ಪ್ರಕಟನೆ 16:5 - ಪರಿಶುದ್ದ ಬೈಬಲ್5 ಆಗ ನೀರಿನ ಅಧಿಪತಿಯಾದ ದೂತನು ದೇವರಿಗೆ ಹೇಳಿದ್ದು ನನಗೆ ಕೇಳಿಸಿತು: “ನೀನೇ ವರ್ತಮಾನ ಕಾಲದಲ್ಲಿರುವಾತನು. ನೀನೊಬ್ಬನೇ ಪರಿಶುದ್ಧನು. ನೀನು ನೀಡಿದ ಈ ತೀರ್ಪುಗಳಲ್ಲೆಲ್ಲಾ ನೀನು ನ್ಯಾಯವಂತನಾಗಿರುವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಆ ಮೇಲೆ ಜಲಾಧಿಪತಿಯಾದ ದೂತನು, “ನೀನು ಇರುವಾತನೂ ಇದ್ದಾತನೂ ಪರಿಶುದ್ಧನಾಗಿರುವಾತನು ಆಗಿರುವ ದೇವರು, ಏಕೆಂದರೆ ನೀನು ಈ ರೀತಿ ನ್ಯಾಯತೀರ್ಪುಗಳನ್ನು ಮಾಡಿದ್ದರಿಂದ ನೀತಿಸ್ವರೂಪನೇ ಆಗಿರುವಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಆಗ ಜಲಾಧಿಕಾರಿಯಾದ ದೂತನು : “ತ್ರಿಕಾಲಸ್ಥನು ಪರಿಶುದ್ಧನು ನೀನೇ ನೀನಿತ್ತ ತೀರ್ಪು ನ್ಯಾಯಬದ್ಧವಾದುದೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಆಮೇಲೆ ಜಲಾಧಿಪತಿಯಾದ ದೂತನು - ಸದಾ ಇರುವಾತನೇ, ಪರಿಶುದ್ಧನೇ, ನೀನು ಹೀಗೆ ತೀರ್ಪುಮಾಡಿದ್ದರಲ್ಲಿ ನೀತಿಸ್ವರೂಪನಾಗಿದ್ದೀ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಆಗ ಜಲಾಶಯದ ಜಲಗಳ ದೂತನು: “ನೀವು ಇದ್ದವರೂ, ಇರುವವರೂ ಆಗಿರುವ ಪರಿಶುದ್ಧರು. ನೀವು ನೀತಿವಂತರಾಗಿದ್ದೀರಿ. ಏಕೆಂದರೆ, ನೀವು ಇವುಗಳಿಗೆ ನ್ಯಾಯತೀರಿಸುವಿರಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್5 ಪಾನಿಯಾಚ್ಯಾ ವರ್ತಿ ಅದಿಕಾರ್ ಅಸಲ್ಲ್ಯಾ ದೆವಾಚ್ಯಾ ದುತಾನ್, “ತಿಯಾ ಕರಲ್ಲೊ ನಿರ್ನಯ್ ಸಮಾ ಹಾಯ್, ಯೆ ಪವಿತ್ರ್ ಅಸಲ್ಲ್ಯಾ, ತಿಯಾಚ್ ತೊ ಅತ್ತಾ ಅಸಲ್ಲೊ, ಅನಿ ಅದ್ದಿ ಅಸಲ್ಲೊ! ಅಧ್ಯಾಯವನ್ನು ನೋಡಿ |
ಈ ನಾಲ್ಕು ಜೀವಿಗಳಲ್ಲಿ ಪ್ರತಿಯೊಂದಕ್ಕೂ ಆರು ರೆಕ್ಕೆಗಳಿದ್ದವು. ಈ ಜೀವಿಗಳ ಹೊರಭಾಗದಲ್ಲೆಲ್ಲಾ ಮತ್ತು ಒಳಭಾಗದಲ್ಲೆಲ್ಲಾ ಕಣ್ಣುಗಳಿದ್ದವು. ಈ ನಾಲ್ಕು ಜೀವಿಗಳು ಹಗಲಿರುಳು ಎಡಬಿಡದೆ ಹೀಗೆ ಹೇಳುತ್ತಿದ್ದವು: “ದೇವರಾದ ಪ್ರಭು, ಪರಿಶುದ್ಧನು, ಪರಿಶುದ್ಧನು, ಪರಿಶುದ್ಧನು; ಆತನು ಸರ್ವಶಕ್ತನು. ಆತನು ಭೂತಕಾಲದಲ್ಲಿ ಇದ್ದವನೂ ವರ್ತಮಾನಕಾಲದಲ್ಲಿ ಇರುವಾತನೂ ಮುಂದೆ ಬರುವಾತನೂ ಆಗಿದ್ದಾನೆ.”