Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 2:3 - ಪರಿಶುದ್ದ ಬೈಬಲ್‌

3 ನೀನು ತಾಳ್ಮೆಯಿಂದ ಸತತವಾಗಿ ಪ್ರಯತ್ನಿಸುತ್ತಿರುವೆ; ನನ್ನ ಹೆಸರಿನ ನಿಮಿತ್ತ ಬಾಧೆಯನ್ನು ಬೇಸರಪಡದೆ ಸಹಿಸಿಕೊಂಡೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ನೀನು ತಾಳ್ಮೆಯುಳ್ಳವನಾಗಿ ನನ್ನ ಹೆಸರಿನ ನಿಮಿತ್ತ ಬಾಧೆಯನ್ನು ಸಹಿಸಿಕೊಂಡರೂ ಬಿದ್ದುಹೋಗದೆ ಇದ್ದುದನ್ನು ನಾನು ಬಲ್ಲೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಹೌದು, ಸಹನಾಶಕ್ತಿ ನಿನಗಿದೆ. ಬೇಸರಗೊಳ್ಳದೆ ನನ್ನ ಹೆಸರಿನ ನಿಮಿತ್ತ ನೀನು ಕಷ್ಟಸಂಕಟಗಳನ್ನು ತಾಳಿಕೊಂಡೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ನೀನು ತಾಳ್ಮೆಯುಳ್ಳವನಾಗಿ ನನ್ನ ಹೆಸರಿನ ನಿವಿುತ್ತ ಬಾಧೆಯನ್ನು ಸೈರಿಸಿಕೊಂಡು ಬೇಸರಗೊಳ್ಳಲಿಲ್ಲ; ಇದನ್ನೆಲ್ಲಾ ಬಲ್ಲೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ನೀನು ತಾಳ್ಮೆಯಿಂದ ನನ್ನ ಹೆಸರಿನ ನಿಮಿತ್ತ ಬಾಧೆಯನ್ನು ಸಹಿಸಿಕೊಂಡು ಬೇಸರಗೊಳ್ಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ತಿಯಾ ಲೈ ಸೊಸುನ್ ಘೆವ್ನ್ ಹಾಸ್, ಮಾಕಾ ಲಾಗುನ್ ತಿಯಾ ಲೈ ಕಸ್ಟ್ ಕಾಡ್ಲೆಯ್. ಜಾಲ್ಯಾರ್‍ಬಿ ತಿಯಾ ಮಾಕಾ ಸೊಡುನ್ ಜಾವ್ಕನೆಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 2:3
49 ತಿಳಿವುಗಳ ಹೋಲಿಕೆ  

ನೀವು ತಾಳ್ಮೆಯಿಂದಿರಬೇಕು, ನೀವು ದೇವರ ಚಿತ್ತಾನುಸಾರವಾಗಿ ಮಾಡಿದ ನಂತರ ಆತನ ವಾಗ್ದಾನದಂತೆ ನಿಮಗೆ ಪ್ರತಿಫಲವು ಸಿಕ್ಕೇ ಸಿಗುತ್ತದೆ.


ನಮ್ಮ ಸುತ್ತಲೂ ನಂಬಿಕೆಯುಳ್ಳ ಅನೇಕ ಜನರಿದ್ದಾರೆ. ನಂಬಿಕೆ ಎಂದರೇನೆಂದು ಅವರ ಜೀವಿತಗಳೇ ಸಾಕ್ಷಿ ಹೇಳುತ್ತವೆ. ಆದ್ದರಿಂದ ನಾವು ಅವರಂತಿರಬೇಕು. ನಮ್ಮ ಮುಂದಿರುವ ಗುರಿಯನ್ನು ಮುಟ್ಟಲು ಓಡಬೇಕು ಮತ್ತು ನಮ್ಮ ಪ್ರಯತ್ನವನ್ನು ನಿಲ್ಲಿಸಬಾರದು. ನಮ್ಮನ್ನು ತಡೆಯುವ ಎಲ್ಲಾ ವಿಷಯಗಳನ್ನೂ ನಮ್ಮ ಜೀವಿತದಿಂದ ತೆಗೆದುಹಾಕಬೇಕು. ನಮ್ಮನ್ನು ಸುಲಭವಾಗಿ ಹಿಡಿದುಕೊಳ್ಳುವ ಪಾಪದಿಂದ ಬಿಡಿಸಿಕೊಳ್ಳಬೇಕು.


ನಾವು ಒಳ್ಳೆಯ ಕಾರ್ಯ ಮಾಡುವುದರಲ್ಲಿ ಬೇಸರಗೊಳ್ಳಬಾರದು. ತಕ್ಕ ಸಮಯದಲ್ಲಿ ನಾವು ನಿತ್ಯಜೀವವೆಂಬ ಸುಗ್ಗಿಯನ್ನು ಪಡೆಯುವೆವು. ಆದ್ದರಿಂದ ಒಳ್ಳೆಯ ಕಾರ್ಯ ಮಾಡುವುದನ್ನು ನಾವು ಬಿಟ್ಟುಬಿಡಬಾರದು.


ಆತನ ಮಹಿಮಾಶಕ್ತಿಯಿಂದ ಪರಿಪೂರ್ಣ ಬಲ ಹೊಂದಿ ಆನಂದಪೂರ್ವಕವಾದ ತಾಳ್ಮೆಯನ್ನು, ದೀರ್ಘಶಾಂತಿಯನ್ನು ಯಾವಾಗಲೂ ತೋರಿಸುವವರಾಗಿರಬೇಕೆಂತಲೂ ನಾವು ಪ್ರಾರ್ಥಿಸುತ್ತಿದ್ದೇವೆ.


ಜನರು ನನ್ನ ದೆಸೆಯಿಂದ ಇದನ್ನೆಲ್ಲಾ ನಿಮಗೆ ಮಾಡುವರು. ನನ್ನನ್ನು ಕಳುಹಿಸಿದಾತನನ್ನು ಅವರು ತಿಳಿದಿಲ್ಲ.


ಪ್ರೀತಿಯು ಎಲ್ಲವನ್ನು ತಾಳ್ಮೆಯಿಂದ ಸ್ವೀಕರಿಸಿಕೊಳ್ಳುತ್ತದೆ; ಯಾವಾಗಲೂ ನಂಬುತ್ತದೆ; ಯಾವಾಗಲೂ ನಿರೀಕ್ಷಿಸುತ್ತದೆ; ಯಾವಾಗಲೂ ದೃಢವಾಗಿರುತ್ತದೆ.


ನೀನು ನನ್ನ ಆಜ್ಞೆಯನ್ನು ಸಹನೆಯಿಂದ ಮತ್ತು ತಾಳ್ಮೆಯಿಂದ ಅನುಸರಿಸಿದೆ. ಆದ್ದರಿಂದ ಈ ಲೋಕಕ್ಕೆಲ್ಲಾ ಉಂಟಾಗುವ ಕಡುಶೋಧನೆಯಿಂದ ನಾನು ನಿನ್ನನ್ನು ತಪ್ಪಿಸುತ್ತೇನೆ. ಭೂನಿವಾಸಿಗಳೆಲ್ಲರನ್ನು ಈ ಶೋಧನೆಯು ಪರಿಶೋಧಿಸುತ್ತದೆ.


ಅಬ್ರಹಾಮನು ಇದರ ನೆರವೇರುವಿಕೆಗಾಗಿ ತಾಳ್ಮೆಯಿಂದ ಕಾದಿದ್ದನು. ತರುವಾಯ ಅವನಿಗೆ ದೇವರ ವಾಗ್ದಾನದ ಫಲ ದೊರೆಯಿತು.


ನೀವು ಸೋಮಾರಿಗಳಾಗಿರಬೇಕೆಂಬುದು ನಮ್ಮ ಅಪೇಕ್ಷೆಯಲ್ಲ. ದೇವರ ವಾಗ್ದಾನದ ಫಲಗಳನ್ನು ಪಡೆಯುವ ಜನರಂತೆ ನೀವಿರಬೇಕೆಂಬುದು ನಮ್ಮ ಅಪೇಕ್ಷೆ. ಆ ಜನರಿಗೆ ನಂಬಿಕೆ ಮತ್ತು ತಾಳ್ಮೆಯಿದ್ದುದರಿಂದ ಅವರು ದೇವರ ವಾಗ್ದಾನದಂತೆ ಫಲವನ್ನು ಪಡೆದರು.


ದೇವರು ನ್ಯಾಯವಂತನಾಗಿದ್ದಾನೆ. ನೀವು ಮಾಡಿದ ಉಪಕಾರವನ್ನು ಮತ್ತು ದೇವಜನರಿಗೆ ಸಹಾಯ ಮಾಡಿದ್ದರ ಮೂಲಕ ಮತ್ತು ಸಹಾಯ ಮಾಡುತ್ತಲೇ ಇರುವುದರ ಮೂಲಕ ನೀವು ಆತನಿಗೆ ತೋರಿದ ಪ್ರೀತಿಯನ್ನು ಆತನು ಮರೆತುಬಿಡುವುದಿಲ್ಲ.


ಆದಕಾರಣವೇ, ನಾವು ಜೀವಸ್ವರೂಪನಾದ ದೇವರ ಮೇಲೆ ನಿರೀಕ್ಷೆಯಿಟ್ಟು ದುಡಿಯುತ್ತಿದ್ದೇವೆ ಮತ್ತು ಹೋರಾಡುತ್ತಿದ್ದೇವೆ. ಆತನು ಎಲ್ಲಾ ಜನರಿಗೆ ರಕ್ಷಕನಾಗಿದ್ದಾನೆ. ತನ್ನಲ್ಲಿ ನಂಬಿಕೆಯಿಡುವ ಜನರಿಗೆಲ್ಲಾ ಆತನು ವಿಶೇಷವಾದ ರೀತಿಯಲ್ಲಿ ರಕ್ಷಕನಾಗಿದ್ದಾನೆ.


ಸಹೋದರ ಸಹೋದರಿಯರೇ, ಒಳ್ಳೆಯದನ್ನು ಮಾಡುವುದರಲ್ಲಿ ಎಂದಿಗೂ ಬೇಸರಗೊಳ್ಳಬೇಡಿ.


ಆದಕಾರಣವೇ, ನಾವೆಂದಿಗೂ ಬಲಹೀನರಾಗುವುದಿಲ್ಲ. ನಮ್ಮ ಭೌತಿಕ ದೇಹಕ್ಕೆ ವಯಸ್ಸಾಗುತ್ತಿದೆ ಮತ್ತು ಅದು ಬಲಹೀನವಾಗುತ್ತಿದೆ. ಆದರೆ ನಮ್ಮ ಆಂತರ್ಯವು ಪ್ರತಿದಿನ ಹೊಸದಾಗುತ್ತಿದೆ.


ದೇವರು ತನ್ನ ಕೃಪೆಯಿಂದ ಈ ಸೇವೆಯನ್ನು ನಮಗೆ ಒಪ್ಪಿಸಿದ್ದಾನೆ. ಆದ್ದರಿಂದ ನಾವು ಧೈರ್ಯಗೆಡುವುದಿಲ್ಲ.


ನಿಮಗೆ ನಿರೀಕ್ಷೆಯಿರುವುದರಿಂದ ಸಂತೋಷವಾಗಿರಿ. ನಿಮಗೆ ಸಂಕಟಗಳಿರುವಾಗ ತಾಳ್ಮೆಯಿಂದಿರಿ. ಎಲ್ಲಾ ಸಮಯದಲ್ಲಿ ಪ್ರಾರ್ಥಿಸಿರಿ.


ಆದರೆ ನಾವಿನ್ನೂ ಹೊಂದಿಕೊಂಡಿಲ್ಲದೆ ಇರುವುದನ್ನು ನಿರೀಕ್ಷಿಸುತ್ತಾ ತಾಳ್ಮೆಯಿಂದ ಅದಕ್ಕಾಗಿ ಕಾಯುತ್ತಿದ್ದೇವೆ.


ನನ್ನನ್ನು ಹಿಂಬಾಲಿಸುವವನು ತನಗೆ ಕೊಡಲ್ಪಟ್ಟಿರುವ ಶಿಲುಬೆಯನ್ನು (ಶ್ರಮೆ) ಹೊತ್ತುಕೊಂಡು ಹೋಗದಿದ್ದರೆ, ಅವನು ನನ್ನ ಶಿಷ್ಯನಾಗಿರಲು ಸಾಧ್ಯವಿಲ್ಲ.


ಯೆಹೋವನಲ್ಲಿ ಭರವಸವಿಟ್ಟು ಆತನ ಸಹಾಯಕ್ಕಾಗಿ ಕಾದುಕೊಂಡಿರು. ಕೆಡುಕರ ಅಭಿವೃದ್ಧಿಯನ್ನು ಕಂಡು ಉರಿಗೊಳ್ಳಬೇಡ. ಕೆಡುಕರ ಕುಯುಕ್ತಿಗಳು ನೆರವೇರಿದರೂ ಹೊಟ್ಟೆಕಿಚ್ಚುಪಡಬೇಡ.


ಯೋಹಾನನೆಂಬ ನಾನು ಕ್ರಿಸ್ತನಲ್ಲಿ ನಿಮ್ಮ ಸಹೋದರನಾಗಿದ್ದೇನೆ. ನಾವೆಲ್ಲರೂ ಒಟ್ಟಾಗಿ ಯೇಸುವಿನ ನಿಮಿತ್ತ ಸಂಕಟಗಳಲ್ಲಿಯೂ ರಾಜ್ಯದಲ್ಲಿಯೂ ತಾಳ್ಮೆಯಲ್ಲಿಯೂ ಪಾಲುಗಾರರಾಗಿದ್ದೇವೆ. ನಾನು ದೇವರ ಸಂದೇಶಕ್ಕೂ ಯೇಸುವಿನ ಸತ್ಯಕ್ಕೂ ನಂಬಿಗಸ್ತನಾಗಿದ್ದುದರಿಂದ ಪತ್ಮೊಸ್ ದ್ವೀಪದಲ್ಲಿದ್ದೆನು.


ಜ್ಞಾನಕ್ಕೆ ದಮೆಯನ್ನೂ ದಮೆಗೆ ತಾಳ್ಮೆಯನ್ನೂ ತಾಳ್ಮೆಗೆ ದೇವರ ಸೇವೆಯನ್ನೂ


ನಮ್ಮ ತಂದೆಯಾದ ದೇವರಿಗೆ ಪ್ರಾರ್ಥನೆ ಮಾಡುವಾಗ ನಿಮ್ಮ ನಂಬಿಕೆಯ ಮತ್ತು ಪ್ರೀತಿಯ ಫಲವಾಗಿ ಮಾಡಿದ ಕಾರ್ಯಗಳಿಗಾಗಿಯೂ ನಮ್ಮ ಪ್ರಭುವಾದ ಯೇಸು ಕ್ರಿಸ್ತನಲ್ಲಿ ನಿಮಗಿರುವ ನಿರೀಕ್ಷೆಯಿಂದ ನೀವು ದೃಢವಾಗಿರುವುದಕ್ಕಾಗಿಯೂ ನಾವು ಆತನಿಗೆ ಯಾವಾಗಲೂ ಕೃತಜ್ಞತಾಸ್ತುತಿ ಮಾಡುತ್ತೇವೆ.


ಅವರು ಕ್ರಿಸ್ತನ ಸೇವೆಮಾಡುತ್ತಿದ್ದಾರೋ? ನಾನು ಸಹ ಅವರಿಗಿಂತಲೂ ಹೆಚ್ಚಾಗಿ ಸೇವೆಮಾಡುತ್ತಿದ್ದೇನೆ. (ನಾನು ಹುಚ್ಚನಂತೆ ಹೀಗೆ ಮಾತಾಡುತ್ತಿದ್ದೇನೆ.) ನಾನು ಅವರಿಗಿಂತಲೂ ಹೆಚ್ಚು ಕಷ್ಟಪಟ್ಟು ದುಡಿದಿದ್ದೇನೆ; ಹೆಚ್ಚು ಸಲ ಸೆರೆಮನೆಯಲ್ಲಿದ್ದೆನು. ಹೆಚ್ಚು ಏಟುಗಳನ್ನು ತಿಂದಿದ್ದೇನೆ, ನಾನು ಅನೇಕ ಸಲ ಮರಣದ ಸಮೀಪದಲ್ಲಿದ್ದೆನು.


ದೇವರನ್ನು ಮೆಚ್ಚಿಸಬೇಕೆಂಬುದೊಂದೇ ನಮಗಿರುವ ಉದ್ದೇಶವಾಗಿದೆ. ನಾವು ನಮ್ಮ ದೇಹದಲ್ಲಿ ಇಲ್ಲಿ ವಾಸವಾಗಿರುವಾಗಲೂ ಪ್ರಭುವಿನೊಂದಿಗೆ ಅಲ್ಲಿ ವಾಸವಾಗಿರುವಾಗಲೂ ಆತನನ್ನು ಮೆಚ್ಚಿಸಬೇಕೆಂಬುದೊಂದೇ ನಮ್ಮ ಬಯಕೆಯಾಗಿದೆ.


ಕೆಲವು ಜನರು ಮಹಿಮೆಗಾಗಿ, ಘನತೆಗಾಗಿ ಮತ್ತು ಅಮರತ್ವಕ್ಕಾಗಿ ಯಾವಾಗಲೂ ಸತ್ಕಾರ್ಯಗಳನ್ನು ಮಾಡುತ್ತಾ ಜೀವಿಸುವರು. ದೇವರು ಆ ಜನರಿಗೆ ನಿತ್ಯಜೀವವನ್ನು ಕೊಡುವನು.


ನಿರಾಶರಾಗದೆ ಯಾವಾಗಲೂ ಪ್ರಾರ್ಥಿಸಬೇಕೆಂದು ಯೇಸು ತನ್ನ ಶಿಷ್ಯರಿಗೆ ಈ ಸಾಮ್ಯದ ಮೂಲಕ ಉಪದೇಶಿಸಿದನು:


ಒಳ್ಳೆಯ ನೆಲದಲ್ಲಿ ಬಿದ್ದ ಬೀಜವೆಂದರೇನು? ಒಳ್ಳೆಯದಾದ ಮತ್ತು ಯಥಾರ್ಥವಾದ ಹೃದಯದಿಂದ ದೇವರ ವಾಕ್ಯವನ್ನು ಕೇಳುವ ಜನರೇ ಬೀಜಬಿದ್ದ ಒಳ್ಳೆಯ ನೆಲವಾಗಿದ್ದಾರೆ. ಅವರು ದೇವರ ವಾಕ್ಯಕ್ಕೆ ವಿಧೇಯರಾಗಿ ತಾಳ್ಮೆಯಿಂದ ಒಳ್ಳೆಯ ಫಲವನ್ನು ನೀಡುವರು.


ನಾವು ಪಾಳೆಯದ ಹೊರಗಡೆಯಲ್ಲಿರುವ ಆತನ ಬಳಿಗೆ ಹೋಗಬೇಕು. ಆತನಿಗಾದ ಅಪಮಾನವನ್ನು ನಾವೂ ಸ್ವೀಕರಿಸಿಕೊಳ್ಳಬೇಕು.


ಸಭೆಯನ್ನು ಉತ್ತಮ ಮಾರ್ಗದಲ್ಲಿ ನಡೆಸುವ ಹಿರಿಯರು ಗೌರವಕ್ಕೂ ಸಂಬಳಕ್ಕೂ ಯೋಗ್ಯರಾಗಿದ್ದಾರೆ. ಪ್ರಸಂಗ ಮಾಡುವುದರಲ್ಲಿಯೂ ಉಪದೇಶಮಾಡುವುದರಲ್ಲಿಯೂ ನಿರತರಾಗಿರುವ ಹಿರಿಯರು ಉನ್ನತವಾದ ಗೌರವವನ್ನು ಪಡೆಯುತ್ತಾರೆ.


ಹಣ ಕೊಡದೆ ಯಾರ ಬಳಿಯಲ್ಲಿಯೂ ಊಟ ಮಾಡಲಿಲ್ಲ. ನಿಮ್ಮಲ್ಲಿ ಯಾರಿಗೂ ತೊಂದರೆಯಾಗಬಾರದೆಂದು ಹಗಲಿರುಳು ಎಡೆಬಿಡದೆ ಕೆಲಸ ಮಾಡಿದೆವು.


ದೇವರ ಪ್ರೀತಿಯ ಕಡೆಗೂ ಮತ್ತು ಕ್ರಿಸ್ತನ ತಾಳ್ಮೆಯ ಕಡೆಗೂ ನಿಮ್ಮ ಹೃದಯಗಳನ್ನು ಪ್ರಭುವೇ ಮುನ್ನಡೆಸಲಿ ಎಂದು ನಾವು ಪ್ರಾರ್ಥಿಸುತ್ತೇವೆ.


ಸಹೋದರ ಸಹೋದರಿಯರೇ, ನಾವು ಅನುಭವಿಸಿದ ಕಷ್ಟ ಕಾರ್ಪಣ್ಯಗಳು ನಿಮ್ಮ ನೆನಪಿನಲ್ಲೇ ಇವೆ. ನಿಮಗೆ ದೇವರ ಸುವಾರ್ತೆಯನ್ನು ಉಪದೇಶಿಸಿದಾಗ ನೀವು ನಮಗೆ ವೇತನ ನೀಡುವ ಭಾರವನ್ನು ನಿಮ್ಮ ಮೇಲೆ ಹಾಕಬಾರದೆಂದು ಹಗಲಿರುಳು ದುಡಿದು ಜೀವನ ಸಾಗಿಸಿದೆವು.


ನನ್ನ ಸ್ನೇಹಿತನೇ, ನೀನು ನನ್ನ ಜೊತೆಕೆಲಸದವನಾಗಿ ನಂಬಿಗಸ್ತಿಕೆಯಿಂದ ಸೇವೆ ಮಾಡುತ್ತಿರುವುದರಿಂದ ಈ ಸ್ತ್ರೀಯರಿಗೂ ನೀನು ಸಹಾಯ ಮಾಡಬೇಕೆಂದು ನಿನ್ನನ್ನು ಕೇಳಿಕೊಳ್ಳುತ್ತೇನೆ. ಈ ಸ್ತ್ರೀಯರು ನನ್ನೊಂದಿಗೆ ಸುವಾರ್ತೆಗೋಸ್ಕರ ಸೇವೆ ಮಾಡಿದ್ದಾರೆ. ನನ್ನೊಂದಿಗೆ ಸೇವೆ ಮಾಡುತ್ತಿದ್ದ ಕ್ಲೇಮೆನ್ಸ್ ಮತ್ತು ಇತರ ಸೇವಕರೊಡನೆ ಈ ಸ್ತ್ರೀಯರು ಸೇವೆ ಮಾಡಿದ್ದಾರೆ. ಅವರ ಹೆಸರುಗಳು ಜೀವಬಾಧ್ಯರ ಪುಸಕ್ತದಲ್ಲಿ ಬರೆಯಲ್ಪಟ್ಟಿವೆ.


ಜೀವದಾಯಕವಾದ ವಾಕ್ಯವನ್ನು ನೀವು ಆ ಜನರಿಗೆ ಕೊಟ್ಟರೆ, ಕ್ರಿಸ್ತನು ಬಂದಾಗ ನಾನು ಹೆಮ್ಮೆಯಿಂದಿರಲು ಸಾಧ್ಯವಾಗುತ್ತದೆ, ಏಕೆಂದರೆ ನನ್ನ ಕೆಲಸವು ವ್ಯರ್ಥವಾಗಲಿಲ್ಲ. ನಾನು ಪಂದ್ಯದಲ್ಲಿ ಓಡಿ ಗೆದ್ದೆನು.


ನಿಮ್ಮ ಭಾರವಾದ ಹೊರೆಗಳನ್ನು ಹೊರಲು ಒಬ್ಬರಿಗೊಬ್ಬರು ಸಹಾಯಮಾಡಿರಿ. ಹೀಗೆ ನೀವು ಕ್ರಿಸ್ತನ ಆಜ್ಞೆಯನ್ನು ನಿಜವಾಗಿಯೂ ಅನುಸರಿಸಿರಿ.


ನಾವು ಹೊಗಳಿಕೊಳ್ಳುವುದನ್ನು ನಮ್ಮ ಕೆಲಸದ ಮೇರೆಗೆ ಸೀಮಿತಗೊಳಿಸುತ್ತೇವೆ. ಇತರರು ಮಾಡಿದ ಕೆಲಸದ ಬಗ್ಗೆ ನಾವು ನಮ್ಮನ್ನು ಹೊಗಳಿಕೊಳ್ಳುವುದಿಲ್ಲ. ನಿಮ್ಮ ನಂಬಿಕೆಯು ವೃದ್ಧಿಯಾಗುತ್ತಾ ಬಂದಂತೆ ನಮ್ಮ ಕೆಲಸವು ಮತ್ತಷ್ಟು ವಿಶಾಲವಾಗಿ ಬೆಳೆಯಲು ನೀವು ಸಹಾಯ ಮಾಡುತ್ತೀರೆಂಬ ನಿರೀಕ್ಷೆ ನಮಗಿದೆ.


ಪೆಟ್ಟುಗಳಲ್ಲಿಯೂ ಸೆರೆಮನೆಗಳಲ್ಲಿಯೂ ಕಲಹಗಳಲ್ಲಿಯೂ ಕಷ್ಟವಾದ ಕೆಲಸಗಳಲ್ಲಿಯೂ ನಿದ್ದೆಗೇಡುಗಳಲ್ಲಿಯೂ ಉಪವಾಸಗಳಲ್ಲಿಯೂ ಬಹು ತಾಳ್ಮೆಯನ್ನು ತೋರುತ್ತೇವೆ.


ತ್ರುಫೈನಳಿಗೂ ತ್ರುಫೋಸಳಿಗೂ ನನ್ನ ವಂದನೆ ತಿಳಿಸಿರಿ. ಅವರು ಪ್ರಭುವಿಗಾಗಿ ಬಹು ಕಷ್ಟಪಟ್ಟು ಸೇವೆ ಮಾಡುತ್ತಿದ್ದಾರೆ. ನನ್ನ ಪ್ರಿಯ ಸಹೋದರಿಯಾದ ಪೆರ್ಸೀಸಳಿಗೂ ನನ್ನ ವಂದನೆ ತಿಳಿಸಿರಿ. ಆಕೆಯು ಸಹ ಪ್ರಭುವಿಗೋಸ್ಕರ ಬಹು ಕಷ್ಟಪಟ್ಟು ಸೇವೆ ಮಾಡಿದಳು.


ನೀವು ನಿಮ್ಮ ನಂಬಿಕೆಯಲ್ಲಿ ದೃಢವಾಗಿದ್ದರೆ ನಿಮ್ಮನ್ನು ರಕ್ಷಿಸಿಕೊಳ್ಳುವಿರಿ.


ಆಗ ಸಿರೇನ್ ಪಟ್ಟಣದ ಸಿಮೋನ ಎಂಬವನು ಹೊಲದಿಂದ ಬರುತ್ತಿದ್ದನು. ಅವನು ಅಲೆಕ್ಸಾಂಡರ್ ಮತ್ತು ರೂಫಸ್ ಎಂಬವರ ತಂದೆ. ಸೈನಿಕರು ಯೇಸುವಿನ ಶಿಲುಬೆಯನ್ನು ಹೊರುವಂತೆ ಸಿಮೋನನನ್ನು ಬಲವಂತ ಮಾಡಿದರು.


ನಾನು ಯೆಹೋವನಿಗೆ ವಿರುದ್ಧವಾಗಿ ಪಾಪಮಾಡಿದ್ದೇನೆ. ಆದ್ದರಿಂದ ಆತನು ನನ್ನ ಮೇಲೆ ಕೋಪಿಸಿಕೊಂಡಿದ್ದಾನೆ. ಆದರೆ ನನ್ನ ಪರವಾಗಿ ಆತನು ವಾದಿಸುತ್ತಾನೆ. ನನಗೆ ಒಳ್ಳೆಯದನ್ನೇ ಆತನು ಮಾಡುತ್ತಾನೆ. ಆ ಬಳಿಕ ನನ್ನನ್ನು ಹೊರಗೆ ಬೆಳಕಿಗೆ ತರುವನು. ಆತನು ನೀತಿವಂತನೆಂಬುದು ಆಗ ನನಗೆ ತಿಳಿಯುವುದು.


ನಾಚಿಕೆಯು ನನ್ನ ಮುಖವನ್ನು ಕವಿದಿದೆ. ನಿನಗೋಸ್ಕರವಾಗಿ ಈ ನಾಚಿಕೆಯನ್ನು ಹೊತ್ತುಕೊಂಡಿದ್ದೇನೆ.


ಸಹೋದರ ಸಹೋದರಿಯರೇ, ಈಗ ನಿಮ್ಮಲ್ಲಿ ಪ್ರಯಾಸದಿಂದ ಕೆಲಸ ಮಾಡುತ್ತಾ ನಿಮ್ಮನ್ನು ಪ್ರಭುವಿನ ಮಾರ್ಗದಲ್ಲಿ ನಡೆಸುವವರನ್ನು ಮತ್ತು ಉಪದೇಶಿಸುವವರನ್ನು ಗೌರವಿಸಬೇಕೆಂದು ನಿಮ್ಮನ್ನು ಕೇಳಿಕೊಳ್ಳುತ್ತೇವೆ.


ಈ ರೀತಿಯ ಮುಂದಾಳುಗಳನ್ನು ಮತ್ತು ಅವರೊಂದಿಗೆ ಕೆಲಸ ಮಾಡುವವರನ್ನು ಹಾಗೂ ಸೇವೆ ಮಾಡುವವರನ್ನು ಹಿಂಬಾಲಿಸಿರಿ.


ಸೀಮೋನನು, “ಗುರುವೇ, ನಾವು ರಾತ್ರಿಯೆಲ್ಲಾ ಪ್ರಯಾಸಪಟ್ಟರೂ ಒಂದು ಮೀನೂ ಸಿಕ್ಕಲಿಲ್ಲ. ಆದರೆ, ನೀನು ಹೇಳಿದ್ದರಿಂದ ಬೀಸುತ್ತೇವೆ” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು