ಪ್ರಕಟನೆ 15:4 - ಪರಿಶುದ್ದ ಬೈಬಲ್4 ಪ್ರಭುವೇ, ಜನರೆಲ್ಲರೂ ನಿನಗೆ ಭಯಗೊಳ್ಳುತ್ತಾರೆ; ಜನರೆಲ್ಲರೂ ನಿನ್ನ ಹೆಸರನ್ನು ಸ್ತುತಿಸುತ್ತಾರೆ. ನೀನು ಮಾತ್ರ ಪರಿಶುದ್ಧನಾದವನು. ನೀನು ಯೋಗ್ಯವಾದ ಕಾರ್ಯಗಳನ್ನು ಮಾಡುತ್ತೀ ಎಂಬುದು ಸ್ಪಷ್ಟವಾಗಿರುವುದರಿಂದ ಜನರೆಲ್ಲರೂ ನಿನ್ನ ಸನ್ನಿಧಿಗೆ ಬಂದು ನಿನ್ನನ್ನು ಆರಾಧಿಸುತ್ತಾರೆ.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಕರ್ತನೇ, ನಿನಗೆ ಭಯಪಡದವರು ಮತ್ತು ನಿನ್ನ ನಾಮವನ್ನು ಮಹಿಮೆ ಪಡಿಸದವರು ಯಾರಾದರು ಇದ್ದಾರೆಯೇ? ನೀನೊಬ್ಬನೇ ಪರಿಶುದ್ಧನು. ನಿನ್ನ ನೀತಿಯುಳ್ಳ ನ್ಯಾಯತೀರ್ಪು ಬೆಳಕಿಗೆ ಬಂದುದರಿಂದ ಸರ್ವಜನಾಂಗಗಳು ನಿನ್ನ ಸನ್ನಿಧಾನಕ್ಕೆ ಬಂದು ನಿನ್ನನ್ನು ಆರಾಧಿಸುವರು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಹೇ ಪ್ರಭೂ, ನಿನಗಂಜದವರಾರು? ನಿನ್ನ ನಾಮಸ್ತುತಿ ಮಾಡದವರಾರು? ಪರಮಪವಿತ್ರ ನೀನಲ್ಲದಿನ್ಯಾರು ಪ್ರಕಟವಾಗಿವೆ ನಿನ್ನ ನೀತಿಯುತ ಕಾರ್ಯಗಳು ಬಂದೆರಗಲಿವೆ ನಿನಗೆ ಸಕಲ ಜನಾಂಗಗಳು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಕರ್ತನೇ, ನಿನ್ನ ನಾಮಕ್ಕೆ ಭಯಪಡದವರೂ ಅದನ್ನು ಘನವಾದದ್ದೆಂದು ಒಪ್ಪಿಕೊಳ್ಳದವರೂ ಯಾರಾದರೂ ಇದ್ದಾರೇ? ನೀನೊಬ್ಬನೇ ಪರಿಶುದ್ಧನು; ನಿನ್ನ ನೀತಿಯುಳ್ಳ ಕೃತ್ಯಗಳು ಪ್ರಕಾಶಕ್ಕೆ ಬಂದದರಿಂದ ಎಲ್ಲಾ ಜನಾಂಗಗಳು ಬಂದು ನಿನ್ನ ಸನ್ನಿಧಾನದಲ್ಲಿ ನಮಸ್ಕಾರ ಮಾಡುವರು ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಕರ್ತನೇ, ನಿನಗೆ ಭಯಪಡದವರೂ ನಿನ್ನ ನಾಮವನ್ನು ಮಹಿಮೆಪಡಿಸದವರೂ ಯಾರು? ಏಕೆಂದರೆ ನೀನೊಬ್ಬನೇ ಪರಿಶುದ್ಧನು. ನಿನ್ನ ನೀತಿಯುಳ್ಳ ಕೃತ್ಯಗಳು ಪ್ರಕಟವಾದ್ದರಿಂದ ಎಲ್ಲಾ ರಾಷ್ಟ್ರಗಳವರು ಬಂದು, ನಿನ್ನ ಸನ್ನಿಧಾನದಲ್ಲಿ ಆರಾಧಿಸುವರು,” ಎಂದು ಹೇಳಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್4 ಸರ್ವೆಸ್ವರಾ ತುಕಾ ಭಿಂಯ್ ನಸಲ್ಲೊ ಕೊನ್ ಹಾಯ್?, ತುಜ್ಯಾ ಮೊಟ್ಯಾಪಾನಾಚ್ಯಾ ವಿಶಯಾತ್ ಸಾಂಗಿನಸ್ತಾನಾ ಕೊನಾಕ್ ರ್‍ಹಾವ್ಕ್ ಹೊತಾ?, ತಿಯಾ ಎಕ್ಲೊಚ್ ಪವಿತ್ರ್. ಸಗ್ಳಿ ದೆಶಾ ಯೆತ್ಯಾತ್ ಅನಿ ತುಜೆ ಆರಾದನ್ ಕರ್‍ತ್ಯಾತ್, ಕಶ್ಯಾಕ್ ಮಟ್ಲ್ಯಾರ್ ತುಜಿ ನ್ಯಾಯ್ ಪಾನಾಚಿ ಕಾಮಾ ಸಗ್ಳ್ಯಾಕ್ನಿ ದಿಸುನ್ ಯೆಲ್ಯಾತ್”. ಅಧ್ಯಾಯವನ್ನು ನೋಡಿ |
ಈ ನಾಲ್ಕು ಜೀವಿಗಳಲ್ಲಿ ಪ್ರತಿಯೊಂದಕ್ಕೂ ಆರು ರೆಕ್ಕೆಗಳಿದ್ದವು. ಈ ಜೀವಿಗಳ ಹೊರಭಾಗದಲ್ಲೆಲ್ಲಾ ಮತ್ತು ಒಳಭಾಗದಲ್ಲೆಲ್ಲಾ ಕಣ್ಣುಗಳಿದ್ದವು. ಈ ನಾಲ್ಕು ಜೀವಿಗಳು ಹಗಲಿರುಳು ಎಡಬಿಡದೆ ಹೀಗೆ ಹೇಳುತ್ತಿದ್ದವು: “ದೇವರಾದ ಪ್ರಭು, ಪರಿಶುದ್ಧನು, ಪರಿಶುದ್ಧನು, ಪರಿಶುದ್ಧನು; ಆತನು ಸರ್ವಶಕ್ತನು. ಆತನು ಭೂತಕಾಲದಲ್ಲಿ ಇದ್ದವನೂ ವರ್ತಮಾನಕಾಲದಲ್ಲಿ ಇರುವಾತನೂ ಮುಂದೆ ಬರುವಾತನೂ ಆಗಿದ್ದಾನೆ.”
ಯೆಹೋವನೇ, ನೀನೇ ನನ್ನ ಬಲವಾಗಿರುವೆ. ನನ್ನ ರಕ್ಷಕನಾಗಿರುವೆ. ಕಷ್ಟ ಬಂದಾಗ ಓಡಿಬಂದು ಆಶ್ರಯ ಪಡೆಯಲು ಸುರಕ್ಷಿತ ಸ್ಥಳವಾಗಿರುವೆ. ಜಗತ್ತಿನ ಎಲ್ಲಾ ಭಾಗಗಳ ಜನಾಂಗದ ಜನರು ನಿನ್ನಲ್ಲಿಗೆ ಬರುವರು. ಅವರು, “ನಮ್ಮ ಪೂರ್ವಿಕರು ಸುಳ್ಳುದೇವರುಗಳನ್ನಿಟ್ಟುಕೊಂಡಿದ್ದರು. ಅವರು ಆ ನಿರರ್ಥಕವಾದ ವಿಗ್ರಹಗಳನ್ನು ಪೂಜಿಸಿದರು. ಆದರೆ ಆ ವಿಗ್ರಹಗಳು ಅವರಿಗೆ ಕೊಂಚವೂ ಸಹಾಯ ಮಾಡಲಿಲ್ಲ” ಎಂದು ಹೇಳುವರು.
ದೇವರು ಉನ್ನತಸ್ಥಾನದಲ್ಲಿ ಎತ್ತಲ್ಪಟ್ಟಿದ್ದಾನೆ. ಆತನು ಸದಾಕಾಲ ಜೀವಿಸುತ್ತಾನೆ. ಆತನ ಹೆಸರು ಪರಿಶುದ್ಧವಾದದ್ದು. ದೇವರು ಹೇಳುವುದೇನೆಂದರೆ, “ನಾನು ಉನ್ನತಲೋಕವೆಂಬ ಪವಿತ್ರಸ್ಥಳದಲ್ಲಿ ವಾಸಿಸುತ್ತೇನೆ. ಅದೇ ಸಮಯದಲ್ಲಿ ದುಃಖಪಡುವವರೂ ದೀನರೂ ಆಗಿರುವ ಜನರೊಂದಿಗೆ ವಾಸಮಾಡುತ್ತೇನೆ. ಆತ್ಮದಲ್ಲಿ ದೀನರಾಗಿರುವವರಿಗೆ ನಾನು ಹೊಸಜನ್ಮ ಕೊಡುತ್ತೇನೆ. ಹೃದಯದಲ್ಲಿ ದುಃಖಿಸುವವರಿಗೆ ನಾನು ಹೊಸ ಜೀವ ಕೊಡುತ್ತೇನೆ.
ನೀವು ನನಗೆ ಅಂಜುವುದಿಲ್ಲವೇ?” ಇದು ಯೆಹೋವನ ಸಂದೇಶ: “ನೀವು ನನ್ನ ಎದುರಿಗೆ ಭಯದಿಂದ ನಡುಗುವುದಿಲ್ಲವೇ? ಸಾಗರಗಳಿಗೆ ಗಡಿಯಂತೆ ದಡವನ್ನು ನಿರ್ಮಿಸಿದವನು ನಾನೇ. ಸಮುದ್ರವು ನಿರಂತರವಾಗಿ ತನ್ನ ಸೀಮೆಯಲ್ಲಿಯೇ ಹರಿಯಬೇಕೆಂದು ಹಾಗೆ ಮಾಡಿದೆ. ತೆರೆಗಳು ದಡವನ್ನು ಅಪ್ಪಳಿಸಬಹುದು ಆದರೆ ಅವುಗಳು ಅದನ್ನು ನಾಶಮಾಡಲಾರವು. ತೆರೆಗಳು ಬರುವಾಗ ಭೋರ್ಗರೆಯಬಹುದು, ಆದರೆ ದಡವನ್ನು ದಾಟಿಹೋಗಲಾರವು.