ಪ್ರಕಟನೆ 13:7 - ಪರಿಶುದ್ದ ಬೈಬಲ್7 ದೇವರ ಪರಿಶುದ್ಧ ಜನರ ವಿರುದ್ಧ ಯುದ್ಧಮಾಡಿ, ಅವರನ್ನು ಸೋಲಿಸುವ ಶಕ್ತಿಯನ್ನು ಮೃಗಕ್ಕೆ ನೀಡಲಾಯಿತು. ಸಕಲ ಕುಲ, ಪ್ರಜೆ, ಭಾಷೆ ಮತ್ತು ಜನಾಂಗಗಳ ಮೇಲಿನ ಅಧಿಕಾರವನ್ನು ಆ ಮೃಗಕ್ಕೆ ಕೊಡಲಾಯಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಇದಲ್ಲದೆ ದೇವಜನರ ಮೇಲೆ ಯುದ್ಧ ಮಾಡಿ ಅವರನ್ನು ಜಯಿಸುವುದಕ್ಕೆ ಅದಕ್ಕೆ ಅಧಿಕಾರ ಕೊಡಲ್ಪಟ್ಟಿತು ಮತ್ತು ಸಕಲ ಕುಲ, ಜನ, ಭಾಷೆ, ಜನಾಂಗಗಳ ಮೇಲೆ ಅದಕ್ಕೆ ಅಧಿಕಾರವು ಕೊಡಲ್ಪಟ್ಟಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಇದಲ್ಲದೆ, ದೇವಜನರ ವಿರುದ್ಧ ಯುದ್ಧಮಾಡಿ, ಜಯಗಳಿಸುವಂತೆ ಅದಕ್ಕೆ ಅವಕಾಶವನ್ನು ಕೊಡಲಾಯಿತು. ಸಕಲ ದೇಶ, ಭಾಷೆ, ಕುಲ, ಗೋತ್ರಗಳ ಮೇಲೆ ಅದಕ್ಕೆ ಅಧಿಕಾರವನ್ನು ನೀಡಲಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಇದಲ್ಲದೆ ದೇವಜನರ ಮೇಲೆ ಯುದ್ಧಮಾಡಿ ಅವರನ್ನು ಜಯಿಸುವದಕ್ಕೆ ಅದಕ್ಕೆ ಅಧಿಕಾರ ಕೊಡಲ್ಪಟ್ಟಿತು. ಮತ್ತು ಸಕಲ ಕುಲ ಪ್ರಜೆ ಭಾಷೆ ಜನಾಂಗಗಳ ಮೇಲೆ ಅದಕ್ಕೆ ಅಧಿಕಾರವು ಕೊಡಲ್ಪಟ್ಟಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಇದಲ್ಲದೆ ಅದಕ್ಕೆ ಪರಿಶುದ್ಧರ ಮೇಲೆ ಯುದ್ಧಮಾಡಿ, ಅವರನ್ನು ಜಯಿಸುವುದಕ್ಕೆ ಬಲವು ಕೊಡಲಾಯಿತು ಮತ್ತು ಸಕಲ ಕುಲ, ಪ್ರಜೆ, ಭಾಷೆ, ರಾಷ್ಟ್ರಗಳ ಮೇಲೆ ಅದಕ್ಕೆ ಅಧಿಕಾರವು ಸಹ ಕೊಡಲಾಯಿತು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್7 ದೆವಾಚ್ಯಾ ಲೊಕಾಂಚ್ಯಾ ವಿರೊದ್ ಝಗ್ಡುಕ್ ತೆಕಾ ಅದಿಕಾರ್ ದಿಲ್ಲೊ ಹೊತ್ತೊ, ಸಗ್ಳ್ಯಾ ಕುಳಿಯಾಂಚ್ಯಾ, ದೆಶಾಂಚ್ಯಾ, ಘರಾನ್ಯಾಚ್ಯಾ, ಅನಿ ಬಾಶಾಂಚ್ಯಾ ಲೊಕಾಂಚ್ಯಾ ವರ್ತಿ ತೆಕಾ ಅದಿಕಾರ್ ದಿಲ್ಲೊ ಹೊತ್ತೊ. ಅಧ್ಯಾಯವನ್ನು ನೋಡಿ |
“ದರ್ಶನದಲ್ಲಿ ಕಾಣಿಸಿಕೊಂಡ ಮನುಷ್ಯನು, ದಾನಿಯೇಲನೇ, ಆಗ ದೇವದೂತನಾದ ಮಿಕಾಯೇಲನು ಏಳುವನು. ಮಿಕಾಯೇಲನು ಯೆಹೂದ್ಯರಾದ ನಿಮ್ಮ ಹಿತಾಸಕ್ತಿಗಳನ್ನು ನೋಡಿಕೊಳ್ಳುವನು. ಮಹಾಸಂಕಟದ ಕಾಲ ಬರುವದು. ಭೂಮಿಯ ಮೇಲೆ ರಾಷ್ಟ್ರಗಳು ಹುಟ್ಟಿದಂದಿನಿಂದ ಸಂಭವಿಸದಂತಹ ಸಂಕಟಗಳು ಸಂಭವಿಸುವವು. ಆದರೆ ದಾನಿಯೇಲನೇ, ನಿಮ್ಮ ಜನಗಳಲ್ಲಿ ಯಾರ ಹೆಸರುಗಳು ‘ಜೀವಬಾಧ್ಯರ ಗ್ರಂಥದಲ್ಲಿ’ ಬರೆಯಲ್ಪಟ್ಟಿದೆಯೋ ಅವರೆಲ್ಲರನ್ನು ರಕ್ಷಿಸಲಾಗುವುದು.
ಆದ್ದರಿಂದ ನಾನು ಉತ್ತರದ ಎಲ್ಲಾ ಜನಾಂಗಗಳನ್ನು ಕರೆಸುತ್ತೇನೆ.” ಇದು ಯೆಹೋವನ ಸಂದೇಶ. “ನಾನು ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನನ್ನು ಕೂಡಲೇ ಕರೆಸುವೆನು. ಅವನು ನನ್ನ ಸೇವಕ. ನಾನು ಆ ಜನರನ್ನು ಯೆಹೂದ ದೇಶದ ವಿರುದ್ಧವಾಗಿಯೂ ಯೆಹೂದ್ಯರ ವಿರುದ್ಧವಾಗಿಯೂ ತರುತ್ತೇನೆ. ನಾನು ನಿಮ್ಮ ಸುತ್ತಮುತ್ತಲಿನಲ್ಲಿದ್ದ ಜನಾಂಗಗಳ ವಿರುದ್ಧವಾಗಿಯೂ ಅವರನ್ನು ಕರೆತರುವೆನು. ನಾನು ಆ ದೇಶಗಳನ್ನೆಲ್ಲ ನಾಶಮಾಡುವೆನು. ನಾನು ಆ ಭೂಮಿಗಳನ್ನು ಶಾಶ್ವತವಾಗಿ ಬರಿದಾದ ಮರುಭೂಮಿಗಳನ್ನಾಗಿ ಮಾಡುವೆನು. ಜನರು ಆ ದೇಶಗಳನ್ನು ನೋಡಿ ಅವು ಹಾಳಾಗಿರುವುದನ್ನು ಕಂಡು ಬೆರಗಾಗಿ ಸಿಳ್ಳುಹಾಕುವರು.