ಪ್ರಕಟನೆ 15:1 - ಪರಿಶುದ್ದ ಬೈಬಲ್1 ನಂತರ ಪರಲೋಕದಲ್ಲಿ ಮತ್ತೊಂದು ಅದ್ಭುತವನ್ನು ನಾನು ನೋಡಿದೆನು. ಅದು ಮಹಾ ಆಶ್ಚರ್ಯಕರವಾಗಿತ್ತು. ಏಳು ಉಪದ್ರವಗಳನ್ನು ತರುವ ಏಳು ಮಂದಿ ದೇವದೂತರು ಅಲ್ಲಿದ್ದರು. ದೇವರ ಕೋಪವು ಈ ಉಪದ್ರವಗಳೊಂದಿಗೆ ಮುಗಿಯುತ್ತಿದ್ದುದರಿಂದ ಇವು ಕಡೆಯ ಉಪದ್ರವಗಳಾಗಿದ್ದವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಪರಲೋಕದಲ್ಲಿ ಆಶ್ಚರ್ಯಕರವಾದ ಮತ್ತೊಂದು ಮಹಾ ಚಿಹ್ನೆಯನ್ನು ನಾನು ನೋಡಿದೆನು. ಏಳು ಮಂದಿ ದೇವದೂತರ ಕೈಯಲ್ಲಿ ಏಳು ಉಪದ್ರವಗಳಿದ್ದವು, ಇವು ಕಡೇ ಉಪದ್ರವಗಳು. ಇವುಗಳೊಂದಿಗೆ ದೇವರ ರೌದ್ರವು ಸಂಪೂರ್ಣವಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಸ್ವರ್ಗದಲ್ಲಿ ಮತ್ತೊಂದು ಚಿಹ್ನೆಯನ್ನು ಕಂಡೆ. ಅದು ಅತ್ಯಾಶ್ಚರ್ಯಕರವಾಗಿ ಇತ್ತು. ಏಳು ದೇವದೂತರ ಕೈಯಲ್ಲಿ ಏಳು ವಿಪತ್ತುಗಳು ಇದ್ದವು. ಇವು ಅಂತಿಮವಾಗಿ ಬಂದೆರಗುವ ವಿಪತ್ತುಗಳು. ಏಕೆಂದರೆ, ಅವುಗಳೊಡನೆ ದೇವರ ಕೋಪಾಗ್ನಿ ಪೂರ್ತಿಯಾಗಿ ಬಂದೆರಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಪರಲೋಕದಲ್ಲಿ ಆಶ್ಚರ್ಯಕರವಾದ ಮತ್ತೊಂದು ಮಹಾಲಕ್ಷಣವು ನನಗೆ ಕಾಣಿಸಿತು. ಏಳು ಮಂದಿ ದೇವದೂತರ ಕೈಯಲ್ಲಿ ಏಳು ಉಪದ್ರವಗಳಿದ್ದವು; ಇವು ಕಡೇ ಉಪದ್ರವಗಳು; ಇವುಗಳಲ್ಲಿ ದೇವರ ರೌದ್ರವು ಮುಗಿದಿರುವದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ನಾನು ಪರಲೋಕದಲ್ಲಿ ಆಶ್ಚರ್ಯಕರವಾದ ಮತ್ತೊಂದು ಮಹಾ ಚಿಹ್ನೆಯನ್ನು ಕಂಡೆನು. ಏಳುಮಂದಿ ದೂತರಲ್ಲಿ ಕಡೆಯ ಏಳು ಉಪದ್ರವಗಳಿದ್ದವು. ಏಕೆಂದರೆ, ಅವುಗಳಲ್ಲಿ ದೇವರ ಕೋಪವು ಸಂಪೂರ್ಣವಾಗುವುದು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್1 ಮಾನಾ ಮಳ್ಬಾರ್ ಅನಿಎಕ್ ಮೊಟಿ ಅನಿ ವಿಚಿತ್ರ್ ವಳಕ್ ಮಿಯಾ ಬಗಟ್ಲೊ. ಸಾತ್ ದೆವ್‍ದುತಾ ಸಾತ್ ಆಕ್ರಿಚಿ ತರಾಸಾ ಘೆವ್ನ್ ಇಬೆ ಹೊತ್ತಿ ಕಶ್ಯಾಕ್ ಮಟ್ಲ್ಯಾರ್ ಹಿ ತರಾಸಾ ದೆವಾಚ್ಯಾ ರಾಗಾಚಿ ಆಕ್ರಿಚಿ ಫಿಡಾ. ಅಧ್ಯಾಯವನ್ನು ನೋಡಿ |
ಈ ಉಪದ್ರವಗಳಿಂದ ಸಾಯದೆ ಉಳಿದ ಜನರು ತಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳಲಿಲ್ಲ. ತಮ್ಮ ಸ್ವಂತ ಕೈಗಳಿಂದ ನಿರ್ಮಿಸಿದ ವಿಗ್ರಹಗಳನ್ನು ತೊರೆದುಬಿಡಲಿಲ್ಲ. ಅವರು ದೆವ್ವಗಳ ಆರಾಧನೆಯನ್ನು ನಿಲ್ಲಿಸಲಿಲ್ಲ. ಚಿನ್ನ, ಬೆಳ್ಳಿ, ತಾಮ್ರ, ಕಲ್ಲು ಮತ್ತು ಮರಗಳಿಂದ ಮಾಡಲ್ಪಟ್ಟು, ನಡೆಯಲಾರದ, ನೋಡಲಾರದ ಮತ್ತು ಕೇಳಲಾರದ ವಿಗ್ರಹಗಳನ್ನು ಪೂಜಿಸುವುದನ್ನು ಅವರು ನಿಲ್ಲಿಸಲಿಲ್ಲ.