Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 19:12 - ಪರಿಶುದ್ದ ಬೈಬಲ್‌

12 ಆತನ ಕಣ್ಣುಗಳು ಉರಿಯುವ ಕೆಂಡಗಳಂತಿದ್ದವು. ಆತನ ತಲೆಯ ಮೇಲೆ ಅನೇಕ ಕಿರೀಟಗಳಿದ್ದವು. ಆತನ ಮೇಲೆ ಒಂದು ಹೆಸರನ್ನು ಬರೆಯಲಾಗಿತ್ತು, ಆದರೆ ಆ ಹೆಸರಿನ ಅರ್ಥ ಆತನೊಬ್ಬನಿಗೆ ಮಾತ್ರ ತಿಳಿದಿತ್ತೇ ಹೊರತು ಬೇರೆ ಯಾರಿಗೂ ತಿಳಿದಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಆತನ ಕಣ್ಣುಗಳು ಬೆಂಕಿಯ ಜ್ವಾಲೆಯಂತಿವೆ, ಆತನ ತಲೆಯ ಮೇಲೆ ಅನೇಕ ಕಿರೀಟಗಳುಂಟು, ಆತನಿಗೆ ಒಂದು ಹೆಸರು ಬರೆದುಕೊಡಲ್ಪಟ್ಟಿದೆ, ಅದು ಆತನಿಗೇ ಹೊರತು ಮತ್ತಾರಿಗೂ ತಿಳಿಯದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಆತನ ಕಣ್ಣುಗಳು ಬೆಂಕಿಯ ಕೆಂಡಗಳಂತಿವೆ; ತಲೆಯ ಮೇಲೆ ಅನೇಕ ಕಿರೀಟಗಳಿವೆ.ಆತನ ಹೆಸರನ್ನು ಬರೆದಿಟ್ಟಿದೆ; ಅದು ಆತನಿಗೇ ಹೊರತು ಬೇರೆ ಯಾರಿಗೂ ತಿಳಿಯದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಆತನ ಕಣ್ಣುಗಳು ಬೆಂಕಿಯ ಉರಿಯಂತಿವೆ; ಆತನ ತಲೆಯ ಮೇಲೆ ಅನೇಕ ಮಕುಟಗಳುಂಟು; ಆತನಿಗೆ ಒಂದು ಹೆಸರು ಬರೆದು ಕೊಟ್ಟಿದೆ, ಅದು ಆತನಿಗೇ ಹೊರತು ಮತ್ತಾರಿಗೂ ತಿಳಿಯದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಆತನ ನೇತ್ರಗಳು ಬೆಂಕಿಯ ಜ್ವಾಲೆಯಂತಿದ್ದವು. ಆತನ ತಲೆಯ ಮೇಲೆ ಅನೇಕ ಮುಕುಟಗಳಿದ್ದವು. ಆತನಿಗೆ ಒಂದು ಹೆಸರು ಬರೆದು ಕೊಟ್ಟಿದೆ. ಅದು ಆತನಿಗೇ ಹೊರತು ಮತ್ತಾರಿಗೂ ತಿಳಿಯದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ತೆಚೆ ಡೊಳೆ ಆಗಿ ಸರ್ಕೆ ಹೊತ್ತೆ, ಅನಿ ತೆನಿ ಅಪ್ನಾಚ್ಯಾ ಟಕ್ಲ್ಯಾ ವರ್ತಿ ಸುಮಾರ್ ಮುಕುಟ್ ನೆಸಲ್ಲ್ಯಾನ್, ತ್ಯೆಚ್ಯಾ ವರ್ತಿ ಎಕ್ ನಾವ್ ಲಿವಲ್ಲೆ ಹೊತ್ತೆ ಖರೆ ತೆ ಕಾಯ್ ಮನುನ್ ತೆಕಾ ಎಕ್ಲ್ಯಾಕ್ ಸೊಡುನ್ ಅನಿ ಕೊನಾಕ್‍ಬಿ ಗೊತ್ತ್ ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 19:12
25 ತಿಳಿವುಗಳ ಹೋಲಿಕೆ  

ಆತನ ನಿಲುವಂಗಿಯ ಮೇಲೆಯೂ ಆತನ ಕಾಲಿನ ಮೇಲೆಯೂ, ರಾಜಾಧಿರಾಜ ಮತ್ತು ಪ್ರಭುಗಳ ಪ್ರಭು ಎಂಬ ಹೆಸರನ್ನು ಬರೆಯಲಾಗಿತ್ತು.


“ನನ್ನ ತಂದೆಯು ಎಲ್ಲವನ್ನೂ ನನಗೆ ಕೊಟ್ಟಿದ್ದಾನೆ. ಮಗನು ಯಾರೆಂಬುದು ಯಾರಿಗೂ ಗೊತ್ತಿಲ್ಲ. ತಂದೆಯೊಬ್ಬನಿಗೇ ಗೊತ್ತಿದೆ. ತಂದೆಯು ಯಾರೆಂಬುದು ಮಗನಿಗೆ ಮಾತ್ರ ಗೊತ್ತಿದೆ. ಮಗನು ತಂದೆಯ ಬಗ್ಗೆ ಯಾರಿಗೆ ತಿಳಿಸುತ್ತಾನೋ ಅವರು ಮಾತ್ರ ತಂದೆಯ ಬಗ್ಗೆ ತಿಳಿದುಕೊಳ್ಳುವರು.”


ಆತನ ತಲೆಕೂದಲು ಮಂಜಿನಂತೆಯೂ ಉಣ್ಣೆಯಂತೆಯೂ ಬೆಳ್ಳಗಿದ್ದವು; ಕಣ್ಣುಗಳು ಬೆಂಕಿಯ ಜ್ವಾಲೆಯಂತಿದ್ದವು;


“ನನ್ನ ತಂದೆ ನನಗೆ ಎಲ್ಲವನ್ನು ಕೊಟ್ಟಿದ್ದಾನೆ. ಯಾವನೂ ಮಗನನ್ನು ಅರಿತಿಲ್ಲ. ತಂದೆ ಮಾತ್ರ ಮಗನನ್ನು ಅರಿತಿದ್ದಾನೆ. ಯಾವನೂ ತಂದೆಯನ್ನು ಅರಿತಿಲ್ಲ. ಮಗನು ಮಾತ್ರ ತಂದೆಯನ್ನು ಅರಿತಿದ್ದಾನೆ. ಮಗನು ತಂದೆಯನ್ನು ಯಾರಿಗೆ ಪ್ರಕಟಿಸಬೇಕೆಂದು ಇಷ್ಟಪಡುತ್ತಾನೋ ಅವರು ತಂದೆಯನ್ನು ತಿಳಿದುಕೊಳ್ಳುತ್ತಾರೆ.


ಆದ್ದರಿಂದ ಯೇಸು ಅವರ ಬಳಿಗೆ ಬಂದು, “ಪರಲೋಕದ ಮತ್ತು ಈ ಲೋಕದ ಅಧಿಕಾರವೆಲ್ಲವನ್ನು ನನಗೆ ಕೊಡಲಾಗಿದೆ.


ಜಯಗಳಿಸಿದ ವ್ಯಕ್ತಿಯನ್ನು ನನ್ನ ದೇವರ ಆಲಯದಲ್ಲಿ ಆಧಾರಸ್ತಂಭವನ್ನಾಗಿ ಮಾಡುವೆನು. ಅವನು ದೇವರ ಆಲಯವನ್ನು ಮತ್ತೆಂದಿಗೂ ಬಿಟ್ಟುಹೋಗುವ ಅಗತ್ಯವಿಲ್ಲ. ನನ್ನ ದೇವರ ಹೆಸರನ್ನೂ ನನ್ನ ದೇವರ ಪಟ್ಟಣದ ಹೆಸರನ್ನೂ ಅವನ ಮೇಲೆ ಬರೆಯುತ್ತೇನೆ. ಹೊಸ ಜೆರುಸಲೇಮೇ ಆ ಪಟ್ಟಣ. ಆ ಪಟ್ಟಣವು ನನ್ನ ದೇವರ ಬಳಿಯಿಂದ ಪರಲೋಕದಿಂದ ಇಳಿದುಬರುತ್ತದೆ. ನನ್ನ ಹೊಸ ಹೆಸರನ್ನೂ ಅವನ ಮೇಲೆ ಬರೆಯುತ್ತೇನೆ.


ಕೇವಲ ಸ್ವಲ್ಪಕಾಲದವರೆಗೆ ಯೇಸುವು ದೇವದೂತರಿಗಿಂತ ಸ್ವಲ್ಪವೇ ಕಡಿಮೆಯಾಗಿ ಮಾಡಲ್ಪಟ್ಟನು. ಆದರೆ ನಾವೀಗ ವೈಭವ, ಗೌರವಗಳೆಂಬ ಕಿರೀಟ ಧರಿಸಿರುವ ಆತನನ್ನು ನೋಡುತ್ತೇವೆ. ಏಕೆಂದರೆ ದೇವರ ಕೃಪೆಯ ನಿಮಿತ್ತ ಆತನು ಎಲ್ಲರಿಗೋಸ್ಕರ ಸಂಕಟ ಅನುಭವಿಸಿ ಮರಣಹೊಂದಿದನು.


ವಿಶೇಷವಾದ ಗಂಡುಮಗುವು ಜನಿಸಿದಾಗ ಇವೆಲ್ಲಾ ಸಂಭವಿಸುವದು. ದೇವರು ನಮಗೊಬ್ಬ ವರದ ಮಗನನ್ನು ಕೊಡುವನು. ಈ ವರದ ಮಗನು ಜನರನ್ನು ನಡಿಸುವದಕ್ಕೆ ಜವಾಬ್ದಾರಿಯನ್ನು ಹೊಂದಿದವನಾಗುವನು. ಆತನ ಹೆಸರು “ಅದ್ಭುತಸ್ವರೂಪನು, ಆಲೋಚನಾಕರ್ತನು, ಪರಾಕ್ರಮಿಯಾದ ದೇವರು, ನಿತ್ಯನಾದ ತಂದೆ, ಸಮಾಧಾನದ ಪ್ರಭುವು” ಎಂಬುದಾಗಿ ಇರುವದು.


ಆದರೆ ನೀನು ಮನುಷ್ಯರಿಗೆ ಪ್ರಾಮುಖ್ಯತೆ ಕೊಟ್ಟಿರುವೆ. ನೀನು ಅವರನ್ನು ದೇವದೂತರಿಗಿಂತ ಸ್ವಲ್ಪವೇ ಕಡಿಮೆಯಾಗಿ ಸೃಷ್ಟಿಸಿದೆ. ನೀನು ಅವರಿಗೆ ಪ್ರಭಾವವನ್ನೂ ಮಾನವನ್ನೂ ಕಿರೀಟವಾಗಿಟ್ಟಿರುವೆ.


ಆಗ ಪರಲೋಕದಲ್ಲಿ ಮತ್ತೊಂದು ಅದ್ಭುತವು ಕಾಣಿಸಿತು: ಕೆಂಪಾದ ಮಹಾ ಘಟಸರ್ಪವೊಂದು ಅಲ್ಲಿತ್ತು. ಆ ಘಟಸರ್ಪಕ್ಕೆ ಏಳು ತಲೆಗಳಿದ್ದು, ಪ್ರತಿಯೊಂದು ತಲೆಯ ಮೇಲೂ ಏಳು ಕಿರೀಟಗಳಿದ್ದವು. ಆ ಸರ್ಪಕ್ಕೆ ಹತ್ತು ಕೊಂಬುಗಳಿದ್ದವು.


ಆ ಸಮಯಗಳಲ್ಲಿ ದೇವರಾದ ಯೆಹೋವನು, ಕುರುಬನು ತನ್ನ ಕುರಿಗಳನ್ನು ಸಂರಕ್ಷಿಸುವ ರೀತಿಯಲ್ಲಿ ತನ್ನ ಜನರನ್ನು ರಕ್ಷಿಸುವನು. ಅವರು ಆತನಿಗೆ ಅಮೂಲ್ಯರಾಗಿರುವರು. ಆತನ ಕೈಯಲ್ಲಿ ಹೊಳೆಯುವ ಆಭರಣದಂತಿರುವರು.


ಯೆಹೋವನ ದೂತನು, “ನೀನು ನನ್ನ ಹೆಸರನ್ನು ಏಕೆ ಕೇಳುವೆ? ಅದು ನೀನು ನಂಬಲಾರದಷ್ಟು ಆಶ್ಚರ್ಯಕರವಾದದ್ದು” ಅಂದನು.


ದೂತನಿಗೆ ವಿಧೇಯರಾಗಿ ಆತನನ್ನು ಹಿಂಬಾಲಿಸಿರಿ. ಆತನಿಗೆ ವಿರೋಧವಾಗಿ ದಂಗೆಯೇಳಬೇಡಿರಿ. ನೀವು ಅವಿಧೇಯರಾದರೆ ಆತನು ನಿಮ್ಮನ್ನು ಕ್ಷಮಿಸುವುದಿಲ್ಲ. ಆತನಲ್ಲಿ ನನ್ನ ಶಕ್ತಿಯು ಇರುತ್ತದೆ.


ಯಾಕೋಬನು ಆತನಿಗೆ, “ದಯವಿಟ್ಟು ನಿನ್ನ ಹೆಸರನ್ನು ತಿಳಿಸು” ಎಂದು ಕೇಳಿದನು. ಅದಕ್ಕೆ ಆ ಪುರುಷನು, “ನನ್ನ ಹೆಸರನ್ನು ವಿಚಾರಿಸುವುದೇಕೆ?” ಎಂದು ಹೇಳಿ ಯಾಕೋಬನನ್ನು ಆಶೀರ್ವದಿಸಿದನು.


ನಾನು ನೋಡಿದಾಗ ನನ್ನ ಮುಂದೆ ಒಂದು ಬಿಳಿ ಕುದುರೆಯಿರುವುದು ನನಗೆ ಕಾಣಿಸಿತು. ಕುದುರೆಯ ಮೇಲಿದ್ದ ಸವಾರನ ಕೈಯಲ್ಲಿ ಒಂದು ಬಿಲ್ಲು ಇತ್ತು. ಆ ಸವಾರನಿಗೆ ಒಂದು ಕಿರೀಟವನ್ನು ಕೊಡಲಾಯಿತು. ಅವನು ಶತ್ರುವನ್ನು ಸೋಲಿಸುತ್ತಾ ಜಯಗಳಿಸುವುದಕ್ಕಾಗಿ ಹೊರಟನು.


ಯೆಹೋವನು ನಿನ್ನಲ್ಲಿ ಬಹಳವಾಗಿ ಹೆಚ್ಚಳಪಡುವನು. ನೀನು ಆತನ ಕೈಯಲ್ಲಿ ಒಂದು ಸುಂದರವಾದ ಕಿರೀಟದಂತಿರುವೆ.


ನಂತರ ಸಮುದ್ರದಿಂದ ಒಂದು ಮೃಗವು ಹೊರಗೆ ಬರುತ್ತಿರುವುದನ್ನು ನಾನು ನೋಡಿದೆನು. ಅದಕ್ಕೆ ಹತ್ತು ಕೊಂಬುಗಳೂ ಏಳು ತಲೆಗಳೂ ಇದ್ದವು. ಅದರ ಪ್ರತಿಯೊಂದು ಕೊಂಬಿನ ಮೇಲೆ ಒಂದೊಂದು ಕಿರೀಟವಿತ್ತು. ಪ್ರತಿಯೊಂದು ತಲೆಯ ಮೇಲೂ ದೇವದೂಷಣೆ ನಾಮಗಳನ್ನು ಬರೆಯಲಾಗಿತ್ತು.


“ಸೀಯೋನ್ ನಗರಿಗೆ ಹೇಳಿರಿ, ‘ನಿನ್ನ ರಾಜನು ಈಗ ನಿನ್ನ ಬಳಿಗೆ ಬರುತ್ತಿದ್ದಾನೆ. ದೀನತೆಯಿಂದ ಕತ್ತೆಯ ಮೇಲೆ ಬರುತ್ತಿದ್ದಾನೆ. ಹೌದು, ಪ್ರಾಯದ ಕತ್ತೆಮರಿಯ ಮೇಲೆ ಬರುತ್ತಿದ್ದಾನೆ.’”


ಚೀಯೋನಿನ ಸ್ತ್ರೀಯರೇ, ಹೊರಗೆ ಹೋಗಿ ರಾಜನಾದ ಸೊಲೊಮೋನನನ್ನು ನೋಡಿರಿ. ಅವನ ಮದುವೆಯ ದಿನದಲ್ಲಿ ಹೃದಯವು ಹರ್ಷಗೊಂಡಿದ್ದಾಗ ಅವನ ತಾಯಿ ತಲೆಗಿಟ್ಟ ಕಿರೀಟವನ್ನು ಧರಿಸಿಕೊಂಡಿದ್ದಾನೆ.


ಎಂದಾದರೂ ಪರಲೋಕಕ್ಕೆ ಏರಿಹೋಗಿ ಇಳಿದುಬಂದವನು ಯಾರು? ಗಾಳಿಯನ್ನು ತನ್ನ ಕೈಯಲ್ಲಿ ಹಿಡಿದವನು ಯಾರು? ತನ್ನ ಉಡುಪಿನಲ್ಲಿ ಸಮುದ್ರವನ್ನು ಮೂಟೆಕಟ್ಟಿದವನು ಯಾರು? ಭೂಮಿಗೆ ಮೇರೆಗಳನ್ನು ಹಾಕಿದವನು ಯಾರು? ಈ ಕಾರ್ಯಗಳನ್ನು ಯಾವನಾದರೂ ಮಾಡಿದ್ದರೆ, ಅವನು ಯಾರು? ಅವನು ಕುಟುಂಬ ಎಲ್ಲಿದೆ?


ಅವನ ಶರೀರವು ಪ್ರಕಾಶಮಾನವಾದ ವಜ್ರದಂತೆ ಇತ್ತು. ಅವನ ಮುಖವು ಕೋಲ್ಮಿಂಚಿನಂತೆ ಹೊಳೆಯುತ್ತಿತ್ತು. ಅವನ ಕಣ್ಣುಗಳು ಬೆಂಕಿಯ ಪಂಜುಗಳಂತಿದ್ದವು. ಅವನ ಕೈಕಾಲುಗಳು ಉಜ್ಜಿದ ಹಿತ್ತಾಳೆಯಂತೆ ಝಗಝಗಿಸುತ್ತಿದ್ದವು. ಅವನ ಧ್ವನಿಯು ಜನಜಂಗುಳಿಯ ಧ್ವನಿಯಂತೆ ದೊಡ್ಡದಾಗಿತ್ತು.


“ಈಗ ನಾನು ನಿನ್ನ ಬಳಿಗೆ ಬರುತ್ತಿದ್ದೇನೆ. ಇನ್ನು ನಾನು ಈ ಲೋಕದಲ್ಲಿರುವುದಿಲ್ಲ. ಆದರೆ ಇವರು ಇನ್ನೂ ಈ ಲೋಕದಲ್ಲಿರುತ್ತಾರೆ. ಪವಿತ್ರನಾದ ತಂದೆಯೇ, (ನೀನು ನನಗೆ ಕೊಟ್ಟ) ನಿನ್ನ ಹೆಸರಿನ ಶಕ್ತಿಯಿಂದ ಇವರನ್ನು ಕಾಯ್ದು ಕಾಪಾಡು. ನೀನೂ ನಾನೂ ಒಂದಾಗಿರುವಂತೆ ಇವರೂ ಒಂದಾಗಿರಲು ಆಗ ಸಾಧ್ಯವಾಗುವುದು.


ನಾನು ಇವರೊಂದಿಗೆ ಇದ್ದಾಗ, ನಿನ್ನ ಹೆಸರಿನ ಶಕ್ತಿಯಿಂದ ಇವರನ್ನು ಕಾಯ್ದು ಕಾಪಾಡಿದೆನು. ಪವಿತ್ರ ಗ್ರಂಥದ ಹೇಳಿಕೆಯು ನೆರವೇರುವಂತೆ ಕಳೆದುಹೋಗುವುದಕ್ಕಾಗಿಯೇ ಆರಿಸಲ್ಪಟ್ಟಿದ್ದ (ಯೂದನೆಂಬ) ಒಬ್ಬನೇ ಒಬ್ಬನು ಇವರಲ್ಲಿ ನಾಶವಾದನು.


ದೇವರು ಕ್ರಿಸ್ತನನ್ನು ಎಲ್ಲಾ ಅಧಿಪತಿಗಳಿಗಿಂತಲೂ ಅಧಿಕಾರಿಗಳಿಗಿಂತಲೂ ಶಕ್ತಿಗಳಿಗಿಂತಲೂ ರಾಜರುಗಳಿಗಿಂತಲೂ ಪ್ರಮುಖನನ್ನಾಗಿ ಮಾಡಿದನು. ಈ ಲೋಕದಲ್ಲಾಗಲಿ ಮುಂದಿನ ಲೋಕದಲ್ಲಾಗಲಿ ಕೊಡಲ್ಪಟ್ಟಿರುವ ಯಾವುದೇ ಹೆಸರುಳ್ಳವರಿಗಿಂತಲೂ ಕ್ರಿಸ್ತನು ಪ್ರಮುಖನಾಗಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು