ಪ್ರಕಟನೆ 15:3 - ಪರಿಶುದ್ದ ಬೈಬಲ್3 ಅವರು ದೇವರ ಸೇವಕನಾದ ಮೋಶೆಯ ಗೀತೆಯನ್ನು ಮತ್ತು ಕುರಿಮರಿಯಾದಾತನ ಗೀತೆಯನ್ನು ಹಾಡಿದರು: “ಪ್ರಭುವೇ, ಸರ್ವಶಕ್ತನಾದ ದೇವರೇ, ನೀನು ಮಹತ್ತಾದ ಕಾರ್ಯಗಳನ್ನೂ ಆಶ್ಚರ್ಯಕರವಾದ ಕಾರ್ಯಗಳನ್ನೂ ಮಾಡುವೆ. ಸರ್ವಜನಾಂಗಗಳ ರಾಜನೇ, ನಿನ್ನ ಮಾರ್ಗಗಳು ನ್ಯಾಯವೂ ಸತ್ಯವೂ ಆಗಿವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಅವರು ದೇವರ ದಾಸನಾದ ಮೋಶೆಯ ಹಾಡನ್ನೂ, ಯಜ್ಞದ ಕುರಿಮರಿಯಾದಾತನ ಹಾಡನ್ನೂ ಹಾಡುತ್ತಾ, “ಕರ್ತನಾದ ದೇವರೇ ಸರ್ವಶಕ್ತನೇ, ನಿನ್ನ ಕೃತ್ಯಗಳು ಮಹತ್ತಾದವುಗಳೂ, ಆಶ್ಚರ್ಯಕರವಾದವುಗಳೂ ಆಗಿವೆ. ಸರ್ವಜನಾಂಗಗಳ ಅರಸನೇ. ನಿನ್ನ ಮಾರ್ಗಗಳು ನ್ಯಾಯವೂ ಸತ್ಯವೂ ಆಗಿವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಅವರು ದೇವರ ದಾಸನಾದ ಮೋಶೆಯ ಗೀತೆಯನ್ನೂ ಯಜ್ಞದ ಕುರಿಮರಿಯ ಗೀತೆಯನ್ನೂ ಹಾಡುತ್ತಿದ್ದರು. ಅದು ಯಾವುದೆಂದರೆ : ಹೇ ದೇವಾ, ಹೇ ಪ್ರಭೂ, ನೀ ಸರ್ವಶಕ್ತ ! ಏನು ಘನ, ಏನು ಅದ್ಭುತ, ನಿನ್ನ ಸತ್ಕಾರ್ಯ ! ರಾಷ್ಟ್ರಗಳಿಗೆಲ್ಲಾ ನೀ ರಾಜಾಧಿರಾಜ ನಿಜವಾದುದು, ಋಜುವಾದುದು ನಿನ್ನ ಸನ್ಮಾರ್ಗ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ದೇವರ ದಾಸನಾದ ಮೋಶೆಯ ಹಾಡನ್ನೂ ಯಜ್ಞದ ಕುರಿಯಾದಾತನ ಹಾಡನ್ನೂ ಹಾಡುತ್ತಾ - ದೇವರಾದ ಕರ್ತನೇ, ಸರ್ವಶಕ್ತನೇ, ನಿನ್ನ ಕೃತ್ಯಗಳು ಮಹತ್ತಾದವುಗಳೂ ಆಶ್ಚರ್ಯಕರವಾದವುಗಳೂ ಆಗಿವೆ; ಸರ್ವಜನಾಂಗಗಳ ಅರಸನೇ, ನಿನ್ನ ಮಾರ್ಗಗಳು ನ್ಯಾಯವೂ ಸತ್ಯವೂ ಆಗಿವೆ; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ದೇವರ ದಾಸನಾದ ಮೋಶೆಯ ಮತ್ತು ಕುರಿಮರಿ ಆಗಿರುವವರ ಹಾಡನ್ನೂ ಹಾಡುತ್ತಾ: “ಕರ್ತ ಆಗಿರುವ ಸರ್ವಶಕ್ತ ದೇವರೇ, ನಿಮ್ಮ ಕೃತ್ಯಗಳು ಮಹತ್ತಾದವುಗಳೂ ಆಶ್ಚರ್ಯವಾದವುಗಳೂ ಆಗಿವೆ. ರಾಷ್ಟ್ರಗಳ ಅರಸರಾಗಿರುವ ನಿಮ್ಮ ಮಾರ್ಗಗಳು ನೀತಿಯುಳ್ಳವೂ ಸತ್ಯವೂ ಆಗಿವೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್3 ಅನಿ ದೆವಾಚ್ಯಾ ಸೆವಕಾಚಿ ಮೊಯ್ಜೆಚಿ ಅನಿ ಬೊಕ್ಡಾಚಿ ಗಿತ್ ಗಾವುಲಾಗಲ್ಲ್ಯಾನಿ: “ಸರ್ವೆಸ್ವರಾ ಸಗ್ಳ್ಯಾನ್ ಮೊಟ್ಯಾ ದೆವಾ, ಕವ್ಡಿ ಮೊಟಿ ಅನಿ ವಿಚಿತ್ರ್ ತುಜಿ ಕಾಮಾ!, ಸಗ್ಳ್ಯಾ ದೆಶಾಂಚ್ಯಾ ರಾಜಾ, ಕವ್ಡ್ಯಾ ಸಮಾ ಅನಿ ಖರ್‍ಯಾ ತುಜ್ಯಾ ವಾಟಾ!, ಅಧ್ಯಾಯವನ್ನು ನೋಡಿ |
ಈ ನಾಲ್ಕು ಜೀವಿಗಳಲ್ಲಿ ಪ್ರತಿಯೊಂದಕ್ಕೂ ಆರು ರೆಕ್ಕೆಗಳಿದ್ದವು. ಈ ಜೀವಿಗಳ ಹೊರಭಾಗದಲ್ಲೆಲ್ಲಾ ಮತ್ತು ಒಳಭಾಗದಲ್ಲೆಲ್ಲಾ ಕಣ್ಣುಗಳಿದ್ದವು. ಈ ನಾಲ್ಕು ಜೀವಿಗಳು ಹಗಲಿರುಳು ಎಡಬಿಡದೆ ಹೀಗೆ ಹೇಳುತ್ತಿದ್ದವು: “ದೇವರಾದ ಪ್ರಭು, ಪರಿಶುದ್ಧನು, ಪರಿಶುದ್ಧನು, ಪರಿಶುದ್ಧನು; ಆತನು ಸರ್ವಶಕ್ತನು. ಆತನು ಭೂತಕಾಲದಲ್ಲಿ ಇದ್ದವನೂ ವರ್ತಮಾನಕಾಲದಲ್ಲಿ ಇರುವಾತನೂ ಮುಂದೆ ಬರುವಾತನೂ ಆಗಿದ್ದಾನೆ.”
ನನ್ನ ಬಳಿಗೆ ಬರಲು ಅವರಿಗೆ ಹೇಳು. ತಾವು ವಿಗ್ರಹಗಳನ್ನು ಯಾಕೆ ನಂಬುತ್ತಾರೆಂದು ನನ್ನೊಂದಿಗೆ ವಾದಿಸಲಿ.) “ಬಹಳ ಕಾಲದ ಹಿಂದೆ ನಡೆದ ಸಂಗತಿಗಳ ಬಗ್ಗೆ ನಿಮಗೆ ತಿಳಿಸಿದವರು ಯಾರು? ಬಹಳ ಕಾಲದಿಂದ ಈ ವಿಷಯಗಳನ್ನು ನಿಮಗೆ ತಿಳಿಸುತ್ತಾ ಬಂದವರು ಯಾರು? ನಾನೇ. ಯೆಹೋವನಾದ ನಾನೇ ನಿಮಗೆಲ್ಲವನ್ನು ತಿಳಿಸಿದೆನು. ನಾನೊಬ್ಬನೇ ದೇವರು. ನನ್ನಂಥ ದೇವರು ಬೇರೆ ಇದ್ದಾರೆಯೇ? ಕರುಣೆಯುಳ್ಳ ದೇವರು ಬೇರೆಲ್ಲಾದರೂ ಇರುವನೇ? ತನ್ನ ಜನರನ್ನು ವಿಮೋಚಿಸುವಂಥ ಬೇರೆ ದೇವರು ಇರುವನೇ? ಇಲ್ಲ! ಬೇರೆ ದೇವರು ಇಲ್ಲ!
ಆದರೆ ಸರ್ವಾಂಗಹೋಮ ಅರ್ಪಿಸುವ ಯಜ್ಞವೇದಿಕೆಯ ಮೇಲೆ ಮತ್ತು ಧೂಪಾರ್ಪಣೆಯ ಯಜ್ಞವೇದಿಕೆಯ ಮೇಲೆ ಧೂಪವರ್ಪಿಸಲು ಆರೋನನ ಸಂತತಿಯವರನ್ನು ಮಾತ್ರ ಆರಿಸಿಕೊಳ್ಳಲಾಗಿತ್ತು. ದೇವರ ನಿವಾಸದ ಮಹಾಪವಿತ್ರ ಸ್ಥಳದಲ್ಲಿ ಆರೋನನ ಸಂತತಿಯವರೇ ಎಲ್ಲಾ ಕೆಲಸಕಾರ್ಯಗಳನ್ನು ಮಾಡುತ್ತಿದ್ದರು. ಅಲ್ಲದೆ ಇಸ್ರೇಲ್ ಜನರನ್ನು ಶುದ್ಧೀಕರಿಸಲು ಶುದ್ಧೀಕರಣ ಆಚಾರವನ್ನು ಅವರೇ ಮಾಡುತ್ತಿದ್ದರು. ದೇವರ ಸೇವಕನಾದ ಮೋಶೆಯು ಆಜ್ಞಾಪಿಸಿದ ಎಲ್ಲಾ ಕಟ್ಟಳೆಗಳನ್ನು ಮತ್ತು ನಿಯಮಗಳನ್ನು ಅವರು ಅನುಸರಿಸುತ್ತಿದ್ದರು.
ಇಸ್ರೇಲಿನ ಜನರಲ್ಲಿ ಒಬ್ಬರೂ ಸಹ ನಿನ್ನ ಉಪದೇಶವನ್ನು ಪಾಲಿಸಲಿಲ್ಲ. ಅವರೆಲ್ಲರೂ ಅದರಿಂದ ದೂರಾದರು. ಅವರು ನಿನ್ನ ಆಜ್ಞೆಯನ್ನು ಪಾಲಿಸಲಿಲ್ಲ. ಮೋಶೆಯ ಧರ್ಮಶಾಸ್ತ್ರದಲ್ಲಿ ಶಾಪಗಳ ಮತ್ತು ವಾಗ್ದಾನಗಳ ಬಗ್ಗೆ ಹೇಳಲಾಗಿದೆ. (ಮೋಶೆಯು ದೇವರ ಸೇವಕನಾಗಿದ್ದನು) ಆ ಶಾಪಗಳು ಧರ್ಮಶಾಸ್ತ್ರವನ್ನು ಪಾಲಿಸದಿದ್ದವರಿಗೆ ಆಗುವ ಶಿಕ್ಷೆಯಾಗಿದೆ. ಆ ಎಲ್ಲಾ ಶಿಕ್ಷೆಗಳು ನಮಗೆ ಆಗಿವೆ. ನಾವು ಯೆಹೋವನಾದ ನಿನ್ನ ವಿರುದ್ಧ ಪಾಪ ಮಾಡಿದ್ದರಿಂದ ನಮಗೆ ಹೀಗಾಯಿತು.