Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 2:6 - ಪರಿಶುದ್ದ ಬೈಬಲ್‌

6 ಆದರೆ ನೀನು ಯೋಗ್ಯವಾದ ಒಂದನ್ನು ಮಾಡುತ್ತಿರುವೆ. ಅದೇನೆಂದರೆ, ನಿಕೊಲಾಯಿತರು ಮಾಡುವ ಕಾರ್ಯಗಳನ್ನು ನೀನು ದ್ವೇಷಿಸುತ್ತಿ. ನಾನು ಸಹ ಅವರ ಕಾರ್ಯಗಳನ್ನು ದ್ವೇಷಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆದರೆ ನಿನ್ನಲ್ಲಿ ಒಳ್ಳೆಯದು ಒಂದುಂಟು, ಅದೇನೆಂದರೆ ನಾನು ದ್ವೇಷಿಸುವ ನಿಕೊಲಾಯಿತರ ಕೃತ್ಯಗಳನ್ನು ನೀನೂ ಸಹ ದ್ವೇಷಿಸುತ್ತಿರುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಆದರೆ ನಿನ್ನಲ್ಲಿ ಒಂದು ಒಳ್ಳೆಯ ಗುಣವಿದೆ. ನಾನು ದ್ವೇಷಿಸುವಂತೆ ನೀನು ಸಹ ನಿಕೊಲಾಯಿತರ ದುಷ್ಕೃತ್ಯಗಳನ್ನು ದ್ವೇಷಿಸುತ್ತಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಆದರೆ ನಿನ್ನಲ್ಲಿ ಒಳ್ಳೇದು ಒಂದುಂಟು, ಅದೇನಂದರೆ - ನಾನು ದ್ವೇಷಿಸುವ ನಿಕೊಲಾಯಿತರ ಕೃತ್ಯಗಳನ್ನು ನೀನು ಸಹ ದ್ವೇಷಿಸುತ್ತಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಆದರೆ ನಿನ್ನಲ್ಲಿ ಒಳ್ಳೆಯದು ಒಂದುಂಟು. ಅದೇನೆಂದರೆ ನಾನು ಹಗೆ ಮಾಡುವ ನಿಕೊಲಾಯಿತರ ಕೃತ್ಯಗಳನ್ನು ನೀನೂ ಸಹ ಹಗೆ ಮಾಡುತ್ತೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ಖರೆ ನಿಕೊಲಾಚ್ಯಾ ಲೊಕಾಕ್ನಿ ಮಿಯಾ ಕವ್ಡೆ ದ್ವೆಸ್ ಕರ್ತಾ ತವ್ಡೆಚ್ ತುಮಿಬಿ ದ್ವೆಸ್ ಕರ್ತ್ಯಾಶಿ. ಹೆ ಎಕ್ ತುಮ್ಚ್ಯಾ ತರ್ಪೆನ್ ಅಸಲ್ಲೆ ಬರೆಪಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 2:6
7 ತಿಳಿವುಗಳ ಹೋಲಿಕೆ  

ನನ್ನ ಎದುರಿನಲ್ಲಿ ಯಾವ ವಿಗ್ರಹಗಳೂ ಇಲ್ಲ. ನಿನಗೆ ದ್ರೋಹಮಾಡುವವರು ನನಗೆ ಅಸಹ್ಯ. ನಾನು ಅವರಂತೆ ಮಾಡುವುದಿಲ್ಲ!


ಆ ದುಷ್ಟ ತಂಡಗಳನ್ನು ನಾನು ದ್ವೇಷಿಸುತ್ತೇನೆ. ಮೋಸಗಾರರ ಆ ತಂಡಗಳಿಗೆ ನಾನು ಸೇರುವುದಿಲ್ಲ.


ದೇವದರ್ಶಿಯಾದ ಯೇಹೂ ಅವನನ್ನು ಎದುರುಗೊಂಡನು. ಅವನು ಹನಾನೀಯನ ಮಗ. ರಾಜನಿಗೆ ಯೇಹುವು ಹೇಳಿದ್ದೇನೆಂದರೆ, “ನೀನು ದುಷ್ಟಜನರಿಗೆ ಸಹಾಯಮಾಡಿದ್ದೇಕೆ? ಯೆಹೋವನನ್ನು ದ್ವೇಷಿಸುವ ಜನರನ್ನು ನೀನು ಪ್ರೀತಿಸಿದ್ದೇಕೆ? ಆ ಕಾರಣಕ್ಕಾಗಿ ಯೆಹೋವನು ನಿನ್ನ ಮೇಲೆ ಕೋಪಗೊಂಡಿದ್ದಾನೆ.


“ಪವಿತ್ರಾತ್ಮನು ಸಭೆಗಳಿಗೆ ಹೇಳುತ್ತಿರುವ ಈ ಸಂಗತಿಗಳನ್ನು ಕೇಳುತ್ತಿರುವವನೇ, ಗಮನವಿಟ್ಟು ಆಲಿಸು. ಯಾವನು ಜಯಗಳಿಸುತ್ತಾನೋ ಅವನಿಗೆ ತಿನ್ನಲು ಜೀವದಾಯಕ ಮರದ ಹಣ್ಣನ್ನು ಕೊಡುತ್ತೇನೆ. ಈ ಮರವು ದೇವರ ತೋಟದಲ್ಲಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು