ಪ್ರಕಟನೆ 20:14 - ಪರಿಶುದ್ದ ಬೈಬಲ್14 ಆಮೇಲೆ ಮೃತ್ಯುವನ್ನೂ ಪಾತಾಳವನ್ನೂ ಬೆಂಕಿಯ ಕೆರೆಗೆ ಎಸೆಯಲಾಯಿತು. ಈ ಬೆಂಕಿಯ ಕೆರೆಯು ಎರಡನೆಯ ಮರಣ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಆ ಮೇಲೆ ಮೃತ್ಯುವೂ ಪಾತಾಳವೂ ಬೆಂಕಿಯ ಕೆರೆಗೆ ದೊಬ್ಬಲ್ಪಟ್ಟವು. ಆ ಬೆಂಕಿಯ ಕೆರೆಯೇ ಎರಡನೆಯ ಮರಣವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಅನಂತರ ಮೃತ್ಯುವನ್ನೂ ಪಾತಾಳವನ್ನೂ ಅಗ್ನಿಸರೋವರಕ್ಕೆ ಎಸೆಯಲಾಯಿತು. ಆ ಅಗ್ನಿಸರೋವರವೇ ಎರಡನೆಯ ಮರಣ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಆಮೇಲೆ ಮೃತ್ಯುವೂ ಪಾತಾಳವೂ ಬೆಂಕಿಯ ಕೆರೆಗೆ ದೊಬ್ಬಲ್ಪಟ್ಟವು; ಆ ಬೆಂಕಿಯ ಕೆರೆಯೇ ಎರಡನೆಯ ಮರಣವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಆಮೇಲೆ ಮೃತ್ಯುವೂ ಪಾತಾಳವೂ ಬೆಂಕಿಯ ಕೆರೆಗೆ ದೊಬ್ಬಲಾದವು. ಆ ಬೆಂಕಿಯ ಕೆರೆಯೇ ಎರಡನೆಯ ಮರಣವು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್14 ತನ್ನಾ ಮರ್‍ನಾಕ್ ಅನಿ ಪಾತಾಳಾತ್ಲ್ಯಾ ಲೊಕಾಕ್ನಿ ಆಗಿಚ್ಯಾ ನರ್ಕಾತ್ ಟಾಕುನ್ ಹೊಲೆ. ಹ್ಯೊ ಆಗಿಚೊ ದೊನ್ವೆಚೆ ಮರಾನ್. ಅಧ್ಯಾಯವನ್ನು ನೋಡಿ |
ಆದರೆ ಆ ಮೃಗವನ್ನೂ ಸುಳ್ಳುಪ್ರವಾದಿಯನ್ನೂ ಸೆರೆಹಿಡಿಯಲಾಯಿತು. ಈ ಸುಳ್ಳುಪ್ರವಾದಿಯೇ ಮೃಗಕ್ಕಾಗಿ ಅದ್ಭುತಗಳನ್ನು ಮಾಡಿದವನು. ಈ ಸುಳ್ಳುಪ್ರವಾದಿಯು ಮೃಗದ ಗುರುತು ಹಾಕಿಸಿಕೊಂಡಿರುವ ಮತ್ತು ಅದರ ವಿಗ್ರಹವನ್ನು ಆರಾಧಿಸಿದ ಜನರನ್ನು ಮರುಳು ಮಾಡಲು ಈ ಅದ್ಭುತಗಳನ್ನು ಬಳಸಿದ್ದನು. ಈ ಸುಳ್ಳುಪ್ರವಾದಿಯನ್ನೂ ಮೃಗವನ್ನೂ, ಬೆಂಕಿ ಮತ್ತು ಗಂಧಕಗಳಿಂದ ಉರಿಯುವ ಕೆರೆಯಲ್ಲಿ ಜೀವಂತವಾಗಿ ಎಸೆಯಲಾಯಿತು.
ನಾನು ನೋಡಿದಾಗ, ನನ್ನ ಮುಂದೆ ಒಂದು ಬೂದುಬಣ್ಣದ ಕುದುರೆಯಿರುವುದು ನನಗೆ ಕಾಣಿಸಿತು. ಆ ಕುದುರೆಯ ಮೇಲೆ ಕುಳಿತಿದ್ದ ಸವಾರನೇ ಮೃತ್ಯು. ಅವನ ಹಿಂದೆ ಪಾತಾಳ ಎಂಬುವನು ಬಂದನು. ಅವರಿಗೆ ಭೂಮಿಯ ಕಾಲುಭಾಗದ ಮೇಲೆ ಅಧಿಕಾರವನ್ನು ನೀಡಲಾಯಿತು. ಕತ್ತಿಯಿಂದಲೂ ಬರಗಾಲದಿಂದಲೂ ರೋಗಗಳಿಂದಲೂ ಮತ್ತು ಲೋಕದ ಮೇಲಿರುವ ಕಾಡುಮೃಗಗಳಿಂದಲೂ ಜನರನ್ನು ಕೊಲ್ಲುವ ಅಧಿಕಾರವನ್ನು ಅವರಿಗೆ ನೀಡಲಾಯಿತು.