ಪ್ರಕಟನೆ 14:8 - ಪರಿಶುದ್ದ ಬೈಬಲ್8 ನಂತರ ಎರಡನೆಯ ದೇವದೂತನು ಮೊದಲನೆಯ ದೇವದೂತನನ್ನು ಹಿಂಬಾಲಿಸುತ್ತಾ, “ಅವಳು ನಾಶವಾದಳು! ಬಾಬಿಲೋನ್ ಎಂಬ ನಗರಿಯು ನಾಶವಾದಳು! ಆಕೆಯು ಸಕಲ ಜನಾಂಗಗಳಿಗೆ ತನ್ನ ಜಾರತ್ವವೆಂಬ ಮತ್ತು ದೇವರ ಕೋಪವೆಂಬ ದ್ರಾಕ್ಷಾರಸವನ್ನು ಕುಡಿಸಿದಳು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಅವನ ಹಿಂದೆ ಎರಡನೆಯ ದೇವದೂತನು ಬಂದು, “ಬಿದ್ದಳು! ಬಿದ್ದಳು! ಬಾಬೆಲೆಂಬ ಮಹಾನಗರಿಯು ಬಿದ್ದಳು, ಆಕೆಯು ಸಕಲ ಜನಾಂಗಗಳಿಗೆ ತನ್ನ ಅತಿ ಜಾರತ್ವವೆಂಬ ದ್ರಾಕ್ಷಾರಸವನ್ನು ಕುಡಿಸಿದಳು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಅನಂತರ ಎರಡನೆಯ ದೇವದೂತನು ಬಂದನು. ಆತನು, “ಪತನ ಹೊಂದಿದಳು, ಪತನ ಹೊಂದಿದಳು ಬಾಬಿಲೋನ್ ಮಹಾನಗರಿ; ಹಾದರವೆಂಬ ಕಾಮೋದ್ರೇಕದ ಮದ್ಯವನು ಸಕಲರಿಗೂ ಕುಡಿಸಿದ ನಗರಿ ಪತನವಾದಳು,” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಅವನ ಹಿಂದೆ ಎರಡನೆಯವನಾದ ಒಬ್ಬ ದೇವದೂತನು ಬಂದು - ಬಿದ್ದಳು, ಬಿದ್ದಳು, ಬಾಬೆಲೆಂಬ ಮಹಾ ನಗರಿಯು ಬಿದ್ದಳು. ಆಕೆಯು ಸಕಲ ಜನಾಂಗಗಳಿಗೆ ತನ್ನ ಅತಿ ಜಾರತ್ವವೆಂಬ ದ್ರಾಕ್ಷಾರಸವನ್ನು ಕುಡಿಸಿದಳು ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಅವನ ಹಿಂದೆ ಎರಡನೆಯವನಾದ ಒಬ್ಬ ದೇವದೂತನು ಬಂದು, “ ‘ಬಿದ್ದಳು, ಬಾಬಿಲೋನ್ ಮಹಾನಗರಿಯು ಬಿದ್ದಳು!’ ಆಕೆಯು ಸಕಲ ಜನಾಂಗಗಳಿಗೆ ತನ್ನ ಅತ್ಯಾಸಕ್ತಿಯ ಅನೈತಿಕತೆವೆಂಬ ದ್ರಾಕ್ಷಾರಸವನ್ನು ಕುಡಿಸಿದಳು,” ಎಂದು ಹೇಳಿದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್8 ತ್ಯೆಚ್ಯಾ ಫಾಟೊಫಾಟ್ ದೊನ್ವೆಚೊ ದೆವಾಚೊ ದುತ್ ಯೆಲೊ, ಅನಿ ತೆನಿ,“ತಿ ಪಡ್ಲಾ! ಮೊಟೆ ಬಾಬಿಲೊನ್ ಪಡ್ಲಾ!, ತೆನಿ ಅಪ್ನಾಚೆ ವಾಯ್ನ್ ವೆಭಿಚಾರಾಚೆ ಖಡಕ್ ವಾಯ್ನ್ ಸಗ್ಳ್ಯಾ ಲೊಕಾನಿ ಫಿ ಸರ್ಕೆ ಕರ್ಲಿನ್!” ಮಟ್ಲ್ಯಾನ್. ಅಧ್ಯಾಯವನ್ನು ನೋಡಿ |