ಪ್ರಕಟನೆ 16:21 - ಪರಿಶುದ್ದ ಬೈಬಲ್21 ಆಕಾಶದಿಂದ ಮನುಷ್ಯರ ಮೇಲೆ ದೊಡ್ಡ ಆಲಿಕಲ್ಲುಗಳು ಬಿದ್ದವು. ಆ ಆಲಿಕಲ್ಲುಗಳು ನೂರು ಪೌಂಡುಗಳಷ್ಟು ಭಾರವಾಗಿದ್ದವು. ಈ ಉಪದ್ರವದ ಕಾಟದಿಂದ ಜನರು ದೇವರನ್ನು ದೂಷಿಸಿದರು. ಈ ಉಪದ್ರವವು ಬಹಳ ಭೀಕರವಾಗಿತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಮತ್ತು ಆಕಾಶದಿಂದ ಮನುಷ್ಯರ ಮೇಲೆ ದೊಡ್ಡ ಆಲಿಕಲ್ಲಿನ ಮಳೆ ಸುರಿಯಿತು. ಒಂದೊಂದು ಅಲಿಕಲ್ಲು ಸುಮಾರು ನಲ್ವತ್ತು ಕಿಲೊಗ್ರಾಮಿನಷ್ಟು ತೂಕವಾಗಿತ್ತು. ಆ ಆಲಿಕಲ್ಲಿನ ಮಳೆಯ ಉಪದ್ರವವು ಬಹಳ ವಿಪರೀತವಾದ್ದರಿಂದ ಆ ಮಳೆಯಲ್ಲಿ ಸಿಕ್ಕಿಕೊಂಡ ಮನುಷ್ಯರು ದೇವರನ್ನು ದೂಷಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಆಕಾಶದಿಂದ ಮನುಷ್ಯರ ಮೇಲೆ ಆಲಿಕಲ್ಲಿನ ಮಳೆ ಸುರಿಯಿತು. ಒಂದೊಂದು ಆಲಿಕಲ್ಲಿನ ತೂಕ ಸುಮಾರು ಐವತ್ತು ಕಿಲೊಗ್ರಾಮಿನಷ್ಟು ಇತ್ತು. ಆ ಆಲಿಕಲ್ಲಿನ ವಿಪತ್ತು ಅಧಿಕವಾದುದರಿಂದಲೂ ಭಯಂಕರವಾದುದರಿಂದಲೂ ಜನರು ದೇವರನ್ನು ದೂಷಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಮತ್ತು ಆಕಾಶದಿಂದ ಮನುಷ್ಯರ ಮೇಲೆ ದೊಡ್ಡ ಆನೇಕಲ್ಲಿನ ಮಳೆ ಸುರಿಯಿತು; ಒಂದೊಂದು ಕಲ್ಲು ಹೆಚ್ಚುಕಡಿಮೆ ನಾಲ್ಕುಮಣ ತೂಕವಾಗಿತ್ತು. ಆ ಆನೇಕಲ್ಲಿನ ಮಳೆಯ ಕಾಟವು ಬಹಳ ಹೆಚ್ಚಾಗಿದ್ದದರಿಂದ ಆ ಮಳೆಯಲ್ಲಿ ಸಿಕ್ಕಿಕೊಂಡ ಮನುಷ್ಯರು ದೇವರನ್ನು ದೂಷಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಆಕಾಶದಿಂದ ಒಂದೊಂದು ಸುಮಾರು ನಲವತ್ತೈದು ಕಿಲೋಗ್ರಾಂ ತೂಕದ ಬಹುದೊಡ್ಡ ಆಲಿಕಲ್ಲುಗಳು ಮನುಷ್ಯರ ಮೇಲೆ ಬಿದ್ದವು. ಆಲಿಕಲ್ಲಿನ ಉಪದ್ರವವು ಬಹು ಹೆಚ್ಚಾಗಿದ್ದರಿಂದಲೂ ಮನುಷ್ಯರು ದೇವರನ್ನು ದೂಷಿಸಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್21 ಮೊಟ್ಯಾ-ಮೊಟ್ಯಾ ಘಾರ್‍ಬಿಯಾಂಚೊ ಪವ್ಸ್ ಮಳ್ಬಾ ವೈನಾ ಲೊಕಾಂಚ್ಯಾ ವರ್ತಿ ಪಡ್ಲೊ. ತ್ಯಾ ಎಕೆಕ್ ಘಾರ್‍ಬಿಯಾ ಜಗೊಳ್ -ಜಗೊಳ್ ಪನ್ನಾಸ್ ಕಿಲೊ ವಜ್ಜ್ಯಾ ಹೊತ್ತ್ಯಾ, ಹ್ಯಾ ಘಾರ್‍ಬಿಯಾಂಚ್ಯಾ ತರಾಸಾಸಾಟಿ ಲೊಕಾನಿ ದೆವಾಕ್ ಸರಾಪ್ಲ್ಯಾನಿ, ಕಶ್ಯಾಕ್ ಮಟ್ಲ್ಯಾರ್ ಹಿ ಫಿಡಾ ಭಯಾನಕ್ ಹೊತ್ತೆ. ಅಧ್ಯಾಯವನ್ನು ನೋಡಿ |