ಪ್ರಕಟನೆ 13:17 - ಪರಿಶುದ್ದ ಬೈಬಲ್17 ಈ ಗುರುತಿಲ್ಲದೆ ಯಾರೂ ಕೊಳ್ಳುವಂತಿಲ್ಲ ಮತ್ತು ಮಾರುವಂತಿಲ್ಲ. ಈ ಗುರುತು ಏನೆಂದರೆ ಆ ಮೃಗದ ಹೆಸರು ಅಥವಾ ಅದರ ಹೆಸರಿನ ಸಂಖ್ಯೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಆ ಗುರುತು ಯಾರಿಗಿಲ್ಲವೋ ಅವರು ಕ್ರಯ ವಿಕ್ರಯಗಳನ್ನು ನಡೆಸಲು ಸಾಧ್ಯವಿರಲಿಲ್ಲ. ಆ ಗುರುತು ಯಾವುದೆಂದರೆ ಮೊದಲನೆಯ ಮೃಗದ ಹೆಸರು ಅಥವಾ ಅದರ ಹೆಸರನ್ನು ಸೂಚಿಸುವ ಸಂಖ್ಯೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಆ ಗುರುತಿನ ಹಚ್ಚೆಯನ್ನು ಯಾರು ಚುಚ್ಚಿಸಿಕೊಳ್ಳಲಿಲ್ಲವೋ ಅವರು ಕೊಳ್ಳುವುದಕ್ಕಾಗಲಿ, ಮಾರುವುದಕ್ಕಾಗಲಿ ಸಾಧ್ಯ ಇರಲಿಲ್ಲ. ಆ ಗುರುತಿನ ಮುದ್ರೆ ಏನೆಂದರೆ ಮೃಗದ ಹೆಸರು ಇಲ್ಲವೆ, ಆ ಹೆಸರನ್ನು ಸೂಚಿಸುವ ಸಂಖ್ಯೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಆ ಗುರುತು ಯಾರಿಗಿಲ್ಲವೋ ಅವರು ಕ್ರಯ ವಿಕ್ರಯಗಳನ್ನು ನಡಿಸಕೂಡದೆಂತಲೂ ಆಜ್ಞೆಮಾಡುತ್ತದೆ. ಆ ಗುರುತು ಯಾವದಂದರೆ ಮೊದಲನೆಯ ಮೃಗದ ಹೆಸರು ಅಥವಾ ಅದರ ಹೆಸರನ್ನು ಸೂಚಿಸುವ ಅಂಕೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಆ ಗುರುತಾಗಲಿ, ಮೃಗದ ಹೆಸರಾಗಲಿ, ಅದರ ಹೆಸರಿನ ಸಂಖ್ಯೆಯಾಗಲಿ ಇಲ್ಲದವನು ಕ್ರಯ ವಿಕ್ರಯಗಳನ್ನು ಮಾಡದಂತೆಯೂ ಅದು ಮಾಡುವುದು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್17 ಕೊನ್‍ಬಿ ಹಿ ವಳಕ್ ನಸ್ತಾನಾ ಇಕಾತ್ ಘೆವ್ ನ್ಹಯ್ ನಾಹೊಲ್ಯಾರ್ ಇಕಾತ್ ದಿವ್ಚೆ ನ್ಹಯ್, ತ್ಯಾ ಭಯಾನಕ್ ಸಾಪಾಚೆ ನಾಂವ್ ತೆ, ನಾ ಹೊಲ್ಯಾರ್ ಭಯಾನಕ್ ಸಾಪಾಚ್ಯಾ ನಾವಾಸಾಟ್ನಿ ಮನುನ್ ಹೊತ್ತೆ ಆಂಕೆ ತೆ. ಅಧ್ಯಾಯವನ್ನು ನೋಡಿ |
ಜಯಗಳಿಸಿದ ವ್ಯಕ್ತಿಯನ್ನು ನನ್ನ ದೇವರ ಆಲಯದಲ್ಲಿ ಆಧಾರಸ್ತಂಭವನ್ನಾಗಿ ಮಾಡುವೆನು. ಅವನು ದೇವರ ಆಲಯವನ್ನು ಮತ್ತೆಂದಿಗೂ ಬಿಟ್ಟುಹೋಗುವ ಅಗತ್ಯವಿಲ್ಲ. ನನ್ನ ದೇವರ ಹೆಸರನ್ನೂ ನನ್ನ ದೇವರ ಪಟ್ಟಣದ ಹೆಸರನ್ನೂ ಅವನ ಮೇಲೆ ಬರೆಯುತ್ತೇನೆ. ಹೊಸ ಜೆರುಸಲೇಮೇ ಆ ಪಟ್ಟಣ. ಆ ಪಟ್ಟಣವು ನನ್ನ ದೇವರ ಬಳಿಯಿಂದ ಪರಲೋಕದಿಂದ ಇಳಿದುಬರುತ್ತದೆ. ನನ್ನ ಹೊಸ ಹೆಸರನ್ನೂ ಅವನ ಮೇಲೆ ಬರೆಯುತ್ತೇನೆ.
ನಂತರ ನಾನು ಕೆಲವು ಸಿಂಹಾಸನಗಳನ್ನು ಮತ್ತು ಅವುಗಳ ಮೇಲೆ ಜನರು ಕುಳಿತಿರುವುದನ್ನು ನೋಡಿದೆನು. ಈ ಜನರು ತೀರ್ಪು ನೀಡುವ ಅಧಿಕಾರವನ್ನು ಹೊಂದಿದ್ದರು. ಯೇಸುವಿನ ಸತ್ಯಕ್ಕೆ ಮತ್ತು ದೇವರ ಸಂದೇಶಕ್ಕೆ ನಂಬಿಗಸ್ತರಾಗಿದ್ದರ ನಿಮಿತ್ತವಾಗಿ ಕೊಲ್ಲಲ್ಪಟ್ಟವರ ಜೀವಾತ್ಮಗಳನ್ನು ನಾನು ನೋಡಿದೆನು. ಆ ಜನರು ಮೃಗವನ್ನಾಗಲಿ ಅದರ ವಿಗ್ರಹವನ್ನಾಗಲಿ ಆರಾಧಿಸಿರಲಿಲ್ಲ. ಅವರು ತಮ್ಮ ಹಣೆಯ ಮೇಲಾಗಲಿ ಕೈಗಳ ಮೇಲಾಗಲಿ ಮೃಗದ ಗುರುತನ್ನು ಹಾಕಿಸಿಕೊಂಡಿರಲಿಲ್ಲ. ಆ ಜನರು ಮತ್ತೆ ಜೀವವನ್ನು ಪಡೆದು ಕ್ರಿಸ್ತನೊಂದಿಗೆ ಒಂದುಸಾವಿರ ವರ್ಷ ಆಳಿದರು.