ಪ್ರಕಟನೆ 19:19 - ಪರಿಶುದ್ದ ಬೈಬಲ್19 ನಂತರ ನಾನು ಲೋಕದ ರಾಜರನ್ನು ಮತ್ತು ಮೃಗವನ್ನು ನೋಡಿದೆನು. ಅವರು ಕುದುರೆಯ ಮೇಲೆ ಕುಳಿತಿದ್ದವನ ಮೇಲೆ ಮತ್ತು ಅವನ ಸೈನ್ಯದ ಮೇಲೆ ಯುದ್ಧ ಮಾಡುವುದಕ್ಕಾಗಿ ತಮ್ಮ ಸೈನ್ಯವನ್ನೆಲ್ಲ ಒಟ್ಟುಗೂಡಿಸಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ತರುವಾಯ ಆ ಮೃಗವೂ, ಭೂರಾಜರೂ, ಅವರ ಸೈನ್ಯಗಳವರೂ ಆ ಕುದುರೆಯ ಮೇಲೆ ಕುಳಿತಿದ್ದವನ ಮೇಲೆಯೂ ಆತನ ಸೈನ್ಯದ ಮೇಲೆಯೂ ಯುದ್ಧಮಾಡುವುದಕ್ಕಾಗಿ ಕೂಡಿಬಂದಿರುವುದನ್ನು ಕಂಡೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಅನಂತರ ಆ ಮೃಗವನ್ನು ಕಂಡೆ. ಕುದುರೆಯ ಮೇಲೆ ಕುಳಿತಿದ್ದಾತನ ಮೇಲೂ ಅವನ ಸೈನ್ಯದ ಮೇಲೂ ಯುದ್ಧಮಾಡುವುದಕ್ಕಾಗಿ, ಆ ಮೃಗವೂ ಭೂಲೋಕದ ರಾಜರೂ ಅವರ ಸೈನ್ಯಗಳೊಡನೆ ಒಟ್ಟಾಗಿ ಸೇರಿಬಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ತರುವಾಯ ಆ ಮೊದಲನೆಯ ಮೃಗವೂ ಭೂರಾಜರೂ ಅವರ ಸೈನ್ಯಗಳವರೂ ಆ ಕುದುರೆಯ ಮೇಲೆ ಕೂತಿದ್ದವನ ಮೇಲೆಯೂ ಆತನ ಸೈನ್ಯದ ಮೇಲೆಯೂ ಯುದ್ಧಮಾಡುವದಕ್ಕಾಗಿ ಕೂಡಿ ಬಂದಿರುವದನ್ನು ಕಂಡೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ತರುವಾಯ ಆ ಮೊದಲನೆಯ ಮೃಗವೂ ಭೂರಾಜರೂ ಅವರ ಸೈನ್ಯಗಳವರೂ ಆ ಕುದುರೆಯ ಮೇಲೆ ಕುಳಿತಿದ್ದವರ ಮೇಲೆಯೂ ಅವರ ಸೈನ್ಯದ ಮೇಲೆಯೂ ಯುದ್ಧಮಾಡುವುದಕ್ಕಾಗಿ ಕೂಡಿ ಬಂದಿರುವುದನ್ನು ನಾನು ಕಂಡೆನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್19 ತನ್ನಾ ತೆ ಭಯಾನಕ್ ಜನಾವರ್ ಅನಿ ಜಗಾತ್ಲೆ ಸಗ್ಳೆ ರಾಜಾ ಅಪ್ನಾಚೆ ಸೈನಿಕಾಂಚೆ ತಾಂಡೆ ಘೆವ್ನ್ ಘೊಡ್ಕ್ಯಾಚ್ಯಾ ವೈನಾ ಸವಾರಿ ಕರ್ತಲ್ಯಾಚ್ಯಾ, ಅನಿ ತ್ಯೆಚ್ಯಾ ಸೈನಿಕಾಂಚ್ಯಾ ತಾಂಡ್ಯಾಚ್ಯಾ ವಾಂಗ್ಡಾ ಮಾರಾಮಾರಿ ಕರುಕ್ ಗೊಳಾ ಹೊಲ್ಲೆ ಮಿಯಾ ಬಗಟ್ಲೊ. ಅಧ್ಯಾಯವನ್ನು ನೋಡಿ |
“ಅರಸನು ಚತುರನೂ ಕುತಂತ್ರಿಯೂ ಆಗಿರುವನು. ಅವನು ತನ್ನ ಬುದ್ಧಿಶಕ್ತಿಯನ್ನೂ ಹುಸಿನುಡಿಗಳನ್ನೂ ಬಳಸಿಕೊಂಡು ಅಭಿವೃದ್ಧಿ ಹೊಂದುವನು. ತಾನು ಬಹಳ ಮುಖ್ಯನೆಂದು ಅವನು ಭಾವಿಸುವನು. ನೆಮ್ಮದಿಯಾಗಿರುವ ಅನೇಕ ಜನರನ್ನು ಅನಿರೀಕ್ಷಿತವಾಗಿ ನಾಶಮಾಡುವನು. ಅವನು ರಾಜರುಗಳ ರಾಜನೊಂದಿಗೆ (ದೇವರೊಂದಿಗೆ) ಸಹ ಹೋರಾಡುವ ಪ್ರಯತ್ನ ಮಾಡುವನು. ಆದರೆ ಆ ಕ್ರೂರ ರಾಜನ ಶಕ್ತಿಯು ನಾಶವಾಗುವುದು. ಆದರೆ ಅದು ಮನುಷ್ಯನ ಕೈಯಿಂದ ನಾಶವಾಗುವದಿಲ್ಲ.