ಪ್ರಕಟನೆ 19:9 - ಪರಿಶುದ್ದ ಬೈಬಲ್9 ಆಗ ದೇವದೂತನು ನನಗೆ ಹೀಗೆ ಹೇಳಿದನು: “ಈ ರೀತಿ ಬರೆ: ಯಜ್ಞದ ಕುರಿಮರಿಯಾದಾತನ ವಿವಾಹದ ಔತಣಕ್ಕೆ ಆಹ್ವಾನಿಸಲ್ಪಟ್ಟ ಜನರು ಧನ್ಯರು!” ನಂತರ ದೇವದೂತನು, “ಇವು ದೇವರ ಸತ್ಯವಾದ ನುಡಿಗಳು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಇದಲ್ಲದೆ ಅವನು ನನ್ನ ಸಂಗಡ ಮಾತನಾಡುತ್ತಾ, “ಯಜ್ಞದ ಕುರಿಮರಿಯಾದಾತನ ವಿವಾಹದ ಔತಣಕ್ಕೆ ಆಹ್ವಾನಿಸಲ್ಪಟ್ಟವರು ಧನ್ಯರು ಎಂಬುದಾಗಿ ಬರೆ” ಎಂದು ನನಗೆ ಹೇಳಿ, “ಈ ಮಾತುಗಳು ದೇವರ ಸತ್ಯವಚನಗಳಾಗಿವೆ” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಅನಂತರ ದೇವದೂತನು, “ ‘ಯಜ್ಞದ ಕುರಿಮರಿಯ ವಿವಾಹದ ಔತಣಕ್ಕೆ ಆಹ್ವಾನಿತರು ಭಾಗ್ಯವಂತರು’ ಎಂದು ಬರೆ,” ಎಂದು ನನಗೆ ಆಜ್ಞಾಪಿಸಿದನು. “ಇವು ದೇವರ ಸತ್ಯವಾದ ವಾಕ್ಯಗಳು,” ಎಂದು ಸಹ ತಿಳಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಇದಲ್ಲದೆ ಅವನು ನನ್ನ ಸಂಗಡ ಮಾತಾಡುತ್ತಾ - ಯಜ್ಞದ ಕುರಿಯಾದಾತನ ವಿವಾಹದ ಔತಣಕ್ಕೆ ಕರಸಿಕೊಂಡವರು ಧನ್ಯರು ಎಂಬದಾಗಿ ಬರೆ ಎಂದು ನನಗೆ ಹೇಳಿ - ಈ ಮಾತುಗಳು ದೇವರ ಸತ್ಯವಚನಗಳಾಗಿವೆ, ಅಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಇದಲ್ಲದೆ ಅವನು ನನಗೆ, “ಕುರಿಮರಿ ಆಗಿರುವವರ ವಿವಾಹದ ಔತಣಕ್ಕೆ ಕರೆಯಲಾದವರು ಧನ್ಯರು ಮತ್ತು ಅವರು ಹೀಗೆ ಹೇಳಿದರು, ದೇವರ ಈ ಮಾತುಗಳು ಸತ್ಯವಾಗಿವೆ!” ಎಂದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್9 ತನ್ನಾ ದೆವಾಚ್ಯಾ ದುತಾನ್ ಮಾಕಾ, “ಹೆ ಲಿವ್; ಜೆ ಕೊನಾಕ್ ಬೊಕ್ಡಾಚ್ಯಾ ಲಗ್ನಾಚ್ಯಾ ಸನಾಕ್ ಬಲ್ವನ್ ಗಾವ್ಲಾ, ತೆನಿ ಕವ್ಡೆ ಸುಖಿ. ದೆವಾಚ್ಯಾ ದುತಾನ್ ಹೆಬಿ ಮಿಳ್ವುಲ್ಯಾನ್ ಅನಿ, ಹ್ಯಾ ದೆವಾಚ್ಯಾ ಗೊಸ್ಟಿಯಾ ಖರ್‍ಯಾ”, ಮಟ್ಲ್ಯಾನ್. ಅಧ್ಯಾಯವನ್ನು ನೋಡಿ |