Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 2:14 - ಪರಿಶುದ್ದ ಬೈಬಲ್‌

14 “ಆದರೆ ನಿನ್ನ ವಿರುದ್ಧವಾಗಿ ಹೇಳಬೇಕಾದ ಕೆಲವು ಸಂಗತಿಗಳಿವೆ. ನಿನ್ನ ಸಭೆಯಲ್ಲಿ ಬಿಳಾಮನ ದುರ್ಬೋಧನೆಗಳನ್ನು ಅನುಸರಿಸುವ ಜನರಿದ್ದಾರೆ. ಇಸ್ರೇಲಿನ ಜನರನ್ನು ಹೇಗೆ ಪಾಪಕ್ಕೆ ಒಳಗಾಗುವಂತೆ ಮಾಡಬೇಕೆಂಬುದನ್ನು ಬಿಳಾಮನು ಬಾಲಾಕನಿಗೆ ದುರ್ಬೋಧನೆ ಮಾಡಿದನು. ಆದ್ದರಿಂದ ಇಸ್ರೇಲರು ವಿಗ್ರಹಗಳಿಗೆ ಅರ್ಪಿತವಾದ ಆಹಾರವನ್ನು ತಿನ್ನುವುದರ ಮೂಲಕವಾಗಿಯೂ ಲೈಂಗಿಕ ಪಾಪಗಳನ್ನು ಮಾಡುವುದರ ಮೂಲಕವಾಗಿಯೂ ಪಾಪ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಕೆಲವು ವಿಷಯಗಳಲ್ಲಿ ನಿನ್ನ ವಿರುದ್ಧ ನನಗೆ ಅಪಾದನೆಗಳಿವೆ. ವಿಗ್ರಹಕ್ಕೆ ನೈವೇದ್ಯಮಾಡಿದ ಪದಾರ್ಥಗಳನ್ನು ತಿನ್ನುವುದರಲ್ಲಿಯೂ ಜಾರತ್ವದಲ್ಲಿಯೂ ಇಸ್ರಾಯೇಲ್ಯರು ಮುಗ್ಗರಿಸಿ ಬೀಳಬೇಕೆಂದು ಬಿಳಾಮನು ಬಾಲಾಕನಿಗೆ ಕಲಿಸಿದ ದುರ್ಬೋಧನೆಯನ್ನು ಅವಲಂಬಿಸಿರುವವರು ನಿನ್ನಲ್ಲಿ ಇದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಇಷ್ಟಾದರೂ ನಿನ್ನ ವಿರುದ್ಧ ಹೇಳಬೇಕಾದ ಕೆಲವು ಆಪಾದನೆಗಳಿವೆ. ಬಿಳಾಮನ ದುರ್ಬೋಧನೆಯನ್ನು ಅವಲಂಬಿಸುವವರು ಕೆಲವರು ನಿನ್ನಲ್ಲಿ ಇದ್ದಾರೆ. ಈ ಬಿಳಾಮನೇ ಇಸ್ರಯೇಲ್ ಜನರು ಪಾಪದಲ್ಲಿ ಬೀಳುವಂತೆಮಾಡಲು ಬಾಲಾಕನನ್ನು ಪ್ರಚೋದಿಸಿದವನು. ಈ ಕಾರಣ, ಅವರು ವಿಗ್ರಹಕ್ಕೆ ನೈವೇದ್ಯಮಾಡಿದ ಪದಾರ್ಥಗಳನ್ನು ತಿಂದರು; ಲೈಂಗಿಕ ಅನೈತಿಕತೆಗೆ ತುತ್ತಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಆದರೂ ಕೆಲವು ವಿಷಯಗಳಲ್ಲಿ ನಿನ್ನ ಮೇಲೆ ತಪ್ಪುಹೊರಿಸಬೇಕಾಗುತ್ತದೆ; ವಿಗ್ರಹಕ್ಕೆ ನೈವೇದ್ಯಮಾಡಿದ ಪದಾರ್ಥಗಳನ್ನು ತಿನ್ನುವದರಲ್ಲಿಯೂ ಜಾರತ್ವ ಮಾಡುವದರಲ್ಲಿಯೂ ಇಸ್ರಾಯೇಲ್ಯರು ಮುಗ್ಗರಿಸಿ ಬೀಳಬೇಕೆಂದು ಬಿಳಾಮನು ಬಾಲಾಕನಿಗೆ ಹೇಳಿದ ದುರ್ಬೋಧನೆಯನ್ನು ಅವಲಂಬಿಸಿರುವವರು ನಿನ್ನಲ್ಲಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಆದರೂ ನಿನಗೆ ವಿರೋಧವಾಗಿ ಕೆಲವು ವಿಷಯಗಳು ನನಗಿವೆ. ವಿಗ್ರಹಗಳಿಗೆ ನೈವೇದ್ಯ ಮಾಡಿದ ಪದಾರ್ಥಗಳನ್ನು ತಿನ್ನುವುದರಲ್ಲಿಯೂ ವ್ಯಭಿಚಾರ ಮಾಡುವುದರಲ್ಲಿಯೂ ಇಸ್ರಾಯೇಲರು ಮುಗ್ಗರಿಸಿ ಬೀಳುವಂತೆ ಬಿಳಾಮನು ಬಾಲಾಕನಿಗೆ ಕಲಿಸಿದ ಬೋಧನೆಯನ್ನು ಹಿಡಿದುಕೊಂಡಿರುವವರು ನಿನ್ನಲ್ಲಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ಖರೆ ಉಲ್ಲೆ ವಿಶಯ್ ತುಮ್ಚ್ಯಾ ಬದಲ್ ಚುಕ್ ಹಾತ್ ತ್ಯಾ ಮಿಯಾ ತುಮ್ಕಾ ಸಾಂಗುಕ್ ಪಾಜೆ. ತುಮ್ಚ್ಯಾತ್ಲಿ ಉಲ್ಲಿ ಲೊಕಾ ಬಿಳಾಮಾಚೆ ಶಿಕಾಪ್ ಪಾಳುಲ್ಯಾತ್, ಬಾಲಾಮಾನ್ ಬಾಲಾಕಾಕ್ ಇಸ್ರಾಯೆಲಾಚ್ಯಾ ಲೊಕಾಕ್ನಿ ಮುರ್ತಿಯಾಕ್ನಿ ಭೆಟ್ವಲ್ಲೆ ಖಾಯ್‍ಸರ್ಕೆ ಕರ್ಲ್ಯಾನ್. ಅನಿ ಆಂಗಾಚೊ ಸಮಂದ್ ಕರ್ತಲ್ಯಾ ಬುರ್ಶ್ಯಾ ಚಾಲಿತ್ ಪಾಡ್ವುನ್ ಪಾಪಾಚ್ಯಾ ವಾಟೆನಿ ಚಾಲ್ವುನ್ ನ್ಹೆತಲೆ ಶಿಕ್ವುಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 2:14
30 ತಿಳಿವುಗಳ ಹೋಲಿಕೆ  

ಈ ಸುಳ್ಳುಬೋಧಕರು ಸರಿಯಾದ ಮಾರ್ಗವನ್ನು ತೊರೆದು, ಕೆಟ್ಟಮಾರ್ಗವನ್ನು ಅನುಸರಿಸಿದ್ದಾರೆ. ಬಿಳಾಮನು ಬೆಯೋರನ ಮಗ. ಅವನು ಅಧರ್ಮದಿಂದ ದೊರೆಯುವ ಲಾಭವನ್ನು ಪ್ರೀತಿಸಿದನು.


ಬಿಳಾಮನ ಸಲಹೆಯನ್ನು ಅನುಸರಿಸಿ, ಯೆಹೋವನಿಗೆ ವಿರೋಧವಾಗಿ ಇಸ್ರೇಲರು ಪಾಪಮಾಡುವಂತೆ ಮಾಡಿ ಪೆಗೋರದ ಬಾಳನ ಸಂಗತಿಗೆ ಕಾರಣರಾದವರು ಇವರೇ ಅಲ್ಲವೇ? ಅದರ ಫಲವಾಗಿ ಭಯಂಕರವಾದ ಕಾಯಿಲೆಯು ಜನರಿಗೆ ಬಂದಿತು.


ಆದರೆ ನಿನ್ನ ವಿರುದ್ಧವಾಗಿ ಇವುಗಳನ್ನು ಹೇಳಬೇಕಾಗಿದೆ. ಯೆಜೆಬೇಲ್ ಎಂಬ ಸ್ತ್ರೀಯು ತನ್ನ ಇಷ್ಟದಂತೆ ಮಾಡಲು ಅವಕಾಶಕೊಟ್ಟಿರುವೆ. ಆಕೆಯು ತನ್ನನ್ನು ಪ್ರವಾದಿನಿಯೆಂದು ಹೇಳಿಕೊಂಡು ತನ್ನ ಬೋಧನೆಗಳಿಂದ ನನ್ನ ಸೇವಕರನ್ನು ನನ್ನಿಂದ ದೂರ ಸೆಳೆಯುತ್ತಿದ್ದಾಳೆ. ಲೈಂಗಿಕ ಪಾಪಗಳನ್ನು ಮಾಡುವಂತೆಯೂ ವಿಗ್ರಹಗಳಿಗೆ ಅರ್ಪಿತವಾದ ಆಹಾರವನ್ನು ತಿನ್ನುವಂತೆಯೂ ಆಕೆಯು ನನ್ನ ಜನರನ್ನು ಪ್ರೇರೇಪಿಸುತ್ತಿದ್ದಾಳೆ.


ಅವರಿಗೆ ದುರ್ಗತಿಯಾಗುವುದು. ಈ ಜನರು ಕಾಯಿನನ ಮಾರ್ಗವನ್ನು ಅನುಸರಿಸುತ್ತಾರೆ. ಇವರು ದ್ರವ್ಯ ಸಂಪಾದನೆಗಾಗಿ, ಬಿಳಾಮನ ತಪ್ಪುಮಾರ್ಗದಲ್ಲಿ ನಡೆಯಲು ತಮ್ಮನ್ನೇ ಒಪ್ಪಿಸಿಕೊಟ್ಟಿದ್ದಾರೆ. ಕೋರಹನು ಮಾಡಿದಂತೆ ಈ ಜನರೂ ದೇವರ ವಿರುದ್ಧವಾಗಿ ಹೋರಾಡುತ್ತಿದ್ದಾರೆ. ಅವರು ಕೋರಹನಂತೆ ನಾಶವಾಗುತ್ತಾರೆ.


ವಿಗ್ರಹಗಳಿಗೆ ಅರ್ಪಿಸಿರುವ ಆಹಾರವನ್ನು ತಿನ್ನಬೇಡಿ. ರಕ್ತವನ್ನು ತಿನ್ನಬೇಡಿ. ಕುತ್ತಿಗೆ ಹಿಸುಕಿ ಕೊಂದ ಪ್ರಾಣಿಗಳ ಮಾಂಸವನ್ನು ತಿನ್ನಬೇಡಿ. ಯಾವುದೇ ಬಗೆಯ ಲೈಂಗಿಕ ಪಾಪವನ್ನು ಮಾಡಬೇಡಿ. ನೀವು ಇವುಗಳಿಂದ ದೂರವಿದ್ದರೆ ನಿಮಗೆ ಒಳ್ಳೆಯದಾಗುವುದು. ನಿಮಗೆ ಶುಭವಾಗಲಿ!


ಮದುವೆಯನ್ನು ಜನರೆಲ್ಲರೂ ಗೌರವಿಸಬೇಕು. ಗಂಡ ಹೆಂಡತಿಯರ ಸಂಬಂಧ ಪರಿಶುದ್ಧವಾಗಿರಬೇಕು. ಲೈಂಗಿಕ ಪಾಪಗಳನ್ನು ಮಾಡುವವರು ಮತ್ತು ವ್ಯಭಿಚಾರವನ್ನು ಮಾಡುವವರು ದೇವರ ತೀರ್ಪಿಗೆ ಒಳಗಾಗಿದ್ದಾರೆ.


“‘ಅನಂತರ ಮೋವಾಬ್ಯರ ಅರಸನೂ ಚಿಪ್ಪೋರನ ಮಗನೂ ಆದ ಬಾಲಾಕನು ಇಸ್ರೇಲರೊಂದಿಗೆ ಯುದ್ಧಮಾಡಲು ಸಿದ್ಧತೆಮಾಡಿದನು. ಅವನು ಬೆಯೋರನ ಮಗನಾದ ಬಿಳಾಮನನ್ನು ಕರೆಯಿಸಿ ನಿಮ್ಮನ್ನು ಶಪಿಸಲು ಹೇಳಿದನು.


ನಂಬದಿರುವ ಜನರಿಗೆ ಆತನು: “ಜನರನ್ನು ಮುಗ್ಗರಿಸುವ ಕಲ್ಲೂ ಜನರನ್ನು ಬೀಳಿಸುವ ಕಲ್ಲೂ ಆಗಿದ್ದಾನೆ.” ದೇವರ ಮಾತಿಗೆ ಅವಿಧೇಯರಾಗುವುದರಿಂದಲೇ ಜನರು ಮುಗ್ಗರಿಸಿ ಬೀಳುವರು. ಆ ಜನರಿಗೆ ಹೀಗಾಗಬೇಕೆಂಬುದು ದೇವರ ಯೋಜನೆಯಾಗಿತ್ತು.


“ಯೆಹೂದ್ಯರಲ್ಲದ ವಿಶ್ವಾಸಿಗಳಿಗೆ ನಾವು ಒಂದು ಪತ್ರವನ್ನು ಈಗಾಗಲೇ ಕಳುಹಿಸಿದ್ದೇವೆ. ವಿಗ್ರಹಗಳಿಗೆ ಅರ್ಪಿಸಿದ ಆಹಾರಪದಾರ್ಥಗಳನ್ನು ತಿನ್ನಬೇಡಿ. ರಕ್ತವನ್ನು ತಿನ್ನಬೇಡಿ. ಕುತ್ತಿಗೆ ಹಿಸುಕಿ ಕೊಂದ ಪ್ರಾಣಿಗಳ ಮಾಂಸವನ್ನು ತಿನ್ನಬೇಡಿ. ಯಾವ ಬಗೆಯ ಲೈಂಗಿಕ ಪಾಪವನ್ನು ಮಾಡಬೇಡಿ’ ಎಂದು ಆ ಪತ್ರದಲ್ಲಿ ಬರೆಯಲಾಗಿದೆ” ಎಂದರು.


ಅವರು ಕೊಂದವರಲ್ಲಿ ಎವೀ, ರೆಕೆಮ್, ಜೂರ್, ಹೂರ್ ಮತ್ತು ರೆಬಾ ಎಂಬ ಮಿದ್ಯಾನ್ಯರ ಐದು ಮಂದಿ ರಾಜರು ಸೇರಿದ್ದರು. ಅವರು ಕತ್ತಿಯಿಂದ ಬೆಯೋರನ ಮಗನಾದ ಬಿಳಾಮನನ್ನೂ ಕೊಂದರು.


ನಗರದ ಹೊರಭಾಗದಲ್ಲಿ ನಾಯಿಗಳಿವೆ (ಕೆಟ್ಟಜನರು), ಕೆಟ್ಟ ಮಾಟವನ್ನು ಮಾಡುವ ಜನರಿದ್ದಾರೆ, ಲೈಂಗಿಕ ಪಾಪಗಳನ್ನು ಮಾಡುವ ಜನರಿದ್ದಾರೆ, ಕೊಲೆಗಾರರಿದ್ದಾರೆ, ವಿಗ್ರಹಗಳನ್ನು ಆರಾಧಿಸುವ ಜನರಿದ್ದಾರೆ ಮತ್ತು ಸುಳ್ಳನ್ನು ಪ್ರೀತಿಸುವ ಮತ್ತು ಹೇಳುವ ಜನರಿದ್ದಾರೆ.


ಆದರೆ ಹೇಡಿಗಳಿಗೆ, ನಂಬಿಕೆಯಿಲ್ಲದವರಿಗೆ, ಅಸಹ್ಯಕೃತ್ಯ ಮಾಡುವವರಿಗೆ, ಕೊಲೆಗಾರರಿಗೆ, ಲೈಂಗಿಕ ಪಾಪಮಾಡುವವರಿಗೆ, ಮಾಟಮಂತ್ರಗಾರರಿಗೆ, ವಿಗ್ರಹಾರಾಧಕರಿಗೆ, ಸುಳ್ಳುಗಾರರಿಗೆ ಸಿಕ್ಕುವ ಸ್ಥಳ ಬೆಂಕಿಗಂಧಕಗಳು ಉರಿಯುವ ಕೆರೆಯೇ. ಇದು ಎರಡನೆಯ ಮರಣವಾಗಿರುತ್ತದೆ.”


ಆದರೆ ಲೈಂಗಿಕ ಪಾಪ ಅಪಾಯಕರವಾದದ್ದು. ಆದ್ದರಿಂದ ಪ್ರತಿಯೊಬ್ಬ ಪುರುಷನಿಗೂ ಸ್ವಂತ ಹೆಂಡತಿ ಇದ್ದರೆ ಮತ್ತು ಪ್ರತಿಯೊಬ್ಬ ಸ್ತ್ರೀಗೂ ಸ್ವಂತ ಗಂಡನು ಇದ್ದರೆ ಒಳ್ಳೆಯದು.


ಜನರನ್ನು ಪಾಪಕ್ಕೆ ನಡೆಸುವ ಸಂಗತಿಗಳ ನಿಮಿತ್ತ ನಾನು ಈ ಲೋಕದ ವಿಷಯದಲ್ಲಿ ದುಃಖಪಡುತ್ತೇನೆ. ಅವು ಯಾವಾಗಲೂ ಇರುತ್ತವೆ. ಆದರೆ ಅವುಗಳಿಗೆ ಕಾರಣವಾಗುವ ವ್ಯಕ್ತಿಗೆ ಬಹಳ ಕೇಡಾಗುವುದು.


“ಒಳ್ಳೆಯವನು ತನ್ನ ಒಳ್ಳೆಯತನವನ್ನು ತೊರೆದು ಕೆಟ್ಟದ್ದನ್ನು ಮಾಡಿದರೆ, ನಾನು ಅವನ ಹಾದಿಗೆ ತಡೆಯನ್ನು ಹಾಕಿ ಅವನು ಬೀಳುವಂತೆ ಮಾಡುವೆನು; ಅವನು ಸಾಯುವನು. ನೀನು ಅವನನ್ನು ಎಚ್ಚರಿಸಲಿಲ್ಲವಾದ್ದರಿಂದ ಅವನು ತನ್ನ ಪಾಪದ ನಿಮಿತ್ತ ಸಾಯುವನು. ಆದರೆ ಅವನ ಮರಣಕ್ಕೆ ನಾನು ನಿನ್ನನ್ನೆ ಹೊಣೆಗಾರನನ್ನಾಗಿ ಮಾಡುತ್ತೇನೆ. ಜನರು ಅವನ ಒಳ್ಳೆಯ ಕಾರ್ಯಗಳನ್ನು ಜ್ಞಾಪಿಸಿಕೊಳ್ಳುವುದಿಲ್ಲ.


ಆಗಲಿ, ನಾನು ನನ್ನ ಸ್ವಜನರ ಬಳಿಗೆ ಹೋಗುತ್ತೇನೆ. ಆದರೆ ಮುಂದೆ ಆ ಜನರು ನಿನ್ನ ಜನರಿಗೆ ಏನು ಮಾಡುವರೋ ಅದನ್ನು ನಿನಗೆ ತಿಳಿಸುತ್ತೇನೆ, ಕೇಳು” ಎಂದು ಹೇಳಿದನು.


ನೀನು ಮಾಂಸ ತಿನ್ನುವುದು ಅಥವಾ ದ್ರಾಕ್ಷಾರಸ ಕುಡಿಯುವುದು, ನಿನ್ನ ಸಹೋದರನನ್ನಾಗಲಿ ಸಹೋದರಿಯನ್ನಾಗಲಿ ಪಾಪಕ್ಕೆ ಬೀಳಿಸುವುದಾಗಿದ್ದರೆ ಮಾಂಸವನ್ನು ತಿನ್ನದೆ, ದ್ರಾಕ್ಷಾರಸವನ್ನು ಕುಡಿಯದೇ ಇರುವುದು ಉತ್ತಮ. ನಿನ್ನ ಸಹೋದರನನ್ನಾಗಲಿ ಸಹೋದರಿಯನ್ನಾಗಲಿ ಪಾಪಕ್ಕೆ ಬೀಳಿಸುವಂಥದ್ದನ್ನು ಮಾಡದಿರುವುದೇ ಉತ್ತಮ.


ಆದ್ದರಿಂದ, ನಾವು ಒಬ್ಬರಿಗೊಬ್ಬರು ತೀರ್ಪುಕೊಡುವುದನ್ನು ಬಿಟ್ಟುಬಿಡಬೇಕು. ನಮ್ಮ ಸಹೋದರನನ್ನಾಗಲಿ ಸಹೋದರಿಯನ್ನಾಗಲಿ ಬಲಹೀನಗೊಳಿಸುವಂಥ ಅಥವಾ ಪಾಪಕ್ಕೆ ಬೀಳಿಸುವಂಥ ಯಾವುದನ್ನೇ ಆಗಲಿ ಮಾಡದಂತೆ ನಾವು ನಿರ್ಧರಿಸಬೇಕು.


ಆದರೆ ಆ ಲೇವಿಯರು, ಜನರು ನನಗೆ ವಿರುದ್ಧವಾಗಿ ಪಾಪ ಮಾಡುವಂತೆ ಸಹಾಯಮಾಡಿದರು. ಜನರು ತಮ್ಮ ವಿಗ್ರಹಗಳನ್ನು ಪೂಜಿಸುವಂತೆ ಅವರಿಗೆ ಸಹಾಯ ಮಾಡಿದರು. ಆದ್ದರಿಂದ ನಾನು ವಾಗ್ದಾನ ಮಾಡುವದೇನೆಂದರೆ, ‘ಅವರು ಮಾಡಿದ ಪಾಪಗಳಿಗಾಗಿ ಅವರು ಶಿಕ್ಷಿಸಲ್ಪಡುವರು.’” ಇದು ನನ್ನ ಒಡೆಯನಾದ ಯೆಹೋವನ ನುಡಿ.


“ನಾನು ಯೆಹೂದದ ಜನರೆದುರಿಗೆ ಸಮಸ್ಯೆಗಳನ್ನು ಒಡ್ಡುವೆನು. ಅವುಗಳು ಜನರು ಎಡವಿಬೀಳುವ ಕಲ್ಲುಗಳಂತಾಗುವವು. ತಂದೆಗಳೂ ಮಕ್ಕಳೂ ಅವುಗಳಿಂದ ಎಡವಿಬೀಳುವರು. ಸ್ನೇಹಿತರು ಮತ್ತು ನೆರೆಹೊರೆಯವರು ಅವುಗಳಿಂದ ನಾಶವಾಗುವರು” ಅಂದನು.


“ಆದರೆ ನಿನ್ನ ವಿರುದ್ಧವಾಗಿ ನಾನು ಹೇಳುವುದೇನೆಂದರೆ: ನಿನ್ನ ಮೊದಲಿನ ಪ್ರೀತಿಯನ್ನು ತೊರೆದುಬಿಟ್ಟಿರುವೆ.


ನಾವಾದರೋ, ಶಿಲುಬೆಗೇರಿಸಲ್ಪಟ್ಟ ಕ್ರಿಸ್ತನ ಕುರಿತಾಗಿ ಬೋಧಿಸುತ್ತೇವೆ. ಇದು ಯೆಹೂದ್ಯರಿಗೆ ದೊಡ್ಡ ಸಮಸ್ಯೆಯಾಗಿದೆ; ಯೆಹೂದ್ಯರಲ್ಲದ ಜನರಿಗೆ ಮೂರ್ಖತನದಂತೆ ತೋರುತ್ತದೆ.


ದಾವೀದನು ಹೀಗೆನ್ನುತ್ತಾನೆ: “ಅವರು ತಮ್ಮ ಔತಣಗಳಲ್ಲಿ ಸಿಕ್ಕಿಕೊಂಡು ಬಂಧಿತರಾಗಲಿ; ಎಡವಿಬಿದ್ದು ದಂಡನೆ ಹೊಂದಲಿ.


ಏಕೆಂದರೆ ಕ್ರಿಯೆಗಳ ಮೂಲಕ ನೀತಿವಂತರಾಗಲು ಅವರು ಪ್ರಯತ್ನಿಸಿದರೇ ಹೊರತು ನಂಬಿಕೆಯನ್ನು ಆಧಾರ ಮಾಡಿಕೊಳ್ಳಲಿಲ್ಲ. ಜನರನ್ನು ಬೀಳಿಸುವ ಕಲ್ಲಿನ ಮೇಲೆ ಅವರು ಬಿದ್ದರು.


ದಾರಿಯನ್ನು ಸರಿಪಡಿಸಿರಿ, ದಾರಿಯನ್ನು ಸರಿಪಡಿಸಿರಿ! ನನ್ನ ಜನರಿಗೆ ದಾರಿಯು ಸರಾಗವಾಗಿರುವಂತೆ ಅಡತಡೆಗಳನ್ನು ತೆಗೆದುಹಾಕಿರಿ ಎಂದು ಒಂದು ಸ್ವರವು ನುಡಿಯುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು