ಪ್ರಕಟನೆ 2:26 - ಪರಿಶುದ್ದ ಬೈಬಲ್26 “ಜಯಗಳಿಸುವವನಿಗೆ ಮತ್ತು ನಾನು ಅಪೇಕ್ಷಿಸುವುದನ್ನು ಕೊನೆಯವರೆಗೆ ಮಾಡುವವನಿಗೆ ಜನಾಂಗಗಳ ಮೇಲಿನ ಅಧಿಕಾರವನ್ನು ನೀಡುತ್ತೇನೆ: ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926-28 ಯಾವನು ಜಯಶಾಲಿಯಾಗಿ ನನಗೆ ಮೆಚ್ಚಿಕೆಯಾದ ಕೃತ್ಯಗಳನ್ನು ಕಡೆಯವರೆಗೂ ನಡಿಸುತ್ತಾನೋ, ಅವನಿಗೆ ನಾನು ನನ್ನ ತಂದೆಯಿಂದ ಹೊಂದಿದ ಅಧಿಕಾರದಂತೆ ಜನಾಂಗಗಳ ಮೇಲೆ ಅಧಿಕಾರವನ್ನು ಕೊಡುವೆನು. ‘ಅವನು ಕಬ್ಬಿಣದ ಕೋಲಿನಿಂದ ಅವರನ್ನು ಆಳುವನು, ಮಣ್ಣಿನ ಮಡಿಕೆಗಳು ಒಡೆಯುವಂತೆ ಅವರ ಬಲ ಮುರಿದು ಹೋಗುವುದು.’ ಇದಲ್ಲದೆ ಉದಯ ನಕ್ಷತ್ರವನ್ನು ಅವನಿಗೆ ಕೊಡುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26-28 ನಾನು ನನ್ನ ಪಿತನಿಂದ ಅಧಿಕಾರ ಪಡೆದಿರುವಂತೆಯೇ, ಜಯಹೊಂದುವವನಿಗೆ ಹಾಗು ನಾನು ಮೆಚ್ಚುವ ಕಾರ್ಯಗಳನ್ನು ಕೊನೆಯವರೆಗೂ ಮುಂದುವರಿಸಿಕೊಂಡು ಹೋಗುವವನಿಗೆ, ‘ಜನಾಂಗಗಳ ಮೇಲೆ ಅಧಿಕಾರವನ್ನು ಕೊಡುವೆನು ಅವನು ಅವುಗಳನ್ನು ಕಬ್ಬಿಣದ ದಂಡದಿಂದ ಆಳುವನು ಮಣ್ಣಿನ ಮಡಕೆಯಂತೆ ಅವುಗಳನ್ನು ನುಚ್ಚುನೂರು ಮಾಡುವನು.’ ಅಂಥವನಿಗೆ ಉದಯ ತಾರೆಯನ್ನು ನೀಡುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ಯಾವನು ಜಯಶಾಲಿಯಾಗಿದ್ದು ನನಗೆ ಮೆಚ್ಚಿಕೆಯಾದ ಕೃತ್ಯಗಳನ್ನು ಕಡೇವರೆಗೂ ನಡಿಸುತ್ತಾನೋ ಅವನಿಗೆ ನಾನು ನನ್ನ ತಂದೆಯಿಂದ ಹೊಂದಿದ ಅಧಿಕಾರದಂತೆ ಜನಾಂಗಗಳ ಮೇಲೆ ಅಧಿಕಾರವನ್ನು ಕೊಡುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ಯಾರು ಜಯಶಾಲಿಯಾಗಿದ್ದು, ನನ್ನ ಚಿತ್ತವನ್ನು ಅಂತ್ಯದವರೆಗೂ ಯಾರು ನಡೆಸುತ್ತಾರೋ, ಅವರಿಗೆ ನಾನು ರಾಷ್ಟ್ರಗಳ ಮೇಲೆ ಅಧಿಕಾರವನ್ನು ನೀಡುವೆನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್26 ಜೆ ಕೊನ್ ಜಯ್ ಹೊವ್ನ್ ರ್‍ಹಾತಾ. ಮಾಜಿ ಬರಿ ಕಾಮಾ ಧರುನ್ ಘೆವ್ನ್ ಆಕ್ರಿ ಪತರ್ ತಿ ಕರಿತ್ ರ್‍ಹಾತಾ, ತೆಕಾ ಮಿಯಾ ದೆಶಾಂಚ್ಯಾ ವರ್ತಿ ಅಧಿಕಾರ್ ದಿತಾ. ಅಧ್ಯಾಯವನ್ನು ನೋಡಿ |
ನಂತರ ನಾನು ಕೆಲವು ಸಿಂಹಾಸನಗಳನ್ನು ಮತ್ತು ಅವುಗಳ ಮೇಲೆ ಜನರು ಕುಳಿತಿರುವುದನ್ನು ನೋಡಿದೆನು. ಈ ಜನರು ತೀರ್ಪು ನೀಡುವ ಅಧಿಕಾರವನ್ನು ಹೊಂದಿದ್ದರು. ಯೇಸುವಿನ ಸತ್ಯಕ್ಕೆ ಮತ್ತು ದೇವರ ಸಂದೇಶಕ್ಕೆ ನಂಬಿಗಸ್ತರಾಗಿದ್ದರ ನಿಮಿತ್ತವಾಗಿ ಕೊಲ್ಲಲ್ಪಟ್ಟವರ ಜೀವಾತ್ಮಗಳನ್ನು ನಾನು ನೋಡಿದೆನು. ಆ ಜನರು ಮೃಗವನ್ನಾಗಲಿ ಅದರ ವಿಗ್ರಹವನ್ನಾಗಲಿ ಆರಾಧಿಸಿರಲಿಲ್ಲ. ಅವರು ತಮ್ಮ ಹಣೆಯ ಮೇಲಾಗಲಿ ಕೈಗಳ ಮೇಲಾಗಲಿ ಮೃಗದ ಗುರುತನ್ನು ಹಾಕಿಸಿಕೊಂಡಿರಲಿಲ್ಲ. ಆ ಜನರು ಮತ್ತೆ ಜೀವವನ್ನು ಪಡೆದು ಕ್ರಿಸ್ತನೊಂದಿಗೆ ಒಂದುಸಾವಿರ ವರ್ಷ ಆಳಿದರು.
ಜಯಗಳಿಸಿದ ವ್ಯಕ್ತಿಯನ್ನು ನನ್ನ ದೇವರ ಆಲಯದಲ್ಲಿ ಆಧಾರಸ್ತಂಭವನ್ನಾಗಿ ಮಾಡುವೆನು. ಅವನು ದೇವರ ಆಲಯವನ್ನು ಮತ್ತೆಂದಿಗೂ ಬಿಟ್ಟುಹೋಗುವ ಅಗತ್ಯವಿಲ್ಲ. ನನ್ನ ದೇವರ ಹೆಸರನ್ನೂ ನನ್ನ ದೇವರ ಪಟ್ಟಣದ ಹೆಸರನ್ನೂ ಅವನ ಮೇಲೆ ಬರೆಯುತ್ತೇನೆ. ಹೊಸ ಜೆರುಸಲೇಮೇ ಆ ಪಟ್ಟಣ. ಆ ಪಟ್ಟಣವು ನನ್ನ ದೇವರ ಬಳಿಯಿಂದ ಪರಲೋಕದಿಂದ ಇಳಿದುಬರುತ್ತದೆ. ನನ್ನ ಹೊಸ ಹೆಸರನ್ನೂ ಅವನ ಮೇಲೆ ಬರೆಯುತ್ತೇನೆ.
“ಪವಿತ್ರಾತ್ಮನು ಸಭೆಗಳಿಗೆ ಹೇಳುತ್ತಿರುವ ಈ ಸಂಗತಿಗಳನ್ನು ಕೇಳುತ್ತಿರುವವನೇ, ಗಮನವಿಟ್ಟು ಆಲಿಸು. “ಜಯಗಳಿಸಿದ ಪ್ರತಿಯೊಬ್ಬ ವ್ಯಕ್ತಿಗೂ ನಾನು ಅಡಗಿಸಿಟ್ಟಿರುವ ಮನ್ನವನ್ನು ಕೊಡುತ್ತೇನೆ. ಅವನಿಗೆ ನಾನು ಬಿಳುಪಾದ ಕಲ್ಲನ್ನು ಕೊಡುತ್ತೇನೆ. ಆ ಕಲ್ಲಿನ ಮೇಲೆ ಹೊಸ ಹೆಸರನ್ನು ಕೆತ್ತಲಾಗಿದೆ. ಈ ಹೊಸ ಹೆಸರು ಯಾರಿಗೂ ತಿಳಿದಿಲ್ಲ. ಈ ಕಲ್ಲನ್ನು ಪಡೆದುಕೊಂಡ ವ್ಯಕ್ತಿಯು ಮಾತ್ರ ಹೊಸ ಹೆಸರನ್ನು ತಿಳಿದುಕೊಳ್ಳುತ್ತಾನೆ.
ನಿಮ್ಮ ನಂಬಿಕೆಯ ಬಗ್ಗೆ ತಿಳಿದುಕೊಳ್ಳಬೇಕೆಂಬ ಕಾರಣದಿಂದಲೇ ನಾನು ತಿಮೊಥೆಯನನ್ನು ನಿಮ್ಮ ಬಳಿಗೆ ಕಳುಹಿಸಿದೆನು. ಇನ್ನೂ ಹೆಚ್ಚುಕಾಲ ಕಾಯಲು ಸಾಧ್ಯವಿಲ್ಲವೆನಿಸಿದ್ದರಿಂದಲೇ ನಾನು ಅವನನ್ನು ಕಳುಹಿಸಿದೆನು. ಜನರನ್ನು ಶೋಧನೆಗೆ ಒಳಪಡಿಸುವ ಸೈತಾನನು ನಿಮ್ಮನ್ನು ಈಗಾಗಲೇ ಶೋಧನೆಗಳಿಂದ ಸೋಲಿಸಿರಬಹುದೆಂಬ ಭಯ ನನಗಿತ್ತು. ಒಂದುವೇಳೆ, ಹಾಗೇನಾದರೂ ಆಗಿದ್ದರೆ ನಮ್ಮ ಪ್ರಯಾಸವೆಲ್ಲಾ ನಿರರ್ಥಕವಾಗುತ್ತಿತ್ತು.