Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 16:14 - ಪರಿಶುದ್ದ ಬೈಬಲ್‌

14 ಈ ಅಶುದ್ಧಾತ್ಮಗಳು ಸೈತಾನನ ಆತ್ಮಗಳಾಗಿವೆ. ಅವುಗಳಿಗೆ ಮಹಾ ಅದ್ಭುತಗಳನ್ನು ಮಾಡಲು ಶಕ್ತಿಯಿದೆ. ಈ ಅಶುದ್ಧಾತ್ಮಗಳು ಸರ್ವಶಕ್ತನಾದ ದೇವರ ಮಹಾದಿನದಂದು ನಡೆಯುವ ಯುದ್ಧಕ್ಕೆ, ಲೋಕದಲ್ಲೆಲ್ಲಾ ಇರುವ ರಾಜರನ್ನು ಒಟ್ಟುಗೂಡಿಸಲು ಹೊರಗೆ ಹೋಗುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಇವು ಸೂಚಕಕಾರ್ಯಗಳನ್ನು ಮಾಡುವ ಭೂತಾತ್ಮಗಳಾಗಿದ್ದು ಭೂಲೋಕದ ಎಲ್ಲಾ ರಾಜರುಗಳ ಬಳಿಗೆ ಹೋಗಿ ಸರ್ವಶಕ್ತನಾದ ದೇವರ ಮಹಾದಿನದ ಯುದ್ಧಕ್ಕಾಗಿ ಅವರನ್ನು ಕೂಡಿಸುತ್ತಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಇವು ಪವಾಡ ಕಾರ್ಯಗಳನ್ನು ಎಸಗುವ ದೆವ್ವಾತ್ಮಗಳು. ಸರ್ವಶಕ್ತ ದೇವರ ಮಹಾದಿನದಲ್ಲಿ ನಡೆಯುವ ಯುದ್ಧಕ್ಕಾಗಿ ಭೂಲೋಕದ ರಾಜರುಗಳನ್ನೆಲ್ಲಾ ಒಟ್ಟುಗೂಡಿಸಲು ಅವು ಹೊರಟವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಇವು ಮಹತ್ಕಾರ್ಯಗಳನ್ನು ಮಾಡುವ ದೆವ್ವಗಳು; ಭೂಲೋಕದಲ್ಲೆಲ್ಲಿಯೂ ಇರುವ ರಾಜರ ಬಳಿಗೆ ಹೋಗಿ ಸರ್ವಶಕ್ತನಾದ ದೇವರ ಮಹಾದಿನದಲ್ಲಾಗುವ ಯುದ್ಧಕ್ಕೆ ಅವರನ್ನು ಕೂಡಿಸುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಅವು ಸೂಚಕಕಾರ್ಯಗಳನ್ನು ನಡೆಸುವ ದೆವ್ವಗಳ ಆತ್ಮಗಳಾಗಿದ್ದು, ಭೂಲೋಕದ ರಾಜರುಗಳನ್ನು ಸರ್ವಶಕ್ತರಾದ ದೇವರ ಮಹಾದಿನದ ಯುದ್ಧಕ್ಕಾಗಿ ಕೂಡಿಸುವುದಕ್ಕಾಗಿ ಹೊರಟವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ತೆ ಗಿರ್‍ಯಾಂಚೆ ಆತ್ಮೊ ಮೊಟಿ ವಿಚಿತ್ರ್ ಕಾಮಾ ಕರಿತ್. ತೆ ತಿನಿಬಿ ಆತ್ಮೊ ಭಾಯ್ರ್ ಜಾವ್ನ್ ಜಗಾತ್ಲ್ಯಾ ಸಗ್ಳ್ಯಾ ರಾಜಾಕ್ನಿ ಸಗ್ಳ್ಯಾಕ್ನಿ ದೆವಾಚ್ಯಾ ತ್ಯಾ ಮೊಟ್ಯಾ ದಿಸಾಚ್ಯಾ ಝಗ್ಡ್ಯಾಕ್ ಮನುನ್ ಗೊಳಾ ಕರುನ್ ಹಾನಿತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 16:14
33 ತಿಳಿವುಗಳ ಹೋಲಿಕೆ  

