Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 13:2 - ಪರಿಶುದ್ದ ಬೈಬಲ್‌

2 ಈ ಮೃಗವು ನೋಡಲು ಚಿರತೆ ಯಂತಿತ್ತು. ಅದರ ಪಾದಗಳು ಕರಡಿಯ ಪಾದಗಳಂತಿದ್ದವು. ಅದರ ಬಾಯಿಯು ಸಿಂಹದ ಬಾಯಿಯಂತಿತ್ತು. ಘಟಸರ್ಪವು ಆ ಮೃಗಕ್ಕೆ ತನ್ನ ಶಕ್ತಿಯನ್ನು, ತನ್ನ ಸಿಂಹಾಸನವನ್ನು ಮತ್ತು ಅಧಿಕವಾದ ಅಧಿಕಾರವನ್ನು ನೀಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ನಾನು ಕಂಡ ಮೃಗವು ಚಿರತೆಯಂತಿತ್ತು ಅದರ ಕಾಲುಗಳು ಕರಡಿಯ ಕಾಲುಗಳಂತೆಯೂ ಅದರ ಬಾಯಿ ಸಿಂಹದ ಬಾಯಿಯಂತೆಯೂ ಇದ್ದವು. ಅದಕ್ಕೆ ಘಟಸರ್ಪನು ಶಕ್ತಿಯನ್ನೂ, ಸಿಂಹಾಸನವನ್ನೂ, ಮಹಾ ಅಧಿಕಾರವನ್ನೂ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ನಾನು ಕಂಡ ಆ ಮೃಗವು ಚಿರತೆಯಂತಿತ್ತು. ಅದರ ಕಾಲುಗಳು ಕರಡಿಯ ಕಾಲುಗಳಂತಿದ್ದವು. ಬಾಯಿಯು, ಸಿಂಹದ ಬಾಯಂತೆ ಇತ್ತು. ಘಟಸರ್ಪವು ಆ ಮೃಗಕ್ಕೆ ತನ್ನ ಶಕ್ತಿಯನ್ನೂ ಸಿಂಹಾಸನವನ್ನೂ ಅಪಾರ ಅಧಿಕಾರವನ್ನೂ ಕೊಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಅದರ ಕಾಲುಗಳು ಕರಡಿಯ ಕಾಲುಗಳಂತೆಯೂ ಅದರ ಬಾಯಿ ಸಿಂಹದ ಬಾಯಂತೆಯೂ ಇದ್ದವು. ಅದಕ್ಕೆ ಘಟಸರ್ಪನು ಶಕ್ತಿಯನ್ನೂ ಸಿಂಹಾಸನವನ್ನೂ ಮಹಾ ಅಧಿಕಾರವನ್ನೂ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ನಾನು ಕಂಡ ಮೃಗವು ಚಿರತೆಯಂತಿತ್ತು. ಅದರ ಕಾಲುಗಳು ಕರಡಿಯ ಕಾಲುಗಳಂತೆಯೂ ಅದರ ಬಾಯಿ ಸಿಂಹದ ಬಾಯಂತೆಯೂ ಇದ್ದವು. ಅದಕ್ಕೆ ಘಟಸರ್ಪನು ತನ್ನ ಶಕ್ತಿಯನ್ನೂ ಸಿಂಹಾಸನವನ್ನೂ ಮಹಾ ಅಧಿಕಾರವನ್ನೂ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ತೆ ಭಯಾನಕ್ ಜನಾವರ್ ಚಿಟ್ಟ್ಯಾ ವಾಗಾಚ್ಯಾ ಸರ್ಕೆ ದಿಸಿ, ತೆಚಿ ಪಾಯಾ ಅಸ್ವಾಲಾಚ್ಯಾ ಪಾಂಯಾಂಚ್ಯಾ ಸರ್ಕಿ ಹೊತ್ತಿ, ಅನಿ ತೆಚೆ ತೊಂಡ್ ಸಿವಾಚ್ಯಾ ತೊಂಡಾ ಸರ್ಕೆ ಹೊತ್ತೆ. ಭಯಾನಕ್ ಸಾಪಾನ್ ತ್ಯಾ ಭಯಾನಕ್ ಸಾಪ್ ಅಪ್ನಾಚೊ ಬಳ್, ಸಿವಾಸನ್, ಅನಿ ಅಪ್ನಾಚೊ ಮೊಟೊ ಅಧಿಕಾರ್ ದಿಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 13:2
27 ತಿಳಿವುಗಳ ಹೋಲಿಕೆ  

ಆ ದೇವದೂತನು ಪುರಾತನ ಘಟಸರ್ಪವನ್ನು ಹಿಡಿದನು. ಆ ಘಟಸರ್ಪವೇ ಸೈತಾನ. ದೇವದೂತನು ಅವನನ್ನು ಸರಪಣಿಗಳಿಂದ ಕಟ್ಟಿ ಒಂದುಸಾವಿರ ವರ್ಷಗಳ ಕಾಲ ಬಂಧನದಲ್ಲಿಟ್ಟನು.


