ಪ್ರಕಟನೆ 18:21 - ಪರಿಶುದ್ದ ಬೈಬಲ್21 ನಂತರ ಬಲಿಷ್ಠನಾದ ದೇವದೂತನೊಬ್ಬನು ಒಂದು ದೊಡ್ಡ ಬಂಡೆಯನ್ನು ಎತ್ತಿಕೊಂಡನು. ಆ ಬಂಡೆಯು ಒಂದು ದೊಡ್ಡ ಬೀಸುವ ಕಲ್ಲಿನಂತಿತ್ತು. ದೇವದೂತನು ಆ ಬಂಡೆಯನ್ನು ಸಮುದ್ರದಲ್ಲಿ ಎಸೆದು ಹೀಗೆ ಹೇಳಿದನು: “ಮಹಾನಗರಿಯಾದ ಬಾಬಿಲೋನ್ ಹೀಗೆಯೇ ಕೆಳಕ್ಕೆ ಎಸೆಯಲ್ಪಡುವುದು. ಆ ನಗರಿಯು ಮತ್ತೆಂದಿಗೂ ಕಾಣಿಸುವುದಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಆಗ ಬಲಿಷ್ಠನಾದ ಒಬ್ಬ ದೇವದೂತನು ದೊಡ್ಡ ಬೀಸುವ ಕಲ್ಲಿನಂತಿರುವ ಒಂದು ಕಲ್ಲನ್ನು ತೆಗೆದುಕೊಂಡು ಸಮುದ್ರದೊಳಗೆ ಬಿಸಾಡಿ, “ಮಹಾಪಟ್ಟಣವಾದ ಬಾಬೆಲನ್ನು ಹೀಗೆ ಹಿಂಸಾಚಾರದಿಂದ ಬಿಸಾಡುವನು. ಅದು ಇನ್ನೆಂದಿಗೂ ಕಾಣಿಸುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಆಗ ಒಬ್ಬ ಬಲಿಷ್ಠ ದೇವದೂತನು ಬೀಸುವ ಕಲ್ಲಿನಂತಿದ್ದ ಒಂದು ದೊಡ್ಡ ಕಲ್ಲನ್ನು ಎತ್ತಿ ಸಮುದ್ರಕ್ಕೆ ಎಸೆದು ಹೀಗೆಂದನು : “ಬಾಬಿಲೋನ್ ಮಹಾನಗರವನು ಈ ಪರಿಯಾಗಿ ಎತ್ತೆಸೆಯಲಾಗುವುದು ಅವಳಿದ್ದ ಎಡೆಯು ಯಾರಿಗೂ ಕಾಣಸಿಗದಂತಾಗುವುದು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಆಗ ಬಲಿಷ್ಠನಾದ ಒಬ್ಬ ದೇವದೂತನು ದೊಡ್ಡ ಬೀಸುವ ಕಲ್ಲಿನಂತಿರುವ ಒಂದು ಕಲ್ಲನ್ನು ಎತ್ತಿ ಸಮುದ್ರದೊಳಗೆ ಹಾಕಿ - ಮಹಾ ಪಟ್ಟಣವಾದ ಬಾಬೆಲು ಹೀಗೆಯೇ ದಡದಡನೆ ಕೆಡವಲ್ಪಟ್ಟು ಇನ್ನೆಂದಿಗೂ ಕಾಣಿಸುವದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಅನಂತರ ಒಬ್ಬ ಬಲಿಷ್ಠನಾದ ದೂತನು, ಬೀಸುವ ಕಲ್ಲಿನಷ್ಟಿರುವ ದೊಡ್ಡ ಕಲ್ಲೊಂದನ್ನು ತೆಗೆದುಕೊಂಡು ಅದನ್ನು ಸಮುದ್ರದೊಳಗೆ ಬಿಸಾಡಿ: “ಮಹಾನಗರಿಯಾದ ಬಾಬಿಲೋನ್ ಹೀಗೆಯೇ ಬಲಾತ್ಕಾರದಿಂದ ಕೆಡವಲಾಗಿ ಎಂದಿಗೂ ಕಾಣಿಸದು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್21 ತನ್ನಾ ಎಕ್ ಘಟ್‍ಮುಟ್ ದೆವಾಚ್ಯಾ ದುತಾನ್ ಎಕ್ ಮೊಟ್ಯಾ ದಳ್ತಲ್ಯಾ ಗುಂಡ್ಯಾ ಸರ್ಕೊ ಎಕ್ ಮೊಟೊ ಗುಂಡೊ ಉಕ್ಲುನ್ ಘೆಟ್ಲ್ಯಾನ್, ಅನಿ ಸಮುಂದರಾಚ್ಯಾ ವರ್ತಿ ಟಾಕುನ್ ಅಸೆ. “ಅಸೆಚ್ ಬಾಬಿಲೊನ್ ಶಾರಾಕ್ ಕಟೊರ್ ರಿತಿನ್ ಖಾಲ್ತಿ ಟಾಕುನ್ ಹೊತಾ ಅನಿ ಅನಿಫಿಡೆ ತೆ ಕನ್ನಾಚ್ ಬಗುಕ್ ಗಾವಿನಾ” ಮಟ್ಲ್ಯಾನ್. ಅಧ್ಯಾಯವನ್ನು ನೋಡಿ |