ಪ್ರಕಟನೆ 2:16 - ಪರಿಶುದ್ದ ಬೈಬಲ್16 ಆದ್ದರಿಂದ ನಿನ್ನ ಮನಸ್ಸನ್ನು ಪರಿವರ್ತಿಸಿಕೊ! ಇಲ್ಲವಾದರೆ, ನಾನು ತ್ವರಿತವಾಗಿ ನಿನ್ನಲ್ಲಿಗೆ ಬಂದು, ನನ್ನ ಬಾಯಿಂದ ಹೊರಗೆ ಬರುವ ಖಡ್ಗದಿಂದ ಆ ಜನರ ವಿರುದ್ಧ ಹೋರಾಡುತ್ತೇನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಆದ್ದರಿಂದ ನೀನು ಪಶ್ಚಾತ್ತಾಪಪಟ್ಟು ತಿರುಗಿಕೊಳ್ಳದಿದ್ದರೆ ನಾನು ಬೇಗನೆ ನಿನ್ನ ಬಳಿಗೆ ಬಂದು ನನ್ನ ಬಾಯಿಂದ ಹೊರಬರುವ ಕತ್ತಿಯಿಂದ ಅವರ ಮೇಲೆ ಯುದ್ಧ ಮಾಡುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಆದುದರಿಂದ ಪಶ್ಚಾತ್ತಾಪಪಟ್ಟು ಪಾಪಕ್ಕೆ ವಿಮುಖನಾಗು. ಇಲ್ಲದಿದ್ದರೆ, ಬೇಗನೆ ನಿನ್ನ ಬಳಿಗೆ ಬರುತ್ತೇನೆ. ಬಂದು ನನ್ನ ಬಾಯಲ್ಲಿರುವ ಖಡ್ಗದಿಂದ ಅವರೊಡನೆ ಕಾದಾಡುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಆದದರಿಂದ ದೇವರ ಕಡೆಗೆ ತಿರುಗಿಕೋ, ತಿರುಗಿಕೊಳ್ಳದಿದ್ದರೆ ನಾನು ಬೇಗನೆ ನಿನ್ನ ಬಳಿಗೆ ಬಂದು ನನ್ನ ಬಾಯಕತ್ತಿಯಿಂದ ಅವರ ಮೇಲೆ ಯುದ್ಧಮಾಡುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಆದ್ದರಿಂದ ನೀನು ದೇವರ ಕಡೆಗೆ ತಿರುಗಿಕೋ! ಇಲ್ಲದಿದ್ದರೆ ನಾನು ಶೀಘ್ರವೇ ನಿನ್ನ ಬಳಿಗೆ ಬಂದು ನನ್ನ ಇಬ್ಬಾಯಿ ಕತ್ತಿಯಿಂದ ಅವರ ಮೇಲೆ ಯುದ್ಧಮಾಡುವೆನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್16 ಅತ್ತಾ ತುಮಿ ಪಾಪ್ ಕರ್ತಲೆ ಸೊಡುನ್ ಸೊಡಾ! ತುಮಿ ಅಸೆ ಕರಿನಸ್ಲ್ಯಾರ್ ಮಿಯಾ ಲಗ್ಗುನಾಚ್ ತುಮ್ಚ್ಯಾಕ್ಡೆ ಯೆತಾ ಅನಿ ಮಾಜ್ಯಾತೊಂಡಾತ್ನಾ ಯೆತಲೊ ಕೊಯ್ತೊ ಘೆವ್ನ್ ಮಿಯಾ ತ್ಯಾ ಲೊಕಾಂಚ್ಯಾ ವಾಂಗ್ಡಾ ಮಾರಾಮಾರಿ ಕರ್ತಾ. ಅಧ್ಯಾಯವನ್ನು ನೋಡಿ |
ಆತನು ಬಡಜನರಿಗೆ ಅನ್ಯಾಯಮಾಡದೆ ನ್ಯಾಯವಾದ ತೀರ್ಪನ್ನು ಕೊಡುವನು, ದೇಶದ ಬಡಜನರಿಗೋಸ್ಕರವಾಗಿ ಮಾಡುವ ಆಲೋಚನೆಯನ್ನು ಪಕ್ಷಪಾತವಿಲ್ಲದೆ ಮಾಡುವನು. ಆತನು ಜನರಿಗೆ ಶಿಕ್ಷೆ ಕೊಡಬೇಕೆಂದು ತೀರ್ಮಾನಿಸಿದರೆ ಅದನ್ನು ಆಜ್ಞಾಪಿಸಿ ಶಿಕ್ಷಿಸುವನು. ದುಷ್ಟರಿಗೆ ಮರಣದಂಡನೆಯಾಗಬೇಕೆಂದು ಆತನು ತೀರ್ಮಾನಿಸಿದರೆ, ಆತನು ಆಜ್ಞಾಪಿಸಿ ಕೊಲ್ಲಿಸುವನು. ನ್ಯಾಯವೇ ಆತನಿಗೆ ನಡುಕಟ್ಟು, ಒಳ್ಳೆಯತನವೇ ಆತನಿಗೆ ಸೊಂಟಪಟ್ಟಿಯಾಗಿವೆ.