ ಮತ್ತು ಯಂಬ್ರರನ್ನು ನೆನಪುಮಾಡಿಕೊ. ಅವರು ಮೋಶೆಯನ್ನು ವಿರೋಧಿಸಿದರು. ಈ ಜನರೂ ಅವರಂತೆಯೇ. ಅವರು ಸತ್ಯವನ್ನು ವಿರೋಧಿಸುತ್ತಾರೆ. ಆ ಜನರ ಆಲೋಚನೆಗಳೆಲ್ಲ ಗಲಿಬಿಲಿಗೊಂಡಿವೆ. ಅವರು ನಂಬಿಕೆಯನ್ನು ಅನುಸರಿಸುವ ತಮ್ಮ ಪ್ರಯತ್ನದಲ್ಲಿ ಸೋತುಹೋಗಿದ್ದಾರೆ.