Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 17:16 - ಪರಿಶುದ್ದ ಬೈಬಲ್‌

16 ನೀನು ನೋಡಿದ ಆ ಮೃಗ ಮತ್ತು ಅದರ ಹತ್ತು ಕೊಂಬುಗಳು (ರಾಜರುಗಳು) ಆ ವೇಶ್ಯೆಯನ್ನು ದ್ವೇಷಿಸುತ್ತವೆ. ಅವಳಲ್ಲಿರುವುದನ್ನೆಲ್ಲ ಅವರು ಕಿತ್ತುಕೊಂಡು, ಅವಳನ್ನು ನಗ್ನಾವಸ್ಥೆಯಲ್ಲಿ ಬಿಡುತ್ತಾರೆ. ಅವರು ಅವಳ ದೇಹವನ್ನು ತಿಂದು, ಅವಳನ್ನು ಬೆಂಕಿಯಲ್ಲಿ ಸುಟ್ಟುಬಿಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಇದಲ್ಲದೆ ನೀನು ನೋಡಿದ ಹತ್ತು ಕೊಂಬುಗಳು ಮತ್ತು ಮೃಗವನ್ನು ಕಂಡೆಯಲ್ಲ? ಅವುಗಳು ಜಾರಸ್ತ್ರೀಯನ್ನು ದ್ವೇಷಿಸಿ, ಅವಳನ್ನು ಗತಿಯಿಲ್ಲದವಳನ್ನಾಗಿಯೂ ಬಟ್ಟೆ ಇಲ್ಲದವಳನ್ನಾಗಿಯೂ ಮಾಡಿ ಅವಳ ಮಾಂಸವನ್ನು ತಿಂದು, ಅವಳನ್ನು ಬೆಂಕಿಯಲ್ಲಿ ಸುಟ್ಟುಬಿಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ನೀನು ಕಂಡ ಮೃಗವೂ ಅದರ ಹತ್ತು ಕೊಂಬುಗಳೂ ಆ ವೇಶ್ಯೆಯನ್ನು ದ್ವೇಷಿಸುವವರನ್ನು ಸೂಚಿಸುತ್ತದೆ. ಅವರು ಅವಳನ್ನು ನಿರ್ಗತಿಕಳನ್ನಾಗಿ ಮಾಡುವರು, ಬೆತ್ತಲೆಯಾಗಿಸುವರು; ಅವಳ ಮಾಂಸವನ್ನು ಕಿತ್ತು ತಿನ್ನುವರು; ಅವಳನ್ನೇ ಬೆಂಕಿಯಲ್ಲಿ ಸುಟ್ಟುಬಿಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಇದಲ್ಲದೆ ಹತ್ತು ಕೊಂಬುಗಳನ್ನೂ ಮೃಗವನ್ನೂ ಕಂಡಿಯಲ್ಲ? ಇವುಗಳಿಂದ ಸೂಚಿತರಾದವರು ಆ ಜಾರಸ್ತ್ರೀಯನ್ನು ದ್ವೇಷಿಸಿ ಅವಳನ್ನು ಗತಿಗೆಟ್ಟವಳನ್ನಾಗಿಯೂ ಬಟ್ಟೆಯಿಲ್ಲದವಳನ್ನಾಗಿಯೂ ಮಾಡಿ ಅವಳ ಮಾಂಸವನ್ನು ತಿಂದು ಅವಳನ್ನು ಬೆಂಕಿಯಿಂದ ಸುಟ್ಟುಬಿಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ನೀನು ಕಂಡ ಆ ಮೃಗ ಮತ್ತು ಹತ್ತು ಕೊಂಬುಗಳು ಆ ಜಾರಸ್ತ್ರೀಯನ್ನು ದ್ವೇಷಿಸಿ, ಆಕೆಯನ್ನು ಗತಿಯಿಲ್ಲದವಳನ್ನಾಗಿಯೂ ಆಕೆಯನ್ನು ಬಟ್ಟೆ ಇಲ್ಲದವಳನ್ನಾಗಿಯೂ ಆಕೆಯ ಮಾಂಸವನ್ನು ತಿಂದು, ಆಕೆಯನ್ನು ಬೆಂಕಿಯಲ್ಲಿ ಸುಟ್ಟುಬಿಡುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ತಿಯಾ ಬಗಟಲ್ಲಿ ಧಾ ಶಿಂಗಾ ಅನಿ ತೆ ಭಯಾನಕ್ ಜನಾವರ್ ತ್ಯಾ ವ್ಯೆಭಿಚಾರ್ ಕರ್ತಲಿಚೊ ದ್ವೆಸ್ ಕರ್‍ತ್ಯಾತ್; ತೆನಿ ತಿಚೆಕ್ಡೆ ಹೊತ್ತೆ ಸಗ್ಳೆ ಕಾಡುನ್ ಘೆವ್ನ್ ತಿಕಾ ನಾಗ್ಡೆಚ್ ಸೊಡ್ತ್ಯಾತ್, ತೆನಿ ತಿಚೆ ಮಾಸ್ ಖಾತ್ಯಾತ್ ಅನಿ ತಿಕಾ ಆಗಿನ್‍ ನಾಸ್ ಕರುನ್ ಟಾಕ್ತ್ಯಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 17:16
17 ತಿಳಿವುಗಳ ಹೋಲಿಕೆ  

ಆದ್ದರಿಂದ ಅವಳಿಗೆ ಮರಣ, ಗೋಳಾಟ, ಭೀಕರ ಕ್ಷಾಮ ಎಂಬ ಉಪದ್ರವಗಳು ಒಂದೇ ದಿನದಲ್ಲಿ ಬರುತ್ತವೆ. ಅವಳಿಗೆ ತೀರ್ಪು ನೀಡಿದ ದೇವರಾಗಿರುವ ಪ್ರಭುವು ಬಲಿಷ್ಠನಾಗಿರುವುದರಿಂದ ಅವಳು ಬೆಂಕಿಯಿಂದ ನಾಶವಾಗುತ್ತಾಳೆ.”


“ಯಾಜಕನ ಮಗಳು ವೇಶ್ಯೆಯಾಗಿದ್ದರೆ, ಅವಳು ತನ್ನ ಗೌರವವನ್ನು ಹಾಳುಮಾಡಿಕೊಂಡವಳೂ ತನ್ನ ತಂದೆಗೆ ಅವಮಾನವನ್ನು ಉಂಟುಮಾಡಿದವಳೂ ಆಗಿದ್ದಾಳೆ. ಅವಳನ್ನು ಸುಟ್ಟುಹಾಕಬೇಕು.


ಅವರು ತಮ್ಮ ತಲೆಯ ಮೇಲೆ ಧೂಳನ್ನು ಸುರಿದುಕೊಂಡು, ದುಃಖದಿಂದ ಗೋಳಾಡುತ್ತಾ ಹೀಗೆ ಹೇಳಿದರು: ‘ಅಯ್ಯೋ! ಅಯ್ಯೋ! ಈ ಮಹಾನಗರಿಗೆ ಎಂಥಾ ಗತಿಯಾಯಿತು! ಸಮುದ್ರದ ಮೇಲೆ ಹಡಗುಗಳನ್ನು ಹೊಂದಿದ್ದ ಜನರೆಲ್ಲರೂ ಅವಳ ಸಂಪತ್ತಿನಿಂದ ಶ್ರೀಮಂತರಾದರು! ಆದರೆ ಅವಳು ಒಂದೇ ಗಳಿಗೆಯಲ್ಲಿ ನಾಶವಾಗಿಬಿಟ್ಟಳು!


ನೀವು ರಾಜರುಗಳ ಮತ್ತು ಸಹಸ್ರಾಧಿಪತಿಗಳ ಮತ್ತು ಸುಪ್ರಸಿದ್ಧ ಜನರ ದೇಹಗಳನ್ನು ತಿನ್ನಲು ಒಟ್ಟಾಗಿ ಬನ್ನಿರಿ. ಕುದುರೆಗಳ, ಕುದುರೆ ಸವಾರರ, ಸ್ವತಂತ್ರರಾದವರ, ಗುಲಾಮರ, ಚಿಕ್ಕವರ ಮತ್ತು ದೊಡ್ಡವರ ದೇಹಗಳನ್ನು ತಿನ್ನಲು ಬನ್ನಿರಿ.”


ಐದು ಮಂದಿ ರಾಜರುಗಳು ಈಗಾಗಲೇ ಸತ್ತಿದ್ದಾರೆ. ಒಬ್ಬ ರಾಜನು ಮಾತ್ರ ಈಗ ಜೀವಿಸಿದ್ದಾನೆ. ಕೊನೆಯ ರಾಜನು ಬರುತ್ತಾನೆ. ಅವನು ಬಂದು ಸ್ವಲ್ಪಕಾಲ ಮಾತ್ರ ಇರುತ್ತಾನೆ.


ಆರನೆಯ ದೇವದೂತನು ತನ್ನ ಪಾತ್ರೆಯಲ್ಲಿದ್ದುದನ್ನು ಯೂಫ್ರಟಿಸ್ ಮಹಾನದಿಯ ಮೇಲೆ ಸುರಿಸಿದನು. ನದಿಯಲ್ಲಿದ್ದ ನೀರು ಬತ್ತಿಹೋಯಿತು. ಇದರಿಂದ ಪೂರ್ವದಲ್ಲಿದ್ದ ರಾಜರುಗಳು ಬರಲು ಮಾರ್ಗವು ಸಿದ್ಧವಾಯಿತು.


“ಆಮೇಲೆ ನಾನು ಎರಡನೆ ಮೃಗವನ್ನು ಕಂಡೆ. ಆ ಮೃಗವು ಕರಡಿಯ ಹಾಗೆ ಕಾಣಿಸಿತು. ಅದು ಒಂದು ಭಾಗವನ್ನು ಮೇಲೆತ್ತಿಕೊಂಡಿತ್ತು. ತನ್ನ ಬಾಯಲ್ಲಿ ಹಲ್ಲುಗಳ ನಡುವೆ ಮೂರು ಪಕ್ಕೆಲುಬುಗಳನ್ನು ಕಚ್ಚಿಕೊಂಡಿತ್ತು. ‘ಎದ್ದು ನಿನಗೆ ಬೇಕಾದಷ್ಟು ಮಾಂಸವನ್ನು ತಿನ್ನು’ ಎಂದು ಅದಕ್ಕೆ ಹೇಳಲಾಯಿತು.


ದುಷ್ಟರು ನನ್ನನ್ನು ಕೊಲ್ಲಲು ಆಕ್ರಮಣಮಾಡುವಾಗ ತಾವೇ ಮುಗ್ಗರಿಸಿ ಬೀಳುವರು.


ನಾನು ಅಪರಿಚಿತರಿಗೆ ಯಾವಾಗಲೂ ಊಟ ಕೊಟ್ಟದ್ದು ನನ್ನ ಮನೆಯಲ್ಲಿರುವ ಎಲ್ಲರಿಗೂ ಗೊತ್ತಿದೆ.


ಆಗ ಪರಲೋಕದಲ್ಲಿ ಮತ್ತೊಂದು ಅದ್ಭುತವು ಕಾಣಿಸಿತು: ಕೆಂಪಾದ ಮಹಾ ಘಟಸರ್ಪವೊಂದು ಅಲ್ಲಿತ್ತು. ಆ ಘಟಸರ್ಪಕ್ಕೆ ಏಳು ತಲೆಗಳಿದ್ದು, ಪ್ರತಿಯೊಂದು ತಲೆಯ ಮೇಲೂ ಏಳು ಕಿರೀಟಗಳಿದ್ದವು. ಆ ಸರ್ಪಕ್ಕೆ ಹತ್ತು ಕೊಂಬುಗಳಿದ್ದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು