ಪ್ರಕಟನೆ 13:5 - ಪರಿಶುದ್ದ ಬೈಬಲ್5 ಆ ಮೃಗಕ್ಕೆ ಬಡಾಯಿ ಮಾತುಗಳನ್ನೂ ದೂಷಣೆಯ ಮಾತುಗಳನ್ನೂ ಆಡಲು ಅವಕಾಶ ನೀಡಲಾಯಿತು. ಆ ಮೃಗಕ್ಕೆ ಅದರ ಶಕ್ತಿಯನ್ನು ನಲವತ್ತೆರಡು ತಿಂಗಳ ಕಾಲ ಬಳಸಲು ಅವಕಾಶ ನೀಡಲಾಯಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಬಡಾಯಿಮಾತುಗಳನ್ನೂ ದೂಷಣೆಯ ಮಾತುಗಳನ್ನೂ ಆಡುವ ಬಾಯಿ ಅದಕ್ಕೆ ಕೊಡಲ್ಪಟ್ಟಿತು ಮತ್ತು ನಲವತ್ತೆರಡು ತಿಂಗಳ ಪರ್ಯಂತರ ತನ್ನ ಕಾರ್ಯಗಳನ್ನು ನಡಿಸುವ ಅಧಿಕಾರವೂ ಅದಕ್ಕೆ ಕೊಡಲ್ಪಟ್ಟಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಜಂಬದ ಹೇಳಿಕೆಗಳನ್ನೂ ದೇವದೂಷಣೆಯ ಮಾತುಗಳನ್ನೂ ಆಡುವುದಕ್ಕೆ ಆ ಮೃಗಕ್ಕೆ ಒಂದು ಬಾಯನ್ನು ಕೊಡಲಾಗಿತ್ತು. ನಲವತ್ತ ಎರಡು ತಿಂಗಳುಗಳವರೆಗೆ ತನ್ನ ಕಾರ್ಯ ಸಾಧಿಸಿಕೊಳ್ಳುವ ಅಧಿಕಾರವನ್ನೂ ಅದಕ್ಕೆ ನೀಡಲಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಬಡಾಯಿ ಮಾತುಗಳನ್ನೂ ದೂಷಣೆಯ ಮಾತುಗಳನ್ನೂ ಆಡುವ ಬಾಯಿ ಅದಕ್ಕೆ ಕೊಡಲ್ಪಟ್ಟಿತು. ಮತ್ತು ನಾಲ್ವತ್ತೆರಡು ತಿಂಗಳ ಪರ್ಯಂತರ ತನ್ನ ಕಾರ್ಯಗಳನ್ನು ನಡಿಸುವ ಅಧಿಕಾರವೂ ಅದಕ್ಕೆ ಕೊಡಲ್ಪಟ್ಟಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಆ ಮೃಗಕ್ಕೆ ಬಡಾಯಿ ಮಾತುಗಳನ್ನೂ ದೂಷಣೆಯ ಮಾತುಗಳನ್ನೂ ಆಡುವ ಬಾಯಿ ಕೊಡಲಾಯಿತು. ನಲವತ್ತೆರಡು ತಿಂಗಳುಗಳವರೆಗೆ ಕಾರ್ಯಸಾಧಿಸುವ ಅಧಿಕಾರವನ್ನೂ ಅದಕ್ಕೆ ಕೊಡಲಾಯಿತು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್5 ಭಯಾನಕ್ ಸಾಪ್ ದೆವಾಕ್ ಅವ್ಮಾನ್ ಕರ್ತಲ್ಯಾ ಬಡಾಯೆಚ್ಯಾ ಗೊಸ್ಟಿಯಾ ಬೊಲ್ತಲೆ ತೊಂಡ್ ದಿವ್ನ್ ಹೊಲ್ಲೆ ಹೊತ್ತೆ, ಅನಿ ತೆಕಾ ಹ್ಯೊ ಅಧಿಕಾರ್ ಚಾಲ್ವುಕ್ ಚಾಳಿಸಾರ್-ದೊನ್ ಮ್ಹಯಿನೆ ಎವ್ಡೆಚ್ ಪರ್‍ವಾನ್ಗಿ ದಿಲ್ಲಿ ಹೊತ್ತಿ. ಅಧ್ಯಾಯವನ್ನು ನೋಡಿ |
“ಉತ್ತರದ ರಾಜನು ತನ್ನ ಮನಸ್ಸಿಗೆ ಬಂದದ್ದನ್ನು ಮಾಡುವನು; ಬಡಾಯಿ ಕೊಚ್ಚಿಕೊಳ್ಳುವನು. ಅವನು ತನ್ನನ್ನು ತಾನು ಹೊಗಳಿಕೊಳ್ಳುವನು ಮತ್ತು ದೇವರಿಗಿಂತ ತಾನು ಹೆಚ್ಚಿನವನೆಂದು ಭಾವಿಸುವನು. ಅವನು ಯಾರೂ ಎಂದೂ ಕೇಳದ ಸಂಗತಿಗಳನ್ನು ಹೇಳುವನು. ಅವನು ಮಹೋನ್ನತನಾದ ದೇವರ ವಿರುದ್ಧವಾಗಿ ಅಂತಹ ಸಂಗತಿಗಳನ್ನು ಹೇಳುವನು. ಎಲ್ಲ ಕೆಟ್ಟ ಸಂಗತಿಗಳು ಜರಗುವವರೆಗೂ ಅವನು ಜಯ ಪಡೆಯುವನು. ಏನು ನಡೆಯಬೇಕೆಂದು ದೇವರು ನಿಶ್ಚಯ ಮಾಡಿರುವನೋ ಅದು ನಡೆಯುವದು.
ನಾಲ್ಕನೆಯ ಪ್ರಾಣಿಯ ತಲೆಯ ಮೇಲಿದ್ದ ಹತ್ತು ಕೊಂಬುಗಳ ಬಗ್ಗೆ ನಾನು ತಿಳಿದುಕೊಳ್ಳಬಯಸಿದೆ. ನಾನು ಅಲ್ಲಿ ಮೊಳೆತ ಚಿಕ್ಕ ಕೊಂಬಿನ ಬಗ್ಗೆ ತಿಳಿದುಕೊಳ್ಳಬಯಸಿದೆ. ಆ ಚಿಕ್ಕ ಕೊಂಬು ಅಲ್ಲಿದ್ದ ಹತ್ತು ಕೊಂಬುಗಳಲ್ಲಿ ಮೂರನ್ನು ಬೀಳಿಸಿಬಿಟ್ಟಿತು. ಈ ಚಿಕ್ಕ ಕೊಂಬು ಉಳಿದ ಕೊಂಬುಗಳಿಗಿಂತ ಕೀಳಾಗಿ ಕಂಡುಬಂತು. ಅದಕ್ಕೆ ಮನುಷ್ಯರ ಕಣ್ಣುಗಳಂತೆ ಕಣ್ಣುಗಳಿದ್ದವು. ಆ ಚಿಕ್ಕ ಕೊಂಬು ಜಂಬ ಕೊಚ್ಚಿಕೊಳ್ಳುತ್ತಿತ್ತು.