ಪ್ರಕಟನೆ 19:15 - ಪರಿಶುದ್ದ ಬೈಬಲ್15 ಕುದುರೆಯ ಮೇಲೆ ಕುಳಿತಿದ್ದಾತನ ಬಾಯಿಂದ ಹರಿತವಾದ ಕತ್ತಿಯೊಂದು ಹೊರಗೆ ಬರುತ್ತಿತ್ತು. ಆತನು ಜನಾಂಗಗಳನ್ನು ಸೋಲಿಸಲು ಈ ಕತ್ತಿಯನ್ನು ಬಳಸುತ್ತಾನೆ. ಆತನು ಕಬ್ಬಿಣದ ಕೋಲಿನಿಂದ ಜನಾಂಗಗಳನ್ನು ಆಳುತ್ತಾನೆ. ಆತನು ಸರ್ವಶಕ್ತನಾದ ದೇವರ ಉಗ್ರಕೋಪವೆಂಬ ದ್ರಾಕ್ಷಿಯ ಆಲೆಯಲ್ಲಿ ದ್ರಾಕ್ಷಿಯನ್ನು ಕಿವುಚಿ ಹಾಕುತ್ತಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಜನಾಂಗಗಳನ್ನು ಕತ್ತರಿಸಿಹಾಕುವುದಕ್ಕಾಗಿ ಹದವಾದ ಕತ್ತಿಯು ಆತನ ಬಾಯಿಂದ ಹೊರಟು ಬರುತ್ತದೆ. ಆತನು ಅವರನ್ನು ಕಬ್ಬಿಣದ ದಂಡದಿಂದ ಆಳುವನು. ಅವನು ಸರ್ವಶಕ್ತನಾದ ದೇವರ ಉಗ್ರಕೋಪವೆಂಬ ದ್ರಾಕ್ಷಿಯ ಆಲೆಯಲ್ಲಿ ಇರುವವರನ್ನು ತುಳಿದುಹಾಕುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ರಾಷ್ಟ್ರಗಳನ್ನು ಹೊಡೆದುರುಳಿಸುವಂಥ ಹರಿತವಾದ ಖಡ್ಗವೊಂದು ಆತನ ಬಾಯಿಂದ ಹೊರಟಿತು. ಆತನು ಕಬ್ಬಿಣದ ದಂಡದಿಂದ ಅವುಗಳ ಆಳ್ವಿಕೆ ನಡೆಸುವನು. ಸರ್ವಶಕ್ತ ದೇವರ ರೋಷವೆಂಬ ದ್ರಾಕ್ಷಿಯ ಆಲೆಯಲ್ಲಿ ಇರುವವರನ್ನು ತುಳಿದುಹಾಕುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಜನಾಂಗಗಳನ್ನು ಹೊಡೆಯುವದಕ್ಕಾಗಿ ಹದವಾದ ಕತ್ತಿಯು ಆತನ ಬಾಯಿಂದ ಬರುತ್ತದೆ. ಆತನು ಅವರನ್ನು ಕಬ್ಬಿಣದ ಕೋಲಿನಿಂದ ಆಳುವನು. ಆತನು ಸರ್ವಶಕ್ತನಾದ ದೇವರ ಉಗ್ರಕೋಪವೆಂಬ ದ್ರಾಕ್ಷೆಯ ತೊಟ್ಟಿಯಲ್ಲಿರುವದನ್ನು ತುಳಿಯುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ರಾಷ್ಟ್ರಗಳನ್ನು ಹೊಡೆಯಲು ಹದವಾದ ಕತ್ತಿಯು ಆತನ ಬಾಯಿಂದ ಹೊರಡುತ್ತದೆ. “ಆತನು ಕಬ್ಬಿಣದ ದಂಡದಿಂದ ಅವರನ್ನು ಪಾಲಿಸುವನು.” ಆತನು ಸರ್ವಶಕ್ತ ಆಗಿರುವ ದೇವರ ಉಗ್ರಕೋಪವೆಂಬ ದ್ರಾಕ್ಷಿಯ ತೊಟ್ಟಿಯಲ್ಲಿರುವುದನ್ನು ತುಳಿಯುತ್ತಾನೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್15 ತ್ಯೆಚ್ಯಾ ತೊಂಡಾತ್ನಾ ಎಕ್ ಧಾರ್‍ಲೊ ಮೊಟೊ ಚಾಕು ಭಾಯ್ರ್ ಯೆಲೊ, ತ್ಯಾ ಚಾಕ್ವಾನಿ ತೊ ದೆಶಾಕ್ನಿ ಹಾರ್‍ವುನ್ ಟಾಕ್ತಾ. ತೊ ತೆಂಚ್ಯಾ ವರ್ತಿ ಲೊಂಗ್ಟಾಚ್ಯಾ ದಾಂಡ್ಯಾನಿ ರಾಜ್ ಚಾಲ್ವುತಾ, ಅನಿ ತೊ ಸಗ್ಳ್ಯಾನಿಕಿ ಮೊಟ್ಯಾ ದೆವಾಚ್ಯಾ ರಾಗಾಚ್ಯಾ ದ್ರಾಕ್ಷಿ ಮಳ್ತಲ್ಯಾ ಘಾನ್ಯಾಚ್ಯಾ ಖಡ್ಡ್ಯಾತ್ ಘಾಲುನ್ ತೊ ಚಿರ್ಡುನ್ ಸೊಡ್ತಾ. ಅಧ್ಯಾಯವನ್ನು ನೋಡಿ |
ಆತನು ಬಡಜನರಿಗೆ ಅನ್ಯಾಯಮಾಡದೆ ನ್ಯಾಯವಾದ ತೀರ್ಪನ್ನು ಕೊಡುವನು, ದೇಶದ ಬಡಜನರಿಗೋಸ್ಕರವಾಗಿ ಮಾಡುವ ಆಲೋಚನೆಯನ್ನು ಪಕ್ಷಪಾತವಿಲ್ಲದೆ ಮಾಡುವನು. ಆತನು ಜನರಿಗೆ ಶಿಕ್ಷೆ ಕೊಡಬೇಕೆಂದು ತೀರ್ಮಾನಿಸಿದರೆ ಅದನ್ನು ಆಜ್ಞಾಪಿಸಿ ಶಿಕ್ಷಿಸುವನು. ದುಷ್ಟರಿಗೆ ಮರಣದಂಡನೆಯಾಗಬೇಕೆಂದು ಆತನು ತೀರ್ಮಾನಿಸಿದರೆ, ಆತನು ಆಜ್ಞಾಪಿಸಿ ಕೊಲ್ಲಿಸುವನು. ನ್ಯಾಯವೇ ಆತನಿಗೆ ನಡುಕಟ್ಟು, ಒಳ್ಳೆಯತನವೇ ಆತನಿಗೆ ಸೊಂಟಪಟ್ಟಿಯಾಗಿವೆ.