Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 17:4 - ಪರಿಶುದ್ದ ಬೈಬಲ್‌

4 ಆ ಸ್ತ್ರೀಯು ಧೂಮ್ರ ವರ್ಣದ ಮತ್ತು ಕೆಂಪು ಬಣ್ಣದ ಬಟ್ಟೆಗಳನ್ನು ಧರಿಸಿದ್ದಳು. ಅವಳು ತಾನು ತೊಟ್ಟಿದ್ದ ಚಿನ್ನ, ರತ್ನ, ಮುತ್ತು, ಮುಂತಾದವುಗಳಿಂದ ಪ್ರಕಾಶಿಸುತ್ತಿದ್ದಳು. ಅವಳು ತನ್ನ ಕೈಯಲ್ಲಿ ಚಿನ್ನದ ಬಟ್ಟಲನ್ನು ಹಿಡಿದಿದ್ದಳು. ಆ ಬಟ್ಟಲು ಅಸಹ್ಯವಾದವುಗಳಿಂದ ಮತ್ತು ಅವಳ ಲೈಂಗಿಕ ಪಾಪಗಳ ಅಶುದ್ಧತೆಯಿಂದ ತುಂಬಿಹೋಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಆ ಸ್ತ್ರೀಯು ಧೂಮ್ರವರ್ಣದ ವಸ್ತ್ರಗಳನ್ನೂ ರಕ್ತಾಂಬರವನ್ನೂ ಧರಿಸಿಕೊಂಡು ಚಿನ್ನ, ರತ್ನ, ಮುತ್ತುಗಳಿಂದ ಅಲಂಕರಿಸಿಕೊಂಡಿದ್ದಳು. ಆಕೆಯು ತನ್ನ ಕೈಯಲ್ಲಿ ಅಸಹ್ಯವಾದವುಗಳಿಂದಲೂ ಮತ್ತು ತನ್ನ ಅಶುದ್ಧ ಜಾರತ್ವಗಳಿಂದಲೂ ತುಂಬಿದ ಚಿನ್ನದ ಬಟ್ಟಲನ್ನು ಹಿಡಿದುಕೊಂಡಿದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಆ ಸ್ತ್ರೀ ಕೆನ್ನೀಲಿಯ ಹಾಗೂ ಕಡುಗೆಂಪಾದ ಬಟ್ಟೆಯನ್ನು ಧರಿಸಿದ್ದಳು; ಚಿನ್ನ, ಮುತ್ತು, ರತ್ನಾಭರಣಗಳಿಂದ ಅಲಂಕೃತಳಾಗಿದ್ದಳು. ಕೈಯಲ್ಲಿ ಚಿನ್ನದ ಪಾತ್ರೆಯನ್ನೂ ಹಿಡಿದಿದ್ದಳು. ಅವಳ ಹಾದರದ ಅಸಹ್ಯಗಳಿಂದಲೂ ಕಳಂಕಗಳಿಂದಲೂ ಅದು ತುಂಬಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಅದಕ್ಕೆ ಏಳು ತಲೆಗಳೂ ಹತ್ತು ಕೊಂಬುಗಳೂ ಇದ್ದವು. ಆ ಸ್ತ್ರೀಯು ಧೂಮ್ರವರ್ಣದ ವಸ್ತ್ರಗಳನ್ನೂ ರಕ್ತಾಂಬರವನ್ನೂ ಧರಿಸಿಕೊಂಡು ಚಿನ್ನ ರತ್ನ ಮುತ್ತು ಇವುಗಳಿಂದ ಅಲಂಕರಿಸಿಕೊಂಡಿದ್ದಳು; ಅವಳ ಕೈಯಲ್ಲಿ ಒಂದು ಚಿನ್ನದ ಬಟ್ಟಲು ಇತ್ತು; ಅದು ಅಸಹ್ಯವಾದವುಗಳಿಂದ ಅಂದರೆ ಅವಳ ಜಾರತ್ವ ಸಂಬಂಧವಾದ ಅಶುದ್ಧ ವಸ್ತುಗಳಿಂದ ತುಂಬಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಆ ಸ್ತ್ರೀಯು ನೇರಳೆ ಮತ್ತು ಕಡುಗೆಂಪು ಬಣ್ಣದ ವಸ್ತ್ರಗಳನ್ನು ಧರಿಸಿಕೊಂಡು ಚಿನ್ನ, ಅಮೂಲ್ಯವಾದ ಹರಳು, ಮುತ್ತುಗಳಿಂದ ಅಲಂಕರಿಸಿಕೊಂಡಿದ್ದಳು. ಆಕೆಯು ತನ್ನ ಕೈಯಲ್ಲಿ ಅಸಹ್ಯವಾದ ವಸ್ತುಗಳಿಂದಲೂ ಮತ್ತು ತನ್ನ ಅಶುದ್ಧ ಅನೈತಿಕತೆಯಿಂದಲೂ ತುಂಬಿದ ಚಿನ್ನದ ಬಟ್ಟಲನ್ನು ಹಿಡಿದುಕೊಂಡಿದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ತ್ಯಾ ಬಾಯ್ಕೊಮಸ್ಸಿನ್ ಜಾಂಬ್ಳೆ ಕಪ್ಡೆ ನೆಸಲ್ಲಿನ್ ಅನಿ ಸೊನಾಚ್ಯಾ ಅನಿ ಲೈ ಕಿಮ್ತಿಚ್ಯಾ ಫೊಡ್ಯಾನಿ ಅನಿ ಮೊತಿಯಾನಿ ಶಿಂಗಾರ್ ಕರುನ್ ಘೆಟಲ್ಲಿನ್. ತೆನಿ ಅಪ್ನಾಚ್ಯಾ ಹಾತಾತ್ನಿ ಪೊಜ್ಡ್ಯಾನಿ ಅನಿ ವ್ಯೆಬಿಚಾರಾಚ್ಯಾ ಕಾಮಾಚ್ಯಾ ಬುರ್ಶ್ಯಾ ಸಾಮಾನಾನಿ ಭರಲ್ಲೆ ಸೊನಾಚೆ ಆಯ್ದಾನ್ ಧರಲ್ಲಿನ್‍.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 17:4
22 ತಿಳಿವುಗಳ ಹೋಲಿಕೆ  

ಅವರು ದುಃಖದಿಂದ ಗೋಳಾಡುತ್ತಾ ಹೀಗೆನ್ನುವರು: ‘ಅಯ್ಯೋ, ಅಯ್ಯೋ, ಮಹಾನಗರಿಯೇ! ಅವಳು ನಯವಾದ ನಾರುಮಡಿಯನ್ನು, ಧೂಮ್ರವರ್ಣದ ಉಡುಪನ್ನು ಮತ್ತು ರಕ್ತಾಂಬರಗಳನ್ನು ಧರಿಸಿದ್ದಳು. ಅವಳು ಚಿನ್ನ, ರತ್ನ, ಮುತ್ತುಗಳಿಂದ ಶೋಭಿಸುತ್ತಿದ್ದಳು!


ಬಾಬಿಲೋನ್ ಯೆಹೋವನ ಕೈಯಲ್ಲಿನ ಬಂಗಾರದ ಪಾತ್ರೆಯಂತಿತ್ತು. ಲೋಕವೆಲ್ಲವೂ ಮದ್ಯಪಾನ ಮಾಡುವಂತೆ ಬಾಬಿಲೋನ್ ಮಾಡಿತು. ಜನಾಂಗಗಳು ಬಾಬಿಲೋನಿನ ದ್ರಾಕ್ಷಾರಸವನ್ನು ಕುಡಿದು ಹುಚ್ಚಾದವು.


ಆತನ ತೀರ್ಪುಗಳು ಸತ್ಯವೂ ನ್ಯಾಯವೂ ಆಗಿವೆ. ನಮ್ಮ ದೇವರು ವೇಶ್ಯೆಯನ್ನು ದಂಡಿಸಿದನು. ಅವಳ ಲೈಂಗಿಕ ಪಾಪದಿಂದಲೇ ಲೋಕವು ಕೆಟ್ಟುಹೋಯಿತು. ಆತನು ತನ್ನ ಸೇವಕರ ರಕ್ತಕ್ಕೆ ಪ್ರತಿಯಾಗಿ ಆ ವೇಶ್ಯೆಯನ್ನು ದಂಡಿಸಿದನು.”


ಅವರು ಚಿನ್ನ, ಬೆಳ್ಳಿ, ರತ್ನ, ಮುತ್ತು, ನಯವಾದ ನಾರುಮಡಿ, ಧೂಮ್ರ ವರ್ಣದ ವಸ್ತ್ರ, ರೇಷ್ಮೆ, ರಕ್ತಾಂಬರ, ಸಕಲ ವಿಧವಾದ ಅಗಿಲುಮರ, ದಂತದಿಂದ ಮಾಡಿದ ನಾನಾ ಬಗೆಯ ವಸ್ತುಗಳು, ಬಹು ಬೆಲೆಬಾಳುವ ಮರ, ತಾಮ್ರ, ಕಬ್ಬಿಣ ಮತ್ತು ಚಂದ್ರಕಾಂತ ಶಿಲೆ ಇವುಗಳನ್ನು ಮಾರುತ್ತಾರೆ.


ಜೆರುಸಲೇಮಿನ ಲಂಗಗಳು ಮಲಿನವಾಗಿದ್ದವು. ಅವಳಿಗೆ ಮುಂದೆ ಏನಾಗುವದೆಂಬುದರ ಬಗ್ಗೆ ಅವಳು ಯೋಚಿಸಲಿಲ್ಲ. ಅವಳ ಪತನ ವಿಸ್ಮಯಕಾರಿಯಾಗಿತ್ತು. ಅವಳನ್ನು ಸಂತೈಸಲು ಯಾರೂ ಇರಲಿಲ್ಲ. “ಅಯ್ಯೋ, ಯೆಹೋವನೇ, ನನಗೆಷ್ಟು ನೋವಾಗಿದೆ. ನೋಡು! ನನ್ನ ಶತ್ರು ತನ್ನನ್ನು ಎಷ್ಟು ದೊಡ್ಡವನೆಂದು ಭಾವಿಸಿಕೊಂಡಿದ್ದಾನೆ.” ಎಂದು ಆಕೆ ಹೇಳುತ್ತಾಳೆ.


ನಂತರ ಎರಡನೆಯ ದೇವದೂತನು ಮೊದಲನೆಯ ದೇವದೂತನನ್ನು ಹಿಂಬಾಲಿಸುತ್ತಾ, “ಅವಳು ನಾಶವಾದಳು! ಬಾಬಿಲೋನ್ ಎಂಬ ನಗರಿಯು ನಾಶವಾದಳು! ಆಕೆಯು ಸಕಲ ಜನಾಂಗಗಳಿಗೆ ತನ್ನ ಜಾರತ್ವವೆಂಬ ಮತ್ತು ದೇವರ ಕೋಪವೆಂಬ ದ್ರಾಕ್ಷಾರಸವನ್ನು ಕುಡಿಸಿದಳು” ಎಂದು ಹೇಳಿದನು.


ಉತ್ತರದ ರಾಜನು ಯಾವ ದೇವರನ್ನೂ ಪೂಜಿಸನು, ಅವನು ಅಧಿಕಾರವನ್ನು ಪೂಜಿಸುವನು. ಅಧಿಕಾರ ಮತ್ತು ಶಕ್ತಿ ಇವುಗಳು ಅವನ ದೇವರು, ಅವನ ಪೂರ್ವಿಕರು ಅವನಷ್ಟು ಅಧಿಕಾರ ಪ್ರಿಯರಾಗಿರಲಿಲ್ಲ. ಅಧಿಕಾರ ದೇವತೆಯನ್ನು ಅವನು ಬೆಳ್ಳಿಬಂಗಾರಗಳಿಂದ, ಅಮೂಲ್ಯವಾದ ರತ್ನಾಭರಣಗಳಿಂದ ಮತ್ತು ಬೇರೆ ಕಾಣಿಕೆಗಳಿಂದ ಸೇವಿಸುವನು.


“‘ನಿನ್ನ ವಿರುದ್ಧ ನನಗಿರುವ ಕೋಪ ತೃಪ್ತಿಗೊಳ್ಳುವ ತನಕ ನೀನು ಮತ್ತೆಂದಿಗೂ ಶುದ್ಧಳಾಗುವುದಿಲ್ಲ. ನಿನ್ನನ್ನು ತೊಳೆದು ಕಲೆಗಳನ್ನು ತೆಗೆಯಲು ನನಗೆ ಮನಸ್ಸಿತ್ತು. ಆದರೆ ಕಲೆಗಳು ಹೋಗಲಿಲ್ಲ. ಆದ್ದರಿಂದ ನಿನ್ನ ಮೇಲಿನ ನನ್ನ ಕೋಪವು ತಣ್ಣಗಾಗುವ ತನಕ ನಾನು ನಿನ್ನನ್ನು ತೊಳೆಯುವುದೇ ಇಲ್ಲ.


ಬರಿದಾದ ಹಂಡೆಯು ಉರಿಯುವ ಕೆಂಡಗಳ ಮೇಲಿದ್ದು, ಕಾದು ಅದರ ತಾಮ್ರವು ಕೆಂಪಾಗಲಿ. ಮತ್ತು ಅದರೊಳಗಿರುವ ಕಲೆಗಳು ಕರಗಿಹೋಗಲಿ. ಮತ್ತು ಅದರ ಕಿಲುಬು ಸುಟ್ಟುಹೋಗಲಿ.


ಇತರ ದೇವರುಗಳ ಸೇವೆಗಾಗಿ ತಮ್ಮ ದೇಹಗಳನ್ನು ಲೈಂಗಿಕ ಸಂಬಂಧಕ್ಕೆ ಮಾರಾಟ ಮಾಡುವ ಗಂಡಸರೂ ಅಲ್ಲಿದ್ದರು. ಯೆಹೂದದ ಜನರು ಅನೇಕ ಕೆಟ್ಟಕಾರ್ಯಗಳನ್ನು ಮಾಡಿದರು. ಆ ದೇಶದಲ್ಲಿ ಇವರಿಗಿಂತ ಮುಂಚೆ ನೆಲಸಿದ್ದ ಜನರು ಇಂತಹ ದುಷ್ಕೃತ್ಯಗಳನ್ನು ಮಾಡುತ್ತಿದ್ದರು. ದೇವರು ಆ ಜನರಿಂದ ಈ ದೇಶವನ್ನು ತೆಗೆದುಕೊಂಡು ಇಸ್ರೇಲರಿಗೆ ಕೊಟ್ಟಿದ್ದನು.


“ನನಗೆ ಇಸ್ರೇಲ್ ಜನಾಂಗವು ಮರುಭೂಮಿಯಲ್ಲಿ ದೊರಕಿದ ದ್ರಾಕ್ಷಿಹಣ್ಣಿನಂತಿತ್ತು. ನಿನ್ನ ಪೂರ್ವಿಕರು ಫಲಕಾಲದ ಆರಂಭದಲ್ಲಿ ದೊರೆತ ಅಂಜೂರದ ಹಣ್ಣಿನಂತಿದ್ದರು. ಆದರೆ ಅವರು ಬಾಳ್‌ಪೆಗೋರಿಗೆ ಬಂದಾಗ ಅವರು ಬದಲಾದರು. ಅವರು ಕೊಳೆತುಹೋದ ವಸ್ತುವಿನಂತೆ ಆದರು. ಅವರು ಪ್ರೀತಿಸಿದ ಭಯಂಕರ ವಿಗ್ರಹಗಳಂತೆ ಆದರು.


ದೇವರೇ, ನೀನು ನಿನ್ನ ಸೇವಕರಾದ ಪ್ರವಾದಿಗಳ ಮೂಲಕ ನಮಗೆ ಆ ಆಜ್ಞೆಗಳನ್ನು ಕೊಟ್ಟಿರುವೆ. ನೀನು ಹೀಗೆ ಹೇಳಿದೆ: ‘ನೀವು ವಾಸಿಸಲಿರುವ ಮತ್ತು ನಿಮ್ಮದನ್ನಾಗಿಸಿಕೊಳ್ಳುವ ನಾಡು ಪಾಳಾಗಿರುವ ನಾಡಾಗಿದೆ. ಅಲ್ಲಿಯ ಜನರು ಎಲ್ಲೆಲ್ಲಿಯೂ ಮಾಡಿರುವ ಕೆಟ್ಟಕೃತ್ಯಗಳಿಂದ ಅದು ಹಾಳಾಗಿದೆ; ಅವರು ತಮ್ಮ ಪಾಪಗಳಿಂದ ಆ ನಾಡನ್ನು ಹೊಲಸು ಮಾಡಿದ್ದಾರೆ.


ದೇವರು ಹೇಳಿದ್ದೇನೆಂದರೆ, “ಇಸ್ರೇಲ್ ಜನರು ದುಷ್ಕೃತ್ಯಗಳನ್ನು ಮಾಡಿದ್ದಾರೆ. ಆದ್ದರಿಂದ ನೀನು ಹೋಗಿ ಅವರಿಗೆ ಹೇಳು: ‘ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: ನಿಮ್ಮ ಪೂರ್ವಿಕರು ಮಾಡಿದಂತೆಯೇ ನೀವು ನಿಮ್ಮನ್ನು ಅಪವಿತ್ರರನ್ನಾಗಿ ಮಾಡಿಕೊಳ್ಳುತ್ತಿದ್ದೀರಿ. ನೀವು ಸೂಳೆಯರ ಹಾಗೆ ವರ್ತಿಸಿರುತ್ತೀರಿ. ನಿಮ್ಮ ಪೂರ್ವಿಕರು ಪೂಜಿಸಿದ ಆ ಭಯಂಕರವಾದ ವಿಗ್ರಹಗಳೊಂದಿಗೆ ಇರುವದಕ್ಕಾಗಿ ನನ್ನನ್ನು ನೀವು ತೊರೆದುಬಿಟ್ಟಿರಿ.


ಯೆಹೋವನು ಕೆಟ್ಟದ್ದೆಂದು ಹೇಳಿದ ಕಾರ್ಯಗಳನ್ನು ಮನಸ್ಸೆಯು ಮಾಡಿದನು. ಇಸ್ರೇಲರು ತಮ್ಮ ದೇಶಕ್ಕೆ ಬಂದಾಗ ಯೆಹೋವನು ಹೊರಗಟ್ಟಿದ ಅನ್ಯಜನಾಂಗಗಳ ಅಸಹ್ಯಕೃತ್ಯಗಳನ್ನು ಮನಸ್ಸೆಯು ಮಾಡಿದನು.


ಆಗ ನಾನು ಶುದ್ಧ ನೀರನ್ನು ನಿಮ್ಮ ಮೇಲೆ ಚಿಮುಕಿಸಿ ನಿಮ್ಮನ್ನು ಪರಿಶುದ್ಧರನ್ನಾಗಿ ಮಾಡುವೆನು. ಆ ವಿಗ್ರಹಗಳ ಹೊಲಸನ್ನು ನಿಮ್ಮಿಂದ ನಾನು ತೊಳೆದುಹಾಕಿ ನಿಮ್ಮನ್ನು ಶುದ್ಧರನ್ನಾಗಿ ಮಾಡುವೆನು.”


ನೀವು ಅವರ ಅಸಹ್ಯವಾದ ವಿಗ್ರಹಗಳನ್ನು ನೋಡಿದಿರಿ. ಅವುಗಳು ಮರ, ಕಲ್ಲು, ಬೆಳ್ಳಿಬಂಗಾರಗಳಿಂದ ಕೆತ್ತಲ್ಪಟ್ಟವುಗಳಾಗಿದ್ದವು.


ಕೆಲವರು ಒಂದು ಕಡೆಯಲ್ಲಿ ಹೋರಿಯನ್ನು ಯಜ್ಞಮಾಡುವರು. ಇನ್ನೊಂದು ಕಡೆಯಲ್ಲಿ ಜನರಿಗೆ ಹಿಂಸೆ ಕೊಡುವರು. ಅವರು ಬಲಿಯರ್ಪಿಸಲು ಕುರಿಗಳನ್ನು ಕೊಯ್ಯುವರು, ಅದೇ ಸಮಯದಲ್ಲಿ ನಾಯಿಗಳ ಕುತ್ತಿಗೆಗಳನ್ನು ಮುರಿಯುವರು. ಅವರು ನನಗೆ ಹಂದಿಗಳ ರಕ್ತವನ್ನು ಅರ್ಪಿಸುವರು. ನನಗೆ ಧೂಪವನ್ನು ಹಾಕಲು ಯಾವಾಗಲೂ ತಯಾರಿರುವರು. ಅದೇ ಸಮಯದಲ್ಲಿ ಅಯೋಗ್ಯವಾದ ತಮ್ಮ ವಿಗ್ರಹಗಳನ್ನು ಪ್ರೀತಿಸುವರು. ಅವರು ನನ್ನ ಮಾರ್ಗವನ್ನು ಅನುಸರಿಸದೆ ತಮ್ಮ ಮಾರ್ಗವನ್ನು ಆರಿಸಿಕೊಳ್ಳುತ್ತಾರೆ. ಅವರು ತಮ್ಮ ಭಯಂಕರವಾದ ವಿಗ್ರಹಗಳನ್ನು ಪೂಜಿಸುತ್ತಾರೆ.


ದೇವರ ಉದ್ಯಾನವನವಾಗಿದ್ದ ಏದೆನಿನಲ್ಲಿ ನೀನಿದ್ದೆ. ನಿನ್ನ ಬಳಿಯಲ್ಲಿ ಬಂಗಾರದ ಚೌಕಟ್ಟಿನಲ್ಲಿ ಕುಳ್ಳಿರಿಸಿದ ವಜ್ರ, ವೈಢೂರ್ಯ, ನವರತ್ನಗಳ ಆಭರಣಗಳಿದ್ದವು. ನೀನು ಸೃಷ್ಟಿಸಲ್ಪಟ್ಟ ದಿನದಲ್ಲಿ ಈ ಸೌಂದರ್ಯವು ನಿನಗೆ ಕೊಡಲ್ಪಟ್ಟಿತು. ದೇವರು ನಿನ್ನನ್ನು ಬಲಾಢ್ಯನನ್ನಾಗಿ ಮಾಡಿದನು.


ಈ ಜನರು ತಮ್ಮ ಹೃದಯಗಳನ್ನು ಮತ್ತು ಜೀವಿತಗಳನ್ನು ಪರಿವರ್ತಿಸಿಕೊಳ್ಳಲಿಲ್ಲ ಮತ್ತು ಇತರರನ್ನು ಕೊಲ್ಲುವುದನ್ನು ಬಿಟ್ಟುಬಿಡಲಿಲ್ಲ. ಅವರು ತಾವು ನಡೆಸುತ್ತಿದ್ದ ಮಾಟಮಂತ್ರಗಳನ್ನು, ಲೈಂಗಿಕ ಪಾಪಗಳನ್ನು ಮತ್ತು ಕಳ್ಳತನವನ್ನು ತೊರೆದುಬಿಡಲಿಲ್ಲ.


ಹನ್ನೆರಡು ಬಾಗಿಲುಗಳು ಹನ್ನೆರಡು ಮುತ್ತುಗಳಾಗಿದ್ದವು. ಪ್ರತಿಯೊಂದು ಬಾಗಿಲು ಒಂದೊಂದು ಮುತ್ತಿನಿಂದ ಮಾಡಲ್ಪಟ್ಟಿತ್ತು. ನಗರದ ಬೀದಿಯು ಗಾಜಿನಂತೆ ಶುಭ್ರವಾಗಿದ್ದ ಅಪ್ಪಟ ಚಿನ್ನದಿಂದ ಮಾಡಲ್ಪಟ್ಟಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು