Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 19:13 - ಪರಿಶುದ್ದ ಬೈಬಲ್‌

13 ಆತನು ರಕ್ತದಲ್ಲಿ ನೆನೆಸಿದ ನಿಲುವಂಗಿಯನ್ನು ಧರಿಸಿದ್ದನು. ಆತನ ಹೆಸರು ದೇವರವಾಕ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಆತನು ರಕ್ತದಲ್ಲಿ ಅದ್ದಿದ ವಸ್ತ್ರವನ್ನು ಧರಿಸಿಕೊಂಡಿದ್ದನು. ಆತನಿಗೆ ದೇವರ ವಾಕ್ಯವೆಂದು ಹೆಸರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಆತನು ಧರಿಸಿದ್ದ ಉಡುಪು ರಕ್ತಪ್ರೋಕ್ಷಿತವಾಗಿತ್ತು. ಆತನಿಗೆ ‘ದೇವರ ವಾಕ್ಯ’ ಎಂದು ಹೆಸರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಆತನು ರಕ್ತಪ್ರೋಕ್ಷಿತವಾದ ವಸ್ತ್ರವನ್ನು ಧರಿಸಿಕೊಂಡಿದ್ದನು. ಆತನಿಗೆ ದೇವರ ವಾಕ್ಯವೆಂದು ಹೆಸರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಆತನು ರಕ್ತದಲ್ಲಿ ಅದ್ದಿದ ವಸ್ತ್ರವನ್ನು ಧರಿಸಿಕೊಂಡಿದ್ದಾನೆ. ಆತನ ಹೆಸರು ದೇವರ ವಾಕ್ಯವೆಂಬುದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ತೆನಿ ನೆಸಲ್ಲೊ ಝಗೊ ರಗ್ತಾನಿ ಭರಲ್ಲೊ ಹೊತ್ತೊ ತೆಚೆ ನಾವ್,“ದೆವಾಚೊ‍ ಶಬ್ದ್”.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 19:13
9 ತಿಳಿವುಗಳ ಹೋಲಿಕೆ  

ಜಗತ್ತು ಸೃಷ್ಟಿಯಾಗುವುದಕ್ಕಿಂತ ಮೊದಲೇ ವಾಕ್ಯ ಎಂಬಾತನಿದ್ದನು. ಆ ವಾಕ್ಯ ಎಂಬಾತನು ದೇವರೊಂದಿಗೆ ಇದ್ದನು. ಆ ವಾಕ್ಯ ಎಂಬಾತನೇ ಸ್ವತಃ ದೇವರಾಗಿದ್ದನು.


ವಾಕ್ಯ ಎಂಬಾತನು ಮನುಷ್ಯನಾಗಿ ನಮ್ಮೊಂದಿಗೆ ವಾಸಿಸಿದನು. ನಾವು ಆತನ ಮಹಿಮೆಯನ್ನು ನೋಡಿದೆವು. ಆ ಮಹಿಮೆಯು ತಂದೆಯ ಒಬ್ಬನೇ ಮಗನಿಗಿರುವ ಮಹಿಮೆಯಾಗಿತ್ತು. ಆತನು ಕೃಪೆಯಿಂದಲೂ ಸತ್ಯದಿಂದಲೂ ತುಂಬಿದವನಾಗಿದ್ದನು.


ದುಷ್ಟರಿಗಾಗುವ ಪ್ರತಿದಂಡನೆಯನ್ನು ನೀತಿವಂತರು ಕಂಡು ಹರ್ಷಿಸುವರು; ಆ ದುಷ್ಟರ ರಕ್ತದಲ್ಲಿ ಕಾಲಾಡಿಸುವರು.


ಆ ದ್ರಾಕ್ಷಿಯನ್ನು ನಗರದ ಹೊರಭಾಗದಲ್ಲಿದ್ದ ದ್ರಾಕ್ಷಿಯ ಆಲೆಯಲ್ಲಿ ಕಿವುಚಿ ಹಾಕಿದರು. ಆ ದ್ರಾಕ್ಷಿಯ ಆಲೆಯಿಂದ ರಕ್ತವು ಹೊರಕ್ಕೆ ಬಂದಿತು. ಅದು ಕುದುರೆಗಳ ತಲೆಗಳಷ್ಟು ಎತ್ತರಕ್ಕೆ ಏರಿ ಇನ್ನೂರು ಮೈಲಿಗಳಷ್ಟು ದೂರ ಹರಿಯಿತು.


ಈ ಲೋಕವು ಆರಂಭವಾಗುವುದಕ್ಕಿಂತ ಮುಂಚಿನಿಂದಲೂ ಇದ್ದ ಜೀವವಾಕ್ಯದ ಕುರಿತಾಗಿ ನಾವು ನಿಮಗೆ ಬರೆಯುತ್ತಿದ್ದೇವೆ: ಅದನ್ನು ಕಿವಿಯಾರೆ ಕೇಳಿದೆವು; ಕಣ್ಣಾರೆ ನೋಡಿದೆವು, ಮನಸ್ಸಿಟ್ಟು ಗಮನಿಸಿದೆವು, ಕೈಗಳಿಂದ ಮುಟ್ಟಿ ನೋಡಿದೆವು.


ರಣರಂಗದಲ್ಲಿ ನಡೆಯುವ ಪ್ರತಿಯೊಂದು ಪಾದರಕ್ಷೆಯನ್ನೂ ನಾಶಮಾಡಲಾಗುವುದು; ರಕ್ತದ ಕಲೆಯಿರುವ ಪ್ರತಿಯೊಂದು ಸಮವಸ್ತ್ರವನ್ನೂ ನಾಶಮಾಡಲಾಗುವದು. ಅವುಗಳೆಲ್ಲವನ್ನು ಬೆಂಕಿಯಲ್ಲಿ ಹಾಕಲಾಗುವದು.


ಆದ್ದರಿಂದ ಯೇಸುವಿನ ಬಗ್ಗೆ ನಮಗೆ ತಿಳಿಸಲು ಮೂರು ಸಾಕ್ಷಿಗಳಿವೆ:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು