ಪ್ರಕಟನೆ 18:3 - ಪರಿಶುದ್ದ ಬೈಬಲ್3 ದೇವರ ಕೋಪವೆಂಬ ಮತ್ತು ಅವಳ ಲೈಂಗಿಕ ಪಾಪವೆಂಬ ದ್ರಾಕ್ಷಾರಸವನ್ನು ಲೋಕದ ಜನರೆಲ್ಲರೂ ಕುಡಿದು ಮತ್ತರಾದರು. ಭೂಲೋಕದ ರಾಜರುಗಳೆಲ್ಲ ಅವಳೊಂದಿಗೆ ಲೈಂಗಿಕ ಪಾಪ ಮಾಡಿದರು. ಭೂಲೋಕದ ವರ್ತಕರು ಅವಳ ಅತಿಯಾದ ಸುಖದಿಂದ ಶ್ರೀಮಂತರಾದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಎಲ್ಲಾ ದೇಶಗಳವರೂ ಅವಳ ಜಾರತ್ವವೆಂಬ ಕ್ರೌರ್ಯದ ದ್ರಾಕ್ಷಾರಸವನ್ನು ಕುಡಿದರು. ಅವಳೊಂದಿಗೆ ಭೂಲೋಕದ ರಾಜರು ವ್ಯಭಿಚಾರ ಮಾಡಿದರು. ಅವಳ ಭೋಗವಿಲಾಸದಿಂದ ಭೂಲೋಕದ ವರ್ತಕರು ಐಶ್ವರ್ಯವಂತರಾದರು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಕುಡಿಸಿದಳು ನಾಡುನಾಡುಗಳಿಗೆ ತನ್ನ ಹಾದರವೆಂಬ ಮದ್ಯವನು. ವ್ಯಭಿಚಾರಗೈದರು ಅವಳೊಡನೆ ಭೂರಾಜರು ಅವಳ ಭೋಗವಿಲಾಸದಿಂದ ಧನಿಕರಾದರು ಇಳೆಯ ವರ್ತಕರು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಎಲ್ಲಾ ಜನಾಂಗಗಳು ಅವಳ ಅತಿಜಾರತ್ವವೆಂಬ ದ್ರಾಕ್ಷಾರಸವನ್ನು ಕುಡಿದರು; ಅವಳೊಂದಿಗೆ ಭೂರಾಜರು ಜಾರತ್ವ ಮಾಡಿದರು; ಅವಳು ಸುಖಭೋಗಿನಿಯಾಗಿದ್ದದರಿಂದ ಭೂಲೋಕದ ವರ್ತಕರು ಐಶ್ವರ್ಯವಂತರಾದರು ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಏಕೆಂದರೆ ಎಲ್ಲಾ ದೇಶಗಳೂ ಆಕೆಯ ಜಾರತ್ವಗಳೆಂಬ ಅತ್ಯಾಸಕ್ತಿಯ ದ್ರಾಕ್ಷಾರಸವನ್ನು ಕುಡಿದಿವೆ. ಭೂಲೋಕದ ಅರಸರು ಆಕೆಯೊಂದಿಗೆ ವ್ಯಭಿಚಾರ ಮಾಡಿದರು, ಭೂಲೋಕದ ವರ್ತಕರು ಆಕೆಯ ಭೋಗ ವಸ್ತುಗಳಿಂದ ಸಿರಿವಂತರಾದರು,” ಎಂದು ಕೂಗಿದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್3 ಸಗ್ಳ್ಯಾ ದೆಶಾನಿ ತಿಚಿ ವಾಯ್ನ್ ಫಿಲ್ಯಾನಾತ್. ಜಗಾಚ್ಯಾ ಸಗ್ಳ್ಯಾ ರಾಜಾನಿ ತಿಚೆವಾಂಗ್ಡಾ ಬುರ್ಶೊ ಆಂಗಾಚೊ ಸಮ್ಮಂದ್ ಕರಲ್ಲ್ಯಾನಿ, ತಿಚ್ಯಾ ಪೊಜ್ಡ್ಯಾಪಾನಾಚ್ಯಾ ಕಾಮಾ ವೈನಾ ಹ್ಯಾ ಜಗಾತ್ಲಿ ಯಾಪಾರ್ ಕರ್ತಲಿ ಲೊಕಾ ಸಾವ್ಕಾರ್ ಹೊವ್ಕ್ ಲಾಗಲ್ಲಿ”. ಮನುನ್ ಬೊಬ್ ಮಾರ್‍ಲ್ಯಾನ್. ಅಧ್ಯಾಯವನ್ನು ನೋಡಿ |
“ಹಿಂದಿನ ಕಾಲದಲ್ಲಿ, ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನು ನಮ್ಮನ್ನು ಹಾಳುಮಾಡಿದನು; ನಮ್ಮನ್ನು ಹಿಂಸಿಸಿದನು; ನಮ್ಮ ಜನರನ್ನು ಸೆರೆ ಒಯ್ದನು. ಆಗ ನಾವು ಒಂದು ಬರಿದಾದ ಪಾತ್ರೆಯಂತಾದೆವು. ಅವನು ನಮ್ಮ ಎಲ್ಲಾ ಉತ್ತಮ ವಸ್ತುಗಳನ್ನು ತೆಗೆದುಕೊಂಡು ಹೋದನು. ತನಗೆ ತೃಪ್ತಿಯಾಗುವವರೆಗೆ ಎಲ್ಲವನ್ನು ತಿಂದು ತೇಗಿದ ರಾಕ್ಷಸನಂತಿದ್ದನು. ಅವನು ನಮ್ಮೆಲ್ಲ ಉತ್ಕೃಷ್ಠ ವಸ್ತುಗಳನ್ನು ಕಿತ್ತುಕೊಂಡು ನಮ್ಮನ್ನು ದೂರ ಎಸೆದನು.