ಪ್ರಕಟನೆ 16:11 - ಪರಿಶುದ್ದ ಬೈಬಲ್11 ಜನರು ತಮಗಾದ ಹುಣ್ಣುಗಳಿಂದ ಮತ್ತು ನೋವಿನಿಂದ ಪರಲೋಕದ ದೇವರನ್ನು ದೂಷಿಸಿದರು. ಆದರೆ ಜನರು ತಾವು ಮಾಡುವ ಕೆಟ್ಟಕಾರ್ಯಗಳನ್ನು ತೊರೆದುಬಿಟ್ಟು ತಮ್ಮ ಹೃದಯಗಳನ್ನು ಮಾರ್ಪಡಿಸಿಕೊಳ್ಳಲು ಒಪ್ಪಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ತಮ್ಮ ಯಾತನೆಗಳಿಗಾಗಿಯೂ ಹುಣ್ಣುಗಳ ದೆಸೆಯಿಂದಲೂ ಪರಲೋಕದ ದೇವರನ್ನು ದೂಷಿಸಿದಲ್ಲದೆ. ಅವರು ತಮ್ಮ ಕೃತ್ಯಗಳಿಗಾಗಿ ಮಾನಸಾಂತರ ಹೊಂದಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ತಮ್ಮ ನೋವು ಬಾಧೆಗಳ ನಿಮಿತ್ತವೂ ತಮ್ಮ ಉರಿ ಹುಣ್ಣುಗಳ ನಿಮಿತ್ತವೂ ಸ್ವರ್ಗದ ದೇವರನ್ನು ದೂಷಿಸಿದರು. ತಮ್ಮ ದುಷ್ಕೃತ್ಯಗಳಿಗಾಗಿ ಪಶ್ಚಾತ್ತಾಪಪಟ್ಟು ದೇವರಿಗೆ ಅಭಿಮುಖರಾಗಲೇ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ತಮ್ಮ ಕೃತ್ಯಗಳ ವಿಷಯದಲ್ಲಿ ಮಾನಸಾಂತರಮಾಡಿಕೊಳ್ಳದೆ ತಮ್ಮ ಕಷ್ಟಗಳ ದೆಸೆಯಿಂದಲೂ ಹುಣ್ಣುಗಳ ದೆಸೆಯಿಂದಲೂ ಪರಲೋಕ ದೇವರನ್ನು ದೂಷಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ತಮ್ಮ ನೋವುಗಳಿಗಾಗಿಯೂ ಹುಣ್ಣುಗಳಿಗಾಗಿಯೂ ಪರಲೋಕದ ದೇವರನ್ನು ದೂಷಿಸಿದರು. ಆದರೆ ಅವರು, ತಮ್ಮ ಕೃತ್ಯಗಳಿಗಾಗಿ ಪಶ್ಚಾತ್ತಾಪ ಪಡಲಿಲ್ಲ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್11 ಅನಿ ತೆನಿ ತೆಂಚ್ಯಾ ತರಾಸಾಸಾಟ್ನಿ ಅನಿ ತ್ಯಾ ದುಕ್ಕಾಂಚ್ಯಾಸಾಟ್ನಿ ಸರ್ಗಾಚ್ಯಾ ದೆವಾಕ್ ಸರಾಪ್ಲ್ಯಾನಿ, ಖರೆ ತೆನಿ ಅಪ್ಲ್ಯಾ ಅಪ್ಲ್ಯಾ ಬುರ್ಶ್ಯಾ ವಾಟಾ ಸೊಡುಕ್‍ನ್ಯಾತ್. ಅಧ್ಯಾಯವನ್ನು ನೋಡಿ |
ಅರಸನಾದ ಅರ್ತಷಸ್ತನೆಂಬ ನಾನು ಈ ರಾಜಾಜ್ಞೆಯನ್ನು ಹೊರಡಿಸುತ್ತಿದ್ದೇನೆ: ಯೂಫ್ರೇಟೀಸ್ ನದಿಯ ಪಶ್ಚಿಮ ಪ್ರಾಂತ್ಯದಲ್ಲಿ ರಾಜಧನವನ್ನು ಇಟ್ಟುಕೊಂಡಿರುವ ಎಲ್ಲಾ ಸಂಸ್ಥಾನಾಧಿಕಾರಿಗಳಿಗೆ ನನ್ನ ಆಜ್ಞೆ ಏನೆಂದರೆ, ಎಜ್ರನಿಗೆ ಬೇಕಾದುದನ್ನು ಅವರು ಒದಗಿಸಬೇಕು. ಎಜ್ರನು ಪರಲೋಕದ ದೇವರ ಯಾಜಕನೂ ಆತನ ಕಟ್ಟಳೆಗಳ ಬೋಧಕನೂ ಆಗಿದ್ದಾನೆ. ನನ್ನ ಈ ಆಜ್ಞೆಗೆ ಸಂಪೂರ್ಣವಾಗಿಯೂ ತ್ವರಿತವಾಗಿಯೂ ವಿಧೇಯರಾಗಬೇಕು.