ಆದರೆ ಆ ಮೃಗವನ್ನೂ ಸುಳ್ಳುಪ್ರವಾದಿಯನ್ನೂ ಸೆರೆಹಿಡಿಯಲಾಯಿತು. ಈ ಸುಳ್ಳುಪ್ರವಾದಿಯೇ ಮೃಗಕ್ಕಾಗಿ ಅದ್ಭುತಗಳನ್ನು ಮಾಡಿದವನು. ಈ ಸುಳ್ಳುಪ್ರವಾದಿಯು ಮೃಗದ ಗುರುತು ಹಾಕಿಸಿಕೊಂಡಿರುವ ಮತ್ತು ಅದರ ವಿಗ್ರಹವನ್ನು ಆರಾಧಿಸಿದ ಜನರನ್ನು ಮರುಳು ಮಾಡಲು ಈ ಅದ್ಭುತಗಳನ್ನು ಬಳಸಿದ್ದನು. ಈ ಸುಳ್ಳುಪ್ರವಾದಿಯನ್ನೂ ಮೃಗವನ್ನೂ, ಬೆಂಕಿ ಮತ್ತು ಗಂಧಕಗಳಿಂದ ಉರಿಯುವ ಕೆರೆಯಲ್ಲಿ ಜೀವಂತವಾಗಿ ಎಸೆಯಲಾಯಿತು.
ಸೈತಾನನನ್ನು (ಇವನೇ ಜನರನ್ನು ಮೋಸಗೊಳಿಸಿದವನು.) ಬೆಂಕಿಗಂಧಕಗಳು ಉರಿಯುತ್ತಿದ್ದ ಕೆರೆಗೆ ಎಸೆಯಲಾಯಿತು. ಅಲ್ಲಿ ಮೃಗವೂ ಇತ್ತು, ಸುಳ್ಳುಪ್ರವಾದಿಗಳೂ ಇದ್ದರು. ಅಲ್ಲಿ ಅವರು ಹಗಲಿರುಳು ಎಂದೆಂದಿಗೂ ಹಿಂಸೆ ಅನುಭವಿಸುವರು.
ದೇವದೂತನು ತನ್ನ ಶಕ್ತಿಯುತವಾದ ಧ್ವನಿಯಿಂದ ಆರ್ಭಟಿಸಿದನು: “ಅವಳು ನಾಶವಾದಳು! ಬಾಬಿಲೋನೆಂಬ ಮಹಾನಗರಿಯು ನಾಶವಾದಳು! ಅವಳು (ಬಾಬಿಲೋನ್) ದೆವ್ವಗಳಿಗೆ ವಾಸಸ್ಥಾನವಾದಳು, ಸಕಲ ಅಶುದ್ಧಾತ್ಮಗಳಿಗೆ ನೆಲೆಯಾದಳು, ಅಶುದ್ಧವಾದ ಮತ್ತು ಅಸಹ್ಯವಾದ ಸಕಲ ಹಕ್ಕಿಗಳಿಗೆ ಆಶ್ರಯವಾದಳು.”
ಈ ಅಶುದ್ಧಾತ್ಮಗಳು ಸೈತಾನನ ಆತ್ಮಗಳಾಗಿವೆ. ಅವುಗಳಿಗೆ ಮಹಾ ಅದ್ಭುತಗಳನ್ನು ಮಾಡಲು ಶಕ್ತಿಯಿದೆ. ಈ ಅಶುದ್ಧಾತ್ಮಗಳು ಸರ್ವಶಕ್ತನಾದ ದೇವರ ಮಹಾದಿನದಂದು ನಡೆಯುವ ಯುದ್ಧಕ್ಕೆ, ಲೋಕದಲ್ಲೆಲ್ಲಾ ಇರುವ ರಾಜರನ್ನು ಒಟ್ಟುಗೂಡಿಸಲು ಹೊರಗೆ ಹೋಗುತ್ತವೆ.