15 “ಕೇಳಿರಿ! ನಾನು ಕಳ್ಳನಂತೆ ಬರುತ್ತೇನೆ. ಎಚ್ಚರವಾಗಿದ್ದು ತನ್ನ ಬಟ್ಟೆಗಳನ್ನು ಕಾಪಾಡಿಕೊಳ್ಳುವವನು ಭಾಗ್ಯವಂತನಾಗಿದ್ದಾನೆ. ಆಗ ಅವನು ಬಟ್ಟೆಯಿಲ್ಲದೆ ಹೊರಗೆ ಹೋಗಿ ತನ್ನನ್ನು ನಾಚಿಕೆಗೆ ಗುರಿಪಡಿಸಿಕೊಳ್ಳುವ ಅಗತ್ಯತೆವಿರುವುದಿಲ್ಲ.”
15 “ಇಗೋ ಕಳ್ಳನು ಬರುವಂತೆ ಬರುತ್ತೇನೆ. ತಾನು ಬೆತ್ತಲೆಯಾಗಿ ತಿರುಗಾಡಿ ಜನರಿಂದ ಅವಮಾನಕ್ಕೆ ಗುರಿಯಾಗದಂತೆ ಎಚ್ಚರವಾಗಿದ್ದು ತನ್ನ ವಸ್ತ್ರಗಳನ್ನು ಜಾಗರೂಕತೆಯಿಂದ ಕಾಪಾಡಿಕೊಳ್ಳುವವನು ಧನ್ಯನು.”
15 “ಇಗೋ, ಕಳ್ಳನು ಬರುವಂತೆ ನಾನು ಬರುತ್ತೇನೆ. ಬೆತ್ತಲೆಯಾಗಿ ಎಲ್ಲರ ಮುಂದೆ ಕಾಣಿಸಿಕೊಂಡು ನಾಚಿಕೆಗೀಡಾಗದಂತೆ ಎಚ್ಚರವಾಗಿದ್ದು ತನ್ನ ವಸ್ತ್ರಗಳನ್ನು ಧರಿಸಿಕೊಂಡಿರುವವನು ಭಾಗ್ಯವಂತನು!”
15 “ಇಗೋ, ನಾನು ಕಳ್ಳನು ಬರುವಂತೆ ಬರುತ್ತೇನೆ. ಬೆತ್ತಲೆಯಾಗಿ ತಿರುಗಾಡಿ, ಜನರಿಂದ ಅವಮಾನಗೊಳ್ಳದಂತೆ ಎಚ್ಚರವಾಗಿದ್ದು ತನ್ನ ವಸ್ತ್ರವನ್ನು ಯಾವನು ಕಾಪಾಡಿಕೊಳ್ಳುತ್ತಾನೋ ಅವನು ಧನ್ಯನು.”
ಬೆಂಕಿಯಲ್ಲಿ ಪುಟಹಾಕಿದ ಅಪ್ಪಟ ಚಿನ್ನವನ್ನು ನೀನು ನನ್ನಿಂದ ಕೊಂಡುಕೊಳ್ಳಬೇಕೆಂದು ನಾನು ಸಲಹೆ ನೀಡುತ್ತೇನೆ. ಆಗ ನೀನು ನಿಜವಾಗಿಯೂ ಶ್ರೀಮಂತನಾಗಲು ಸಾಧ್ಯ. ನಾನು ನಿನಗೆ ಹೇಳುವುದೇನೆಂದರೆ: ಬಿಳಿವಸ್ತ್ರಗಳನ್ನು ಕೊಂಡುಕೊ. ಆಗ ನೀನು ನಾಚಿಕೆಕರವಾದ ನಿನ್ನ ಬೆತ್ತಲೆಯನ್ನು ಮುಚ್ಚಿಕೊಳ್ಳಲು ಸಾಧ್ಯವಾಗುವುದು. ನೀನು ನಿನ್ನ ಕಣ್ಣುಗಳಿಗೆ ಹಚ್ಚಲು ಔಷಧಿಯನ್ನು ಕೊಂಡುಕೊಳ್ಳಬೇಕೆಂತಲೂ ನಾನು ನಿನಗೆ ಹೇಳುತ್ತೇನೆ. ಆಗ ನಿನಗೆ ನಿಜವಾಗಿಯೂ ದೃಷ್ಟಿ ಬರುವುದು.
ಆದರೆ ಪ್ರಭುವು ಮತ್ತೆ ಪ್ರತ್ಯಕ್ಷನಾಗುವ ದಿನವು ಕಳ್ಳನು ಬರುವಂತೆ ಅನಿರೀಕ್ಷಿತವಾಗಿ ಬರುತ್ತದೆ. ಆಕಾಶವು ಮಹಾ ಘೋಷದೊಂದಿಗೆ ಅದೃಶ್ಯವಾಗುತ್ತದೆ. ಆಕಾಶಮಂಡಲದಲ್ಲಿರುವ ಎಲ್ಲಾ ಸೃಷ್ಟಿಗಳು ಬೆಂಕಿಯಿಂದ ನಾಶವಾಗುತ್ತವೆ. ಈ ಲೋಕವೂ ಅದರಲ್ಲಿರುವ ಸಮಸ್ತವೂ ಸುಟ್ಟುಹೋಗುತ್ತದೆ.
ಆದ್ದರಿಂದ ಎಚ್ಚರಿಕೆಯಿಂದಿರಿ! ನಾನು ಮೂರು ವರ್ಷಗಳ ಕಾಲ ನಿಮ್ಮೊಂದಿಗೆ ಇದ್ದೆನು. ಈ ಕಾಲಾವಧಿಯಲ್ಲಿ ನಾನು ನಿಮಗೆ ಹಗಲಿರುಳು ಉಪದೇಶಿಸುತ್ತಾ ನಿಮಗಾಗಿ ಕಣ್ಣೀರಿಡುತ್ತಾ ನಿಮ್ಮನ್ನು ಎಚ್ಚರಿಸಿದ್ದನ್ನು ಮರೆಯದಿರಿ.
ಆದ್ದರಿಂದ ಎಲ್ಲಾ ಸಮಯದಲ್ಲಿಯೂ ಸಿದ್ಧರಾಗಿರಿ. ನಡೆಯಲಿರುವ ಈ ಎಲ್ಲಾ ಸಂಗತಿಗಳನ್ನು ಎದುರಿಸಿ ಸುರಕ್ಷಿತವಾಗಿ ಮುಂದುವರಿಯಲು ಮತ್ತು ಮನುಷ್ಯಕುಮಾರನ ಮುಂದೆ ನಿಲ್ಲಲು ಬೇಕಾದ ಶಕ್ತಿಗಾಗಿ ಪ್ರಾರ್ಥಿಸಿರಿ.”
ಈ ಕಾರಣದಿಂದ, ನೀನು ಸುಖ ಕೊಟ್ಟಿರುವ ನಿನ್ನ ಎಲ್ಲಾ ಪ್ರಿಯರನ್ನು ಅಂದರೆ ಈಗಿನ ಪ್ರಿಯರನ್ನು ಮತ್ತು ನೀನು ತಿರಸ್ಕರಿಸಿರುವ ಹಿಂದಿನ ಪ್ರಿಯರನ್ನೂ ಒಟ್ಟಾಗಿ ಸೇರಿಸಿ, ನಿನ್ನ ಬೆತ್ತಲೆತನವನ್ನು ಅವರು ನೋಡುವಂತೆ ಮಾಡುವೆನು. ಅವರು ನಿನ್ನನ್ನು ಪೂರ್ತಿಯಾಗಿ ನೋಡುವರು.
ತಾನು ಸಿಟ್ಟುಗೊಂಡು ಇತರರು ಸಂಕಟಪಡುವಂತೆ ಮಾಡುವವನಿಗೆ ಬಹಳ ಕೇಡು ಉಂಟಾಗುವದು. ಸಿಟ್ಟಿನ ಭರದಲ್ಲಿ ಆ ಮನುಷ್ಯನು ಇತರ ಜನರನ್ನು ನೆಲಕ್ಕೆ ಅಪ್ಪಳಿಸಿಬಿಡುವನು. ಅವನು ಅವರನ್ನು ಅಮಲೇರಿದವರಂತೆಯೂ ಬೆತ್ತಲೆಯಾಗಿರುವವರಂತೆಯೂ ಪರಿಗಣಿಸುತ್ತಾನೆ.
ಆಕೆ ವ್ಯಭಿಚಾರ ಮಾಡುವದನ್ನು ನಿಲ್ಲಿಸದೆ ಹೋದರೆ ನಾನು ಆಕೆಯನ್ನು ಬೆತ್ತಲೆ ಮಾಡಿ, ಆಕೆ ಜನ್ಮ ತಾಳಿದಾಗ ಹೇಗೆ ಇದ್ದಳೋ ಹಾಗೆ ಮಾಡುವೆನು. ಆಕೆಯ ಜನರನ್ನು ಆಕೆಯಿಂದ ತೊಲಗಿಸಿ ಆಕೆಯನ್ನು ಒಣ ಮರುಭೂಮಿಯಂತೆ ಬೆಂಗಾಡಾಗಿ ಮಾಡುವೆನು. ಆಕೆ ಬಾಯಾರಿ ಸಾಯುವಂತೆ ಮಾಡುವೆನು.
ಜನರು ಅಂಕೆತಪ್ಪಿ ತಮ್ಮ ಇಷ್ಟಬಂದಂತೆ ಮಾಡುವುದಕ್ಕೆ ಆರೋನನು ಅವರನ್ನು ಬಿಟ್ಟುಬಿಟ್ಟಿರುವುದು ಮೋಶೆಗೆ ತಿಳಿಯಿತು. ಜನರು ಕ್ರಮವಿಲ್ಲದೆ ಸ್ವೇಚ್ಛೆಯಿಂದ ನಡೆಯುತ್ತಿದ್ದರು; ಅವರ ಮೂರ್ಖತನವು ಅವರ ವಿರೋಧಿಗಳಿಗೆ ಎದ್ದುಕಾಣುತ್ತಿತ್ತು!