ಪ್ರಕಟನೆ 18:13 - ಪರಿಶುದ್ದ ಬೈಬಲ್13 ಆ ವರ್ತಕರು ದಾಲ್ಚಿನ್ನಿ, ಸಾಂಬಾರ ಪದಾರ್ಥಗಳು, ಧೂಪ, ಪರಿಮಳತೈಲ, ಸಾಂಬ್ರಾಣಿ, ದ್ರಾಕ್ಷಾರಸ ಮತ್ತು ಆಲಿವ್‌ಎಣ್ಣೆ, ನಯವಾದ ಹಿಟ್ಟು, ಗೋಧಿ, ದನಕರು, ಕುರಿ, ಕುದುರೆಗಳು, ರಥಗಳು, ಗುಲಾಮರು ಮತ್ತು ಮಾನವ ಪ್ರಾಣಗಳನ್ನು ಮಾರುತ್ತಾರೆ. ವರ್ತಕರು ಅಳುತ್ತಾ ಹೀಗೆ ಹೇಳುವರು: ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಲವಂಗ, ಚಕ್ಕೆ, ಧೂಪ, ರಕ್ತಬೋಳ, ಸುಗಂಧತೈಲ, ದ್ರಾಕ್ಷಾರಸ, ಎಣ್ಣೆ, ನಯವಾದ ಹಿಟ್ಟು, ಗೋದಿ, ದನ, ಕುರಿ, ಕುದುರೆ, ರಥ, ಗುಲಾಮರು, ಮನುಷ್ಯಪ್ರಾಣಗಳು ಇವೇ ಮೊದಲಾದ ನಮ್ಮ ಸರಕುಗಳನ್ನು ಕೊಂಡುಕೊಳ್ಳುವವರು ಯಾರೂ ಇಲ್ಲವಲ್ಲಾ ಎಂದು ಗೋಳಾಡುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಇದಲ್ಲದೆ ಚಕ್ಕೆ, ಲವಂಗ, ರಕ್ತಬೋಳ, ಧೂಪ, ಸುಗಂಧತೈಲ ಮತ್ತು ಸಾಂಬ್ರಾಣಿಗಳನ್ನೂ ಮದ್ಯ, ಎಣ್ಣೆ, ಹದವಾದ ಹಿಟ್ಟು, ಗೋದಿ ಇವುಗಳನ್ನೂ ದನ, ಕುರಿ, ಕುದುರೆ, ರಥ, ಗುಲಾಮ ಮತ್ತು ಜೀತದಾಳು ಇವೆಲ್ಲವನ್ನೂ ಆ ವರ್ತಕರು ಅವಳಿಗೆ ಮಾರುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಲವಂಗಚೆಕ್ಕೆ, ರಕ್ತಬೋಳ, ಧೂಪ, ಸುಗಂಧತೈಲ, ಸಾಂಬ್ರಾಣಿ, ದ್ರಾಕ್ಷಾರಸ, ಎಣ್ಣೆ, ನಯವಾದ ಹಿಟ್ಟು, ಗೋದಿ, ದನ, ಕುರಿ, ಕುದುರೆ, ರಥ, ಗುಲಾಮ, ಮಾನುಷಪ್ರಾಣ ಇವೇ ಮೊದಲಾದ ನಮ್ಮ ಸರಕುಗಳನ್ನು ಕೊಂಡುಕೊಳ್ಳುವವರು ಯಾರೂ ಇಲ್ಲವಲ್ಲಾ ಎಂದು ಹೇಳಿಕೊಳ್ಳುತ್ತಾ ದುಃಖಿಸುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಸರಕುಗಳಾದ ದಾಲ್ಚಿನ್ನಿ ಮತ್ತು ಮಸಾಲೆ, ಧೂಪ, ಸುಗಂಧ ತೈಲ, ರಕ್ತಬೋಳ, ದ್ರಾಕ್ಷಾರಸ ಮತ್ತು ಓಲಿವ್ ಎಣ್ಣೆ, ನಯವಾದ ಹಿಟ್ಟು, ಗೋಧಿ, ದನಕರು ಮತ್ತು ಕುರಿಗಳು, ಕುದುರೆಗಳು, ವಾಹನಗಳು, ಗುಲಾಮರು ಹಾಗೂ ಮನುಷ್ಯರು ಇವುಗಳನ್ನೆಲ್ಲಾ ಆ ವರ್ತಕರು ಅವಳಿಗೆ ಮಾರುತ್ತಿದ್ದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್13 ದಾಲ್ಚಿನಿ, ಮಸಾಲೊ, ಧುಪ್, ರಗಾತ್‍ಬೊಳ್, ಬರಿ ವಾಸ್ ಯೆತಲಿ ತೆಲಾ, ಬರಿ ವಾಸ್ ಯೆತಲೊ ಸಾಂಬಾರ್, ಅನಿ, ವಾಯ್ನ್ ಅನಿ ಜೈತುನಾಚೆ ತೆಲ್, ದಳಲ್ಲೆ ಪಿಟ್ಟ್ ಅನಿ ಘವ್; ಗೊರಾ, ಬಕ್ರಿ, ಘೊಡ್ಕಿ ಅನಿ ರಥಾ ಮಾನ್ಸಾಕ್ ಸೈತ್ ಗುಲಾಮ್ ಕರುನ್ ತೆಂಚೆಕ್ನಾ ಇಕಾತ್ ಘೆಯ್ನ್ಯಾತ್. ಅಧ್ಯಾಯವನ್ನು ನೋಡಿ |
ಯೆಹೋವನು ಹೇಳುವುದೇನೆಂದರೆ: “ಇಸ್ರೇಲ್ ಜನರೇ, ನಾನು ನಿಮ್ಮ ತಾಯಿಯಾದ ಜೆರುಸಲೇಮಿಗೆ ವಿವಾಹವಿಚ್ಛೇದನ ಕೊಟ್ಟಿರುವುದಾಗಿ ಹೇಳುತ್ತೀರಿ. ಆದರೆ ನಾನು ಆಕೆಗೆ ವಿವಾಹವಿಚ್ಛೇದನ ಕೊಟ್ಟಿರುವುದಕ್ಕೆ ದಾಖಲೆ ಪತ್ರವೆಲ್ಲಿದೆ? ನನ್ನ ಮಕ್ಕಳೇ, ನಿಮ್ಮಲ್ಲಿ ಯಾರಿಗಾದರೂ ನಾನು ಸಾಲ ತೀರಿಸಬೇಕಿತ್ತೇ? ಆ ಸಾಲವನ್ನು ತೀರಿಸಲು ನಾನು ನಿಮ್ಮನ್ನು ಮಾರಿದ್ದೆನೋ, ಇಲ್ಲ. ನಾನು ನಿಮ್ಮನ್ನು ಮಾರಿಬಿಟ್ಟಿದ್ದು ನೀವು ಮಾಡಿದ ದುಷ್ಟತನಕ್ಕಾಗಿಯೇ. ನಿಮ್ಮ ತಾಯಿಯಾದ ಜೆರುಸಲೇಮನ್ನು ಕಳುಹಿಸಿಬಿಟ್ಟದ್ದು ನಿಮ್ಮ ಅಪರಾಧಗಳಿಗಾಗಿಯೇ.