8 ನಯವಾದ ನಾರುಮಡಿಯನ್ನು ವಧುವಿಗೆ ಧರಿಸಲು ನೀಡಲಾಗಿತ್ತು. ಆ ನಾರುಮಡಿಯು ಪ್ರಕಾಶಮಾನವಾಗಿತ್ತು ಹಾಗೂ ಶುಭ್ರವಾಗಿತ್ತು.” (ನಯವಾದ ನಾರುಮಡಿಯೆಂದರೆ ದೇವರ ಪರಿಶುದ್ಧ ಜನರು ಮಾಡಿದ ಒಳ್ಳೆಯ ಕಾರ್ಯಗಳು ಎಂದರ್ಥ.)
ಯೆಹೋವನು ನನ್ನನ್ನು ಸಂತೋಷಭರಿತನನ್ನಾಗಿ ಮಾಡುತ್ತಾನೆ. ನನ್ನ ಸಂಪೂರ್ಣ ವ್ಯಕ್ತಿತ್ವವು ನನ್ನ ದೇವರಲ್ಲಿ ಸಂತೋಷಿಸುತ್ತದೆ. ಯೆಹೋವನು ರಕ್ಷಣೆಯೆಂಬ ವಸ್ತ್ರವನ್ನು ನನಗೆ ತೊಡಿಸಿದ್ದಾನೆ. ಮದುವೆಯಲ್ಲಿ ಮದುಮಗನು ಧರಿಸಿಕೊಳ್ಳುವ ಬಟ್ಟೆಯಂತೆ ಅದು ನಯವಾಗಿದೆ. ಯೆಹೋವನು ನನಗೆ ನೀತಿಯೆಂಬ ನಿಲುವಂಗಿಯನ್ನು ತೊಡಿಸಿರುತ್ತಾನೆ. ಅದು ಮದುಮಗಳು ಮದುವೆಯಲ್ಲಿ ಧರಿಸಿಕೊಳ್ಳುವ ಬಟ್ಟೆಯಂತಿದೆ.
ಬೆಂಕಿಯಲ್ಲಿ ಪುಟಹಾಕಿದ ಅಪ್ಪಟ ಚಿನ್ನವನ್ನು ನೀನು ನನ್ನಿಂದ ಕೊಂಡುಕೊಳ್ಳಬೇಕೆಂದು ನಾನು ಸಲಹೆ ನೀಡುತ್ತೇನೆ. ಆಗ ನೀನು ನಿಜವಾಗಿಯೂ ಶ್ರೀಮಂತನಾಗಲು ಸಾಧ್ಯ. ನಾನು ನಿನಗೆ ಹೇಳುವುದೇನೆಂದರೆ: ಬಿಳಿವಸ್ತ್ರಗಳನ್ನು ಕೊಂಡುಕೊ. ಆಗ ನೀನು ನಾಚಿಕೆಕರವಾದ ನಿನ್ನ ಬೆತ್ತಲೆಯನ್ನು ಮುಚ್ಚಿಕೊಳ್ಳಲು ಸಾಧ್ಯವಾಗುವುದು. ನೀನು ನಿನ್ನ ಕಣ್ಣುಗಳಿಗೆ ಹಚ್ಚಲು ಔಷಧಿಯನ್ನು ಕೊಂಡುಕೊಳ್ಳಬೇಕೆಂತಲೂ ನಾನು ನಿನಗೆ ಹೇಳುತ್ತೇನೆ. ಆಗ ನಿನಗೆ ನಿಜವಾಗಿಯೂ ದೃಷ್ಟಿ ಬರುವುದು.
ಪ್ರಭುವಾದ ಯೇಸು ಕ್ರಿಸ್ತನನ್ನೇ ಧರಿಸಿಕೊಳ್ಳಿರಿ. ನಿಮ್ಮ ಪಾಪಸ್ವಭಾವವನ್ನು ಹೇಗೆ ತೃಪ್ತಿಗೊಳಿಸಬೇಕೆಂದಾಗಲಿ ಕೆಟ್ಟಕಾರ್ಯಗಳನ್ನು ಮಾಡಬೇಕೆಂಬ ಬಯಕೆಯನ್ನು ಹೇಗೆ ಪೂರೈಸಿಕೊಳ್ಳಬೇಕೆಂದಾಗಲಿ ಆಲೋಚಿಸಬೇಡಿ.
ಪ್ರಭುವೇ, ಜನರೆಲ್ಲರೂ ನಿನಗೆ ಭಯಗೊಳ್ಳುತ್ತಾರೆ; ಜನರೆಲ್ಲರೂ ನಿನ್ನ ಹೆಸರನ್ನು ಸ್ತುತಿಸುತ್ತಾರೆ. ನೀನು ಮಾತ್ರ ಪರಿಶುದ್ಧನಾದವನು. ನೀನು ಯೋಗ್ಯವಾದ ಕಾರ್ಯಗಳನ್ನು ಮಾಡುತ್ತೀ ಎಂಬುದು ಸ್ಪಷ್ಟವಾಗಿರುವುದರಿಂದ ಜನರೆಲ್ಲರೂ ನಿನ್ನ ಸನ್ನಿಧಿಗೆ ಬಂದು ನಿನ್ನನ್ನು ಆರಾಧಿಸುತ್ತಾರೆ.”
ನಿನಗೆ ಅಂದವಾದ ಉಡುಪನ್ನು ಕೊಟ್ಟು ಕಾಲಿಗೆ ನಯವಾದ ಚರ್ಮದ ಕೆರಗಳನ್ನು ಕೊಟ್ಟೆನು. ನಿನ್ನ ತಲೆಗೆ ನಾರುಮಡಿಯ ತಲೆಕಟ್ಟನ್ನು ಕೊಟ್ಟೆನು ಮತ್ತು ನಿನಗೆ ರೇಷ್ಮೆಯ ಬಟ್ಟೆಯನ್ನು ಹೊದಿಸಿದೆನು.
ಯೇಸು ಹೋಗುತ್ತಿರಲು ಅಪೊಸ್ತಲರು ಆಕಾಶವನ್ನೇ ನೋಡುತ್ತಾ ನಿಂತಿದ್ದರು. ಆಗ, ಬಿಳುಪಾದ ಬಟ್ಟೆಗಳನ್ನು ಧರಿಸಿಕೊಂಡಿದ್ದ ಇಬ್ಬರು ಪುರುಷರು (ದೇವದೂತರು) ಇದ್ದಕ್ಕಿದ್ದಂತೆ ಅವರ ಪಕ್ಕದಲ್ಲಿ ನಿಂತುಕೊಂಡು,
ಒಳಗಿನ ಪ್ರಾಕಾರದ ಪ್ರವೇಶ ದ್ವಾರವನ್ನು ಹೊಕ್ಕುವಾಗ ಅವರು ನಾರುಮಡಿ ಬಟ್ಟೆಯನ್ನು ಧರಿಸುವರು. ಅವರು ಒಳಗಿನ ಪ್ರಾಕಾರದ ಪ್ರವೇಶ ದ್ವಾರದಲ್ಲಾಗಲಿ ಆಲಯದೊಳಗಾಗಲಿ ಸೇವೆಮಾಡುವಾಗ ಉಣ್ಣೆಯಿಂದ ಮಾಡಿದ ಬಟ್ಟೆಯನ್ನು ಧರಿಸಿಕೊಳ್ಳುವದಿಲ್ಲ.
ಏಳು ಉಪದ್ರವಗಳನ್ನು ತರುವ ಏಳು ಮಂದಿ ದೇವದೂತರು ಆಲಯದಿಂದ ಹೊರಗೆ ಬಂದರು. ಅವರು ಶುಭ್ರವಾದ ಮತ್ತು ಪ್ರಕಾಶಮಾನವಾದ ನಾರುಮಡಿಯನ್ನು ಧರಿಸಿದ್ದರು. ಅವರು ಎದೆಯ ಸುತ್ತಲೂ ಚಿನ್ನದ ಪಟ್ಟಿಗಳನ್ನು ಕಟ್ಟಿಕೊಂಡಿದ್ದರು.