ನೀನು ನೋಡಿದ ಆ ಮೃಗವು ಒಂದು ಕಾಲದಲ್ಲಿ ಜೀವಿಸಿತ್ತು. ಆದರೆ ಈಗ ಆ ಮೃಗವು ಜೀವಂತವಾಗಿಲ್ಲ. ಆದರೆ ಆ ಮೃಗವು ತಳವಿಲ್ಲದ ಕೂಪದಿಂದ ಜೀವಂತವಾಗಿ ಮೇಲೆದ್ದುಬಂದು ನಾಶವಾಗು ವುದು. ಲೋಕದಲ್ಲಿ ಜೀವಿಸುತ್ತಿರುವ ಜನರು ಆ ಮೃಗವನ್ನು ನೋಡಿ, ಅದು ಒಂದು ಕಾಲದಲ್ಲಿ ಜೀವಂತವಾಗಿತ್ತು, ಈಗ ಇಲ್ಲ, ಆದರೆ ಮತ್ತೆ ಬರುವುದು ಎಂಬುದನ್ನು ತಿಳಿದು ಅವರು ಆಶ್ಚರ್ಯಪಡುವರು. ಲೋಕವು ಸೃಷ್ಟಿಯಾದಂದಿನಿಂದ ಜೀವಬಾಧ್ಯರ ಪುಸ್ತಕದಲ್ಲಿ ಈ ಜನರ ಹೆಸರುಗಳನ್ನು ಬರೆದೇ ಇಲ್ಲ.
ಮೃಗದ ತಲೆಗಳಲ್ಲಿ ಒಂದು ತಲೆಯು ಗಾಯಗೊಂಡು ಸತ್ತಂತೆ ಕಾಣುತ್ತಿತ್ತು. ಆದರೆ ಮರಣಕರವಾದ ಈ ಗಾಯವನ್ನು ವಾಸಿಮಾಡಲಾಯಿತು. ಈ ಲೋಕದಲ್ಲಿದ್ದ ಜನರೆಲ್ಲರೂ ಆಶ್ಚರ್ಯಗೊಂಡು ಆ ಮೃಗವನ್ನು ಹಿಂಬಾಲಿಸಿದರು.
ಈ ಮೃಗವು ಮೊದಲಿನ ಮೃಗದ ಅಧಿಕಾರವನ್ನೇ ಬಳಸುತ್ತದೆ. ಭೂಮಿಯ ಮೇಲೆ ವಾಸಿಸುವ ಜನರೆಲ್ಲರೂ ಮೊದಲಿನ ಮೃಗವನ್ನು ಆರಾಧಿಸುವಂತೆ ಮಾಡಲು ಅದು ತನ್ನ ಶಕ್ತಿಯನ್ನೆಲ್ಲಾ ಬಳಸುತ್ತದೆ. ಮರಣಕರವಾದ ಗಾಯದಿಂದ ಗುಣಮುಖವಾದದ್ದೇ ಮೊದಲನೆಯ ಮೃಗ.