ಪ್ರಕಟನೆ 20:3 - ಪರಿಶುದ್ದ ಬೈಬಲ್3 ಆ ದೇವದೂತನು ಘಟಸರ್ಪವನ್ನು ತಳವಿಲ್ಲದ ಕೂಪಕ್ಕೆ ತಳ್ಳಿ ಬಾಗಿಲನ್ನು ಮುಚ್ಚಿ ಬೀಗಹಾಕಿದನು, ಆ ಘಟಸರ್ಪವು ಒಂದುಸಾವಿರ ವರ್ಷಗಳ ಕಾಲ ಮುಗಿಯುವ ತನಕ ಲೋಕದ ಜನರನ್ನು ಮರುಳು ಮಾಡದಿರಲೆಂದು ಆ ದೇವದೂತನು ಹೀಗೆ ಮಾಡಿದನು. ಒಂದುಸಾವಿರ ವರ್ಷಗಳ ತರುವಾಯ ಆ ಘಟಸರ್ಪಕ್ಕೆ ಸ್ವಲ್ಪಕಾಲ ಬಿಡುಗಡೆ ಮಾಡಲಾಗುವುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಆ ಸಾವಿರ ವರ್ಷ ಮುಗಿಯುವ ತನಕ ಸೈತಾನನು ಇನ್ನೂ ಜನಾಂಗಗಳನ್ನು ಮೋಸಗೊಳಿಸದಂತೆ ದೇವದೂತನು ಅವನನ್ನು ಅಧೋಲೋಕಕ್ಕೆ ತಳ್ಳಿ ಬಾಗಿಲು ಮುಚ್ಚಿ ಅದಕ್ಕೆ ಮುದ್ರೆಹಾಕಿದನು. ಆ ಸಾವಿರ ವರ್ಷಗಳಾದ ಮೇಲೆ ಅವನಿಗೆ ಸ್ವಲ್ಪಕಾಲ ಬಿಡುಗಡೆ ಆಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಆ ಒಂದು ಸಾವಿರ ವರ್ಷಗಳ ಕಾಲದವರೆಗೆ, ಅದು ಜನಾಂಗಗಳನ್ನು ಮರುಳುಗೊಳಿಸದಂತೆ ದೇವದೂತನು ಸೈತಾನನನ್ನು ಪಾತಾಳಕ್ಕೆ ದಬ್ಬಿ, ಬಾಗಿಲು ಮುಚ್ಚಿ, ಅದಕ್ಕೆ ಮುದ್ರೆ ಹಾಕಿದನು. ಆ ಸಾವಿರ ವರ್ಷಗಳ ಕಾಲ ಮುಗಿದ ಮೇಲೆ ಅವನಿಗೆ ಸ್ವಲ್ಪಕಾಲ ಬಿಡುಗಡೆ ದೊರೆಯುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಆ ಸಾವಿರ ವರುಷ ತೀರುವ ತನಕ ಸೈತಾನನು ಇನ್ನೂ ಜನಗಳನ್ನು ಮರುಳುಗೊಳಿಸದ ಹಾಗೆ ದೇವದೂತನು ಅವನನ್ನು ಅಧೋಲೋಕದಲ್ಲಿ ದೊಬ್ಬಿ ಬಾಗಿಲು ಮುಚ್ಚಿ ಅದಕ್ಕೆ ಮುದ್ರೆಹಾಕಿದನು. ಆ ಸಾವಿರ ವರುಷಗಳಾದ ಮೇಲೆ ಅವನಿಗೆ ಸ್ವಲ್ಪಕಾಲ ಬಿಡುಗಡೆಯಾಗಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಆ ಸಾವಿರ ವರ್ಷ ತೀರುವ ತನಕ ಅವನು ಇನ್ನೂ ಜನಾಂಗಗಳನ್ನು ಮೋಸಗೊಳಿಸದಂತೆ ದೂತನು ಅವನನ್ನು ಅಧೋಲೋಕದಲ್ಲಿ ತಳ್ಳಿ, ಬಾಗಿಲು ಮುಚ್ಚಿ ಅದಕ್ಕೆ ಮುದ್ರೆ ಹಾಕಿದನು. ಇವುಗಳಾದ ಮೇಲೆ ಅವನಿಗೆ ಸ್ವಲ್ಪಕಾಲ ಬಿಡುಗಡೆಯಾಗತಕ್ಕದ್ದು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್3 ಹಜಾರ್ ವರ್ಸಾ ಸರಿ ಪತರ್ ಅನಿಫಿಡೆ ದೆಶಾಂಚ್ಯಾ ಲೊಕಾಕ್ನಿ ತೆನಿ ಪಸ್ವಿನಸ್ತಾನಾ ರ್‍ಹಾವ್‍ಸಾಟ್ನಿ, ದೆವಾಚ್ಯಾ ದುತಾನ್ ತೆಕಾ ಪಾತಾಳಾತ್ ಟಾಕ್ಲ್ಯಾನ್, ಅನಿ ಚಾವಿ ಲಾವುನ್ ಛಪ್ಪೊ ಮಾರುನ್ ಬಂದೊಬಸ್ತ್ ಕರ್ಲ್ಯಾನ್. ತ್ಯೆಚ್ಯಾ ಮಾನಾ ತೆಕಾ ಉಲ್ಲ್ಯಾ ಎಳಾ ಪತರ್ ಸೈಲ್ ಸೊಡುನ್ ಹೊತಾ. ಅಧ್ಯಾಯವನ್ನು ನೋಡಿ |
ನೀನು ನೋಡಿದ ಆ ಮೃಗವು ಒಂದು ಕಾಲದಲ್ಲಿ ಜೀವಿಸಿತ್ತು. ಆದರೆ ಈಗ ಆ ಮೃಗವು ಜೀವಂತವಾಗಿಲ್ಲ. ಆದರೆ ಆ ಮೃಗವು ತಳವಿಲ್ಲದ ಕೂಪದಿಂದ ಜೀವಂತವಾಗಿ ಮೇಲೆದ್ದುಬಂದು ನಾಶವಾಗು ವುದು. ಲೋಕದಲ್ಲಿ ಜೀವಿಸುತ್ತಿರುವ ಜನರು ಆ ಮೃಗವನ್ನು ನೋಡಿ, ಅದು ಒಂದು ಕಾಲದಲ್ಲಿ ಜೀವಂತವಾಗಿತ್ತು, ಈಗ ಇಲ್ಲ, ಆದರೆ ಮತ್ತೆ ಬರುವುದು ಎಂಬುದನ್ನು ತಿಳಿದು ಅವರು ಆಶ್ಚರ್ಯಪಡುವರು. ಲೋಕವು ಸೃಷ್ಟಿಯಾದಂದಿನಿಂದ ಜೀವಬಾಧ್ಯರ ಪುಸ್ತಕದಲ್ಲಿ ಈ ಜನರ ಹೆಸರುಗಳನ್ನು ಬರೆದೇ ಇಲ್ಲ.