ಪ್ರಕಟನೆ 2:24 - ಪರಿಶುದ್ದ ಬೈಬಲ್24 “ಆದರೆ ಥುವತೈರದಲ್ಲಿರುವ ಇನ್ನಿತರರಿಗೆ ನಾನು ಹೇಳುವುದೇನೆಂದರೆ, ನೀವು ಆಕೆಯ ಬೋಧನೆಗಳನ್ನು ಅನುಸರಿಸಲಿಲ್ಲ, ‘ಸೈತಾನನ ಅಗಾಧವಾದ ರಹಸ್ಯಗಳು’ ಎಂದು ಅವರು ಹೇಳುವ ಸಂಗತಿಗಳನ್ನು ನೀವು ಕಲಿತುಕೊಂಡಿಲ್ಲ. ಆದ್ದರಿಂದ ನಾನು ಬೇರೊಂದು ಹೊರೆಯನ್ನು ನಿಮ್ಮ ಮೇಲೆ ಹೊರಿಸುವುದಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 “ಆದರೆ ಥುವತೈರದಲ್ಲಿರುವ ಉಳಿದವರಿಗೆ, ಅಂದರೆ ಸೈತಾನನಿಂದ ಪ್ರೇರಿತವಾದ ದುರ್ಬೋಧನೆಯ ಆಳವನ್ನು ಯಾರಾರು ತಿಳಿಯದೆಯೂ ಅದನ್ನು ಅವಲಂಬಿಸದೆಯೂ ಇರುತ್ತಾರೋ ಅವರಿಗೆ ಹೇಳುವುದೇನಂದರೆ, ನಾನು ಮತ್ತೊಂದು ಭಾರವನ್ನು ನಿಮ್ಮ ಮೇಲೆ ಹಾಕುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 “ಆದರೆ ಥುವತೈರದಲ್ಲಿರುವ ಇನ್ನಿತರರಿಗೆ ನಾನು ಹೇಳುವುದೇನೆಂದರೆ: ಈ ದುರ್ಬೋಧನೆಯನ್ನು ನೀವು ಅವಲಂಬಿಸಲಿಲ್ಲ. ‘ಸೈತಾನನ ಗೂಢ ರಹಸ್ಯಗಳು’ ಎನ್ನಲಾಗುವ ಈ ವಿಷಯಗಳನ್ನು ನೀವು ಅರಿತುಕೊಳ್ಳಲಿಲ್ಲ. ನಿಮ್ಮ ಮೇಲೆ ಹೆಚ್ಚಿನ ಹೊರೆಯನ್ನು ಹೊರಿಸುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಆದರೆ ಥುವತೈರದಲ್ಲಿರುವ ಉಳಿದವರಿಗೆ, ಅಂದರೆ ಅಗಾಧ ಬೋಧೆಯೆಂದು ಹೇಳಿಸಿಕೊಂಡಿರುವ ಸೈತಾನನಿಂದ ಪ್ರೇರಿತವಾದ ದುರ್ಬೋಧನೆಯನ್ನು ನಿಮ್ಮಲ್ಲಿ ಯಾರಾರು ತಿಳಿಯದೆಯೂ ಅವಲಂಬಿಸದೆಯೂ ಇರುತ್ತಾರೋ ಅವರಿಗೆ ಹೇಳುವದೇನಂದರೆ - ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ಥುವತೈರದಲ್ಲಿರುವ ಉಳಿದವರಿಗೆ ನಾನು ಹೇಳುವುದೇನಂದರೆ: ಅವಳ ಬೋಧನೆಯನ್ನು ನೀವು ಅವಲಂಬಿಸಲಿಲ್ಲ. ಸೈತಾನನ ಆಳವಾದ ರಹಸ್ಯ ಬೋಧನೆಗಳು ಎಂದು ಹೇಳುವ ಬೋಧನೆಯನ್ನು ನೀವು ಅವಲಂಬಿಸಲಿಲ್ಲ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್24 ತಸೆ ಹೊಲ್ಯಾರ್ ಥೈಟಿರಾತ್ಲ್ಯಾ ಲೊಕಾಕ್ನಿ ಮಿಯಾ ಸಾಂಗ್ತಲೆ ಕಾಯ್ ಮಟ್ಲ್ಯಾರ್ ತುಮಿ ತಿಚಿ ಶಿಕ್ಪಾ ಸಾರ್ಕೆ ಚಲುಕ್ನಾಸಿ ಸೈತಾನಾಚ್ಯಾ ಖೊಲ್ ಹೊತ್ತಿ ಗುಟ್ ಅನಿ ತೆನಿ ಸಾಂಗಲ್ಲಿ ಸಂಗ್ತಿಯಾ ತುಮಿ ಆಯ್ಕಿನ್ಯಾಸಿ , ತಸೆ ಹೊವ್ನ್ ಅನಿಎಕ್ ವಜ್ಜೆ ಮಿಯಾ ತುಮ್ಚ್ಯಾ ವೈರ್ ಘಾಲಿನಾ. ಅಧ್ಯಾಯವನ್ನು ನೋಡಿ |
“ನೀನು ಎಲ್ಲಿ ವಾಸಮಾಡುತ್ತಿರುವೆ ಎಂಬುದು ನನಗೆ ತಿಳಿದಿದೆ. ಸೈತಾನನ ಸಿಂಹಾಸನ ವಿರುವ ಕಡೆಯಲ್ಲಿ ನೀನು ವಾಸಿಸುತ್ತಿರುವೆ. ಆದರೆ ನೀನು ನನಗೆ ನಂಬಿಗಸ್ತನಾಗಿರುವೆ. ಅಂತಿಪನ ಕಾಲದಲ್ಲಿಯೂ ನೀನು ನನ್ನಲ್ಲಿಟ್ಟಿರುವ ನಂಬಿಕೆಯನ್ನು ತಿಳಿಸಲು ನಿರಾಕರಿಸಲಿಲ್ಲ. ನಿನ್ನ ಪಟ್ಟಣದಲ್ಲಿ ಕೊಲ್ಲಲ್ಪಟ್ಟ ಅಂತಿಪನು ನನ್ನ ನಂಬಿಗಸ್ತ ಸಾಕ್ಷಿಯಾಗಿದ್ದನು. ನಿನ್ನ ನಗರ ಸೈತಾನನು ವಾಸಿಸುವ ನಗರವಾಗಿದೆ.