ಅವರು ಕುರಿಮರಿಯಾದಾತನ ವಿರುದ್ಧ ಯುದ್ಧಗಳನ್ನು ಮಾಡುತ್ತಾರೆ. ಆದರೆ ಕುರಿಮರಿಯಾದಾತನು ಪ್ರಭುಗಳ ಪ್ರಭುವಾದ್ದರಿಂದ ಮತ್ತು ರಾಜಾಧಿರಾಜನಾದ್ದರಿಂದ ಅವರನ್ನು ಸೋಲಿಸುತ್ತಾನೆ. ಆತನೊಂದಿಗೆ, ತಾನು ಕರೆದಿರುವ ಜನರು, ಆಯ್ಕೆಮಾಡಿಕೊಂಡಿರುವ ಜನರು ಮತ್ತು ತನ್ನ ನಂಬಿಗಸ್ತ ಹಿಂಬಾಲಕರು ಇದ್ದರು” ಎಂದನು.


ಮುಂದಿನ ದಿನಗಳಲ್ಲಿ ಕೆಲವು ಜನರು ಸತ್ಯ ಬೋಧನೆಯನ್ನು ನಂಬುವುದಿಲ್ಲವೆಂದು ಪವಿತ್ರಾತ್ಮನು ಸ್ಪಷ್ಟವಾಗಿ ಹೇಳುತ್ತಾನೆ. ಆ ಜನರು ಸುಳ್ಳಾಡುವ ದುರಾತ್ಮಗಳಿಗೆ ವಿಧೇಯರಾಗುವರು; ದೆವ್ವಗಳ ಬೋಧನೆಯನ್ನು ಅನುಸರಿಸುವರು.


ಸೈತಾನನು ಗೋಗ್ ಮತ್ತು ಮಾಗೋಗ್ ಜನಾಂಗಗಳನ್ನು ಮರುಳುಗೊಳಿಸಲು ಭೂಲೋಕದಲ್ಲೆಲ್ಲಾ ಹೋಗಿ ಆ ಜನರನ್ನು ಯುದ್ಧಕ್ಕೆ ಒಟ್ಟುಗೂಡಿಸುತ್ತಾನೆ. ಅವರು ಸಮುದ್ರ ತೀರದ ಮರಳಿನ ಕಣಗಳಂತೆ ಅಸಂಖ್ಯಾತವಾಗಿರುತ್ತಾರೆ.


ನಾವು ದೇವರಿಗೆ ಸೇರಿದವರೆಂಬುದು ನಮಗೆ ತಿಳಿದಿದೆ. ಆದರೆ ಈ ಲೋಕವು ಕೆಡುಕನ ವಶದಲ್ಲಿದೆ.


ಇಂಥ “ಜ್ಞಾನ”ವು ದೇವರಿಂದ ಬರದೆ ಲೋಕದಿಂದ ಬರುತ್ತದೆ. ಅದು ಆತ್ಮ ಸಂಬಂಧವಾದುದಲ್ಲ. ಅದು ದೆವ್ವಗಳಿಂದ ಬಂದುದು.


ಬಳಿಕ ಅಶುದ್ಧಾತ್ಮಗಳು ರಾಜರುಗಳನ್ನು ಹೀಬ್ರೂ ಭಾಷೆಯಲ್ಲಿ ಹರ್ಮೆಗದೋನ್ ಎಂಬ ಹೆಸರುಳ್ಳ ಸ್ಥಳದಲ್ಲಿ ಒಟ್ಟಾಗಿ ಸೇರಿಸಿದವು.


ಆ ಘಟಸರ್ಪವನ್ನು ಪರಲೋಕದಿಂದ (ಆ ಘಟಸರ್ಪಕ್ಕೆ ಸೈತಾನನೆಂತಲೂ ಪಿಶಾಚನೆಂತಲೂ ಹೆಸರಿದೆ. ಅದು ಲೋಕವನ್ನೆಲ್ಲಾ ತಪ್ಪು ಮಾರ್ಗಕ್ಕೆ ಎಳೆಯುತ್ತಿತ್ತು.) ಅದರ ದೂತರೊಂದಿಗೆ ಭೂಮಿಯ ಮೇಲೆ ಎಸೆಯಲಾಯಿತು.


ಸೈತಾನನೇ ನಿಮ್ಮ ತಂದೆ. ನೀವು ಅವನಿಗೆ ಹುಟ್ಟಿದವರಾಗಿದ್ದೀರಿ. ಅವನ ದುರಿಚ್ಛೆಗಳನ್ನು ಮಾಡಬಯಸುತ್ತೀರಿ. ಅವನು ಆರಂಭದಿಂದಲೂ ಕೊಲೆಗಾರನಾಗಿದ್ದು ಸತ್ಯಕ್ಕೆ ವಿರೋಧವಾಗಿದ್ದನು. ಅವನಲ್ಲಿ ಸತ್ಯವು ಇಲ್ಲವೇ ಇಲ್ಲ. ಅವನು ಸ್ವಭಾವಾನುಸಾರವಾಗಿ ಸುಳ್ಳಾಡುತ್ತಾನೆ. ಅವನು ಸುಳ್ಳುಗಾರನೂ ಸುಳ್ಳಿಗೆ ತಂದೆಯೂ ಆಗಿದ್ದಾನೆ.


ಆ ಅಧರ್ಮಸ್ವರೂಪನು ಸೈತಾನನ ಮಹಾಶಕ್ತಿಯಿಂದ ಕೂಡಿದವನಾಗಿರುತ್ತಾನೆ. ಅವನು ಅನೇಕ ಮೋಸದ ಪವಾಡಗಳನ್ನು, ಸೂಚಕಕಾರ್ಯಗಳನ್ನು, ಅದ್ಭುತಕಾರ್ಯಗಳನ್ನು ಮಾಡುತ್ತಾನೆ.


ದೇವರು ಆರಿಸಿಕೊಂಡ ಜನರನ್ನು ಮೋಸಗೊಳಿಸುವುದಕ್ಕಾಗಿ ಸುಳ್ಳುಕ್ರಿಸ್ತರು ಮತ್ತು ಸುಳ್ಳುಪ್ರವಾದಿಗಳು ಬಂದು ಮಹಾಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಮಾಡುತ್ತಾರೆ.


ಸುಳ್ಳುಕ್ರಿಸ್ತರು ಮತ್ತು ಸುಳ್ಳುಪ್ರವಾದಿಗಳು ಬಂದು ದೇವರು ಆರಿಸಿಕೊಂಡಿರುವ ಜನರನ್ನು ಮೋಸಗೊಳಿಸುವುದಕ್ಕಾಗಿ ಮಹತ್ಕಾರ್ಯಗಳನ್ನು ಮತ್ತು ಅದ್ಭುತಕಾರ್ಯಗಳನ್ನು ಮಾಡುವರು.


ನೀನು ನನ್ನ ಆಜ್ಞೆಯನ್ನು ಸಹನೆಯಿಂದ ಮತ್ತು ತಾಳ್ಮೆಯಿಂದ ಅನುಸರಿಸಿದೆ. ಆದ್ದರಿಂದ ಈ ಲೋಕಕ್ಕೆಲ್ಲಾ ಉಂಟಾಗುವ ಕಡುಶೋಧನೆಯಿಂದ ನಾನು ನಿನ್ನನ್ನು ತಪ್ಪಿಸುತ್ತೇನೆ. ಭೂನಿವಾಸಿಗಳೆಲ್ಲರನ್ನು ಈ ಶೋಧನೆಯು ಪರಿಶೋಧಿಸುತ್ತದೆ.


ಮೊದಲನೆಯದಾಗಿ, ನಾನು ನಿಮ್ಮೆಲ್ಲರ ವಿಷಯದಲ್ಲಿ ಯೇಸು ಕ್ರಿಸ್ತನ ಮೂಲಕ ನನ್ನ ದೇವರಿಗೆ ಸ್ತೋತ್ರ ಸಲ್ಲಿಸುತ್ತೇನೆ. ಏಕೆಂದರೆ ನಿಮ್ಮ ನಂಬಿಕೆಯು ಲೋಕದಲೆಲ್ಲಾ ಪ್ರಖ್ಯಾತವಾಗಿದೆ.


ಯಜ್ಞವೇದಿಕೆಯಿಂದ ಹೀಗೆ ಹೇಳುವುದನ್ನೂ ನಾನು ಕೇಳಿಸಿಕೊಂಡೆನು: “ಹೌದು, ದೇವರಾದ ಪ್ರಭುವೇ, ಸರ್ವಶಕ್ತನೇ, ನಿನ್ನ ತೀರ್ಪುಗಳೆಲ್ಲಾ ಸತ್ಯವಾಗಿವೆ ಮತ್ತು ನ್ಯಾಯವಾಗಿವೆ.”


ಮೃಗದ ತಲೆಗಳಲ್ಲಿ ಒಂದು ತಲೆಯು ಗಾಯಗೊಂಡು ಸತ್ತಂತೆ ಕಾಣುತ್ತಿತ್ತು. ಆದರೆ ಮರಣಕರವಾದ ಈ ಗಾಯವನ್ನು ವಾಸಿಮಾಡಲಾಯಿತು. ಈ ಲೋಕದಲ್ಲಿದ್ದ ಜನರೆಲ್ಲರೂ ಆಶ್ಚರ್ಯಗೊಂಡು ಆ ಮೃಗವನ್ನು ಹಿಂಬಾಲಿಸಿದರು.


ಆತನ ಕೋಪವು ಪ್ರಕಟವಾಗುವ ಮಹಾದಿನವು ಬಂದುಬಿಟ್ಟಿದೆ. ಆ ಕೋಪದ ಎದುರಿನಲ್ಲಿ ನಿಲ್ಲಲು ಯಾರಿಗೂ ಸಾಧ್ಯವಿಲ್ಲ” ಎಂದು ಹೇಳಿದರು.


ಆದರೆ ಒಬ್ಬ ಪ್ರವಾದಿಯು ಅವನಿಗೆ ತನ್ನದೇ ಆದ ಉತ್ತರವನ್ನು ಕೊಡುವಷ್ಟು ಮೂರ್ಖನಾಗಿದ್ದರೆ, ಆಗ ನಾನು, ಅವನು ಎಂಥಾ ಮೂರ್ಖನಾಗಿದ್ದಾನೆಂದು ತೋರಿಸುವೆನು. ಅವನ ಮೇಲೆ ನನ್ನ ಸಾಮರ್ಥ್ಯವನ್ನು ಪ್ರಯೋಗಿಸುವೆನು. ಅವನನ್ನು ನಾಶಮಾಡಿ ನನ್ನ ಜನರ ಮಧ್ಯದಿಂದ ಅವನನ್ನು ತೆಗೆದುಬಿಡುವೆನು.


ಆ ಕಾಲದಲ್ಲಿ ಚಕ್ರವರ್ತಿ ಅಗಸ್ಟಸ್ ಸೀಸರನು ರೋಮನ್ನರ ಆಳ್ವಿಕೆಗೆ ಒಳಪಟ್ಟಿದ್ದ ಎಲ್ಲಾ ದೇಶಗಳಲ್ಲಿ ಜನಗಣತಿ ಆಗಬೇಕೆಂದು ಆಜ್ಞಾಪಿಸಿದನು.


ಅಹಾಬನು ಪ್ರವಾದಿಗಳ ಸಭೆಯೊಂದನ್ನು ಕರೆದನು. ಆ ಸಮಯದಲ್ಲಿ ನಾನೂರುಮಂದಿ ಪ್ರವಾದಿಗಳಿದ್ದರು. ಅಹಾಬನು ಪ್ರವಾದಿಗಳನ್ನು, “ಅರಾಮ್ಯರ ಸೇನೆಯ ವಿರುದ್ಧ ಹೋರಾಡಲು ನಾನು ರಾಮೋತಿಗೆ ಹೋಗಬೇಕೇ? ಅಥವಾ ನಾನು ಬೇರೊಂದು ಸಮಯಕ್ಕಾಗಿ ಕಾಯಬೇಕೇ?” ಎಂದು ಕೇಳಿದನು. ಪ್ರವಾದಿಗಳು, “ನೀನು ಹೋಗಿ ಯುದ್ಧಮಾಡು. ನೀನು ಗೆಲ್ಲುವಂತೆ ಯೆಹೋವನು ಮಾಡುವನು” ಎಂದು ಹೇಳಿದರು.


ದೇವರ ರಾಜ್ಯದ ಶುಭವಾರ್ತೆಯನ್ನು ಲೋಕದಲ್ಲೆಲ್ಲಾ ಪ್ರತಿ ಜನಾಂಗಕ್ಕೂ ಸಾರಲಾಗುವುದು. ಆಗ ಅಂತ್ಯವು ಬರುತ್ತದೆ.


ಈ ಎಲ್ಲ ಅರಸರು ಮೇರೋಮ್ ಸಣ್ಣ ನದಿಯ ಹತ್ತಿರ ಒಟ್ಟುಗೂಡಿ ತಮ್ಮ ಸೈನ್ಯಗಳನ್ನು ಒಂದೇ ಪಾಳೆಯದಲ್ಲಿ ಸೇರಿಸಿದರು. ಅವರು ಇಸ್ರೇಲಿನ ವಿರುದ್ಧ ಯುದ್ಧ ಮಾಡಲು ಯೋಜನೆಗಳನ್ನು ಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು