ಪ್ರಕಟನೆ 14:15 - ಪರಿಶುದ್ದ ಬೈಬಲ್15 ಆಗ ಮತ್ತೊಬ್ಬ ದೇವದೂತನು ಆಲಯದಿಂದ ಹೊರಗೆ ಬಂದನು. ಈ ದೇವದೂತನು ಮೋಡದ ಮೇಲೆ ಕುಳಿತಿರುವಾತನಿಗೆ, “ನಿನ್ನ ಕುಡುಗೋಲನ್ನು ತೆಗೆದುಕೊಂಡು ಭೂಮಿಯ ಫಸಲನ್ನು ಒಟ್ಟುಗೂಡಿಸು. ಯಾಕೆಂದರೆ ಸುಗ್ಗಿಕಾಲವು ಬಂದಿದೆ. ಭೂಮಿಯ ಫಸಲು ಮಾಗಿದೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಆಗ ಮತ್ತೊಬ್ಬ ದೂತನು ದೇವಾಲಯದೊಳಗಿನಿಂದ ಬಂದು ಮೇಘದ ಮೇಲೆ ಕುಳಿತಿದ್ದಾತನಿಗೆ, “ಭೂಮಿಯ ಪೈರು ಮಾಗಿದೆ, ಕೊಯ್ಯುವ ಕಾಲ ಬಂದಿದೆ. ನಿನ್ನ ಕುಡುಗೋಲನ್ನು ಹಾಕಿ ಪೈರನ್ನು ಕೊಯ್ಯಿ” ಎಂದು ಮಹಾಧ್ವನಿಯಿಂದ ಕೂಗಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಇನ್ನೊಬ್ಬ ದೇವದೂತನು ದೇವಮಂದಿರದಿಂದ ಹೊರಗೆ ಬಂದನು. ಈತನು ಮೋಡದ ಮೇಲೆ ಕುಳಿತಿದ್ದ ಅವನನ್ನು ಉದ್ದೇಶಿಸಿ, “ಭೂಮಿಯ ಫಸಲು ಮಾಗಿದೆ, ಕೊಯ್ಲಿನ ಕಾಲ ಬಂದಿದೆ. ನಿನ್ನ ಕುಡುಗೋಲನ್ನು ತೆಗೆದು ಕೊಯಿಲು ಮಾಡಲು ಆರಂಭಿಸು,” ಎಂದು ಗಟ್ಟಿಯಾಗಿ ಕೂಗಿ ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಆಗ ದೂತನಾದ ಮತ್ತೊಬ್ಬನು ದೇವಾಲಯದೊಳಗಿಂದ ಬಂದು ಮೇಘದ ಮೇಲೆ ಕುಳಿತಿದ್ದಾತನಿಗೆ - ಭೂವಿುಯ ಪೈರು ಮಾಗಿ ಒಣಗಿದೆ; ಕೊಯ್ಯುವ ಕಾಲ ಬಂತು; ನಿನ್ನ ಕುಡುಗೋಲನ್ನು ಹಾಕಿ ಕೊಯ್ಯಿ ಎಂದು ಮಹಾ ಶಬ್ದದಿಂದ ಕೂಗಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಆಗ ಮತ್ತೊಬ್ಬ ದೂತನು ದೇವಾಲಯದೊಳಗಿಂದ ಬಂದು ಮೇಘದ ಮೇಲೆ ಕುಳಿತಿದ್ದವರಿಗೆ, “ಭೂಮಿಯ ಪೈರು ಮಾಗಿದೆ. ಕೊಯ್ಯುವ ಕಾಲ ಬಂದಿರುವುದರಿಂದ, ನಿನ್ನ ಕುಡುಗೋಲನ್ನು ಹಾಕಿ ಕೊಯ್ಯಿ!” ಎಂದು ಮಹಾಧ್ವನಿಯಿಂದ ಕೂಗಿದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್15 ತನ್ನಾ ಅನಿಎಕ್ ದೆವ್‍ದುತಾ ಗುಡಿತ್ನಾ ಭಾಯ್ರ್ ಯೆಲೊ, ಅನಿ ತ್ಯಾ ಮೊಡಾ ವರ್ತಿ ಬಸಲ್ಲ್ಯಾಕ್ ಮೊಟ್ಯಾನ್, “ತುಜೊ ಧಾರ್‍ಲೊ ಇಳೊ ವಾಪರ್ ಅನಿ ಪಿಕ್ ಕಾತರ್ ಕಶ್ಯಾಕ್ ಮಟ್ಲ್ಯಾರ್ ಜಿಮ್ನಿಚ್ಯಾ ಕಾತ್ರನಿಚೊ ಎಳ್ ಯೆವ್ನ್ ಪಾವ್ಲಾ!” ಮನುನ್ ಬೊಬ್ ಮಾರುನ್ ಸಾಂಗಟ್ಲ್ಯಾನ್. ಅಧ್ಯಾಯವನ್ನು ನೋಡಿ |