Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 13:8 - ಪರಿಶುದ್ದ ಬೈಬಲ್‌

8 ಲೋಕದಲ್ಲಿ ವಾಸಿಸುವ ಜನರೆಲ್ಲರೂ ಆ ಮೃಗವನ್ನು ಆರಾಧಿಸುತ್ತಾರೆ. ಲೋಕವು ಆರಂಭಗೊಂಡಂದಿನಿಂದಲೂ ಕೊಲ್ಲಲ್ಪಟ್ಟ ಕುರಿಮರಿಯಾದಾತನ ಜೀವಬಾಧ್ಯರ ಪುಸ್ತಕದಲ್ಲಿ ಯಾರ ಹೆಸರುಗಳನ್ನು ಬರೆದಿಲ್ಲವೋ ಅವರೇ ಈ ಜನರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಜಗದುತ್ಪತ್ತಿಗೆ ಮೊದಲೇ ಕೊಯ್ಯಲ್ಪಟ್ಟ ಕುರಿಮರಿಯಾದಾತನ ಬಳಿಯಲ್ಲಿರುವ ಜೀವಬಾಧ್ಯರ ಪುಸ್ತಕದಲ್ಲಿ ಯಾರಾರ ಹೆಸರುಗಳು ಬರೆದಿರುವುದಿಲ್ಲವೋ ಆ ಭೂನಿವಾಸಿಗಳೆಲ್ಲರೂ ಅದಕ್ಕೆ ಆರಾಧನೆ ಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಭೂನಿವಾಸಿಗಳೆಲ್ಲರೂ ಅಂದರೆ, ಜಗತ್ತು ಸೃಷ್ಟಿ ಆಗುವ ಮೊದಲೇ ಯಾರಯಾರ ಹೆಸರುಗಳು ವಧೆಯಾದ ಯಜ್ಞದ ಕುರಿಮರಿಯಾದಾತನ ಬಳಿಯಲ್ಲಿರುವ ಜೀವಬಾಧ್ಯರ ಪಟ್ಟಿಯಲ್ಲಿ ಲಿಖಿತವಾಗಿಲ್ಲವೋ, ಅಂಥವರೆಲ್ಲರೂ ಆ ಮೃಗವನ್ನು ಆರಾಧಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಜಗದುತ್ಪತ್ತಿಗೆ ಮೊದಲೇ ಕೊಯ್ಯಲ್ಪಟ್ಟ ಕುರಿಯಾದಾತನ ಬಳಿಯಲ್ಲಿರುವ ಜೀವಬಾಧ್ಯರ ಪಟ್ಟಿಯಲ್ಲಿ ಯಾರಾರ ಹೆಸರುಗಳು ಬರೆದಿರುವದಿಲ್ಲವೋ ಆ ಭೂನಿವಾಸಿಗಳೆಲ್ಲರೂ ಅದಕ್ಕೆ ನಮಸ್ಕಾರ ಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಜಗದುತ್ಪತ್ತಿಗೆ ಮೊದಲೇ ಕೊಯ್ಯಲಾದ ಕುರಿಮರಿಯವರ ಜೀವಗ್ರಂಥದಲ್ಲಿ ಯಾರ‍್ಯಾರ ಹೆಸರುಗಳು ಬರೆದಿರುವುದಿಲ್ಲವೋ, ಆ ಭೂನಿವಾಸಿಗಳೆಲ್ಲರೂ ಆ ಮೃಗವನ್ನು ಆರಾಧಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ಜಿವಾನಿ ಮಾರಲ್ಲ್ಯಾ ಬೊಕ್ಡಾಕ್ ಸಮಂದ್ ಪಡಲ್ಲ್ಯಾ ಜಿವಾಚ್ಯಾ ಪುಸ್ತಕಾತ್ ಜಗ್ ರಚುಚ್ಯಾ ಅದ್ದಿ ಕೊನಾಚಿ ನಾವಾ ಲಿವಲ್ಲಿ ನಾತ್, ತೆನಿ ಸಗ್ಳಿ ಜಿಮ್ನಿ ವೈಲಿ ಲೊಕಾ ತ್ಯಾ ಭಯಾನಕ್ ಜನಾವರಾಕ್ ಆರಾದನ್ ಕರ್‍ತ್ಯಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 13:8
25 ತಿಳಿವುಗಳ ಹೋಲಿಕೆ  

ಜಗತ್ತು ಸೃಷ್ಟಿಯಾಗುವುದಕ್ಕಿಂತ ಮೊದಲೇ ದೇವರು ನಮ್ಮನ್ನು ಕ್ರಿಸ್ತನಲ್ಲಿ ಆರಿಸಿಕೊಂಡನು. ತನ್ನ ಸನ್ನಿಧಿಯಲ್ಲಿ ನಾವು ಪರಿಶುದ್ಧರೂ ನಿರ್ದೋಷಿಗಳೂ ಆಗಿರಬೇಕೆಂಬುದು ಆತನ ಉದ್ದೇಶವಾಗಿತ್ತು.


“ಆಗ ರಾಜನು ತನ್ನ ಬಲಗಡೆಯಲ್ಲಿರುವ ಜನರಿಗೆ, ‘ಬನ್ನಿರಿ, ನನ್ನ ತಂದೆ ನಿಮಗೆ ಮಹಾ ಆಶೀರ್ವಾದಗಳನ್ನು ಕೊಟ್ಟಿದ್ದಾನೆ. ಬನ್ನಿರಿ, ದೇವರು ನಿಮಗೆ ವಾಗ್ದಾನ ಮಾಡಿದ ರಾಜ್ಯವನ್ನು ಪಡೆದುಕೊಳ್ಳಿರಿ. ಆ ರಾಜ್ಯವು ಲೋಕ ಉಂಟಾದಂದಿನಿಂದ ನಿಮಗಾಗಿ ಸಿದ್ಧಮಾಡಲ್ಪಟ್ಟಿದೆ.


ನೀನು ನೋಡಿದ ಆ ಮೃಗವು ಒಂದು ಕಾಲದಲ್ಲಿ ಜೀವಿಸಿತ್ತು. ಆದರೆ ಈಗ ಆ ಮೃಗವು ಜೀವಂತವಾಗಿಲ್ಲ. ಆದರೆ ಆ ಮೃಗವು ತಳವಿಲ್ಲದ ಕೂಪದಿಂದ ಜೀವಂತವಾಗಿ ಮೇಲೆದ್ದುಬಂದು ನಾಶವಾಗು ವುದು. ಲೋಕದಲ್ಲಿ ಜೀವಿಸುತ್ತಿರುವ ಜನರು ಆ ಮೃಗವನ್ನು ನೋಡಿ, ಅದು ಒಂದು ಕಾಲದಲ್ಲಿ ಜೀವಂತವಾಗಿತ್ತು, ಈಗ ಇಲ್ಲ, ಆದರೆ ಮತ್ತೆ ಬರುವುದು ಎಂಬುದನ್ನು ತಿಳಿದು ಅವರು ಆಶ್ಚರ್ಯಪಡುವರು. ಲೋಕವು ಸೃಷ್ಟಿಯಾದಂದಿನಿಂದ ಜೀವಬಾಧ್ಯರ ಪುಸ್ತಕದಲ್ಲಿ ಈ ಜನರ ಹೆಸರುಗಳನ್ನು ಬರೆದೇ ಇಲ್ಲ.


ಜಯಗಳಿಸುವ ಪ್ರತಿಯೊಬ್ಬನೂ ಈ ಜನರಂತೆ ಬಿಳಿಯ ವಸ್ತ್ರಗಳನ್ನು ಧರಿಸುತ್ತಾನೆ. ಆ ವ್ಯಕ್ತಿಯ ಹೆಸರನ್ನು ನಾನು ಜೀವಭಾದ್ಯರ ಪುಸ್ತಕದಿಂದ ತೆಗೆದು ಹಾಕುವುದಿಲ್ಲ. ಅವನು ನನಗೆ ಸೇರಿದವನೆಂದು ನನ್ನ ತಂದೆಯ ಮುಂದೆಯೂ ಆತನ ದೂತರ ಮುಂದೆಯೂ ಹೇಳುತ್ತೇನೆ.


ನಿತ್ಯಜೀವದ ಮೇಲೆ ನಮಗಿರುವ ನಿರೀಕ್ಷೆಯಿಂದಲೇ ಆ ನಂಬಿಕೆ ಮತ್ತು ಜ್ಞಾನಗಳು ಉಂಟಾಗಿವೆ. ನಿತ್ಯಜೀವವನ್ನು ಕೊಡುವುದಾಗಿ ದೇವರು ನಮಗೆ ಅನಾದಿಕಾಲದಲ್ಲಿಯೇ ವಾಗ್ದಾನ ಮಾಡಿದ್ದನು. ದೇವರು ಸುಳ್ಳು ಹೇಳುವುದಿಲ್ಲ.


ಪರಿಶುದ್ಧವಾಗಿಲ್ಲದ ಯಾವುದೂ ನಗರವನ್ನು ಪ್ರವೇಶಿಸುವುದೇ ಇಲ್ಲ. ಅವಮಾನಕರವಾದ ಕಾರ್ಯಗಳನ್ನು ಮಾಡುವವನಾಗಲಿ ಸುಳ್ಳು ಹೇಳುವವನಾಗಲಿ ನಗರವನ್ನು ಎಂದಿಗೂ ಪ್ರವೇಶಿಸುವುದಿಲ್ಲ. ಕುರಿಮರಿಯಾದಾತನು ಜೀವಬಾಧ್ಯರ ಪುಸ್ತಕದಲ್ಲಿ ಯಾರ ಹೆಸರುಗಳನ್ನು ಬರೆದಿರುವನೋ ಅವರು ಮಾತ್ರ ಆ ನಗರವನ್ನು ಪ್ರವೇಶಿಸುವರು.


ಈ ದೇವದೂತರು ಗಟ್ಟಿಯಾದ ಧ್ವನಿಯಿಂದ ಇಂತೆಂದರು: “ವಧಿತನಾದ ಕುರಿಮರಿಯು ಅಧಿಕಾರವನ್ನು, ಸಂಪತ್ತನ್ನು, ಜ್ಞಾನವನ್ನು, ಬಲವನ್ನು, ಗೌರವವನ್ನು, ಪ್ರಭಾವವನ್ನು, ಸ್ತೋತ್ರವನ್ನು ಪಡೆಯಲು ಯೋಗ್ಯನಾಗಿದ್ದಾನೆ!”


ಮರುದಿನ ಯೋಹಾನನು, ತನ್ನ ಬಳಿಗೆ ಬರುತ್ತಿದ್ದ ಯೇಸುವನ್ನು ಕಂಡು, “ಇಗೋ, ಯಜ್ಞಕ್ಕಾಗಿ ದೇವರು ನೇಮಿಸಿದ ಕುರಿಮರಿ. ಆತನು ಈ ಲೋಕದ ಪಾಪಗಳನ್ನು ಪರಿಹರಿಸುವನು.


“ದರ್ಶನದಲ್ಲಿ ಕಾಣಿಸಿಕೊಂಡ ಮನುಷ್ಯನು, ದಾನಿಯೇಲನೇ, ಆಗ ದೇವದೂತನಾದ ಮಿಕಾಯೇಲನು ಏಳುವನು. ಮಿಕಾಯೇಲನು ಯೆಹೂದ್ಯರಾದ ನಿಮ್ಮ ಹಿತಾಸಕ್ತಿಗಳನ್ನು ನೋಡಿಕೊಳ್ಳುವನು. ಮಹಾಸಂಕಟದ ಕಾಲ ಬರುವದು. ಭೂಮಿಯ ಮೇಲೆ ರಾಷ್ಟ್ರಗಳು ಹುಟ್ಟಿದಂದಿನಿಂದ ಸಂಭವಿಸದಂತಹ ಸಂಕಟಗಳು ಸಂಭವಿಸುವವು. ಆದರೆ ದಾನಿಯೇಲನೇ, ನಿಮ್ಮ ಜನಗಳಲ್ಲಿ ಯಾರ ಹೆಸರುಗಳು ‘ಜೀವಬಾಧ್ಯರ ಗ್ರಂಥದಲ್ಲಿ’ ಬರೆಯಲ್ಪಟ್ಟಿದೆಯೋ ಅವರೆಲ್ಲರನ್ನು ರಕ್ಷಿಸಲಾಗುವುದು.


ಹೌದು, ದೆವ್ವಗಳೂ ನಿಮಗೆ ವಿಧೇಯವಾಗುತ್ತವೆ. ಈ ಅಧಿಕಾರ ನಿಮಗಿದೆ ಎಂಬುದರ ನಿಮಿತ್ತ ಸಂತೋಷಪಡದೆ ನಿಮ್ಮ ಹೆಸರುಗಳು ಪರಲೋಕದಲ್ಲಿ ಬರೆಯಲ್ಪಟ್ಟಿವೆ ಎಂಬುದಕ್ಕಾಗಿ ಸಂತೋಷಪಡಿರಿ” ಅಂದನು.


ನನ್ನ ಸ್ನೇಹಿತನೇ, ನೀನು ನನ್ನ ಜೊತೆಕೆಲಸದವನಾಗಿ ನಂಬಿಗಸ್ತಿಕೆಯಿಂದ ಸೇವೆ ಮಾಡುತ್ತಿರುವುದರಿಂದ ಈ ಸ್ತ್ರೀಯರಿಗೂ ನೀನು ಸಹಾಯ ಮಾಡಬೇಕೆಂದು ನಿನ್ನನ್ನು ಕೇಳಿಕೊಳ್ಳುತ್ತೇನೆ. ಈ ಸ್ತ್ರೀಯರು ನನ್ನೊಂದಿಗೆ ಸುವಾರ್ತೆಗೋಸ್ಕರ ಸೇವೆ ಮಾಡಿದ್ದಾರೆ. ನನ್ನೊಂದಿಗೆ ಸೇವೆ ಮಾಡುತ್ತಿದ್ದ ಕ್ಲೇಮೆನ್ಸ್ ಮತ್ತು ಇತರ ಸೇವಕರೊಡನೆ ಈ ಸ್ತ್ರೀಯರು ಸೇವೆ ಮಾಡಿದ್ದಾರೆ. ಅವರ ಹೆಸರುಗಳು ಜೀವಬಾಧ್ಯರ ಪುಸಕ್ತದಲ್ಲಿ ಬರೆಯಲ್ಪಟ್ಟಿವೆ.


ಅವರ ಈ ಪಾಪವನ್ನು ಕ್ಷಮಿಸು. ನೀನು ಅವರನ್ನು ಕ್ಷಮಿಸುವುದಿಲ್ಲವಾದರೆ ನಿನ್ನ ಜೀವಭಾದ್ಯರ ಪಟ್ಟಿಯ ಪುಸ್ತಕದಿಂದ ನನ್ನ ಹೆಸರನ್ನು ಅಳಿಸಿಬಿಡು” ಎಂದು ಪ್ರಾರ್ಥಿಸಿದನು.


ಜೀವಬಾಧ್ಯರ ಪಟ್ಟಿಯಲ್ಲಿ ಹೆಸರು ಬರೆಯಲ್ಪಟ್ಟು ಚೀಯೋನಿನಲ್ಲಿಯೂ ಜೆರುಸಲೇಮಿನಲ್ಲಿಯೂ ವಾಸಿಸುವವರು ಪರಿಶುದ್ಧರೆಂದು ಕರೆಯಲ್ಪಡುವರು. ಅವರೆಲ್ಲರೂ ಅಲ್ಲಿಯೇ ನೆಲೆಸುವರು.


ಇಗೋ, ನಾನು ಬಾಗಿಲ ಬಳಿ ನಿಂತುಕೊಂಡು ತಟ್ಟುತ್ತಿದ್ದೇನೆ. ಯಾವನಾದರೂ ನನ್ನ ಸ್ವರವನ್ನು ಕೇಳಿ ಬಾಗಿಲನ್ನು ತೆರೆದರೆ, ನಾನು ಒಳಗೆ ಬಂದು ಅವನೊಂದಿಗೆ ಊಟ ಮಾಡುತ್ತೇನೆ ಮತ್ತು ಅವನು ನನ್ನೊಂದಿಗೆ ಊಟ ಮಾಡುತ್ತಾನೆ.


ನೀನು ನನ್ನ ಆಜ್ಞೆಯನ್ನು ಸಹನೆಯಿಂದ ಮತ್ತು ತಾಳ್ಮೆಯಿಂದ ಅನುಸರಿಸಿದೆ. ಆದ್ದರಿಂದ ಈ ಲೋಕಕ್ಕೆಲ್ಲಾ ಉಂಟಾಗುವ ಕಡುಶೋಧನೆಯಿಂದ ನಾನು ನಿನ್ನನ್ನು ತಪ್ಪಿಸುತ್ತೇನೆ. ಭೂನಿವಾಸಿಗಳೆಲ್ಲರನ್ನು ಈ ಶೋಧನೆಯು ಪರಿಶೋಧಿಸುತ್ತದೆ.


ಆಗ ಸರ್ಪವು ತನ್ನ ಬಾಯಿಂದ ನದಿಯಂತೆ ನೀರನ್ನು ಹೊರಚೆಲ್ಲಿತು. ಆ ಪ್ರವಾಹದ ನೀರು ಅವಳನ್ನು ಕೊಚ್ಚಿ ಕೊಂಡುಹೋಗಲಿ ಎಂಬುದೇ ಆ ಘಟಸರ್ಪದ ಉದ್ದೇಶವಾಗಿತ್ತು.


ಇಸಾಕನು ತನ್ನ ತಂದೆಯಾದ ಅಬ್ರಹಾಮನಿಗೆ, “ಅಪ್ಪಾ” ಎಂದು ಕರೆದನು. ಅಬ್ರಹಾಮನು, “ಏನು ಮಗನೇ?” ಎಂದು ಉತ್ತರಿಸಿದನು. ಇಸಾಕನು, “ಕಟ್ಟಿಗೆ ಮತ್ತು ಬೆಂಕಿ ನನಗೆ ಕಾಣಿಸುತ್ತಿವೆ. ಆದರೆ ಯಜ್ಞಕ್ಕೆ ಬೇಕಾದ ಕುರಿಮರಿ ಎಲ್ಲಿ?” ಎಂದು ಕೇಳಿದನು.


ಜೀವಬಾಧ್ಯರ ಪುಸ್ತಕದಿಂದ ಅವರ ಹೆಸರುಗಳನ್ನು ಅಳಿಸಿಬಿಡು. ನೀತಿವಂತರ ಹೆಸರುಗಳೊಂದಿಗೆ ಅವರು ಹೆಸರುಗಳನ್ನು ಜೀವಬಾಧ್ಯರ ಪುಸ್ತಕದಲ್ಲಿ ಬರೆಯಬೇಡ.


ಇದಲ್ಲದೆ ಆಕಾಶದಲ್ಲಿಯೂ ಭೂಮಿಯಲ್ಲಿಯೂ ಭೂಮಿಯ ಕೆಳಭಾಗದಲ್ಲೂ ಸಮುದ್ರದಲ್ಲೂ ಇರುವ ಪ್ರತಿಯೊಂದು ಜೀವಿಗಳು ಹೀಗೆ ಹೇಳುವುದನ್ನು ಕೇಳಿದೆನು: “ಸಿಂಹಾಸನದ ಮೇಲೆ ಕುಳಿತಿರುವಾತನಿಗೂ ಕುರಿಮರಿಯಾದಾತನಿಗೂ ಸ್ತೋತ್ರ, ಗೌರವ, ಪ್ರಭಾವ, ಅಧಿಕಾರಗಳು ಯುಗಯುಗಾಂತರಗಳಲ್ಲಿಯೂ ಇರಲಿ!”


ನಂತರ ಕುರಿಮರಿಯು ಏಳು ಮುದ್ರೆಗಳಲ್ಲಿ ಒಂದು ಮುದ್ರೆಯನ್ನು ಒಡೆಯುವಾಗ ನಾನು ಗಮನಿಸಿದೆನು. ಆ ನಾಲ್ಕು ಜೀವಿಗಳಲ್ಲಿ ಒಂದು ಜೀವಿಯು ಗುಡುಗಿನಂತೆ ಮಾತನಾಡುವುದನ್ನು ನಾನು ಕೇಳಿದೆನು. ಅದು “ಬಾ!” ಎಂದು ಹೇಳಿತು.


ಈ ಮೃಗವು ಮೊದಲಿನ ಮೃಗದ ಅಧಿಕಾರವನ್ನೇ ಬಳಸುತ್ತದೆ. ಭೂಮಿಯ ಮೇಲೆ ವಾಸಿಸುವ ಜನರೆಲ್ಲರೂ ಮೊದಲಿನ ಮೃಗವನ್ನು ಆರಾಧಿಸುವಂತೆ ಮಾಡಲು ಅದು ತನ್ನ ಶಕ್ತಿಯನ್ನೆಲ್ಲಾ ಬಳಸುತ್ತದೆ. ಮರಣಕರವಾದ ಗಾಯದಿಂದ ಗುಣಮುಖವಾದದ್ದೇ ಮೊದಲನೆಯ ಮೃಗ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು