ಪ್ರಕಟನೆ 14:3 - ಪರಿಶುದ್ದ ಬೈಬಲ್3 ಜನರು ಸಿಂಹಾಸನದ, ನಾಲ್ಕು ಜೀವಿಗಳ ಮತ್ತು ಹಿರಿಯರ ಸನ್ನಿಧಿಯಲ್ಲಿ ಹೊಸ ಹಾಡನ್ನು ಹಾಡಿದರು. ಈ ಲೋಕದಿಂದ ಬಿಡುಗಡೆ ಹೊಂದಿದ್ದ 1,44,000 ಜನರು ಮಾತ್ರ ಈ ಹಾಡನ್ನು ಕಲಿಯಲು ಶಕ್ತರಾಗಿದ್ದರು. ಈ ಹಾಡನ್ನು ಬೇರೆ ಯಾರೂ ಕಲಿಯಲಾಗುತ್ತಿರಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಅವರು ಸಿಂಹಾಸನದ ಮುಂದೆಯೂ ಆ ನಾಲ್ಕು ಜೀವಿಗಳ ಮತ್ತು ಹಿರಿಯರ ಮುಂದೆಯೂ ಹೊಸ ಹಾಡನ್ನು ಹಾಡಿದರು. ಭೂಲೋಕದಿಂದ ಕೊಂಡುಕೊಳ್ಳಲ್ಪಟ್ಟ ಆ ಒಂದು ಲಕ್ಷದ ನಲವತ್ತನಾಲ್ಕು ಸಾವಿರ ಜನರ ಹೊರತು ಬೇರೆ ಯಾರೂ ಆ ಹಾಡನ್ನು ಕಲಿಯಲಾರರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಒಂದು ಲಕ್ಷದ ನಲವತ್ತ ನಾಲ್ಕು ಸಾವಿರ ಜನರು ಸಿಂಹಾಸನದ ಸಾನ್ನಿಧ್ಯದಲ್ಲಿಯೂ ನಾಲ್ಕು ಜೀವಿಗಳ ಮುಂದೆಯೂ ಸಭಾಪ್ರಮುಖರ ಎದುರಿನಲ್ಲಿಯೂ ನಿಂತು ಒಂದು ಹೊಸಗೀತೆಯನ್ನು ಹಾಡುತ್ತಿದ್ದರು. ಇಡೀ ಮಾನವಕುಲದವರಲ್ಲಿ ವಿಮೋಚನೆಯನ್ನು ಹೊಂದಿದವರು ಇವರೇ. ಇವರನ್ನುಳಿದು ಬೇರೆ ಯಾರಿಂದಲೂ ಆ ಹಾಡನ್ನು ಕಲಿಯಲಾಗಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಅವರು ಸಿಂಹಾಸನದ ಮುಂದೆಯೂ ಆ ನಾಲ್ಕು ಜೀವಿಗಳ ಮತ್ತು ಹಿರಿಯರ ಮುಂದೆಯೂ ಹೊಸ ಹಾಡನ್ನು ಹಾಡಿದರು. ಭೂಲೋಕದೊಳಗಿಂದ ಕೊಂಡುಕೊಳ್ಳಲ್ಪಟ್ಟ ಆ ಲಕ್ಷದ ನಾಲ್ವತ್ತು ನಾಲ್ಕು ಸಾವಿರ ಜನರೇ ಹೊರತು ಬೇರೆ ಯಾರೂ ಆ ಹಾಡನ್ನು ಕಲಿಯಲಾರರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಅವರು ಸಿಂಹಾಸನದ ಮುಂದೆಯೂ ಆ ನಾಲ್ಕು ಜೀವಿಗಳ ಮತ್ತು ಹಿರಿಯರ ಮುಂದೆಯೂ ಹೊಸಹಾಡನ್ನು ಹಾಡಿದರು. ಭೂಲೋಕದೊಳಗಿಂದ ಕೊಂಡುಕೊಳ್ಳಲಾದ ಆ ಒಂದು ಲಕ್ಷ ನಲವತ್ನಾಲ್ಕು ಸಾವಿರ ಜನರೇ ಹೊರತು ಬೇರೆ ಯಾರೂ ಆ ಹಾಡನ್ನು ಕಲಿಯಲಾರರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್3 ಸುಟ್ಕಾ ಘಾವಲ್ಯಾ ಹ್ಯಾ ಜಿಮ್ನಿರ್ ಲೊಕಾನಿ ಸೊಡುನ್ ಎಕ್‍ಲಾಕ್ ಚಾಳಿಸಾರ್ ಚಾರ್ ಹಜಾರ್ ಲೊಕಾನಿ, ಸಿವಾಸನ್, ಚಾರ್ ಝಿತ್ತಿ ಸಾವ್ಜಾ, ಅನಿ ಜಾನ್ತ್ಯಾ ಲೊಕಾಂಚ್ಯಾ ಇದ್ರಾಕ್ ಇಬೆ ರ್‍ಹಾವ್ನ್ ಅನಿ ತೆನಿ ಎವ್ಡೆಚ್ ಶಿಕುಕ್ ಹೊತಾ ತಸ್ಲಿ ಎಕ್ ನ್ಹವಿ ಗಿತ್ ಗಾವ್ಲ್ಯಾನಿ. ಅಧ್ಯಾಯವನ್ನು ನೋಡಿ |
“ಪವಿತ್ರಾತ್ಮನು ಸಭೆಗಳಿಗೆ ಹೇಳುತ್ತಿರುವ ಈ ಸಂಗತಿಗಳನ್ನು ಕೇಳುತ್ತಿರುವವನೇ, ಗಮನವಿಟ್ಟು ಆಲಿಸು. “ಜಯಗಳಿಸಿದ ಪ್ರತಿಯೊಬ್ಬ ವ್ಯಕ್ತಿಗೂ ನಾನು ಅಡಗಿಸಿಟ್ಟಿರುವ ಮನ್ನವನ್ನು ಕೊಡುತ್ತೇನೆ. ಅವನಿಗೆ ನಾನು ಬಿಳುಪಾದ ಕಲ್ಲನ್ನು ಕೊಡುತ್ತೇನೆ. ಆ ಕಲ್ಲಿನ ಮೇಲೆ ಹೊಸ ಹೆಸರನ್ನು ಕೆತ್ತಲಾಗಿದೆ. ಈ ಹೊಸ ಹೆಸರು ಯಾರಿಗೂ ತಿಳಿದಿಲ್ಲ. ಈ ಕಲ್ಲನ್ನು ಪಡೆದುಕೊಂಡ ವ್ಯಕ್ತಿಯು ಮಾತ್ರ ಹೊಸ ಹೆಸರನ್ನು ತಿಳಿದುಕೊಳ್ಳುತ್ತಾನೆ.