“ನೀನು ನೋಡಿದ ಹತ್ತು ಕೊಂಬುಗಳೇ ಹತ್ತು ರಾಜರುಗಳಾಗಿವೆ. ಈ ಹತ್ತು ರಾಜರುಗಳು ಇನ್ನೂ ತಮ್ಮ ರಾಜ್ಯವನ್ನು ಪಡೆದಿಲ್ಲ. ಆದರೆ ಅವರು ಆಳುವ ಅಧಿಕಾರವನ್ನು ಮೃಗದ ಸಂಗಡ ಒಂದು ಗಂಟೆ ಪಡೆಯುತ್ತಾರೆ.


ಆ ಘಟಸರ್ಪವನ್ನು ಪರಲೋಕದಿಂದ (ಆ ಘಟಸರ್ಪಕ್ಕೆ ಸೈತಾನನೆಂತಲೂ ಪಿಶಾಚನೆಂತಲೂ ಹೆಸರಿದೆ. ಅದು ಲೋಕವನ್ನೆಲ್ಲಾ ತಪ್ಪು ಮಾರ್ಗಕ್ಕೆ ಎಳೆಯುತ್ತಿತ್ತು.) ಅದರ ದೂತರೊಂದಿಗೆ ಭೂಮಿಯ ಮೇಲೆ ಎಸೆಯಲಾಯಿತು.


ಸ್ವಸ್ಥಚಿತ್ತರಾಗಿರಿ ಮತ್ತು ಎಚ್ಚರವಾಗಿರಿ! ಸೈತಾನನು ನಿಮ್ಮ ಶತ್ರು. ಗರ್ಜಿಸುವ ಸಿಂಹವು ಯಾರನ್ನು ತಿನ್ನಲಿ ಎಂದು ಹುಡುಕುತ್ತಿರುವಂತೆ ಅವನು ಮನುಷ್ಯನನ್ನು ಹುಡುಕುತ್ತಿದ್ದಾನೆ.


ಆದರೆ ಆ ಮೃಗವನ್ನೂ ಸುಳ್ಳುಪ್ರವಾದಿಯನ್ನೂ ಸೆರೆಹಿಡಿಯಲಾಯಿತು. ಈ ಸುಳ್ಳುಪ್ರವಾದಿಯೇ ಮೃಗಕ್ಕಾಗಿ ಅದ್ಭುತಗಳನ್ನು ಮಾಡಿದವನು. ಈ ಸುಳ್ಳುಪ್ರವಾದಿಯು ಮೃಗದ ಗುರುತು ಹಾಕಿಸಿಕೊಂಡಿರುವ ಮತ್ತು ಅದರ ವಿಗ್ರಹವನ್ನು ಆರಾಧಿಸಿದ ಜನರನ್ನು ಮರುಳು ಮಾಡಲು ಈ ಅದ್ಭುತಗಳನ್ನು ಬಳಸಿದ್ದನು. ಈ ಸುಳ್ಳುಪ್ರವಾದಿಯನ್ನೂ ಮೃಗವನ್ನೂ, ಬೆಂಕಿ ಮತ್ತು ಗಂಧಕಗಳಿಂದ ಉರಿಯುವ ಕೆರೆಯಲ್ಲಿ ಜೀವಂತವಾಗಿ ಎಸೆಯಲಾಯಿತು.


ಆ ಘಟಸರ್ಪವು ತನ್ನ ಶಕ್ತಿಯನ್ನೆಲ್ಲಾ ಆ ಮೃಗಕ್ಕೆ ನೀಡಿದ್ದರಿಂದ ಜನರೆಲ್ಲರೂ ಆ ಸರ್ಪವನ್ನೂ ಆ ಮೃಗವನ್ನೂ ಆರಾಧಿಸಿ, “ಮೃಗಕ್ಕಿಂತಲೂ ಅಧಿಕ ಬಲಶಾಲಿಗಳು ಯಾರಿದ್ದಾರೆ? ಅದರ ವಿರುದ್ಧ ಯಾರು ಹೋರಾಡಬಲ್ಲರು?” ಎಂದು ಹೇಳುತ್ತಿದ್ದರು.


ಆಗ ಸರ್ಪವು ತನ್ನ ಬಾಯಿಂದ ನದಿಯಂತೆ ನೀರನ್ನು ಹೊರಚೆಲ್ಲಿತು. ಆ ಪ್ರವಾಹದ ನೀರು ಅವಳನ್ನು ಕೊಚ್ಚಿ ಕೊಂಡುಹೋಗಲಿ ಎಂಬುದೇ ಆ ಘಟಸರ್ಪದ ಉದ್ದೇಶವಾಗಿತ್ತು.


ಘಟಸರ್ಪಕ್ಕೆ ತನ್ನನ್ನು ಭೂಮಿಗೆ ತಳ್ಳಿಬಿಟ್ಟಿರುವುದು ತಿಳಿಯಿತು. ಆದ್ದರಿಂದ ಅವನು ಗಂಡು ಮಗುವನ್ನು ಹೆತ್ತ ಸ್ತ್ರೀಯನ್ನು ಅಟ್ಟಿಸಿಕೊಂಡು ಹೋದನು.


ಐದನೆಯ ದೇವದೂತನು ತನ್ನ ಪಾತ್ರೆಯಲ್ಲಿದ್ದುದನ್ನು ಆ ಮೃಗದ ಸಿಂಹಾಸನದ ಮೇಲೆ ಸುರಿದನು. ಮೃಗದ ರಾಜ್ಯದಲ್ಲಿ ಅಂಧಕಾರವು ಕವಿಯಿತು. ಜನರು ನೋವಿನಿಂದ ತಮ್ಮ ನಾಲಿಗೆಗಳನ್ನು ಕಚ್ಚಿಕೊಂಡರು.


ಆಗ ನೀವು ಸಿಂಹದ ಬಾಯಿಂದ ತಪ್ಪಿಸಿಕೊಂಡು ಕರಡಿಯ ಬಾಯಿಗೆ ಬೀಳುವ ಮನುಷ್ಯನಂತಿರುವಿರಿ. ಆಗ ನೀವು ನಿಮ್ಮ ಮನೆಯ ಆಶ್ರಯಕ್ಕೆ ಓಡಿಹೋಗಿ ಗೋಡೆಗೆ ಒರಗಿ ನಿಂತಾಗ ಒಂದು ಹಾವಿನಿಂದ ಕಚ್ಚಿಸಿಕೊಂಡವರಂತೆ ಇರುವಿರಿ.


ಕಪ್ಪಗಿರುವವನು ತನ್ನ ಚರ್ಮದ ಬಣ್ಣವನ್ನು ಬದಲಿಸಲಾರನು. ಚಿರತೆಯು ತನ್ನ ಮೈಮೇಲಿನ ಚುಕ್ಕೆಗಳನ್ನು ಬದಲಾಯಿಸಲಾರದು. ಅದೇ ರೀತಿ, ಜೆರುಸಲೇಮ್ ನಗರವೇ, ನೀನು ಸಹ ಮಾರ್ಪಾಟು ಹೊಂದಿ ಒಳ್ಳೆಯದನ್ನು ಮಾಡಲಾರೆ. ನೀನು ಯಾವಾಗಲೂ ಕೆಟ್ಟದ್ದನ್ನೇ ಮಾಡುವೆ.


ಆದ್ದರಿಂದ ಕಾಡಿನ ಸಿಂಹವು ಅವರ ಮೇಲೆರಗುವುದು, ಮರಳುಗಾಡಿನ ತೋಳವು ಅವರನ್ನು ಕೊಂದು ಬಿಡುವದು. ಅವರ ನಗರಗಳ ಹತ್ತಿರ ಚಿರತೆಯು ಅಡಗಿಕೊಂಡಿದೆ. ನಗರದಿಂದ ಹೊರಗೆ ಬಂದವರನ್ನೆಲ್ಲ ಅದು ಚೂರುಚೂರು ಮಾಡುವುದು. ಯೆಹೂದದ ಜನರು ಮತ್ತೆಮತ್ತೆ ಪಾಪಗಳನ್ನು ಮಾಡಿದ್ದರಿಂದ ಹೀಗಾಗುವದು. ಅವರು ಅನೇಕಸಲ ಯೆಹೋವನಿಂದ ದೂರ ಹೋಗಿದ್ದಾರೆ.


ಶತ್ರುಗಳು ಆರ್ಭಟಿಸುವರು, ಆ ಆರ್ಭಟವು ಪ್ರಾಯದ ಸಿಂಹಗಳ ಗರ್ಜನೆಯಂತಿರುವುದು. ಶತ್ರುಗಳು ಹೂಂಕರಿಸುತ್ತಾ ತಮ್ಮೊಂದಿಗೆ ಯುದ್ಧ ಮಾಡುತ್ತಿರುವವರನ್ನು ಹಿಡಿದುಬಿಡುವರು. ಜನರು ಹೋರಾಡಿ ಪಾರಾಗಲು ಪ್ರಯತ್ನಿಸುವರು. ಆದರೆ ಅವರನ್ನು ರಕ್ಷಿಸುವವರು ಯಾರೂ ಇರುವುದಿಲ್ಲ.


ಬಲಹೀನರನ್ನು ಆಳುವ ಕೆಡುಕನು ಗರ್ಜಿಸುವ ಸಿಂಹದಂತಿರುವನು; ಮೇಲೆರಗಲಿರುವ ಕರಡಿಯಂತಿರುವನು.


ಮೂಢಕಾರ್ಯಗಳಲ್ಲಿ ನಿರತನಾಗಿರುವ ಮೂಢನನ್ನು ಭೇಟಿಯಾಗುವುದಕ್ಕಿಂತ ತನ್ನ ಮರಿಗಳನ್ನು ಕಳೆದುಕೊಂಡು ಕೋಪದಿಂದಿರುವ ತಾಯಿಕರಡಿಗೆ ಎದುರಾಗುವುದೇ ಮೇಲು.


ನನ್ನನ್ನು ಸಿಂಹದ ಬಾಯಿಂದ ಬಿಡಿಸು; ಹೋರಿಯ ಕೊಂಬುಗಳಿಂದ ನನ್ನನ್ನು ಸಂರಕ್ಷಿಸು.


ಎಲೀಷನು ಹಿಂದಕ್ಕೆ ತಿರುಗಿ ಅವರನ್ನು ನೋಡಿ ಅವರಿಗೆ ಕೇಡಾಗುವಂತೆ ಯೆಹೋವನನ್ನು ಕೇಳಿಕೊಂಡನು. ಆಗ ಕಾಡಿನಿಂದ ಎರಡು ಕರಡಿಗಳು ಹೊರಗೆ ಬಂದು ಅವರ ಮೇಲೆರಗಿ ನಲವತ್ತೆರಡು ಮಂದಿ ಬಾಲಕರನ್ನು ಸೀಳಿಹಾಕಿದವು.


ಅವರ ಕುದುರೆಗಳು ಚಿರತೆಗಳಿಗಿಂತ ವೇಗವಾಗಿವೆ; ಸೂರ್ಯಸ್ತಮಾನ ಕಾಲದಲ್ಲಿ ತೋಳಗಳಿಗಿಂತ ಭಯಂಕರವಾಗಿವೆ. ಅವರ ರಾಹುತರು ಬಹುದೂರ ದೇಶದಿಂದ ಬಂದರು. ಹಸಿದ ಗಿಡುಗ ಹೇಗೆ ಆಕಾಶದಿಂದ ನೆಲದ ಮೇಲಿರುವ ಆಹಾರದ ಮೇಲೆ ಬೀಳುತ್ತದೋ ಅದೇ ರೀತಿಯಲ್ಲಿ ಅವರ ರಾಹುತರು ವೈರಿಗಳ ಮೇಲೆ ಬೀಳುವರು.


ಯೆಹೋವನು ಹೇಳುವುದೇನೆಂದರೆ, “ಒಂದುವೇಳೆ ಸಿಂಹವು ಒಂದು ಕುರಿಮರಿಯ ಮೇಲೆ ಎರಗಿದರೆ ಕುರುಬನು ಅದನ್ನು ರಕ್ಷಿಸಲು ಪ್ರಯತ್ನಿಸಾನು. ಆದರೆ ಕುರುಬನು ಆ ಕುರಿಮರಿಯ ಒಂದು ಭಾಗವನ್ನು ಮಾತ್ರ ಕಾಪಾಡಿಯಾನು. ಸಿಂಹದ ಬಾಯಿಂದ ಕುರಿಯ ಎರಡು ಕಾಲುಗಳನ್ನೋ ಕಿವಿಯ ಒಂದು ಭಾಗವನ್ನೋ ಎಳೆದು ರಕ್ಷಿಸಿಯಾನು. ಅದೇ ರೀತಿಯಲ್ಲಿ ಬಹುತೇಕ ಇಸ್ರೇಲರು ರಕ್ಷಿಸಲ್ಪಡುವದಿಲ್ಲ. ಸಮಾರ್ಯದಲ್ಲಿರುವ ಜನರು ತಮ್ಮ ಹಾಸಿಗೆಯ ಒಂದು ಮೂಲೆಯನ್ನಾಗಲಿ ಅಥವಾ ಮಂಚದ ಮೇಲಿನ ಬಟ್ಟೆಯ ಒಂದು ತುಂಡನ್ನಾಗಲಿ ಉಳಿಸಿಕೊಳ್ಳುವರು.”


ನಾನು ಸಿಂಹದಂತೆ ಗರ್ಜಿಸುವೆನು. ನಾನು ಗರ್ಜಿಸುವಾಗ ನನ್ನ ಮಕ್ಕಳು ಬರುವರು ಮತ್ತು ನನ್ನನ್ನು ಹಿಂಬಾಲಿಸುವರು. ಪಶ್ಚಿಮದಿಂದ ನನ್ನ ಮಕ್ಕಳು ಹೆದರಿ ನಡುಗುತ್ತಾ ಬರುವರು.


ಆದರೆ ಪ್ರಭುವು ನನ್ನ ಬಳಿಯೇ ಇದ್ದನು. ನಾನು ಸುವಾರ್ತೆಯನ್ನು ಯೆಹೂದ್ಯರಲ್ಲದವರಿಗೆ ಸಂಪೂರ್ಣವಾಗಿ ಬೋಧಿಸಲು ಪ್ರಭುವು ನನಗೆ ಶಕ್ತಿಯನ್ನು ದಯಪಾಲಿಸಿದನು. ಆ ಸುವಾರ್ತೆಯನ್ನು ಯೆಹೂದ್ಯರಲ್ಲದ ಜನರೆಲ್ಲರೂ ಕೇಳುವುದು ಪ್ರಭುವಿನ ಇಷ್ಟವಾಗಿತ್ತು. ಆತನು ನನ್ನನ್ನು ಸಿಂಹದ (ಶತ್ರು) ಬಾಯಿಂದ ರಕ್ಷಿಸಿದನು.


“ನೀನು ಎಲ್ಲಿ ವಾಸಮಾಡುತ್ತಿರುವೆ ಎಂಬುದು ನನಗೆ ತಿಳಿದಿದೆ. ಸೈತಾನನ ಸಿಂಹಾಸನ ವಿರುವ ಕಡೆಯಲ್ಲಿ ನೀನು ವಾಸಿಸುತ್ತಿರುವೆ. ಆದರೆ ನೀನು ನನಗೆ ನಂಬಿಗಸ್ತನಾಗಿರುವೆ. ಅಂತಿಪನ ಕಾಲದಲ್ಲಿಯೂ ನೀನು ನನ್ನಲ್ಲಿಟ್ಟಿರುವ ನಂಬಿಕೆಯನ್ನು ತಿಳಿಸಲು ನಿರಾಕರಿಸಲಿಲ್ಲ. ನಿನ್ನ ಪಟ್ಟಣದಲ್ಲಿ ಕೊಲ್ಲಲ್ಪಟ್ಟ ಅಂತಿಪನು ನನ್ನ ನಂಬಿಗಸ್ತ ಸಾಕ್ಷಿಯಾಗಿದ್ದನು. ನಿನ್ನ ನಗರ ಸೈತಾನನು ವಾಸಿಸುವ ನಗರವಾಗಿದೆ.


ಈ ಮೃಗವು ಮೊದಲಿನ ಮೃಗದ ಅಧಿಕಾರವನ್ನೇ ಬಳಸುತ್ತದೆ. ಭೂಮಿಯ ಮೇಲೆ ವಾಸಿಸುವ ಜನರೆಲ್ಲರೂ ಮೊದಲಿನ ಮೃಗವನ್ನು ಆರಾಧಿಸುವಂತೆ ಮಾಡಲು ಅದು ತನ್ನ ಶಕ್ತಿಯನ್ನೆಲ್ಲಾ ಬಳಸುತ್ತದೆ. ಮರಣಕರವಾದ ಗಾಯದಿಂದ ಗುಣಮುಖವಾದದ್ದೇ ಮೊದಲನೆಯ ಮೃಗ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು