ಪ್ರಕಟನೆ 19:11 - ಪರಿಶುದ್ದ ಬೈಬಲ್11 ನಂತರ ಪರಲೋಕವು ತೆರೆದಿರುವುದನ್ನು ನಾನು ನೋಡಿದೆನು. ನನ್ನ ಎದುರಿನಲ್ಲಿ ಒಂದು ಬಿಳಿ ಕುದುರೆಯಿತ್ತು. ಕುದುರೆಯ ಮೇಲೆ ಕುಳಿತಿದ್ದ ಸವಾರನ ಹೆಸರು ನಂಬಿಗಸ್ತ ಮತ್ತು ಸತ್ಯವಂತ. ಆತನು ತನ್ನ ತೀರ್ಪುಗಳಲ್ಲಿಯೂ ಯುದ್ಧಗಳಲ್ಲಿಯೂ ನ್ಯಾಯವಂತನಾಗಿದ್ದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಪರಲೋಕವು ತೆರೆದಿರುವುದನ್ನು ನಾನು ಕಂಡೆನು. ಆಗ ಇಗೋ, ಬಿಳೀ ಕುದುರೆಯು ನನಗೆ ಕಾಣಿಸಿತು. ಅದರ ಮೇಲೆ ಕುಳಿತಿದ್ದವನಿಗೆ ನಂಬಿಗಸ್ತನು, ಸತ್ಯವಂತನು ಎಂದು ಹೆಸರು. ಆತನು ನೀತಿಯಿಂದ ನ್ಯಾಯವಿಚಾರಿಸುತ್ತಾನೆ, ನೀತಿಯಿಂದ ಯುದ್ಧಮಾಡುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ನಾನು ಈ ದೃಶ್ಯವನ್ನೂ ಕಂಡೆ: ಸ್ವರ್ಗವು ತೆರೆದಿತ್ತು. ಬಿಳಿಯ ಕುದುರೆಯೊಂದು ಕಾಣಿಸಿತು. ಅದರ ಮೇಲೆ ಒಬ್ಬನು ಕುಳಿತಿದ್ದನು. ನಂಬಿಕಸ್ಥನೆಂದೂ ಸತ್ಯವಂತನೆಂದೂ ಆತನ ಹೆಸರು; ಆತನು ನಿಷ್ಪಕ್ಷಪಾತದಿಂದ ನ್ಯಾಯತೀರ್ಪು ಕೊಡುವವನು; ನ್ಯಾಯಬದ್ಧವಾಗಿ ಯುದ್ಧಮಾಡುವವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಪರಲೋಕವು ತೆರೆದಿರುವದನ್ನು ನಾನು ಕಂಡೆನು. ಆಗ ಇಗೋ, ಬಿಳೀ ಕುದುರೆಯು ನನಗೆ ಕಾಣಿಸಿತು; ಅದರ ಮೇಲೆ ಕೂತಿದ್ದವನಿಗೆ ನಂಬಿಗಸ್ತನೂ ಸತ್ಯವಂತನೂ ಎಂದು ಹೆಸರು. ಆತನು ನೀತಿಯಿಂದ ನ್ಯಾಯವಿಚಾರಿಸುತ್ತಾನೆ, ನೀತಿಯಿಂದ ಯುದ್ಧಮಾಡುತ್ತಾನೆ; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಪರಲೋಕವು ತೆರೆದಿರುವುದನ್ನು ನಾನು ಕಂಡೆನು. ಇಗೋ, ಬಿಳಿಯ ಕುದುರೆಯು ಕಾಣಿಸಿತು. ಅದರ ಮೇಲೆ ಕುಳಿತಿದ್ದವರ ಹೆಸರು, ನಂಬಿಗಸ್ತರು ಮತ್ತು ಸತ್ಯವಂತರು ಎಂಬುದು. ಅವರ ನೀತಿಯಿಂದ ನ್ಯಾಯವಿಚಾರಿಸುತ್ತಾ ಯುದ್ಧಮಾಡುತ್ತಾರೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್11 ಮಾನಾ ಸರ್ಗ್ ಉಗಡಲ್ಲೆ ಮಿಯಾ ಬಗಟ್ಲೊ, ಥೈ ಎಕ್ ಫಾಂಡ್ರೆ ಘೊಡ್ಕೆ ಹೊತ್ತೆ. ತೆಚೆ ವರ್ತಿ ಸವಾರಿ ಕರ್ತಲ್ಯಾಕ್ ವಿಶ್ವಾಸಾಚೊ ಅನಿ ಖರೊ ಮನುನ್ ಬಲ್ವುತ್ಯಾತ್; ತೊ ನ್ಯಾಯ್‍ನಿತಿನ್ ನಿರ್ನಯ್ ಕರ್‍ತಾ ಅನಿ ಅಪ್ನಾಚ್ಯಾ ಮಾರಾಮಾರಿಯಾ ಖೆಳ್ತಾ. ಅಧ್ಯಾಯವನ್ನು ನೋಡಿ |
ನನ್ನ ಬಳಿಗೆ ಬರಲು ಅವರಿಗೆ ಹೇಳು. ತಾವು ವಿಗ್ರಹಗಳನ್ನು ಯಾಕೆ ನಂಬುತ್ತಾರೆಂದು ನನ್ನೊಂದಿಗೆ ವಾದಿಸಲಿ.) “ಬಹಳ ಕಾಲದ ಹಿಂದೆ ನಡೆದ ಸಂಗತಿಗಳ ಬಗ್ಗೆ ನಿಮಗೆ ತಿಳಿಸಿದವರು ಯಾರು? ಬಹಳ ಕಾಲದಿಂದ ಈ ವಿಷಯಗಳನ್ನು ನಿಮಗೆ ತಿಳಿಸುತ್ತಾ ಬಂದವರು ಯಾರು? ನಾನೇ. ಯೆಹೋವನಾದ ನಾನೇ ನಿಮಗೆಲ್ಲವನ್ನು ತಿಳಿಸಿದೆನು. ನಾನೊಬ್ಬನೇ ದೇವರು. ನನ್ನಂಥ ದೇವರು ಬೇರೆ ಇದ್ದಾರೆಯೇ? ಕರುಣೆಯುಳ್ಳ ದೇವರು ಬೇರೆಲ್ಲಾದರೂ ಇರುವನೇ? ತನ್ನ ಜನರನ್ನು ವಿಮೋಚಿಸುವಂಥ ಬೇರೆ ದೇವರು ಇರುವನೇ? ಇಲ್ಲ! ಬೇರೆ ದೇವರು ಇಲ್ಲ!
ನಾನು ಯಾಜಕನಾಗಿದ್ದೇನೆ. ನಾನು ಬೂಜಿಯ ಮಗನಾದ ಯೆಹೆಜ್ಕೇಲ. ನಾನು ಬಾಬಿಲೋನಿನಲ್ಲಿ ಯೆಹೂದ್ಯರೊಂದಿಗೆ ಸೆರೆಯಲ್ಲಿದ್ದೆ. ನಾನು ಕೆಬಾರ್ ಕಾಲುವೆಯ ಬಳಿಯಲ್ಲಿದ್ದಾಗ ಆಕಾಶ ತೆರೆದಿರುವದನ್ನು ಕಂಡೆನು. ನನಗೆ ದೇವದರ್ಶನವಾಯಿತು. ಇದು ಮೂವತ್ತನೆಯ ವರ್ಷದ ನಾಲ್ಕನೆಯ ತಿಂಗಳಿನ ಐದನೆ ದಿವಸದಲ್ಲಾಯಿತು. ಒಡೆಯನಾದ ಯೆಹೋಯಾಖೀನನು ಸೆರೆಯಲ್ಲಿದ್ದ ಐದನೆಯ ವರ್ಷದ ನಾಲ್ಕನೆ ತಿಂಗಳಿನ ಐದನೆಯ ದಿನದಲ್ಲಿ ಯೆಹೋವನ ವಾಕ್ಯವು ಯೆಹೆಜ್ಕೇಲನಿಗೆ ಬಂದಿತು. ಆ ಸ್ಥಳದಲ್ಲಿ ಯೆಹೋವನ ಆತ್ಮನಿಂದ ಅವನು ಪರವಶನಾದನು.