Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 2:9 - ಪರಿಶುದ್ದ ಬೈಬಲ್‌

9 “ನಿನ್ನ ಸಂಕಟಗಳನ್ನು ನಾನು ಬಲ್ಲೆನು. ನೀನು ಬಡವನೆಂಬುದೂ ನನಗೆ ತಿಳಿದಿದೆ. ಆದರೆ ನೀನು ನಿಜವಾಗಿಯೂ ಶ್ರೀಮಂತ. ನಿನ್ನ ಬಗ್ಗೆ ಕೆಲವು ಜನರು ಹೇಳುವ ಕೆಟ್ಟ ಸಂಗತಿಗಳು ನನಗೆ ತಿಳಿದಿವೆ. ಆ ಜನರು ತಮ್ಮನ್ನು ಯೆಹೂದ್ಯರೆಂದು ಹೇಳಿಕೊಳ್ಳುತ್ತಾರೆ. ಆದರೆ ಅವರು ನಿಜವಾದ ಯೆಹೂದ್ಯರಲ್ಲ. ಅವರು ಸೈತಾನನ ಸಮಾಜದವರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ನಾನು ನಿನ್ನ ಸಂಕಟವನ್ನೂ ನಿನ್ನ ಬಡತನವನ್ನೂ ಬಲ್ಲೆನು, ಆದರೂ ನೀನು ಐಶ್ವರ್ಯವಂತನೇ. ಇದಲ್ಲದೆ ತಮ್ಮನ್ನು ಯೆಹೂದ್ಯರೆಂದು ಹೇಳಿಕೊಳ್ಳುವವರು ನಿನ್ನ ವಿಷಯವಾಗಿ ದೂಷಿಸುವುದನ್ನು ಬಲ್ಲೆನು. ಅವರು ಯೆಹೂದ್ಯರಲ್ಲ, ಸೈತಾನನ ಸಭಾಮಂದಿರದವರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ನಾನು ನಿನ್ನ ಕಷ್ಟಸಂಕಟಗಳನ್ನು ತಿಳಿದಿರುವಾತನು. ನಿನ್ನ ಬಡತನವನ್ನು ನಾನು ಬಲ್ಲೆ. ಆದರೆ ವಾಸ್ತವವಾಗಿ ನೀನು ಶ್ರೀಮಂತನೇ ಆಗಿರುವೆ. ಯೆಹೂದ್ಯರೆಂದು ಕೊಚ್ಚಿಕೊಳ್ಳುವವರು ನಿನ್ನನ್ನು ತೆಗಳುವುದು ನನಗೆ ತಿಳಿದಿದೆ. ಆದರೆ ಅವರು ಯೆಹೂದ್ಯರಲ್ಲ. ಸೈತಾನನ ಕೂಟದವರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಸತ್ತವನಾಗಿದ್ದು ಜೀವಿತನಾಗಿ ಬಂದ ಆದ್ಯಂತನು ಹೇಳುವದೇನಂದರೆ - ನಾನು ನಿನ್ನ ಸಂಕಟವನ್ನೂ ನಿನ್ನ ಬಡತನವನ್ನೂ ಬಲ್ಲೆನು; ಆದರೂ ನೀನು ಐಶ್ವರ್ಯವಂತನೇ. ಇದಲ್ಲದೆ ತಮ್ಮನ್ನು ಯೆಹೂದ್ಯರೆಂದು ಹೇಳಿಕೊಳ್ಳುವವರು ನಿನ್ನ ವಿಷಯವಾಗಿ ದೂಷಿಸುವದನ್ನು ಬಲ್ಲೆನು; ಅವರು ಯೆಹೂದ್ಯರಲ್ಲ, ಸೈತಾನನ ಸಮಾಜದವರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ನಾನು ನಿನ್ನ ಸಂಕಟವನ್ನೂ ನಿನ್ನ ದಾರಿದ್ರ್ಯವನ್ನೂ ಬಲ್ಲೆನು. ಆದರೂ ನೀನು ಸಿರಿವಂತನೇ! ಮಾತ್ರವಲ್ಲದೇ ಅವರು ಯೆಹೂದ್ಯರಲ್ಲದಿದ್ದರೂ ಯೆಹೂದ್ಯರೆಂದು ಹೇಳಿಕೊಳ್ಳುವವರು ನಿನ್ನ ವಿಷಯವಾಗಿ ದೂಷಿಸುವುದನ್ನೂ ಬಲ್ಲೆನು. ಅವರು ಸೈತಾನನ ಸಭಾಮಂದಿರದವರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ತುಜೊ ತರಾಸ್ ಮಾಕಾ ಗೊತ್ತ್ ಹಾಯ್.ತಿಯಾ ಗರಿಬ್ ಮನುನ್ ಮಾಕಾ ಗೊತ್ತ್ ಹಾಯ್. ಖರೆ ಮಟ್ಲ್ಯಾರ್ ತಿಯಾ ಸಾವ್ಕಾರ್! ಜುದೆವ್ ನ್ಹಯ್ ಹೊಲ್ಯಾರ್ಬಿ ಅಪ್ನಿ ಜುದೆವ್ ಮನುನ್ ಸಾಂಗ್ತಲ್ಯಾ ಲೊಕಾನಿ ತುಜ್ಯಾ ವಿರೊದ್ ಬೊಲಲ್ಲ್ಯಾ ಬುರ್ಶ್ಯಾ ವಿಶಯಾಂಚ್ಯಾ ವಿಶಯಾತ್ ಮಾಕಾ ಗೊತ್ತ್ ಹಾಯ್. ತೆನಿ ಸೈತಾನಾಕ್ ಸಮಂದ್ ಪಡಲ್ಲೊ ಎಕ್ ತಾಂಡೊ!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 2:9
29 ತಿಳಿವುಗಳ ಹೋಲಿಕೆ  

ಆಲಿಸು! ಅಲ್ಲಿ ಸೈತಾನನ ಗುಂಪಿಗೆ ಸೇರಿದವರಿದ್ದಾರೆ. ಆ ಜನರು ತಮ್ಮನ್ನು ಯೆಹೂದ್ಯರೆಂದು ಹೇಳಿಕೊಳ್ಳುತ್ತಾರೆ. ಆದರೆ ಅದು ಸುಳ್ಳು. ಅವರು ನಿಜವಾದ ಯೆಹೂದ್ಯರಲ್ಲ. ಆ ಜನರು ನಿನ್ನ ಮುಂದೆ ಬಂದು ನಿನ್ನ ಪಾದಗಳಿಗೆ ಅಡ್ಡಬಿದ್ದು ನಮಸ್ಕರಿಸುವಂತೆ ಮಾಡುತ್ತೇನೆ. ನಾನು ಪ್ರೀತಿಸಿದ ಜನರು ನೀವೇ ಎಂಬುದನ್ನು ಆಗ ಅವರು ತಿಳಿದುಕೊಳ್ಳುತ್ತಾರೆ.


ನಮ್ಮ ಪ್ರಭುವಾದ ಯೇಸು ಕ್ರಿಸ್ತನ ಕೃಪೆಯು ನಿಮಗೆ ಗೊತ್ತಿದೆ. ಕ್ರಿಸ್ತನು ದೇವರೊಂದಿಗೆ ಶ್ರೀಮಂತಿಕೆಯಲ್ಲಿದ್ದರೂ ನಿಮಗೋಸ್ಕರವಾಗಿ ಬಡವನಾದದ್ದು ನಿಮಗೆ ಗೊತ್ತಿದೆ. ನೀವು ಶ್ರೀಮಂತರಾಗಬೇಕೆಂದು ಕ್ರಿಸ್ತನು ಬಡವನಾದನು.


ಹೌದು, ನಾನು ಯೆಹೂದ್ಯರ ವಿಷಯದಲ್ಲಿ ದುಃಖಿಸುತ್ತೇನೆ. ದೇವರು ತನ್ನ ವಾಗ್ದಾನವನ್ನು ನೆರವೇರಿಸುವುದರಲ್ಲಿ ವಿಫಲನಾದನೆಂದು ನಾನು ಹೇಳುತ್ತಿಲ್ಲ. ಏಕೆಂದರೆ ಇಸ್ರೇಲ್ ವಂಶದಲ್ಲಿ ಹುಟ್ಟಿದವರೆಲ್ಲರೂ ದೇವರ ಮಕ್ಕಳಲ್ಲ.


ದುಃಖಿತರಂತೆ ಕಂಡರೂ ಯಾವಾಗಲೂ ಉಲ್ಲಾಸಿಸುವವರಾಗಿದ್ದೇವೆ; ಬಡವರಂತೆ ಕಂಡರೂ ಅನೇಕರನ್ನು ನಂಬಿಕೆಯಲ್ಲಿ ಐಶ್ವರ್ಯವಂತರನ್ನಾಗಿ ಮಾಡುತ್ತಿದ್ದೇವೆ; ಏನೂ ಇಲ್ಲದವರಂತೆ ಕಂಡರೂ ವಾಸ್ತವವಾಗಿ ಎಲ್ಲವನ್ನೂ ಹೊಂದಿದವರಾಗಿದ್ದೇವೆ.


ಒಳ್ಳೆಯ ಕಾರ್ಯಗಳನ್ನು ಮಾಡಬೇಕೆಂದು ಶ್ರೀಮಂತರಿಗೆ ತಿಳಿಸು. ಸತ್ಕಾರ್ಯಗಳನ್ನು ಮಾಡುವುದರಲ್ಲೇ ಶ್ರೀಮಂತರಾಗಿರಬೇಕೆಂದು ಅವರಿಗೆ ತಿಳಿಸು. ಪರೋಪಕಾರದಲ್ಲೂ ಹಂಚಿಕೊಳ್ಳುವುದರಲ್ಲೂ ಸಂತಸಪಡಲು ಅವರಿಗೆ ತಿಳಿಸು.


“ಪ್ರಭುವಿನ (ದೇವರ) ಆತ್ಮವು ನನ್ನಲ್ಲಿ ಇದೆ. ಬಡಜನರಿಗೆ ಶುಭಸಂದೇಶವನ್ನು ತಿಳಿಸಲು ದೇವರು ನನ್ನನ್ನು ಅಭಿಷೇಕಿಸಿದ್ದಾನೆ. ಪಾಪಕ್ಕೆ ಸೆರೆಯಾಳುಗಳಾಗಿರುವ ಜನರಿಗೆ ‘ನೀವು ಬಿಡುಗಡೆಯಾಗಿದ್ದೀರಿ’ ಎಂತಲೂ ಕುರುಡರಿಗೆ, ‘ನಿಮಗೆ ಮತ್ತೆ ಕಣ್ಣು ಕಾಣಿಸುವುದು’ ಎಂತಲೂ ತಿಳಿಸುವುದಕ್ಕೆ ದೇವರು ನನ್ನನ್ನು ಕಳುಹಿಸಿದ್ದಾನೆ. ದಬ್ಬಾಳಿಕೆಗೆ ಗುರಿಯಾದವರನ್ನು ಬಿಡಿಸುವುದಕ್ಕೂ


“ನೀನು ಮಾಡುತ್ತಿರುವುದು ನನಗೆ ತಿಳಿದಿದೆ. ನೀನು ಕಷ್ಟಪಟ್ಟು ಕೆಲಸಮಾಡುತ್ತಾ ತಾಳ್ಮೆಯಿಂದಿರುವೆ. ನೀನು ಕೆಟ್ಟ ಜನರನ್ನು ಸಹಿಸಿಕೊಳ್ಳುವುದಿಲ್ಲ ಎಂಬುದು ನನಗೆ ತಿಳಿದಿದೆ. ಅಪೊಸ್ತಲರಾಗಿಲ್ಲದಿದ್ದರೂ ತಮ್ಮನ್ನು ಅಪೊಸ್ತಲರೆಂದು ಹೇಳಿಕೊಳ್ಳುವವರನ್ನು ನೀನು ಪರೀಕ್ಷಿಸಿ, ಅವರು ಸುಳ್ಳುಗಾರರೆಂಬುದನ್ನು ಕಂಡುಹಿಡಿದಿರುವೆ.


ಯೇಸು ತನ್ನ ಶಿಷ್ಯರನ್ನು ನೋಡಿ ಹೇಳಿದ್ದೇನೆಂದರೆ, “ಬಡವರಾದ ನೀವು ಧನ್ಯರು; ದೇವರ ರಾಜ್ಯವು ನಿಮ್ಮದೇ.


ನಿಮಗೆ ನಿರೀಕ್ಷೆಯಿರುವುದರಿಂದ ಸಂತೋಷವಾಗಿರಿ. ನಿಮಗೆ ಸಂಕಟಗಳಿರುವಾಗ ತಾಳ್ಮೆಯಿಂದಿರಿ. ಎಲ್ಲಾ ಸಮಯದಲ್ಲಿ ಪ್ರಾರ್ಥಿಸಿರಿ.


ಅಲ್ಲದೆ, ನಮ್ಮ ಕಷ್ಟಸಂಕಟಗಳಲ್ಲಿಯೂ ಸಂತೋಷವಾಗಿದ್ದೇವೆ. ಏಕೆಂದರೆ, ಈ ಕಷ್ಟಸಂಕಟಗಳು ನಮ್ಮಲ್ಲಿ ಹೆಚ್ಚು ತಾಳ್ಮೆಯನ್ನು ಉಂಟುಮಾಡುತ್ತವೆ.


ಮೊದಲು, ನಾನು ಕ್ರಿಸ್ತನ ವಿರುದ್ಧ ಮಾತನಾಡಿದ್ದೆನು. ಆತನನ್ನು ಹಿಂಸಿಸಿದ್ದೆನು. ಆತನಿಗೆ ನೋವಾಗುವಂಥ ಕಾರ್ಯಗಳನ್ನು ಮಾಡಿದ್ದೆನು. ಆದರೆ ನಾನೇನು ಮಾಡುತ್ತಿದ್ದೇನೆಂಬುದು ನನಗೆ ತಿಳಿದಿರಲಿಲ್ಲವಾದ್ದರಿಂದ ದೇವರು ನನಗೆ ಕರುಣೆ ತೋರಿದನು. ನಂಬದಿರುವಾಗ ನಾನು ಅವುಗಳನ್ನು ಮಾಡಿದೆನು.


ನಾವು ನಿಮ್ಮೊಡನಿದ್ದಾಗ, ನಾವೆಲ್ಲರೂ ಹಿಂಸೆಯನ್ನು ಅನುಭವಿಸಬೇಕಾಗುತ್ತದೆಯೆಂದು ನಿಮಗೆ ತಿಳಿಸಿದೆವು. ನಾವು ಹೇಳಿದಂತೆಯೇ ಅದು ಸಂಭವಿಸಿತು ಎಂಬುದು ನಿಮಗೆ ತಿಳಿದಿದೆ.


ಆ ವಿಶ್ವಾಸಿಗಳು ಅತೀವ ಕಷ್ಟಗಳಿಂದ ಪರೀಕ್ಷಿಸಲ್ಪಟ್ಟಿದ್ದಾರೆ. ಅವರು ಬಹಳ ಬಡಜನರು. ಆದರೆ ಅವರು ತಮ್ಮ ಮಹಾ ಆನಂದದಿಂದ ಬಹಳವಾಗಿ ಕೊಟ್ಟರು.


ಕ್ರಿಸ್ತನ ಪ್ರೀತಿಯಿಂದ ಯಾವುದು ನಮ್ಮನ್ನು ಬೇರ್ಪಡಿಸಬಲ್ಲದು? ಕಷ್ಟಸಂಕಟಗಳಾಗಲಿ ಇಕ್ಕಟ್ಟುಗಳಾಗಲಿ ಹಿಂಸೆಯಾಗಲಿ ಆಹಾರವಿಲ್ಲದಿರುವುದಾಗಲಿ ಬಟ್ಟೆಯಿಲ್ಲದಿರುವುದಾಗಲಿ ಅಪಾಯವಾಗಲಿ ಮರಣವಾಗಲಿ ನಮ್ಮನ್ನು ಕ್ರಿಸ್ತನ ಪ್ರೀತಿಯಿಂದ ಬೇರ್ಪಡಿಸಬಲ್ಲವೇ? ಇಲ್ಲ!


“ಸ್ವಾಮೀ, ಅವರು ಯಾರೆಂಬುದು ನಿಮಗೆ ತಿಳಿದಿದೆ” ಎಂದು ನಾನು ಉತ್ತರಿಸಿದೆನು. ಆಗ ಹಿರಿಯನು, “ಈ ಜನರು ಭೀಕರ ಸಂಕಟವನ್ನು ಅನುಭವಿಸಿ ಬಂದವರು. ಅವರು ಕುರಿಮರಿಯಾದಾತನ ರಕ್ತದಿಂದ ತಮ್ಮ ನಿಲುವಂಗಿಗಳನ್ನು ತೊಳೆದುಕೊಂಡಿದ್ದಾರೆ. ಈಗ ಅವರು ಶುಭ್ರವಾಗಿದ್ದಾರೆ ಮತ್ತು ಬಿಳುಪಾಗಿದ್ದಾರೆ.


ಅವರು ಹಲವಾರು ವಿಧದಲ್ಲಿ ಆತನನ್ನು ದೂಷಿಸಿ ನಿಂದಿಸಿದರು.


“ತನಗೋಸ್ಕರ ಮಾತ್ರ ಸಂಪತ್ತನ್ನು ಕೂಡಿಸಿಟ್ಟುಕೊಳ್ಳುವವನ ಗತಿ ಇದೇ. ದೇವರ ದೃಷ್ಟಿಯಲ್ಲಿ ಅವನು ಐಶ್ವರ್ಯವಂತನಲ್ಲ.”


“ನಾನು ಯೆಹೂದ್ಯನು” ಎಂದು ಹೇಳಿಕೊಳ್ಳುತ್ತಿರುವ ನಿನ್ನ ವಿಷಯವಾದರೂ ಏನು? ಧರ್ಮಶಾಸ್ತ್ರದಲ್ಲಿ ನಂಬಿಕೆಯಿಟ್ಟು ದೇವರಿಗೆ ಸಮೀಪವಾಗಿರುವುದಾಗಿ ನೀನು ಹೆಮ್ಮೆಪಡುವೆ.


ಪ್ರತಿಯೊಂದು ಸಭಾಮಂದಿರದಲ್ಲಿಯೂ ನಾನು ಅವರನ್ನು ದಂಡಿಸಿದೆನು. ಯೇಸುವಿನ ವಿರುದ್ಧ ದೂಷಣೆಯ ಮಾತುಗಳನ್ನು ಅವರ ಬಾಯಿಂದ ಹೊರಡಿಸಲು ನಾನು ಪ್ರಯತ್ನಿಸಿದೆನು. ಆ ವಿಶ್ವಾಸಿಗಳ ಮೇಲೆ ಬಹುಕೋಪವುಳ್ಳವನಾಗಿದ್ದು ಅವರನ್ನು ಹುಡುಕಿಹುಡುಕಿ ಹಿಂಸಿಸುವುದಕ್ಕಾಗಿ ವಿದೇಶದ ಪಟ್ಟಣಗಳಿಗೂ ಹೋದೆನು.


ಯೇಸುವಿನ ಶಿಷ್ಯರನ್ನು ಬಲಗೊಳಿಸಿ, ನಂಬಿಕೆಯಲ್ಲಿ ದೃಢವಾಗಿರಲು ಅವರಿಗೆ ಪ್ರೋತ್ಸಾಹಿಸಿದರು, “ನಾವು ದೇವರ ರಾಜ್ಯಕ್ಕೆ ಅನೇಕ ಕಷ್ಟಗಳ ಮೂಲಕ ಹೋಗಬೇಕಾಗಿದೆ” ಎಂದು ಬೋಧಿಸಿದರು.


“ನೀವು ನನ್ನಲ್ಲಿ ಶಾಂತಿಯನ್ನು ಹೊಂದಿದವರಾಗಿರಬೇಕೆಂದು ನಾನು ನಿಮಗೆ ಈ ಸಂಗತಿಗಳನ್ನೆಲ್ಲಾ ಹೇಳಿದ್ದೇನೆ. ಈ ಲೋಕದಲ್ಲಿ ನಿಮಗೆ ಸಂಕಟವಿದೆ. ಆದರೆ ಧೈರ್ಯದಿಂದಿರಿ! ನಾನು ಈ ಲೋಕವನ್ನು ಸೋಲಿಸಿದ್ದೇನೆ!” ಎಂದು ಹೇಳಿದನು.


ಯೇಸು ಸೈತಾನನಿಗೆ, “ಇಲ್ಲಿಂದ ತೊಲಗು! ‘ನಿನ್ನ ದೇವರಾದ ಪ್ರಭುವನ್ನೇ ಆರಾಧಿಸಬೇಕು, ಆತನೊಬ್ಬನನ್ನೇ ಸೇವಿಸಬೇಕು’ ಎಂದು ಪವಿತ್ರ ಗ್ರಂಥದಲ್ಲಿ ಬರೆದಿದೆ” ಎಂದು ಹೇಳಿದನು.


ಯೋಹಾನನೆಂಬ ನಾನು ಕ್ರಿಸ್ತನಲ್ಲಿ ನಿಮ್ಮ ಸಹೋದರನಾಗಿದ್ದೇನೆ. ನಾವೆಲ್ಲರೂ ಒಟ್ಟಾಗಿ ಯೇಸುವಿನ ನಿಮಿತ್ತ ಸಂಕಟಗಳಲ್ಲಿಯೂ ರಾಜ್ಯದಲ್ಲಿಯೂ ತಾಳ್ಮೆಯಲ್ಲಿಯೂ ಪಾಲುಗಾರರಾಗಿದ್ದೇವೆ. ನಾನು ದೇವರ ಸಂದೇಶಕ್ಕೂ ಯೇಸುವಿನ ಸತ್ಯಕ್ಕೂ ನಂಬಿಗಸ್ತನಾಗಿದ್ದುದರಿಂದ ಪತ್ಮೊಸ್ ದ್ವೀಪದಲ್ಲಿದ್ದೆನು.


“ನೀನು ಎಲ್ಲಿ ವಾಸಮಾಡುತ್ತಿರುವೆ ಎಂಬುದು ನನಗೆ ತಿಳಿದಿದೆ. ಸೈತಾನನ ಸಿಂಹಾಸನ ವಿರುವ ಕಡೆಯಲ್ಲಿ ನೀನು ವಾಸಿಸುತ್ತಿರುವೆ. ಆದರೆ ನೀನು ನನಗೆ ನಂಬಿಗಸ್ತನಾಗಿರುವೆ. ಅಂತಿಪನ ಕಾಲದಲ್ಲಿಯೂ ನೀನು ನನ್ನಲ್ಲಿಟ್ಟಿರುವ ನಂಬಿಕೆಯನ್ನು ತಿಳಿಸಲು ನಿರಾಕರಿಸಲಿಲ್ಲ. ನಿನ್ನ ಪಟ್ಟಣದಲ್ಲಿ ಕೊಲ್ಲಲ್ಪಟ್ಟ ಅಂತಿಪನು ನನ್ನ ನಂಬಿಗಸ್ತ ಸಾಕ್ಷಿಯಾಗಿದ್ದನು. ನಿನ್ನ ನಗರ ಸೈತಾನನು ವಾಸಿಸುವ ನಗರವಾಗಿದೆ.


“ಆದರೆ ಥುವತೈರದಲ್ಲಿರುವ ಇನ್ನಿತರರಿಗೆ ನಾನು ಹೇಳುವುದೇನೆಂದರೆ, ನೀವು ಆಕೆಯ ಬೋಧನೆಗಳನ್ನು ಅನುಸರಿಸಲಿಲ್ಲ, ‘ಸೈತಾನನ ಅಗಾಧವಾದ ರಹಸ್ಯಗಳು’ ಎಂದು ಅವರು ಹೇಳುವ ಸಂಗತಿಗಳನ್ನು ನೀವು ಕಲಿತುಕೊಂಡಿಲ್ಲ. ಆದ್ದರಿಂದ ನಾನು ಬೇರೊಂದು ಹೊರೆಯನ್ನು ನಿಮ್ಮ ಮೇಲೆ ಹೊರಿಸುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು