Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 18:8 - ಪರಿಶುದ್ದ ಬೈಬಲ್‌

8 ಆದ್ದರಿಂದ ಅವಳಿಗೆ ಮರಣ, ಗೋಳಾಟ, ಭೀಕರ ಕ್ಷಾಮ ಎಂಬ ಉಪದ್ರವಗಳು ಒಂದೇ ದಿನದಲ್ಲಿ ಬರುತ್ತವೆ. ಅವಳಿಗೆ ತೀರ್ಪು ನೀಡಿದ ದೇವರಾಗಿರುವ ಪ್ರಭುವು ಬಲಿಷ್ಠನಾಗಿರುವುದರಿಂದ ಅವಳು ಬೆಂಕಿಯಿಂದ ನಾಶವಾಗುತ್ತಾಳೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಆದ್ದರಿಂದ ಉಪದ್ರವಗಳು ಮರಣ, ಗೋಳಾಟ ಮತ್ತು ಕ್ಷಾಮಗಳು ಒಂದೇ ದಿನದಲ್ಲಿ ಅವಳಿಗೆ ಸಂಭವಿಸುವವು. ಅವಳಿಗೆ ತೀರ್ಪುಕೊಡುವ ಕರ್ತನಾದ ದೇವರು ಶಕ್ತನಾಗಿರುವುದರಿಂದ ಅವಳು ಬೆಂಕಿಯಿಂದ ನಾಶವಾಗುವಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಈ ಕಾರಣ, ಒಂದೇ ದಿನದಲಿ ಬಂದೆರಗುವುವು ಸಾವು ನೋವು ಕ್ಷಾಮಡಾಮರಗಳು ಬೆಂಕಿಯಲ್ಲವಳು ಭಸ್ಮವಾಗುವಳು ಅವಳ ದಂಡಿಪ ಪ್ರಭುವು ಬಲಾಢ್ಯ ದೇವನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ದುಃಖವನ್ನು ಕಾಣುವದೇ ಇಲ್ಲ ಎಂದು ಹೇಳಿಕೊಳ್ಳುವದರಿಂದ ಅವಳಿಗೆ ಕೊಲೆ ದುಃಖ ಕ್ಷಾಮ ಎಂಬೀ ಉಪದ್ರವಗಳು ಒಂದೇ ದಿನದಲ್ಲಿ ಸಂಭವಿಸುವವು; ಅವಳು ಬೆಂಕಿಯಿಂದ ಸುಟ್ಟುಹೋಗುವಳು; ಅವಳಿಗೆ ದಂಡನೆಯನ್ನು ವಿಧಿಸಿದ ದೇವರಾಗಿರುವ ಕರ್ತನು ಬಲಿಷ್ಠನಾಗಿದ್ದಾನೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಆದ್ದರಿಂದ ಒಂದೇ ದಿನದಲ್ಲಿ ಆಕೆಯ ಉಪದ್ರವಗಳಾಗಿರುವ ಮರಣ, ಗೋಳಾಟ ಮತ್ತು ಕ್ಷಾಮವು ಬರುವುವು. ಆಕೆಯನ್ನು ತೀರ್ಪುಮಾಡುವ ಕರ್ತದೇವರು ಶಕ್ತರಾಗಿರುವುದರಿಂದ ಆಕೆಯು ಬೆಂಕಿಯಿಂದ ನಾಶವಾಗುವಳು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ಹೆಕಾ ಲಾಗುನ್ ತರಾಸ್, ರೊಗ್, ಕಸ್ಟ್ ಅನಿ ಬರ್‍ಗಾಲ್ ಸಗ್ಳೆ ಎಕುಚ್ ದಿಸಿ ತಿಚೆ ವರ್ತಿ ಯೆತಾ. ಅನಿ ತಿ ಆಗಿತ್ ಜಳುನ್ ಜಾತಾ, ಕಶ್ಯಾಕ್ ಮಟ್ಲ್ಯಾರ್ ತಿಚಿ ನಿರ್ನಯ್ ಕರ್ತಲೊ ಸರ್ವೆಸ್ವರ್ ದೆವ್ ಲೈ ಮೊಟೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 18:8
18 ತಿಳಿವುಗಳ ಹೋಲಿಕೆ  

ಆದರೆ ದೇವರು ಅವರನ್ನು ಹಿಂದಕ್ಕೆ ಕರೆತರುವನು. ಆತನ ಹೆಸರು ಸರ್ವಶಕ್ತನಾದ ಯೆಹೋವನು. ಆತನು ಆ ಜನರನ್ನು ನಿಶ್ಚಯವಾಗಿ ಕಾಪಾಡುವನು. ಭೂಮಿಗೆ ವಿಶ್ರಾಂತಿಯನ್ನು ಕೊಡುವ ಉದ್ದೇಶದಿಂದ ಆತನು ಅವರನ್ನು ಕಾಪಾಡುವನು. ಆದರೆ ಬಾಬಿಲೋನಿನಲ್ಲಿ ವಾಸಿಸುವ ಜನರಿಗೆ ಆತನು ವಿಶ್ರಾಂತಿಯನ್ನು ಕೊಡುವದಿಲ್ಲ.”


“ಬಾಬಿಲೋನೇ, ನೀನು ತುಂಬಾ ದುರಹಂಕಾರಿ. ನಾನು ನಿನಗೆ ವಿರುದ್ಧವಾಗಿದ್ದೇನೆ.” ನಮ್ಮ ಒಡೆಯನೂ ಸರ್ವಶಕ್ತನೂ ಆಗಿರುವ ಯೆಹೋವನು ಹೀಗೆನ್ನುತ್ತಾನೆ. “ನಾನು ನಿನಗೆ ವಿರುದ್ಧವಾಗಿದ್ದೇನೆ. ನಿನ್ನನ್ನು ದಂಡಿಸುವ ಸಮಯ ಬಂದಿದೆ.


ನೀನು ನೋಡಿದ ಆ ಮೃಗ ಮತ್ತು ಅದರ ಹತ್ತು ಕೊಂಬುಗಳು (ರಾಜರುಗಳು) ಆ ವೇಶ್ಯೆಯನ್ನು ದ್ವೇಷಿಸುತ್ತವೆ. ಅವಳಲ್ಲಿರುವುದನ್ನೆಲ್ಲ ಅವರು ಕಿತ್ತುಕೊಂಡು, ಅವಳನ್ನು ನಗ್ನಾವಸ್ಥೆಯಲ್ಲಿ ಬಿಡುತ್ತಾರೆ. ಅವರು ಅವಳ ದೇಹವನ್ನು ತಿಂದು, ಅವಳನ್ನು ಬೆಂಕಿಯಲ್ಲಿ ಸುಟ್ಟುಬಿಡುತ್ತಾರೆ.


ಅವರು ತಮ್ಮ ತಲೆಯ ಮೇಲೆ ಧೂಳನ್ನು ಸುರಿದುಕೊಂಡು, ದುಃಖದಿಂದ ಗೋಳಾಡುತ್ತಾ ಹೀಗೆ ಹೇಳಿದರು: ‘ಅಯ್ಯೋ! ಅಯ್ಯೋ! ಈ ಮಹಾನಗರಿಗೆ ಎಂಥಾ ಗತಿಯಾಯಿತು! ಸಮುದ್ರದ ಮೇಲೆ ಹಡಗುಗಳನ್ನು ಹೊಂದಿದ್ದ ಜನರೆಲ್ಲರೂ ಅವಳ ಸಂಪತ್ತಿನಿಂದ ಶ್ರೀಮಂತರಾದರು! ಆದರೆ ಅವಳು ಒಂದೇ ಗಳಿಗೆಯಲ್ಲಿ ನಾಶವಾಗಿಬಿಟ್ಟಳು!


ಪ್ರಭುವಿಗೆ ಅಸೂಯೆಯನ್ನು ಉಂಟುಮಾಡಬೇಕೆಂದಿದ್ದೀರೋ? ಆತನಿಗಿಂತಲೂ ನಾವು ಬಲಿಷ್ಠರಾಗಿದ್ದೇವೋ? ಇಲ್ಲ!


ಸರ್ವಶಕ್ತನಾದ ಯೆಹೋವನು ಹೀಗೆನ್ನುವನು: “ಬಾಬಿಲೋನಿನ ಅಗಲವಾದ ಮತ್ತು ಸುಭದ್ರವಾದ ಗೋಡೆಯನ್ನು ಬೀಳಿಸಲಾಗುವುದು. ಅದರ ಎತ್ತರವಾದ ಬಾಗಿಲುಗಳನ್ನು ಸುಟ್ಟುಹಾಕಲಾಗುವುದು. ಬಾಬಿಲೋನಿನ ಜನರು ನಗರವನ್ನು ರಕ್ಷಿಸಲು ಬಹಳ ಕಷ್ಟಪಡುವರು. ಆದರೆ ಅದು ನಿಷ್ಪ್ರಯೋಜಕವಾಗುವುದು. ನಗರವನ್ನು ರಕ್ಷಿಸುವ ಪ್ರಯತ್ನದಲ್ಲಿ ಅವರು ತುಂಬಾ ಶ್ರಮವಹಿಸುವರು. ಆದರೆ ಅವರು ಕೇವಲ ಅಗ್ನಿಗೆ ಆಹುತಿಯಾಗುವರು.”


ಬಾಬಿಲೋನಿನಿಂದ ದೂರ ಓಡಿಹೋಗಿರಿ. ನಿಮ್ಮ ಪ್ರಾಣಗಳನ್ನು ಉಳಿಸಿಕೊಳ್ಳುವುದಕ್ಕಾಗಿ ಓಡಿಹೋಗಿರಿ. ಇಲ್ಲವಾದರೆ ಬಾಬಿಲೋನಿನ ಪಾಪದಿಂದ ನೀವೂ ಮರಣಕ್ಕೆ ಗುರಿಯಾಗುವಿರಿ. ಅವರು ಮಾಡಿದ ದುಷ್ಕೃತ್ಯಗಳಿಗಾಗಿ ದೇವರು ಬಾಬಿಲೋನಿನ ಜನರನ್ನು ಶಿಕ್ಷಿಸುವ ಕಾಲವಿದು. ಅದು ತಕ್ಕ ಶಿಕ್ಷೆಯನ್ನು ಪಡೆಯುವುದು.


ಇದಲ್ಲದೆ ಪರಲೋಕದಲ್ಲಿದ್ದ ಆ ಜನರು ಹೇಳಿದ್ದೇನೆಂದರೆ: “ಹಲ್ಲೆಲೂಯಾ! ಅವಳು ಸುಟ್ಟುಹೋಗುತ್ತಿದ್ದಾಳೆ. ಅವಳ ಹೊಗೆಯು ಯುಗಯುಗಾಂತರಗಳಲ್ಲಿಯೂ ಮೇಲೇಳುತ್ತಿರುವುದು.”


ಈ ಶ್ರೀಮಂತಿಕೆಯೆಲ್ಲವೂ ಒಂದೇ ಗಳಿಗೆಯಲ್ಲಿ ನಾಶವಾಯಿತಲ್ಲಾ!’ “ಹಡಗುಗಳ ಒಡೆಯರೂ ಹಡಗುಗಳಲ್ಲಿ ಸಂಚರಿಸುವ ಜನರೆಲ್ಲರೂ ನಾವಿಕರೂ ಸಮುದ್ರದಿಂದ ಹಣವನ್ನು ಗಳಿಸುವ ಜನರೆಲ್ಲರೂ ದೂರದಲ್ಲಿ ನಿಂತುಕೊಂಡು


ನೀನು ನೋಡಿದ ಸ್ತ್ರೀಯು ಲೋಕದ ರಾಜರುಗಳನ್ನು ಆಳುವ ಮಹಾನಗರಿಯಾಗಿದ್ದಾಳೆ.”


ಆ ಹಿರಿಯರು ಹೀಗೆ ಹೇಳಿದರು: “ಪ್ರಭುವೇ, ಸರ್ವಶಕ್ತನಾದ ದೇವರೇ, ಭೂತಕಾಲದಲ್ಲಿ ಇದ್ದಾತನೇ, ವರ್ತಮಾನ ಕಾಲದಲ್ಲಿ ಇರುವಾತನೇ, ನಿನಗೆ ಕೃತಜ್ಞತಾಸ್ತುತಿ ಸಲ್ಲಿಸುತ್ತೇವೆ. ನೀನು ನಿನ್ನ ಮಹಾ ಅಧಿಕಾರವನ್ನು ಉಪಯೋಗಿಸಿ ನಿನ್ನ ಆಡಳಿತವನ್ನು ಆರಂಭಿಸಿದ್ದರಿಂದ ನಿನಗೆ ಕೃತಜ್ಞತಾಸ್ತುತಿ ಸಲ್ಲಿಸುತ್ತೇವೆ.


“ಶಕ್ತಿಯೂ ದೇವರಿಂದಲೇ” ಎಂದು ದೇವರು ನುಡಿದಿದ್ದಾನೆ.


ಆತನನ್ನು ಸೋಲಿಸೋಣವೆಂದರೆ ಆತನೇ ಬಲಿಷ್ಠನಾಗಿದ್ದಾನೆ; ನ್ಯಾಯಾಲಯಕ್ಕೆ ಹೋಗೋಣವೆಂದರೆ ಆತನನ್ನು ನ್ಯಾಯಾಲಯಕ್ಕೆ ಬರಮಾಡುವವನು ಯಾರು?


ಆ ಸಮಯದಲ್ಲಿ ಯೆಹೋವನು ವಂಚನೆಯ ಸರ್ಪವಾದ ಲಿವ್ಯಾತಾನನಿಗೆ ನ್ಯಾಯತೀರಿಸುವನು. ಯೆಹೋವನು ಕಠಿಣವೂ ಮಹತ್ವವೂ ಬಲವೂ ಆಗಿರುವ ತನ್ನ ಖಡ್ಗದಿಂದ ಸುತ್ತಿಕೊಂಡಿರುವ ಸರ್ಪವಾದ ಲಿವ್ಯಾತಾನನನ್ನು ಕೊಲ್ಲುವನು. ಯೆಹೋವನು ಸಮುದ್ರದಲ್ಲಿರುವ ಘಟಸರ್ಪವನ್ನು ಕೊಲ್ಲುವನು.


ಆದ್ದರಿಂದ ಯೆಹೋವನು ಇಸ್ರೇಲರ ತಲೆಯನ್ನೂ ಬಾಲವನ್ನೂ ಕತ್ತರಿಸುವನು. ಒಂದೇ ದಿವಸದಲ್ಲಿ ಯೆಹೋವನು ಮರದ ಕಾಂಡವನ್ನೂ ಕೊಂಬೆಗಳನ್ನೂ ಕತ್ತರಿಸಿಬಿಡುವನು.


ಯೆಹೋವನು ತನ್ನ ಸೈನ್ಯವನ್ನು ಮಹಾಧ್ವನಿಯಿಂದ ಕರೆಯುತ್ತಾನೆ. ಆತನ ಶಿಬಿರವು ದೊಡ್ಡದಾಗಿದೆ. ಆ ಸೈನ್ಯವು ಆತನ ಆಜ್ಞೆಯನ್ನು ಪಾಲಿಸುತ್ತದೆ; ಆ ಸೈನ್ಯವು ಮಹಾ ಬಲಿಷ್ಠವಾಗಿದೆ. ಯೆಹೋವನ ಮಹಾದಿನವು ಮಹಾ ಭಯಂಕರವಾದ ದಿನವಾಗಿದೆ. ಅದನ್ನು ಸಹಿಸಲು ಯಾರಿಗೂ ಸಾಧ್ಯವಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು