ಪ್ರಕಟನೆ 2:17 - ಪರಿಶುದ್ದ ಬೈಬಲ್17 “ಪವಿತ್ರಾತ್ಮನು ಸಭೆಗಳಿಗೆ ಹೇಳುತ್ತಿರುವ ಈ ಸಂಗತಿಗಳನ್ನು ಕೇಳುತ್ತಿರುವವನೇ, ಗಮನವಿಟ್ಟು ಆಲಿಸು. “ಜಯಗಳಿಸಿದ ಪ್ರತಿಯೊಬ್ಬ ವ್ಯಕ್ತಿಗೂ ನಾನು ಅಡಗಿಸಿಟ್ಟಿರುವ ಮನ್ನವನ್ನು ಕೊಡುತ್ತೇನೆ. ಅವನಿಗೆ ನಾನು ಬಿಳುಪಾದ ಕಲ್ಲನ್ನು ಕೊಡುತ್ತೇನೆ. ಆ ಕಲ್ಲಿನ ಮೇಲೆ ಹೊಸ ಹೆಸರನ್ನು ಕೆತ್ತಲಾಗಿದೆ. ಈ ಹೊಸ ಹೆಸರು ಯಾರಿಗೂ ತಿಳಿದಿಲ್ಲ. ಈ ಕಲ್ಲನ್ನು ಪಡೆದುಕೊಂಡ ವ್ಯಕ್ತಿಯು ಮಾತ್ರ ಹೊಸ ಹೆಸರನ್ನು ತಿಳಿದುಕೊಳ್ಳುತ್ತಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ದೇವರಾತ್ಮನು ಸಭೆಗಳಿಗೆ ಹೇಳುವುದನ್ನು ಕಿವಿಯುಳ್ಳವನು ಕೇಳಲಿ. ಯಾವನು ಜಯಹೊಂದುತ್ತಾನೋ ಅವನಿಗೆ ಬಚ್ಚಿಟ್ಟಿರುವ ಮನ್ನವೆಂಬ ಆಹಾರವನ್ನು ಕೊಡುವೆನು. ಇದಲ್ಲದೆ ಅವನಿಗೆ ಬಿಳೀಕಲ್ಲನ್ನೂ ಆ ಕಲ್ಲಿನ ಮೇಲೆ ಕೆತ್ತಿದ ಹೊಸ ಹೆಸರನ್ನೂ ಕೊಡುವೆನು. ಆ ಹೆಸರನ್ನು ಹೊಂದಿದವನಿಗೇ ಹೊರತು ಅದು ಮತ್ತಾರಿಗೂ ತಿಳಿಯದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 “ಸಭೆಗಳಿಗೆ ದೇವರಾತ್ಮ ಹೇಳುವುದನ್ನು ಕಿವಿಯುಳ್ಳವನು ಕೇಳಲಿ. ಜಯಹೊಂದಿದವನಿಗೆ ಮರೆಯಾಗಿರುವ ಮನ್ನವನ್ನು ನಾನು ದಯಪಾಲಿಸುತ್ತೇನೆ. ಇದಲ್ಲದೆ, ಆತನಿಗೆ ಒಂದು ಬಿಳಿಯ ಕಲ್ಲನ್ನು ನಾನು ಕೊಡುತ್ತೇನೆ. ಆ ಕಲ್ಲಿನ ಮೇಲೆ ಒಂದು ಹೊಸ ಹೆಸರನ್ನು ಕೆತ್ತಲಾಗಿರುತ್ತದೆ. ಆ ಕಲ್ಲನ್ನು ಸ್ವೀಕರಿಸಿದವನಿಗೇ ಹೊರತು ಮತ್ಯಾರಿಗೂ ಆ ಹೆಸರು ತಿಳಿಯದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ದೇವರಾತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ. ಯಾವನು ಜಯಹೊಂದುತ್ತಾನೋ ಅವನಿಗೆ ಬಚ್ಚಿಟ್ಟಿರುವ ಮನ್ನವೆಂಬ ಆಹಾರವನ್ನು ಕೊಡುವೆನು; ಇದಲ್ಲದೆ ಅವನಿಗೆ ಬಿಳೀ ಕಲ್ಲನ್ನೂ ಆ ಕಲ್ಲಿನ ಮೇಲೆ ಕೆತ್ತಿದ ಹೊಸ ಹೆಸರನ್ನೂ ಕೊಡುವೆನು; ಆ ಹೆಸರನ್ನು ಹೊಂದಿದವನಿಗೇ ಹೊರತು ಅದು ಇನ್ನಾರಿಗೂ ತಿಳಿಯದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಪವಿತ್ರಾತ್ಮ ದೇವರು ಸಭೆಗಳಿಗೆ ಹೇಳುವುದನ್ನು ಕಿವಿಯುಳ್ಳವರು ಕೇಳಲಿ. ಯಾರು ಜಯ ಹೊಂದುತ್ತಾರೋ ಅವರಿಗೆ ಬಚ್ಚಿಟ್ಟಿರುವ ಮನ್ನಾವನ್ನು ಕೊಡುವೆನು. ಇದಲ್ಲದೆ ಅವರಿಗೆ ಬಿಳಿಕಲ್ಲನ್ನೂ ಆ ಕಲ್ಲಿನ ಮೇಲೆ ಕೆತ್ತಿದ ಹೊಸ ಹೆಸರನ್ನೂ ಕೊಡುವೆನು. ಆ ಹೆಸರನ್ನು ಹೊಂದಿದವನಿಗೇ ಹೊರತು, ಅದು ಮತ್ತಾರಿಗೂ ತಿಳಿಯದು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್17 “ತುಕಾ ಕಾನಾ ರ್‍ಹಾಲ್ಯಾರ್ ಪವಿತ್ರ್ ಆತ್ಮೊ ದೆವಾಚ್ಯಾ ಲೊಕಾಂಚ್ಯಾ ತಾಂಡ್ಯಾಕ್ನಿ ಕಾಯ್ ಸಾಂಗುಕ್ ಲಾಗ್ಲಾ ಮನುನ್ ಆಯ್ಕ್!” “ಜೆ ಕೊನ್ ಜಿಕುನ್ ಜಯ್ ಹೊವ್ನ್ ಯೆತಾತ್ ತೆಂಕಾ ಮಿಯಾ ನಿಪ್ವುನ್ ಥವಲ್ಲ್ಯಾತ್ಲೆ ಉಲ್ಲೆ ಮನ್ನಾ ದಿತಾ, ಅನಿ ಮಿಯಾ ತೆಂಕಾ ಎಕ್ ಫಾಂಡ್ರೊ ಗುಂಡೊ ದಿತಾ ತ್ಯೆಚ್ಯಾ ವರ್ತಿ ಎಕ್ ನ್ಹವೆ ನಾಂವ್ ಲಿವಲ್ಲೆ ರ್‍ಹಾತಾ. ಜೆ ಕೊನಾಕ್ ತೆ ಗಾವ್ತಾ ತೆಂಕಾ ಸೊಡುನ್ ಕೊನಾಕ್‍ಬಿ ತೆ ಗೊತ್ತ್ ರ್‍ಹಾಯ್ನಾ”. ಅಧ್ಯಾಯವನ್ನು ನೋಡಿ |
ಯಾಕೆಂದರೆ ಯೆಹೋವನು ಹೇಳುವುದೇನೆಂದರೆ: “ಈ ಕಂಚುಕಿಯರಲ್ಲಿ ಕೆಲವರು ಸಬ್ಬತ್ ನಿಯಮವನ್ನು ಅನುಸರಿಸುತ್ತಾರೆ. ಅವರು ನನ್ನ ಇಷ್ಟಪ್ರಕಾರ ನಡೆದುಕೊಳ್ಳುತ್ತಾರೆ; ಅವರು ನನ್ನ ಒಡಂಬಡಿಕೆಗೆ ಸರಿಯಾಗಿ ನಡೆಯುತ್ತಾರೆ. ಆದ್ದರಿಂದ ನಾನು ಅವರಿಗೋಸ್ಕರ ನನ್ನ ಮಂದಿರದಲ್ಲಿ ಸ್ಮಾರಕಸ್ತಂಭ ನೆಡುವೆನು. ನನ್ನ ಪಟ್ಟಣದಲ್ಲಿ ಅವರ ಹೆಸರುಗಳು ಜ್ಞಾಪಕ ಮಾಡಲ್ಪಡುವವು. ಹೌದು, ಆ ಕಂಚುಕಿಗಳಿಗೆ ನಾನು ಮಕ್ಕಳಿಗಿಂತ ಉತ್ತಮವಾದದ್ದನ್ನು ಕೊಡುವೆನು. ಅವರಿಗೆ ನಿತ್ಯಕಾಲಕ್ಕೂ ಇರುವ ಹೆಸರನ್ನು ಕೊಡುವೆನು. ನನ್ನ ಜನರಿಂದ ಅವರನ್ನು ಬೇರ್ಪಡಿಸುವುದಿಲ್ಲ.”