Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 17:10 - ಪರಿಶುದ್ದ ಬೈಬಲ್‌

10 ಐದು ಮಂದಿ ರಾಜರುಗಳು ಈಗಾಗಲೇ ಸತ್ತಿದ್ದಾರೆ. ಒಬ್ಬ ರಾಜನು ಮಾತ್ರ ಈಗ ಜೀವಿಸಿದ್ದಾನೆ. ಕೊನೆಯ ರಾಜನು ಬರುತ್ತಾನೆ. ಅವನು ಬಂದು ಸ್ವಲ್ಪಕಾಲ ಮಾತ್ರ ಇರುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಇದಲ್ಲದೆ ಅವು ಏಳು ರಾಜರುಗಳೂ ಆಗಿದ್ದಾರೆ. ಅವರಲ್ಲಿ ಐದು ರಾಜರು ಬಿದ್ದಿದ್ದಾರೆ. ಒಬ್ಬನು ಇದ್ದಾನೆ. ಮತ್ತೊಬ್ಬನು ಇನ್ನು ಬಂದಿಲ್ಲ. ಅವನು ಬಂದಾಗ ಸ್ವಲ್ಪ ಕಾಲ ಇರಬೇಕಾಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಈ ಏಳು ರಾಜರಲ್ಲಿ ಈಗಾಗಲೇ ಐದುಮಂದಿ ಪತನಹೊಂದಿದ್ದಾರೆ. ಒಬ್ಬ ರಾಜನು ಈಗ ಆಳುತ್ತಿದ್ದಾನೆ. ಮತ್ತೊಬ್ಬನು ಇನ್ನೂ ತಲೆದೋರಿಲ್ಲ. ಅವನು ಬಂದಾಗ ಕೊಂಚಕಾಲ ಮಾತ್ರ ರಾಜ್ಯವಾಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಇದಲ್ಲದೆ ಅವು ಏಳು ಮಂದಿ ಅರಸುಗಳನ್ನು ಸೂಚಿಸುತ್ತವೆ; ಅವರಲ್ಲಿ ಐದು ಮಂದಿ ಬಿದ್ದುಹೋಗಿದ್ದಾರೆ, ಒಬ್ಬನು ಇದ್ದಾನೆ, ಮತ್ತೊಬ್ಬನು ಇನ್ನೂ ಬಂದಿಲ್ಲ. ಬಂದ ಮೇಲೆ ಅವನು ಸ್ವಲ್ಪಕಾಲ ಇರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಅವರಲ್ಲಿ ಐದು ರಾಜರು ಬಿದ್ದಿದ್ದಾರೆ; ಒಬ್ಬನು ಇದ್ದಾನೆ, ಇನ್ನೊಬ್ಬನು ಇನ್ನೂ ಬಂದಿಲ್ಲ. ಅವನು ಬಂದಾಗ ಸ್ವಲ್ಪಕಾಲ ಇರಬೇಕಾಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ತ್ಯೆಂಚ್ಯಾತ್ಲೆ ಪಾಂಚ್ ರಾಜಾ ಪಡುನ್ ಗೆಲ್ಯಾತ್, ಎಕ್ಲೊ ಅಜುನ್ ರಾಜ್ ಚಾಲ್ವುಲಾಲಾ ಅನಿ ತೊ ಅನಿ ಎಕ್ಲೊ ಅಜುನ್ ಯೆವ್ಕ್ ನಾ; ತೊ ಯೆಲ್ಲ್ಯಾ ತನ್ನಾ ಖಾಲಿ ಉಲ್ಲೊಸೊ ಎಳ್ ಎವ್ಡೊಚ್ ಅಪ್ನಾಚೊ ರಾಜ್ ಚಾಲ್ವುತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 17:10
6 ತಿಳಿವುಗಳ ಹೋಲಿಕೆ  

ಆಗ ಅವನು ನನಗೆ, “ನೀನು ಮತ್ತೆ ಅನೇಕ ಜನಾಂಗಗಳ, ಪ್ರಜೆಗಳ, ಭಾಷೆಗಳ ಮತ್ತು ರಾಜರುಗಳ ವಿಷಯದಲ್ಲಿ ಪ್ರವಾದನೆ ಮಾಡಬೇಕು” ಎಂದು ತಿಳಿಸಿದನು.


ಒಂದುಕಾಲದಲ್ಲಿ ಜೀವಿಸಿದ್ದು, ಆದರೆ ಈಗ ಜೀವಿಸಿಲ್ಲದ ಈ ಮೃಗವು ಎಂಟನೆಯ ರಾಜ. ಈ ಎಂಟನೆಯ ರಾಜನೂ ಮೊದಲ ಏಳು ರಾಜರುಗಳ ಗುಂಪಿಗೆ ಸೇರಿದವನು. ಅವನೂ ನಾಶವಾಗುತ್ತಾನೆ.


ಎಪ್ಪತ್ತು ವರ್ಷಗಳ ತನಕ ಜನರಿಗೆ ತೂರಿನ ಜ್ಞಾಪಕವಿರುವದಿಲ್ಲ. ಇದು ಒಬ್ಬ ಅರಸನು ಆಳುವ ಕಾಲ. ಎಪ್ಪತ್ತು ವರ್ಷಗಳ ತರುವಾಯ ತೂರ್ ಈ ಹಾಡಿನಲ್ಲಿರುವ ವೇಶ್ಯೆಯಂತಿರುವದು:


ಮೃಗದ ತಲೆಗಳಲ್ಲಿ ಒಂದು ತಲೆಯು ಗಾಯಗೊಂಡು ಸತ್ತಂತೆ ಕಾಣುತ್ತಿತ್ತು. ಆದರೆ ಮರಣಕರವಾದ ಈ ಗಾಯವನ್ನು ವಾಸಿಮಾಡಲಾಯಿತು. ಈ ಲೋಕದಲ್ಲಿದ್ದ ಜನರೆಲ್ಲರೂ ಆಶ್ಚರ್ಯಗೊಂಡು ಆ ಮೃಗವನ್ನು ಹಿಂಬಾಲಿಸಿದರು.


ಈ ಮೃಗವು ಮೊದಲಿನ ಮೃಗದ ಅಧಿಕಾರವನ್ನೇ ಬಳಸುತ್ತದೆ. ಭೂಮಿಯ ಮೇಲೆ ವಾಸಿಸುವ ಜನರೆಲ್ಲರೂ ಮೊದಲಿನ ಮೃಗವನ್ನು ಆರಾಧಿಸುವಂತೆ ಮಾಡಲು ಅದು ತನ್ನ ಶಕ್ತಿಯನ್ನೆಲ್ಲಾ ಬಳಸುತ್ತದೆ. ಮರಣಕರವಾದ ಗಾಯದಿಂದ ಗುಣಮುಖವಾದದ್ದೇ ಮೊದಲನೆಯ ಮೃಗ.


ನೀನು ನೋಡಿದ ಆ ಮೃಗ ಮತ್ತು ಅದರ ಹತ್ತು ಕೊಂಬುಗಳು (ರಾಜರುಗಳು) ಆ ವೇಶ್ಯೆಯನ್ನು ದ್ವೇಷಿಸುತ್ತವೆ. ಅವಳಲ್ಲಿರುವುದನ್ನೆಲ್ಲ ಅವರು ಕಿತ್ತುಕೊಂಡು, ಅವಳನ್ನು ನಗ್ನಾವಸ್ಥೆಯಲ್ಲಿ ಬಿಡುತ್ತಾರೆ. ಅವರು ಅವಳ ದೇಹವನ್ನು ತಿಂದು, ಅವಳನ್ನು ಬೆಂಕಿಯಲ್ಲಿ ಸುಟ್ಟುಬಿಡುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು