Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 16:2 - ಪರಿಶುದ್ದ ಬೈಬಲ್‌

2 ಮೊದಲನೆಯ ದೇವದೂತನು ಹೊರಟನು. ಅವನು ತನ್ನ ಪಾತ್ರೆಯಲ್ಲಿದ್ದುದನ್ನು ಭೂಮಿಯ ಮೇಲೆ ಸುರಿದನು. ಆಗ ಮೃಗದ ಗುರುತನ್ನು ಹೊಂದಿದ್ದ ಮತ್ತು ಅದರ ವಿಗ್ರಹವನ್ನು ಆರಾಧಿಸುತ್ತಿದ್ದ ಜನರೆಲ್ಲರಿಗೂ ಅಸಹ್ಯವಾದ ಹಾಗೂ ನೋವಿನಿಂದ ಕೂಡಿದ ಹುಣ್ಣುಗಳಾದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಆಗ ಮೊದಲನೆಯ ದೇವದೂತನು ಹೋಗಿ ತನ್ನ ಬಟ್ಟಲಲ್ಲಿ ಇದ್ದದ್ದನ್ನು ಭೂಮಿಯ ಮೇಲೆ ಸುರಿಯಲು ಮೃಗದ ಗುರುತನ್ನು ಹಾಕಿಸಿಕೊಂಡವರು, ಅದರ ವಿಗ್ರಹವನ್ನು ಆರಾಧಿಸುವ ಎಲ್ಲಾ ಜನರ ಮೇಲೆ ಭೀಕರವಾದ ಕೆಟ್ಟ ಹುಣ್ಣುಗಳು ಎದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಅದರಂತೆಯೇ ಮೊದಲನೆಯ ದೇವದೂತನು ಹೋಗಿ ತನ್ನ ಪಾತ್ರೆಯಲ್ಲಿ ಇದ್ದುದನ್ನು ಭೂಮಿಯ ಮೇಲೆ ಸುರಿದನು. ಪರಿಣಾಮವಾಗಿ, ಮೊದಲನೆಯ ಮೃಗದ ಹಚ್ಚೆ ಚುಚ್ಚಿಸಿಕೊಂಡವರ ಮತ್ತು ಅದರ ವಿಗ್ರಹವನ್ನು ಪೂಜಿಸಿದವರ ಮೈಮೇಲೆಲ್ಲಾ ಭಯಂಕರವಾದ ಉರಿ ಹುಣ್ಣುಗಳು ಎದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಆಗ ಮೊದಲನೆಯವನು ಹೊರಟು ತನ್ನ ಪಾತ್ರೆಯಲ್ಲಿದ್ದದ್ದನ್ನು ಭೂವಿುಗೆ ಹೊಯ್ದನು; ಕೂಡಲೇ ಮೊದಲನೆಯ ಮೃಗದ ಗುರುತನ್ನು ಹೊಂದಿ ಅದರ ವಿಗ್ರಹಕ್ಕೆ ನಮಸ್ಕಾರಮಾಡುವ ಮನುಷ್ಯರ ಮೈಮೇಲೆ ಕೆಟ್ಟ ಉರಿಹುಣ್ಣು ಎದ್ದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಮೊದಲನೆಯ ದೂತನು ಹೋಗಿ ತನ್ನ ಬೋಗುಣಿಯೊಳಗಿರುವುದನ್ನು ಭೂಮಿಯ ಮೇಲೆ ಸುರಿಯಲು, ಮೃಗದ ಗುರುತನ್ನು ಹಾಕಿಸಿಕೊಂಡು ಅದರ ವಿಗ್ರಹವನ್ನು ಆರಾಧಿಸುವ ಎಲ್ಲಾ ಜನರ ಮೇಲೆ ಭೀಕರವಾದ ಕೆಟ್ಟ ಹುಣ್ಣುಗಳು ಎದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ಪಯ್ಲೆಚೊ ದೆವಾಚೊ ದುತ್ ಗೆಲೊ, ಅನಿ ತೆನಿ ಅಪ್ನಾಕ್ಲ್ಯಾ ಕಟೊರ್‍ಯಾತ್ಲೆ ಜಗಾವರ್ತಿ ವೊತ್ಲ್ಯಾನ್. ತನ್ನಾ ಭಯಾನಕ್ ಜನಾವರ್ ಅನಿ ತ್ಯೆಚ್ಯಾ ಮುರ್ತಿಯಾಂಚೆ ಆರಾದನ್ ಕರಲ್ಲ್ಯಾಂಚ್ಯಾ ಅಂಗಾ ವೈನಿ ವಾಯ್ಟ್ ಬುರ್ಶಿ ದುಕ್ಕಾ ಉಟ್ಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 16:2
22 ತಿಳಿವುಗಳ ಹೋಲಿಕೆ  

ಮೊದಲನೆಯ ದೇವದೂತನು ತನ್ನ ತುತೂರಿಯನ್ನು ಊದಿದನು. ಆಗ ರಕ್ತದಲ್ಲಿ ಕಲಸಿದ್ದ ಆಲಿಕಲ್ಲುಗಳ ಮತ್ತು ಬೆಂಕಿಯ ಮಳೆಯು ಭೂಮಿಯ ಮೇಲೆ ಸುರಿಯಿತು. ಭೂಮಿಯ ಮೂರನೆಯ ಒಂದು ಭಾಗ ಮತ್ತು ಹಸಿರು ಹುಲ್ಲೆಲ್ಲಾ ಸುಟ್ಟುಹೋದವು; ಮತ್ತು ಮರಗಳಲ್ಲಿ ಮೂರನೆಯ ಒಂದು ಭಾಗ ಸುಟ್ಟುಹೋದವು.


ಜನರು ತಮಗಾದ ಹುಣ್ಣುಗಳಿಂದ ಮತ್ತು ನೋವಿನಿಂದ ಪರಲೋಕದ ದೇವರನ್ನು ದೂಷಿಸಿದರು. ಆದರೆ ಜನರು ತಾವು ಮಾಡುವ ಕೆಟ್ಟಕಾರ್ಯಗಳನ್ನು ತೊರೆದುಬಿಟ್ಟು ತಮ್ಮ ಹೃದಯಗಳನ್ನು ಮಾರ್ಪಡಿಸಿಕೊಳ್ಳಲು ಒಪ್ಪಲಿಲ್ಲ.


“ಈಜಿಪ್ಟಿನವರಿಗೆ ಕಳುಹಿಸಿದಂತೆ ನಿಮಗೂ ಮೈಯಲ್ಲಿ ಬಾಧಿಸುವ ಹುಣ್ಣುಗಳನ್ನು ಕಳುಹಿಸುವನು. ದೇಹದಲ್ಲಿ ಗಡ್ಡೆಗಳುಂಟಾಗುವವು. ಕೀವುಸೋರುವ ಹುಣ್ಣುಗಳು, ಗುಣವಾಗದ ತುರಿಸುವ ಕಜ್ಜಿಗಳು ಉಂಟಾಗುವವು.


ಹೆರೋದನು ಈ ಹೊಗಳಿಕೆಯನ್ನು ತಾನೇ ಸ್ವೀಕರಿಸಿಕೊಂಡನು. ದೇವರನ್ನು ಮಹಿಮೆಪಡಿಸಲಿಲ್ಲ. ಆದ್ದರಿಂದ ಆ ಕ್ಷಣವೇ, ಪ್ರಭುವಿನ ದೂತನೊಬ್ಬನು ಅವನಿಗೆ ಕಾಯಿಲೆಯನ್ನು ಬರಮಾಡಿದನು. ಅವನ ದೇಹದ ಒಳಭಾಗವನ್ನು ಹುಳಗಳು ತಿಂದುಹಾಕಿದ್ದರಿಂದ ಅವನು ಸತ್ತುಹೋದನು.


ನನ್ನ ಒಡೆಯನಾದ ಯೆಹೋವನು ಚೀಯೋನಿನ ಸ್ತ್ರೀಯರ ತಲೆಯ ಮೇಲೆ ಹುಣ್ಣುಗಳನ್ನು ಬರಮಾಡಿ ಅವರ ತಲೆಕೂದಲು ಉದುರಿ ತಲೆಬೋಳಾಗುವಂತೆ ಮಾಡುವನು.


ಇದಾದ ಬಳಿಕ ಯೆಹೋವನು ಅವನ ಕರುಳಿನಲ್ಲಿ ಗುಣವಾಗದ ರೋಗ ಬರಮಾಡಿದನು.


ನಿನ್ನ ಹೊಟ್ಟೆಯೊಳಗೆ ಭಯಂಕರವಾದ ಕಾಯಿಲೆ ಬರುವದು. ಅದು ದಿನದಿಂದ ದಿನಕ್ಕೆ ಹೆಚ್ಚುವುದು. ಆ ರೋಗದ ನಿಮಿತ್ತ ನಿನ್ನ ಕರುಳು ನಿನ್ನ ಹೊಟ್ಟೆಯಿಂದ ಹೊರಬೀಳುವದು.’”


ಆದರೆ ಫಿಲಿಷ್ಟಿಯರು ದೇವರ ಪವಿತ್ರ ಪೆಟ್ಟಿಗೆಯನ್ನು “ಗತ್”ಗೆ ಕಳುಹಿಸಿದ ನಂತರ ಯೆಹೋವನು “ಗತ್” ನಗರವನ್ನು ದಂಡಿಸಿದನು. ಅಲ್ಲಿಯ ಜನರು ಬಹಳ ಭಯಗೊಂಡರು. ಚಿಕ್ಕವರು, ದೊಡ್ಡವರು ಎನ್ನದೆ ಎಲ್ಲರಿಗೂ ದೇವರು ತೊಂದರೆ ಮಾಡಿದನು. ಗತ್ ಜನರಿಗೂ ದೇವರು ಗಡ್ಡೆರೋಗವನ್ನು ಬರಮಾಡಿದನು.


ಅಷ್ಡೋದಿನ ಮತ್ತು ಅವರ ನೆರೆಹೊರೆಯ ಜನರ ಜೀವನವನ್ನು ಯೆಹೋವನು ಕಠಿಣಗೊಳಿಸಿದನು. ಯೆಹೋವನು ಅವರಿಗೆ ಹೆಚ್ಚು ತೊಂದರೆ ಕೊಟ್ಟನು. ಆತನು ಅವರಿಗೆ ಗಡ್ಡೆರೋಗವನ್ನು ಬರಮಾಡಿದನು. ಅಲ್ಲದೆ ಯೆಹೋವನು ಅವರ ಬಳಿಗೆ ಇಲಿಗಳನ್ನು ಕಳುಹಿಸಿದನು. ಆ ಇಲಿಗಳು ಅವರ ಹಡಗುಗಳಲ್ಲೆಲ್ಲಾ ಮತ್ತು ಭೂಮಿಯಲ್ಲೆಲ್ಲಾ ಹರಡಿಕೊಂಡವು. ನಗರದ ಜನರು ಬಹು ಭಯಗೊಂಡರು.


ನಿಮ್ಮಿಂದ ಎಲ್ಲಾ ತರದ ಕಾಯಿಲೆಗಳನ್ನು ಯೆಹೋವನು ತೆಗೆದುಹಾಕುವನು. ಈಜಿಪ್ಟಿನಲ್ಲಿ ನಿಮ್ಮನ್ನು ಬಾಧಿಸುತ್ತಿದ್ದ ಭಯಂಕರ ಕಾಯಿಲೆಗಳು ನಿಮ್ಮನ್ನು ಬಾಧಿಸುವುದಿಲ್ಲ. ಆ ಕಾಯಿಲೆಗಳು ನಿಮ್ಮ ವೈರಿಗಳಿಗೆ ಉಂಟಾಗುವವು.


ಆ ಸಮಯದಲ್ಲಿ ಸ್ತ್ರೀಯರ ಪರಿಮಳದ್ರವ್ಯವು ಕೊಳೆತ ವಾಸನೆಯಿಂದ ಕೂಡಿರುವುದು. ಅವರು ಸೊಂಟಪಟ್ಟಿಯ ಬದಲಿಗೆ ಹಗ್ಗ ಕಟ್ಟಿಕೊಳ್ಳುವರು; ತಲೆಕೂದಲನ್ನು ಅಂದವಾಗಿ ಹೆಣೆದುಕೊಳ್ಳುವ ಬದಲು ಬೋಳಿಸಿಕೊಳ್ಳುವರು. ಈಗ ಅವರಿಗೆ ಆಧುನಿಕ ವಸ್ತ್ರಗಳಿರುವವು; ಆದರೆ ಆಗ ಅವರು ಶೋಕವಸ್ತ್ರಗಳನ್ನೇ ಧರಿಸುವರು. ಈಗ ಅವರು ಮುಖಗಳಿಗೆ ಸೌಂದರ್ಯದ ಬೊಟ್ಟುಗಳನ್ನು ಇಟ್ಟುಕೊಳ್ಳುವರು; ಆದರೆ ಆಗ ಅವರ ಚರ್ಮದಲ್ಲಿ ಸುಟ್ಟಕಲೆಗಳೇ ಇರುವವು.


ಬಳಿಕ ಯೆಹೋವನು ಪೂರ್ವದಿಂದ ಬಲವಾದ ಗಾಳಿ ಬೀಸುವಂತೆ ಮಾಡಿದನು. ಆಗ ಲಾವಕ್ಕಿಗಳು ಮಳೆಯಂತೆ ಅವರಿದ್ದಲ್ಲಿಗೆ ಬಂದು ಬಿದ್ದವು.


ಆದ್ದರಿಂದ ಮೋಡದ ಮೇಲೆ ಕುಳಿತಿದ್ದಾತನು ತನ್ನ ಕುಡುಗೋಲನ್ನು ಭೂಮಿಯ ಮೇಲೆ ಬೀಸಿದನು. ಆಗ ಭೂಮಿಯ ಪೈರು ಕೊಯ್ಯಲ್ಪಟ್ಟಿತು.


ಯೆಹೋವನು ನಿಮ್ಮನ್ನು ಉರಿಯುವ ಹುಣ್ಣುಗಳಿಂದ ಬಾಧಿಸುವನು; ಅವುಗಳು ಗುಣವಾಗುವುದಿಲ್ಲ. ಈ ಹುಣ್ಣುಗಳು ನಿಮ್ಮ ದೇಹದ ಎಲ್ಲಾ ಭಾಗಗಳಲ್ಲಿ ಅಂದರೆ ನಿಮ್ಮ ಪಾದದಿಂದ ಹಿಡಿದು ನಡುನೆತ್ತಿಯ ತನಕ ಇರುವವು.


ಈ ಮೃಗವು ಮೊದಲಿನ ಮೃಗದ ಅಧಿಕಾರವನ್ನೇ ಬಳಸುತ್ತದೆ. ಭೂಮಿಯ ಮೇಲೆ ವಾಸಿಸುವ ಜನರೆಲ್ಲರೂ ಮೊದಲಿನ ಮೃಗವನ್ನು ಆರಾಧಿಸುವಂತೆ ಮಾಡಲು ಅದು ತನ್ನ ಶಕ್ತಿಯನ್ನೆಲ್ಲಾ ಬಳಸುತ್ತದೆ. ಮರಣಕರವಾದ ಗಾಯದಿಂದ ಗುಣಮುಖವಾದದ್ದೇ ಮೊದಲನೆಯ ಮೃಗ.


ಮೂರನೆಯ ದೇವದೂತನು ಮೊದಲ ಇಬ್ಬರು ದೇವದೂತರನ್ನು ಹಿಂಬಾಲಿಸಿದನು. ಈ ಮೂರನೆಯ ದೇವದೂತನು ಗಟ್ಟಿಯಾದ ಧ್ವನಿಯಲ್ಲಿ ಹೀಗೆ ಹೇಳಿದನು: “ಮೃಗವನ್ನೂ ಮೃಗದ ವಿಗ್ರಹವನ್ನೂ ಆರಾಧಿಸುವವನಿಗೆ ಮತ್ತು ಮೃಗದ ಗುರುತನ್ನು ಹಣೆಯ ಮೇಲಾಗಲಿ ಇಲ್ಲವೆ ತನ್ನ ಕೈಗಳ ಮೇಲಾಗಲಿ ಹಾಕಿಸಿಕೊಳ್ಳುವವನಿಗೆ ಕೇಡಾಗುವುದು.


ನಂತರ ಆಲಯದಿಂದ ಒಂದು ಮಹಾಶಬ್ದವು ನನಗೆ ಕೇಳಿಸಿತು. ಆ ಶಬ್ದವು ಏಳು ದೇವದೂತರಿಗೆ, “ನೀವು ಹೋಗಿ ಏಳು ಪಾತ್ರೆಗಳಲ್ಲಿರುವ ದೇವರ ಕೋಪವನ್ನು ಭೂಮಿಯ ಮೇಲೆ ಸುರಿದುಬಿಡಿ” ಎಂದು ಹೇಳಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು