ಪ್ರಕಟನೆ 15:2 - ಪರಿಶುದ್ದ ಬೈಬಲ್2 ಬೆಂಕಿಯನ್ನು ಬೆರಸಿದ ಗಾಜಿನ ಸಮುದ್ರದಂತೆ ಕಾಣಿಸುವ ಏನೋ ಒಂದು ನನಗೆ ಕಾಣಿಸಿತು. ಮೃಗವನ್ನು, ಅದರ ವಿಗ್ರಹವನ್ನು ಮತ್ತು ಅದರ ಹೆಸರಿನ ಸಂಖ್ಯೆಯನ್ನು ಸೋಲಿಸಿ ಜಯಗಳಿಸಿದವರೆಲ್ಲರೂ ಸಮುದ್ರ ತೀರದಲ್ಲಿ ನಿಂತಿದ್ದರು. ದೇವರು ಅವರಿಗೆ ನೀಡಿದ ತಂತಿವಾದ್ಯಗಳು ಅವರಲ್ಲಿದ್ದವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ನಾನು ನೋಡಲಾಗಿ ಬೆಂಕಿ ಬೆರೆತ ಗಾಜಿನ ಸಮುದ್ರವೋ ಎಂಬಂತೆ ಏನೋ ಒಂದು ನನಗೆ ಕಾಣಿಸಿತು. ಆಗ ಮೃಗಕ್ಕೆ ಮತ್ತು ಅದರ ವಿಗ್ರಹಕ್ಕೆ ಆರಾಧಿಸದೆಯೂ ಅದರ ಹೆಸರನ್ನು ಪ್ರತಿನಿಧಿಸುವ ಸಂಖ್ಯೆಯ ಮುದ್ರೆಯನ್ನು ಹಾಕಿಸಿಕೊಳ್ಳದೆ ಜಯ ಹೊಂದಿದವರು ದೇವರಿಂದ ಕೊಡಲ್ಪಟ್ಟ ವೀಣೆಗಳನ್ನು ತಮ್ಮ ಕೈಗಳಲ್ಲಿ ಹಿಡಿದುಕೊಂಡು ಗಾಜಿನ ಸಮುದ್ರದ ಬಳಿಯಲ್ಲಿ ನಿಂತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಇದಲ್ಲದೆ, ಗಾಜಿನ ಸಮುದ್ರದಂತಿದ್ದ ಒಂದು ವಸ್ತು ಕಾಣಿಸಿತು; ಅದು ಬೆಂಕಿಯಿಂದ ಕೂಡಿತ್ತು. ಮೃಗದ ವಿರುದ್ಧ, ಅದರ ವಿಗ್ರಹದ ವಿರುದ್ಧ ಹಾಗೂ ಅದರ ಹೆಸರನ್ನು ಸೂಚಿಸುವ ಸಂಖ್ಯೆಯ ವಿರುದ್ಧ ಜಯಗಳಿಸಿದವರನ್ನು ಸಹ ಕಂಡೆ. ಅವರು ಗಾಜಿನ ಸಮುದ್ರದ ಬಳಿ ನಿಂತಿದ್ದರು; ಕೈಗಳಲ್ಲಿ ದೇವರಿತ್ತ ಕಿನ್ನರಿಗಳಿದ್ದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಬೆಂಕಿ ಬೆರೆತ ಗಾಜಿನ ಸಮುದ್ರವೋ ಎಂಬಂತೆ ಏನೋ ಒಂದು ನನಗೆ ಕಾಣಿಸಿತು. ಆಗ ಮೃಗದ ವಿಗ್ರಹಕ್ಕೆ ನಮಸ್ಕರಿಸದೆಯೂ ಅದರ ಹೆಸರಿನ ಅಂಕೆಯನ್ನು ಮುದ್ರೆಹಾಕಿಸಿಕೊಳ್ಳದೆಯೂ ಅದರ ಮೇಲೆ ಜಯ ಹೊಂದಿದವರು ದೇವರ ಸೇವಾರ್ಥವಾದ ವೀಣೆಗಳನ್ನು ಕೈಯಲ್ಲಿ ಹಿಡಿದುಕೊಂಡು ಗಾಜಿನ ಸಮುದ್ರದ ಬಳಿಯಲ್ಲಿ ನಿಂತು ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ನನಗೆ ಬೆಂಕಿ ಬೆರೆತ ಗಾಜಿನ ಸಮುದ್ರವೋ ಎಂಬಂತೆ ಒಂದು ಕಾಣಿಸಿತು. ಆಗ ಮೃಗದ ಮೇಲೆಯೂ ಅದರ ವಿಗ್ರಹದ ಮೇಲೆಯೂ ಅದರ ಹೆಸರಿನ ಸಂಖ್ಯೆಯ ಮೇಲೆಯೂ ಜಯಹೊಂದಿದವರು ದೇವರ ಕಿನ್ನರಿಗಳನ್ನು ಕೈಯಲ್ಲಿ ಹಿಡಿದುಕೊಂಡು, ಗಾಜಿನ ಸಮುದ್ರದ ಮೇಲೆ ನಿಂತುಕೊಂಡು, ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್2 ಮಿಯಾ ಆಗ್ ಮಿಸಳಲ್ಲ್ಯಾ ಕಾಜೆಚ್ಯಾ ಸಮುಂದರಾ ಸರ್ಕೆ ದಿಸ್ತಲೆ ಕಾಯ್‍ಕಿ ಬಗಟ್ಲೊ . ಭಯಾನಕ್ ಜನಾವರಾ ಅನಿ ತ್ಯೆಚ್ಯಾ ಮುರ್ತಿಯಾಂಚ್ಯಾ ವರ್ತಿ ಅನಿ ಅಂಕ್ಯಾನಿ ಜೆ ಕೊನಾಚೆ ನಾಂವ್ ದಾಕ್ವಲ್ಲೆ ಹಾಯ್ ತೆಚೆ ವರ್ತಿ ಜಿಕುನ್ ಜಯ್ ಹೊಲ್ಲ್ಯಾಕ್ನಿಬಿ ಮಿಯಾ ಬಗಟ್ಲೊ. ತೆನಿ ತ್ಯಾ ಕಾಜೆಚ್ಯಾ ಸಮುಂದರಾಕ್ಡೆ ದೆವಾನ್ ತೆಂಕಾ ದಿಲ್ಲಿ ಹಾರ್ಪ್ ಮನ್ತಲಿ ವಾಜ್ಪಾ ಘೆವ್ನ್ ಇಬೆ ಹೊತ್ತ್ಯಾನಿ, ಅಧ್ಯಾಯವನ್ನು ನೋಡಿ |
ನಿಮ್ಮ ನಂಬಿಕೆಯು ಪರಿಶುದ್ಧವಾಗಿದೆ ಎಂಬುದನ್ನು ಪ್ರಕಟಿಸಲು ಈ ತೊಂದರೆಗಳು ಸಂಭವಿಸುತ್ತವೆ. ನಿಮ್ಮ ನಂಬಿಕೆಯ ಪರಿಶುದ್ಧತೆಯು ಬಂಗಾರದ ಮೌಲ್ಯಕ್ಕಿಂತಲೂ ಹೆಚ್ಚಿನದಾಗಿದೆ. ಬಂಗಾರವು ನಶಿಸಿಹೋಗುವಂಥದ್ದಾಗಿದ್ದರೂ ಅದನ್ನು ಬೆಂಕಿಯಲ್ಲಿ ಪುಟ ಹಾಕಿ ಅದರ ಪರಿಶುದ್ಧತೆಯನ್ನು ಶೋಧಿಸುವರು. ಯೇಸು ಕ್ರಿಸ್ತನು ಪ್ರತ್ಯಕ್ಷನಾದಾಗ, ನಿಮ್ಮ ನಂಬಿಕೆಯ ಪರಿಶುದ್ಧತೆಯು ನಿಮಗೆ ಕೀರ್ತಿ, ಪ್ರಭಾವ ಮತ್ತು ಗೌರವಗಳನ್ನು ತರುತ್ತದೆ.