ಪ್ರಕಟನೆ 14:12 - ಪರಿಶುದ್ದ ಬೈಬಲ್12 ಈ ಪರಿಸ್ಥಿತಿಯಲ್ಲಿ, ದೇವರ ಪರಿಶುದ್ಧ ಜನರು ತಾಳ್ಮೆಯಿಂದಿರಬೇಕು. ಅವರು ದೇವರ ಆಜ್ಞೆಗಳಿಗೆ ವಿಧೇಯರಾಗಿರಬೇಕು ಮತ್ತು ಯೇಸುವಿನಲ್ಲಿ ನಂಬಿಕೆಯನ್ನಿಟ್ಟಿರಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಇದರಲ್ಲಿ ದೇವರ ಆಜ್ಞೆಗಳನ್ನೂ, ಯೇಸುವಿನ ಬಗ್ಗೆ ನಂಬಿಕೆಯನ್ನೂ ಕೈಕೊಂಡು ನಡೆಯುತ್ತಿರುವ ದೇವಜನರ ತಾಳ್ಮೆಯು ಇಲ್ಲಿ ತೋರಿಬರಬೇಕಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಆದ್ದರಿಂದ ದೇವರ ಆಜ್ಞೆಗಳನ್ನು ಕೈಗೊಂಡು ಯೇಸುಸ್ವಾಮಿಯಲ್ಲಿ ವಿಶ್ವಾಸವಿಟ್ಟು ನಡೆಯುವ ದೇವಜನರಲ್ಲಿ ಸಹನೆ, ಸಹಿಷ್ಣುತೆ ಇರಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಇದರಲ್ಲಿ ದೇವರ ಆಜ್ಞೆಗಳನ್ನೂ ಯೇಸುವಿನ ಮೇಲಣ ನಂಬಿಕೆಯನ್ನೂ ಕೈಕೊಂಡು ನಡೆಯುತ್ತಿರುವ ದೇವಜನರ ತಾಳ್ಮೆಯು ತೋರಿಬರುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಇದಕ್ಕಾಗಿಯೇ ದೇವರ ಆಜ್ಞೆಗಳನ್ನೂ ಯೇಸುವಿನಲ್ಲಿ ನಂಬಿಕೆಯನ್ನೂ ಕಾಪಾಡುವ ದೇವಜನರ ತಾಳ್ಮೆಯ ಸಹಿಷ್ಣುತೆ ಇದರಲ್ಲಿದೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್12 ಹೆ ದೆವಾಚ್ಯಾ ಲೊಕಾಕ್ನಿ ದೆವಾಚ್ಯಾ ಖಾಯ್ದ್ಯಾಕ್ನಿ ಖಾಲ್ತಿ ಹೊವ್ನ್ ಚಲ್ತಲ್ಯಾಕ್ನಿ ಅನಿ ಜೆಜುಕ್ ವಿಶ್ವಾಸುನ್ ಹೊತ್ತ್ಯಾಕ್ನಿ ಸಂಬಾಳುನ್ ಘೆವ್ನ್ ರ್‍ಹಾವ್ಕ್ ಬಲ್ವುತಾ. ಅಧ್ಯಾಯವನ್ನು ನೋಡಿ |
“ನೀನು ಎಲ್ಲಿ ವಾಸಮಾಡುತ್ತಿರುವೆ ಎಂಬುದು ನನಗೆ ತಿಳಿದಿದೆ. ಸೈತಾನನ ಸಿಂಹಾಸನ ವಿರುವ ಕಡೆಯಲ್ಲಿ ನೀನು ವಾಸಿಸುತ್ತಿರುವೆ. ಆದರೆ ನೀನು ನನಗೆ ನಂಬಿಗಸ್ತನಾಗಿರುವೆ. ಅಂತಿಪನ ಕಾಲದಲ್ಲಿಯೂ ನೀನು ನನ್ನಲ್ಲಿಟ್ಟಿರುವ ನಂಬಿಕೆಯನ್ನು ತಿಳಿಸಲು ನಿರಾಕರಿಸಲಿಲ್ಲ. ನಿನ್ನ ಪಟ್ಟಣದಲ್ಲಿ ಕೊಲ್ಲಲ್ಪಟ್ಟ ಅಂತಿಪನು ನನ್ನ ನಂಬಿಗಸ್ತ ಸಾಕ್ಷಿಯಾಗಿದ್ದನು. ನಿನ್ನ ನಗರ ಸೈತಾನನು ವಾಸಿಸುವ ನಗರವಾಗಿದೆ.