Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 20:11 - ಪರಿಶುದ್ದ ಬೈಬಲ್‌

11 ಬಳಿಕ ನಾನು ಒಂದು ದೊಡ್ಡ ಬಿಳಿ ಸಿಂಹಾಸನವನ್ನೂ ಆ ಸಿಂಹಾಸನದ ಮೇಲೆ ಕುಳಿತಿದ್ದಾತನನ್ನೂ ನೋಡಿದೆನು. ಭೂಮಿ ಮತ್ತು ಆಕಾಶಗಳು ಆತನ ಬಳಿಯಿಂದ ಓಡಿಹೋಗಿ ಅದೃಶ್ಯವಾದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಆ ಮೇಲೆ ಬೆಳ್ಳಗಿರುವ ಮಹಾ ಸಿಂಹಾಸನವನ್ನೂ ಅದರ ಮೇಲೆ ಕುಳಿತಿದ್ದಾತನನ್ನೂ ಕಂಡೆನು. ಆತನೆದುರಿನಿಂದ ಭೂಮ್ಯಾಕಾಶಗಳು ಓಡಿಹೋದವು, ಆದರೆ ಹೋಗುವುದಕ್ಕೆ ಅವುಗಳಿಗೆ ಸ್ಥಳವಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಅನಂತರ ಶ್ವೇತವರ್ಣದ ಒಂದು ಮಹಾಸಿಂಹಾಸನವನ್ನು ಕಂಡೆ. ಅದರಲ್ಲಿ ಒಬ್ಬರು ಆಸೀನರಾಗಿದ್ದರು. ಅವರ ಸನ್ನಿಧಿಯಿಂದ ಭೂಮ್ಯಾಕಾಶಗಳು ತಮ್ಮ ಇರುವಿಕೆಯೇ ಇಲ್ಲದಂತೆ ಕಣ್ಮರೆಯಾಗಿ ಹೋದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಆಮೇಲೆ ಬೆಳ್ಳಗಿರುವ ಮಹಾ ಸಿಂಹಾಸನವನ್ನೂ ಅದರ ಮೇಲೆ ಕೂತಿದ್ದಾತನನ್ನೂ ಕಂಡೆನು. ಆತನೆದುರಿನಿಂದ ಭೂಮ್ಯಾಕಾಶಗಳು ಓಡಿಹೋಗಿ ಇನ್ನು ಕಾಣಿಸದ ಹಾಗಾದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಆಮೇಲೆ ಬೆಳ್ಳಗಿರುವ ಮಹಾ ಸಿಂಹಾಸನವನ್ನು ಕಂಡೆನು. ಅದರ ಮೇಲೆ ಒಬ್ಬರು ಆಸೀನರಾಗಿದ್ದರು. ಅವರ ಸನ್ನಿಧಿಯಿಂದ ಭೂಮ್ಯಾಕಾಶಗಳು ಓಡಿಹೋಗಿ ಸ್ಥಳ ಕಾಣಿಸದಂತಾದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ತನ್ನಾ ಎಕ್ ಮೊಟೆ ಫಾಂಡ್ರೆ ಸಿವಾಸನ್ ಅನಿ ತ್ಯೆಚ್ಯಾ ವರ್ತಿ ಬಸಲ್ಲ್ಯಾಕ್ ಮಿಯಾ ಬಗಟ್ಲೊ. ಜಿಮಿನ್ ಅನಿ ಸರ್ಗ್ ತ್ಯೆಚ್ಯಾ ಇದ್ರಾಕ್ನಾ ಹುಡುನ್ ಗೆಲೆ ಅನಿ ನಾ ಪತ್ತೊ ಹೊಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 20:11
27 ತಿಳಿವುಗಳ ಹೋಲಿಕೆ  

ನಂತರ ನೂತನ ಪರಲೋಕವನ್ನು ಮತ್ತು ನೂತನ ಭೂಮಿಯನ್ನು ನಾನು ನೋಡಿದೆನು. ಮೊದಲನೆ ಪರಲೋಕ ಮತ್ತು ಮೊದಲನೆ ಭೂಮಿ ಅದೃಶ್ಯವಾಗಿದ್ದವು. ಅಲ್ಲಿ ಸಮುದ್ರವಿರಲಿಲ್ಲ.


ಈಗಿರುವ ಆಕಾಶಕ್ಕೂ ಭೂಮಿಗೂ ಅದೇ ದೇವರ ವಾಕ್ಯವು ಆಧಾರವಾಗಿದೆ. ಆಕಾಶ ಮತ್ತು ಭೂಮಿಗಳು ಬೆಂಕಿಯಿಂದ ನಾಶಗೊಳ್ಳಲು ಇಡಲ್ಪಟ್ಟಿವೆ. ದೇವರಿಗೆ ವಿರುದ್ಧವಾಗಿರುವ ಜನರೆಲ್ಲರಿಗೆ ಆಗುವ ನ್ಯಾಯತೀರ್ಪಿನ ದಿನಕ್ಕಾಗಿಯೂ ನಾಶನಕ್ಕಾಗಿಯೂ ಭೂಮ್ಯಾಕಾಶಗಳು ಇಡಲ್ಪಟ್ಟಿವೆ.


“ಮನುಷ್ಯಕುಮಾರನು ತನ್ನ ಮಹಿಮೆಯಲ್ಲಿ ಸಮಸ್ತ ದೇವದೂತರ ಸಮೇತ ಮತ್ತೆ ಬರುವಾಗ ರಾಜನಾಗಿ ಮಹಾಸಿಂಹಾಸನದ ಮೇಲೆ ಕುಳಿತುಕೊಳ್ಳುತ್ತಾನೆ.


ಆಮೇಲೆ ಕಬ್ಬಿಣ, ಮಣ್ಣು, ಕಂಚು, ಬೆಳ್ಳಿ, ಚಿನ್ನ ಎಲ್ಲವೂ ಏಕಕಾಲಕ್ಕೆ ಒಡೆದು ಚೂರುಚೂರಾದವು. ಆ ಚೂರುಗಳೆಲ್ಲ ಬೇಸಿಗೆಕಾಲದ ಕಣದಲ್ಲಿನ ಹೊಟ್ಟಿನಂತಾದವು. ಗಾಳಿಯು ಆ ಚೂರುಗಳನ್ನು ಹಾರಿಸಿಕೊಂಡು ಹೋಯಿತು. ಅಲ್ಲಿ ಏನೂ ಉಳಿಯಲಿಲ್ಲ. ಹಿಂದೆಂದೂ ಅಲ್ಲೊಂದು ಪ್ರತಿಮೆ ಇತ್ತೆಂದು ಯಾರೂ ಹೇಳುವಂತಿರಲಿಲ್ಲ. ಆಮೇಲೆ ಆ ಪ್ರತಿಮೆಗೆ ಅಪ್ಪಳಿಸಿದ ಬಂಡೆಯು ಒಂದು ದೊಡ್ಡ ಪರ್ವತವಾಗಿ ಇಡೀ ಭೂಮಂಡಲವನ್ನು ವ್ಯಾಪಿಸಿತು.


ನೀವು ಕಠಿಣರಾಗಿದ್ದೀರಿ ಮತ್ತು ಮೊಂಡರಾಗಿದ್ದೀರಿ. ಮಾರ್ಪಾಟಾಗಲು ನಿಮಗೆ ಇಷ್ಟವಿಲ್ಲ. ಆದ್ದರಿಂದ ನಿಮಗೆ ಬರಲಿರುವ ದಂಡನೆಯನ್ನು ನೀವು ಹೆಚ್ಚುಹೆಚ್ಚು ಮಾಡಿಕೊಳ್ಳುತ್ತಿದ್ದೀರಿ. ದೇವರು ತನ್ನ ಕೋಪವನ್ನು ತೋರಿಸುವ ದಿನದಲ್ಲಿ ನಿಮಗೆ ಆ ದಂಡನೆಯಾಗುವುದು. ಆ ದಿನದಲ್ಲಿ ದೇವರ ನ್ಯಾಯವಾದ ತೀರ್ಪುಗಳನ್ನು ಜನರು ನೋಡುವರು.


ಭೂಮಿಯೂ ಆಕಾಶವೂ ನಾಶವಾಗುತ್ತವೆ, ಆದರೆ ನಾನು ಹೇಳಿದ ಮಾತುಗಳು ನಾಶವಾಗುವುದೇ ಇಲ್ಲ!


ಸಕಲ ದ್ವೀಪಗಳೂ ಅದೃಶ್ಯವಾದವು ಮತ್ತು ಬೆಟ್ಟಗಳೇ ಇಲ್ಲವಾದವು.


ಆಕಾಶವು ವಿಭಾಗಗೊಂಡು ಸುರುಳಿಯಂತೆ ಸುತ್ತಲ್ಪಟ್ಟಿತು. ಪ್ರತಿಯೊಂದು ಬೆಟ್ಟ ಮತ್ತು ದ್ವೀಪಗಳು ತಮ್ಮ ನೆಲೆಯಿಂದ ಚಲಿಸಿದವು.


ಆ ದೇವದೂತನು ಪುರಾತನ ಘಟಸರ್ಪವನ್ನು ಹಿಡಿದನು. ಆ ಘಟಸರ್ಪವೇ ಸೈತಾನ. ದೇವದೂತನು ಅವನನ್ನು ಸರಪಣಿಗಳಿಂದ ಕಟ್ಟಿ ಒಂದುಸಾವಿರ ವರ್ಷಗಳ ಕಾಲ ಬಂಧನದಲ್ಲಿಟ್ಟನು.


ಆದರೆ ಆ ಘಟಸರ್ಪವೂ ಅದರ ದೂತರೂ ಸೋತುಹೋಗಿ ಪರಲೋಕದಲ್ಲಿ ತಮ್ಮ ಸ್ಥಾನಗಳನ್ನು ಕಳೆದುಕೊಂಡರು.


ಕಾರ್ಮೋಡಗಳು ಆತನನ್ನು ಕವಿದುಕೊಂಡಿವೆ. ನೀತಿಯೂ ನ್ಯಾಯವೂ ಆತನ ರಾಜ್ಯದ ಬಲವಾಗಿವೆ.


ನಿನ್ನ ರಾಜ್ಯವು ಸತ್ಯದ ಮೇಲೆಯೂ ನ್ಯಾಯದ ಮೇಲೆಯೂ ಕಟ್ಟಲ್ಪಟ್ಟಿದೆ. ನಿನ್ನ ಸಿಂಹಾಸನದ ಮುಂದೆ ಪ್ರೀತಿಯೂ ನಂಬಿಗಸ್ತಿಕೆಯೂ ಸೇವಕರುಗಳಾಗಿವೆ.


ದೇವರು ತನ್ನ ಪರಿಶುದ್ಧ ಸಿಂಹಾಸನದ ಮೇಲೆ ಕುಳಿತುಕೊಂಡಿದ್ದಾನೆ; ದೇವರು ಎಲ್ಲಾ ಜನಾಂಗಗಳನ್ನು ಆಳುವನು.


ಕೂಡಲೇ ನಾನು ಪವಿತ್ರಾತ್ಮನ ವಶನಾದೆನು. ಪರಲೋಕದಲ್ಲಿ ನನ್ನೆದುರಿಗೆ ಒಂದು ಸಿಂಹಾಸನವಿತ್ತು. ಯಾರೋ ಒಬ್ಬನು ಆ ಸಿಂಹಾಸನದ ಮೇಲೆ ಕುಳಿತಿದ್ದನು.


ಆತನು ಭೂಮಿಯನ್ನು ಅದರ ಸ್ಥಳದೊಳಗಿಂದ ಕದಲಿಸುವನು; ಅದರ ಅಸ್ತಿವಾರಗಳನ್ನು ನಡುಗಿಸುವನು.


ನಂತರ ಪರಲೋಕವು ತೆರೆದಿರುವುದನ್ನು ನಾನು ನೋಡಿದೆನು. ನನ್ನ ಎದುರಿನಲ್ಲಿ ಒಂದು ಬಿಳಿ ಕುದುರೆಯಿತ್ತು. ಕುದುರೆಯ ಮೇಲೆ ಕುಳಿತಿದ್ದ ಸವಾರನ ಹೆಸರು ನಂಬಿಗಸ್ತ ಮತ್ತು ಸತ್ಯವಂತ. ಆತನು ತನ್ನ ತೀರ್ಪುಗಳಲ್ಲಿಯೂ ಯುದ್ಧಗಳಲ್ಲಿಯೂ ನ್ಯಾಯವಂತನಾಗಿದ್ದನು.


ಖಂಡಿತವಾಗಿಯೂ ನೀನು ಆ ಪಟ್ಟಣವನ್ನು ನಾಶಮಾಡುವುದಿಲ್ಲ. ಕೆಟ್ಟವರನ್ನು ಕೊಲ್ಲುವುದಕ್ಕಾಗಿ ನೀನು ಐವತ್ತು ಮಂದಿ ನೀತಿವಂತರನ್ನು ಕೊಲ್ಲುವುದಿಲ್ಲ. ಒಂದುವೇಳೆ ನೀನು ಕೊಂದರೆ, ಒಳ್ಳೆಯವರೂ ಕೆಟ್ಟವರೂ ಸರಿಸಮಾನರಾಗುವರು. ಅವರಿಬ್ಬರೂ ದಂಡನೆಗೆ ಗುರಿಯಾಗುವರು. ನೀನು ಲೋಕದವರಿಗೆಲ್ಲ ನ್ಯಾಯಾಧಿಪತಿ. ನೀನು ನ್ಯಾಯವಾದದ್ದನ್ನೇ ಮಾಡುವೆ ಎಂದು ನನಗೆ ಗೊತ್ತಿದೆ” ಎಂದು ಹೇಳಿದನು.


ಲೋಕವೂ ಆಕಾಶವೂ ಕೊನೆಗೊಳುತ್ತವೆ. ನೀನಾದರೊ ಶಾಶ್ವತವಾಗಿರುವೆ! ಅವು ಬಟ್ಟೆಗಳಂತೆ ಹಳೆಯದಾಗುತ್ತವೆ. ನೀನು ಅವುಗಳನ್ನು ಉಡುಪುಗಳಂತೆ ಬದಲಾಯಿಸುವೆ. ಅವುಗಳೆಲ್ಲಾ ಬದಲಾಗುತ್ತವೆ.


ಅರಸನಾದ ಉಜ್ಜೀಯನು ಮರಣಹೊಂದಿದ ವರ್ಷದಲ್ಲಿ ನಾನು ನನ್ನ ಒಡೆಯನನ್ನು ಕಂಡೆನು. ಆತನು ಅದ್ಭುತವೂ ಉನ್ನತವೂ ಆಗಿರುವ ಸಿಂಹಾಸನದ ಮೇಲೆ ಕುಳಿತಿದ್ದನು. ಆತನ ಉದ್ದವಾದ ನಿಲುವಂಗಿಯು ಆಲಯವನ್ನು ತುಂಬಿಕೊಂಡಿತ್ತು.


ಆ ಪುರಾತನ ರಾಜನ ಮುಂದೆ ಬೆಂಕಿಯ ನದಿಯೊಂದು ಹರಿಯುತ್ತಿತ್ತು. ಲಕ್ಷೋಪಲಕ್ಷ ದೂತರು ಆತನನ್ನು ಸೇವಿಸುತ್ತಿದ್ದರು. ಕೋಟ್ಯಾನುಕೋಟಿ ಪರಲೋಕ ಸಮೂಹದವರು ಆತನ ಮುಂದೆ ನಿಂತಿದ್ದರು. ನ್ಯಾಯಾಲಯವು ಪ್ರಾರಂಭವಾಗುವುದಕ್ಕೆ ಎಲ್ಲ ಸಿದ್ಧತೆಗಳು ಆಗಿದ್ದವು ಮತ್ತು ಪುಸ್ತಕಗಳು ತೆರೆಯಲ್ಪಟ್ಟವು.


ಆದರೆ ನ್ಯಾಯತೀರ್ಪಿನ ದಿನದಲ್ಲಿ ಟೈರ್, ಸೀದೋನ್‌ಗಳಿಗಿಂತಲೂ ನಿಮ್ಮ ಸ್ಥಿತಿಯು ಬಹಳ ದುಸ್ಥಿತಿಗೆ ಒಳಗಾಗುವುದೆಂದು ನಾನು ನಿಮಗೆ ಹೇಳುತ್ತೇನೆ.


ಸಿಂಹಾಸನದ ಮೇಲೆ ಕುಳಿತಿದ್ದವನು, “ನೋಡು! ನಾನು ಎಲ್ಲವನ್ನೂ ಹೊಸದಾಗಿ ಸೃಷ್ಟಿಸುತ್ತೇನೆ!” ಎಂದು ಹೇಳಿದನು. ನಂತರ ಆತನು, “ಈ ವಾಕ್ಯಗಳು ಸತ್ಯವಾದುವುಗಳೂ ನಂಬತಕ್ಕವುಗಳೂ ಆಗಿರುವುದರಿಂದ ಇವುಗಳನ್ನು ಬರೆ” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು