Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 14:2 - ಪರಿಶುದ್ದ ಬೈಬಲ್‌

2 ನಾನು ಪರಲೋಕದಿಂದ ಒಂದು ಶಬ್ದವನ್ನು ಕೇಳಿಸಿಕೊಂಡೆನು. ಅದು ನೀರಿನ ಪ್ರವಾಹದಂತೆ ಭೋರ್ಗರೆಯುವ ಶಬ್ದದಂತೆ ಮತ್ತು ಗುಡುಗಿನ ಧ್ವನಿಯಂತೆ ಇದ್ದಿತು. ಜನರು ತಮ್ಮ ತಂತಿವಾದ್ಯಗಳನ್ನು ಬಾರಿಸುತ್ತಿರುವರೋ ಎಂಬಂತೆ ಆ ಶಬ್ದವು ನನಗೆ ಕೇಳಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಇದಲ್ಲದೆ ಪರಲೋಕದಿಂದ ಜಲಪ್ರವಾಹದ ಘೋಷದಂತೆಯೂ ದೊಡ್ಡ ಗುಡುಗಿನ ಶಬ್ದದಂತೆಯೂ ಇದ್ದ ಮಹಾಶಬ್ದವನ್ನು ಕೇಳಿದೆನು. ನಾನು ಕೇಳಿದ ಆ ಶಬ್ದವು ವೀಣೆಗಳನ್ನು ನುಡಿಸಿಕೊಂಡು ಹಾಡುತ್ತಿರುವ ವೀಣೆಗಾರರ ಶಬ್ದದಂತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಇದಲ್ಲದೆ, ಸ್ವರ್ಗದಿಂದ ಮಹಾಧ್ವನಿಯೊಂದು ಕೇಳಿಸಿತು. ಅದು ಭೋರ್ಗರೆಯುವ ಜಲಪ್ರವಾಹದಂತೆಯೂ ದೊಡ್ಡ ಗುಡುಗಿನ ಗರ್ಜನೆಯಂತೆಯೂ ಇತ್ತು. ನಾವು ಕೇಳಿದಂಥ ಧ್ವನಿ ಕಿನ್ನರಿಯನ್ನು ನುಡಿಸುತ್ತಿರುವ ವಾದ್ಯಗಾರರ ಸ್ವರದಂತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಇದಲ್ಲದೆ ಪರಲೋಕದ ಕಡೆಯಿಂದ ಜಲಪ್ರವಾಹದ ಘೋಷದಂತೆಯೂ ದೊಡ್ಡ ಗುಡುಗಿನ ಶಬ್ದದಂತೆಯೂ ಇದ್ದ ಶಬ್ದವನ್ನು ಕೇಳಿದೆನು. ನಾನು ಕೇಳಿದ ಆ ಶಬ್ದವು ವೀಣೆಗಳನ್ನು ನುಡಿಸಿಕೊಂಡು ಹಾಡುತ್ತಿರುವ ವೀಣೆಗಾರರ ಶಬ್ದದಂತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಇದಲ್ಲದೆ ಪರಲೋಕದಿಂದ ಜಲ ಪ್ರವಾಹದಂತೆಯೂ ಮಹಾ ಗುಡುಗಿನ ಶಬ್ದದಂತೆಯೂ ಇದ್ದ ಶಬ್ದವನ್ನು ಕೇಳಿದೆನು. ನಾನು ಕೇಳಿದ ಆ ಶಬ್ದವು ಕಿನ್ನರಿಗಳನ್ನು ನುಡಿಸುತ್ತಿರುವ ಕಿನ್ನರರ ಶಬ್ದದಂತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ಅನಿ ಮಿಯಾ ಸರ್‍ಗಾ ವೈನಾ ಎಕ್ ಅವಾಜ್ ಆಯಿಕ್ಲೊ ತೊ ಅವಾಜಾ ದಬ್‍ದಬ್ಯಾಚ್ಯಾ ಸರ್ಕೊ ಹೊತ್ತೊ, ಮೊಟ್ಯಾ ಗುಡ್ಗುಡ್ಯಾಚ್ಯಾ ಸರ್ಕೊ ತೊ ಅವಾಜ್ ಹೊತ್ತೊ. ತೊ ಅವಾಜ್ ವಾಜ್ವುತಲ್ಯಾನಿ ಅಪ್ನಾಚಿ ಹಾರ್ಪ್ ಮನ್ತಲಿ ವಾಜಾಪಾ ವಾಜ್ವುಲ್ಯಾ ಸರ್ಕೊ ಹೊತ್ತೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 14:2
29 ತಿಳಿವುಗಳ ಹೋಲಿಕೆ  

ಆಗ ನಾಲ್ಕು ಜೀವಿಗಳು ಮತ್ತು ಇಪ್ಪತ್ನಾಲ್ಕು ಮಂದಿ ಹಿರಿಯರು ಆ ಕುರಿಮರಿಯ ಮುಂದೆ ಮೊಣಕಾಲೂರಿ ನಮಸ್ಕರಿಸಿದರು. ಪ್ರತಿಯೊಬ್ಬರ ಕೈಯಲ್ಲೂ ಒಂದೊಂದು ತಂತಿವಾದ್ಯವಿತ್ತು. ಧೂಪವು ತುಂಬಿದ್ದ ಚಿನ್ನದ ಪಾತ್ರೆಗಳನ್ನು ಅವರು ಹಿಡಿದುಕೊಂಡಿದ್ದರು. ಪಾತ್ರೆಗಳು ದೇವರ ಪರಿಶುದ್ಧ ಜನರ ಪ್ರಾರ್ಥನೆಗಳಾಗಿದ್ದವು.


ಪಾದಗಳು ಕುಲುಮೆಯಲ್ಲಿ ಕಾಯಿಸಿದ ತಾಮ್ರದಂತಿದ್ದವು; ಧ್ವನಿಯು ಹರಿಯುವ ನೀರಿನ ಘೋಷದಂತಿತ್ತು.


ಬೆಂಕಿಯನ್ನು ಬೆರಸಿದ ಗಾಜಿನ ಸಮುದ್ರದಂತೆ ಕಾಣಿಸುವ ಏನೋ ಒಂದು ನನಗೆ ಕಾಣಿಸಿತು. ಮೃಗವನ್ನು, ಅದರ ವಿಗ್ರಹವನ್ನು ಮತ್ತು ಅದರ ಹೆಸರಿನ ಸಂಖ್ಯೆಯನ್ನು ಸೋಲಿಸಿ ಜಯಗಳಿಸಿದವರೆಲ್ಲರೂ ಸಮುದ್ರ ತೀರದಲ್ಲಿ ನಿಂತಿದ್ದರು. ದೇವರು ಅವರಿಗೆ ನೀಡಿದ ತಂತಿವಾದ್ಯಗಳು ಅವರಲ್ಲಿದ್ದವು.


ಏಳನೆಯ ದೇವದೂತನು ತನ್ನ ತುತೂರಿಯನ್ನು ಊದಿದನು. ಆಗ ಪರಲೋಕದಲ್ಲಿ ಮಹಾಶಬ್ದಗಳು ಉಂಟಾದವು. ಆ ಶಬ್ದಗಳು ಹೀಗೆ ಹೇಳಿದವು: “ಈ ಲೋಕದ ರಾಜ್ಯವು ಈಗ ನಮ್ಮ ಪ್ರಭುವಿನ ಮತ್ತು ಆತನವನಾಗಿರುವ ಕ್ರಿಸ್ತನ ರಾಜ್ಯವಾಗಿ ಮಾರ್ಪಾಟಾಯಿತು. ಆತನು ಯುಗಯುಗಾಂತರಗಳಲ್ಲಿಯೂ ಆಳುವನು.”


ಅಲ್ಲಿ ಇಸ್ರೇಲ್ ದೇವರ ಮಹಿಮೆಯು ಪೂರ್ವದಿಂದ ಬಂದಿತು. ದೇವರ ಸ್ವರವು ಸಮುದ್ರದ ಶಬ್ದದಂತೆ ಗಟ್ಟಿಯಾಗಿತ್ತು. ದೇವರ ಮಹಿಮಾ ಪ್ರಕಾಶದಿಂದ ನೆಲವು ಬೆಳಕಿನಿಂದ ತುಂಬಿತ್ತು.


ಲೈರ್‌ ವಾದ್ಯವನ್ನು ನುಡಿಸುತ್ತಾ ಯೆಹೋವನನ್ನು ಸ್ತುತಿಸಿರಿ! ಹತ್ತುತಂತಿಗಳ ಹಾರ್ಪ್‌ವಾದ್ಯವನ್ನು ಬಾರಿಸುತ್ತಾ ಆತನನ್ನು ಕೊಂಡಾಡಿರಿ.


ದಾವೀದನು ಮತ್ತು ಇಸ್ರೇಲರೆಲ್ಲರು ಕಿನ್ನರಿ, ದಮ್ಮಡಿ, ಝಲ್ಲರಿ, ತಾಳಗಳನ್ನು ಬಾರಿಸುತ್ತಾ ಸನ್ನಿಧಿಯಲ್ಲಿ ನೃತ್ಯಮಾಡುತ್ತಿದ್ದರು.


ಮೂರನೆಯ ದಿನದ ಮುಂಜಾನೆಯಲ್ಲಿ ಆ ಬೆಟ್ಟದ ಮೇಲೆ ಗುಡುಗು ಮಿಂಚುಗಳು ಉಂಟಾದವು. ಒಂದು ಕಾರ್ಮುಗಿಲು ಬೆಟ್ಟದ ಮೇಲೆ ಇಳಿದುಬಂತು; ತುತ್ತೂರಿಯ ಮಹಾ ಧ್ವನಿಯು ಕೇಳಿಸಿತು. ಪಾಳೆಯದಲ್ಲಿದ್ದ ಜನರೆಲ್ಲರೂ ಭಯಭೀತರಾದರು.


ಹಾರ್ಪ್ ಮುಂತಾದ ವಾದ್ಯಗಳನ್ನು ನುಡಿಸುವ ಜನರ ಸಂಗೀತವು, ಕೊಳಲು ಮತ್ತು ತುತೂರಿಗಳನ್ನು ನುಡಿಸುವ ಜನರ ಸಂಗೀತವು ನಿನ್ನಲ್ಲಿ ಇನ್ನೆಂದಿಗೂ ಕೇಳಿಬರುವುದಿಲ್ಲ. ಕುಶಲಕರ್ಮಿಗಳಾರೂ ನಿನ್ನಲ್ಲಿ ಸಿಕ್ಕುವುದಿಲ್ಲ. ಬೀಸುವ ಕಲ್ಲಿನ ಶಬ್ದವು ಇನ್ನೆಂದಿಗೂ ನಿನ್ನಲ್ಲಿ ಕೇಳಿಬರುವುದಿಲ್ಲ.


ಅನಂತರ “ಮೇಲೇರಿ ಬನ್ನಿ!” ಎಂದು ಪರಲೋಕದಿಂದ ಮಹಾವಾಣಿಯು ಆ ಪ್ರವಾದಿಗಳಿಗೆ ತಿಳಿಸಿತು. ಆಗ ಆ ಇಬ್ಬರು ಪ್ರವಾದಿಗಳು ಮೋಡದೊಂದಿಗೆ ಪರಲೋಕಕ್ಕೆ ಏರಿಹೋದರು. ಅವರು ಹೋಗುವುದನ್ನು ಅವರ ಶತ್ರುಗಳು ನೋಡುತ್ತಾ ಇದ್ದರು.


ನಂತರ ಕುರಿಮರಿಯು ಏಳು ಮುದ್ರೆಗಳಲ್ಲಿ ಒಂದು ಮುದ್ರೆಯನ್ನು ಒಡೆಯುವಾಗ ನಾನು ಗಮನಿಸಿದೆನು. ಆ ನಾಲ್ಕು ಜೀವಿಗಳಲ್ಲಿ ಒಂದು ಜೀವಿಯು ಗುಡುಗಿನಂತೆ ಮಾತನಾಡುವುದನ್ನು ನಾನು ಕೇಳಿದೆನು. ಅದು “ಬಾ!” ಎಂದು ಹೇಳಿತು.


ಪ್ರಭುವಿನ ದಿನದಂದು ಪವಿತ್ರಾತ್ಮನು ನನ್ನನ್ನು ವಶಪಡಿಸಿಕೊಂಡನು. ಆಗ ನನ್ನ ಹಿಂಭಾಗದಲ್ಲಿ ಒಂದು ಮಹಾಶಬ್ದವನ್ನು ಕೇಳಿದೆನು. ಆ ಶಬ್ದವು ತುತೂರಿಯ ಧ್ವನಿಯಂತಿತ್ತು.


ಬಿರುಸಾಗಿ ಬಡಿಯುತ್ತಿರುವ ಸಮುದ್ರದ ಅಲೆಗಳು ಭೋರ್ಗರೆಯುತ್ತಾ ಪ್ರಬಲವಾಗಿವೆ. ಆದರೆ ಉನ್ನತದಲ್ಲಿರುವ ಯೆಹೋವನು ಅದಕ್ಕಿಂತ ಎಷ್ಟೋ ಬಲಿಷ್ಠನಾಗಿದ್ದಾನೆ.


ನನ್ನ ಮನವೇ, ಎಚ್ಚರಗೊಳ್ಳು! ಹಾರ್ಪ್ ಮತ್ತು ಲೈರ್ ವಾದ್ಯಗಳೇ, ಎಚ್ಚರಗೊಳ್ಳಿರಿ. ಸಂಕೀರ್ತನೆಯಿಂದ ಸೂರ್ಯೋದಯವನ್ನು ಎದುರುಗೊಳ್ಳೋಣ.


ಮೊದಲನೆಯ ದೇವದೂತನು ತನ್ನ ತುತೂರಿಯನ್ನು ಊದಿದನು. ಆಗ ರಕ್ತದಲ್ಲಿ ಕಲಸಿದ್ದ ಆಲಿಕಲ್ಲುಗಳ ಮತ್ತು ಬೆಂಕಿಯ ಮಳೆಯು ಭೂಮಿಯ ಮೇಲೆ ಸುರಿಯಿತು. ಭೂಮಿಯ ಮೂರನೆಯ ಒಂದು ಭಾಗ ಮತ್ತು ಹಸಿರು ಹುಲ್ಲೆಲ್ಲಾ ಸುಟ್ಟುಹೋದವು; ಮತ್ತು ಮರಗಳಲ್ಲಿ ಮೂರನೆಯ ಒಂದು ಭಾಗ ಸುಟ್ಟುಹೋದವು.


ಯೆಹೋವನು ಅವರಿಗೆ ಕಾಣಿಸಿಕೊಂಡು ತನ್ನ ಬಾಣವನ್ನು ಮಿಂಚಿನ ವೇಗದಲ್ಲಿ ಹಾರಿಸುವನು. ನನ್ನ ಒಡೆಯನಾದ ಯೆಹೋವನು ತುತ್ತೂರಿ ಊದಿದಾಗ ಮರುಭೂಮಿಯ ಬಿರುಗಾಳಿಯಂತೆ ಸೈನ್ಯವು ಮುಂದಕ್ಕೆ ನುಗ್ಗುವುದು.


ದೇವರು ಗದರಿಸಿದಾಗ ಜನರು ಓಡಿಹೋಗುವರು. ಆ ಜನರು ಗಾಳಿಯಲ್ಲಿ ಹಾರಿಹೋಗುವ ಹೊಟ್ಟಿನಂತಿರುವರು; ಬಿರುಗಾಳಿಯು ಬಹುದೂರಕ್ಕೆ ಕೊಂಡೊಯ್ಯುವ ಬೇರಿಲ್ಲದ ಹಣಜಿಗಳಂತಿರುವರು.


ಅವರು ನೃತ್ಯಮಾಡುತ್ತಾ ಝಲ್ಲರಿಗಳನ್ನು ಬಡಿಯುತ್ತಾ ಹಾರ್ಪ್‌ವಾದ್ಯಗಳನ್ನು ನುಡಿಸುತ್ತಾ ಆತನನ್ನು ಸ್ತುತಿಸಲಿ.


ಹಾರ್ಪ್‌ವಾದ್ಯಗಳೊಡನೆ, ಯೆಹೋವನನ್ನು ಕೊಂಡಾಡಿರಿ. ಹಾರ್ಪ್‌ವಾದ್ಯಗಳನ್ನು ನುಡಿಸುತ್ತಾ ಆತನನ್ನು ಸುತ್ತಿಸಿರಿ.


ಆಗ ಅಲ್ಲಿದ್ದ ಜನರು ಗುಡುಗಿನ ಧ್ವನಿಯನ್ನು ಕೇಳಿದರು; ಬೆಟ್ಟದ ಮೇಲೆ ಮಿಂಚುಗಳನ್ನು ನೋಡಿದರು; ಹೊಗೆಯು ಬೆಟ್ಟದಿಂದ ಏರುವುದನ್ನು ಕಂಡರು. ಅವರೆಲ್ಲರೂ ಭಯದಿಂದ ನಡುಗಿದರು; ಬೆಟ್ಟದಿಂದ ದೂರದಲ್ಲಿದ್ದುಕೊಂಡು ಅವುಗಳನ್ನೆಲ್ಲಾ ಗಮನಿಸಿದರು.


ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡಿರಿ. ನಮ್ಮ ದೇವರನ್ನು ಹಾರ್ಪ್‌ವಾದ್ಯಗಳೊಂದಿಗೆ ಸ್ತುತಿಸಿರಿ.


ನನ್ನ ದೇವರೇ, ನಿನ್ನ ಯಜ್ಞವೇದಿಕೆಯ ಬಳಿಗೆ ಬರುವೆನು. ನನ್ನ ಸಂತೋಷಕ್ಕೆ ನೀನೇ ಆಧಾರನಾಗಿರುವೆ. ದೇವರೇ, ನನ್ನ ದೇವರೇ, ಹಾರ್ಪ್‌ವಾದ್ಯವನ್ನು ಬಾರಿಸುತ್ತಾ ನಿನ್ನನ್ನು ಕೊಂಡಾಡುವೆನು.


ನಾನು ಮನುಷ್ಯರ ಭಾಷೆಗಳನ್ನಲ್ಲದೆ ದೇವದೂತರ ಭಾಷೆಗಳನ್ನು ಮಾತಾಡಬಹುದು. ಆದರೆ ನನ್ನಲ್ಲಿ ಪ್ರೀತಿಯಿಲ್ಲದಿದ್ದರೆ, ನಾನು ಕೇವಲ ಗಣಗಣಿಸುವ ಘಂಟೆ, ಝಣಝಣಿಸುವ ತಾಳ.


ಅವರು ವಾದ್ಯಗಳನ್ನು ಬಾರಿಸುತ್ತಾ ದೇವಾಲಯವನ್ನು ಪ್ರವೇಶಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು