9 ಸೈತಾನನ ಸೈನ್ಯವು ಭೂಮಿಯಲ್ಲೆಲ್ಲಾ ಶಿಸ್ತಿನಿಂದ ನಡೆದಾಡಿ ದೇವಜನರ ಶಿಬಿರದ ಸುತ್ತಲೂ ದೇವರ ಪ್ರಿಯ ನಗರದ ಸುತ್ತಲೂ ಒಟ್ಟುಗೂಡಿದರು. ಆದರೆ ಪರಲೋಕದಿಂದ ಇಳಿದು ಬಂದ ಬೆಂಕಿಯು ಸೈತಾನನ ಸೈನ್ಯವನ್ನು ನಾಶಗೊಳಿಸಿತು.
ನನ್ನ ಜನರಾದ ಇಸ್ರೇಲಿನವರೊಂದಿಗೆ ಯುದ್ಧಕ್ಕೆ ಬರುವಿರಿ. ನೀವು ಕರೀ ಮೋಡದಂತೆ ದೇಶವನ್ನು ಕವಿಯುವಿರಿ. ಆ ಸಮಯ ಬಂದಾಗ ನನ್ನ ದೇಶಕ್ಕೆ ವಿರುದ್ಧವಾಗಿ ಯುದ್ಧ ಮಾಡಲು ನಿಮ್ಮನ್ನು ತರಿಸುವೆನು. ಆಗ ಗೋಗ್ ಮತ್ತು ಅವನೊಂದಿಗಿರುವ ರಾಜ್ಯಗಳು ನಾನು ಎಷ್ಟು ಸಾಮರ್ಥ್ಯಶಾಲಿ ಎಂದು ತಿಳಿದುಕೊಳ್ಳುವರು. ಅವರು ನನ್ನನ್ನು ಗೌರವಿಸಲು ಕಲಿಯುವರು. ನಾನು ಪವಿತ್ರನು ಎಂದು ತಿಳಿಯುವರು. ನಾನು ನಿನಗೇನು ಮಾಡಬೇಕಿದ್ದೇನೆಂದು ಅವರು ಕಾದು ನೋಡುವರು.’”
ದೇವರು ಹೇಳಿದ್ದೇನೆಂದರೆ, “ನಾನು ಮಾಗೋಗ್ ಮತ್ತು ಕಡಲ ತೀರದಲ್ಲಿ ವಾಸಿಸುವ ಜನರ ಮೇಲೆ ಬೆಂಕಿಯನ್ನು ಕಳುಹಿಸುತ್ತೇನೆ. ತಾವು ಸುರಕ್ಷಿತವಾಗಿದ್ದೇವೆ ಎಂದು ಅವರು ನೆನಸುತ್ತಾರೆ. ಆದರೆ ನಾನು ಯೆಹೋವನು ಎಂದು ಅವರಿಗೆ ತಿಳಿಯುವದು.
ಈ ಸಾಕ್ಷಿಗಳಿಗೆ ಯಾರಾದರೂ ಕೇಡು ಮಾಡಲು ಪ್ರಯತ್ನಿಸಿದರೆ, ಸಾಕ್ಷಿಗಳ ಬಾಯಿಂದ ಬೆಂಕಿಯು ಹೊರಬಂದು ಅವರ ಶತ್ರುವನ್ನು ಅಂದರೆ ಅವರಿಗೆ ತೊಂದರೆ ಮಾಡಲು ಪ್ರಯತ್ನಿಸಿದ್ದವರನ್ನೆಲ್ಲ ಸಾಯಿಸುತ್ತದೆ.
ಜನರು ತಮಗೆ ತೊಂದರೆ ಉಂಟಾಯಿತೆಂದು ಗಟ್ಟಿಯಾಗಿ ಗುಣುಗುಟ್ಟಿದರು. ಅದನ್ನು ಯೆಹೋವನು ಕೇಳಿ ಕೋಪಗೊಂಡನು. ಯೆಹೋವನಿಂದ ಬಂದ ಬೆಂಕಿ ಅವರ ವಿರುದ್ಧವಾಗಿ ಹೊತ್ತಿಕೊಂಡದ್ದರಿಂದ ಪಾಳೆಯದ ಹೊರಭಾಗದಲ್ಲಿದ್ದವರು ಸುಟ್ಟುಹೋದರು.
ನಾನು ಬಾಬಿಲೋನಿನವರನ್ನು ಬಲಾಢ್ಯ ಜನಾಂಗವಾಗಿ ಮಾಡುವೆನು. ಅವರು ಬಲಶಾಲಿಗಳೂ ನಿರ್ದಯಿಗಳೂ ಆಗಿದ್ದಾರೆ. ಅವರು ಲೋಕದಲ್ಲೆಲ್ಲಾ ಸಂಚರಿಸುವರು. ತಮ್ಮದಲ್ಲದ ಮನೆಗಳನ್ನು ಮತ್ತು ನಗರಗಳನ್ನು ತಮ್ಮ ವಶಮಾಡಿಕೊಳ್ಳುವರು.
ಆಗ ಒಡೆದುಹಾಕುವವನು ಜನಗಳ ಮುಂದೆ ಮುನ್ನುಗ್ಗಿ ಹೋಗಿ, ದ್ವಾರಗಳನ್ನು ಒಡೆದುಹಾಕಿದಾಗ ಜನರು ಪಟ್ಟಣವನ್ನು ಬಿಟ್ಟುಹೋಗುವರು. ಅವರು ತಮ್ಮ ರಾಜನನ್ನೂ ಕರ್ತನನ್ನೂ ಹಿಂಬಾಲಿಸಿಕೊಂಡು ಅಲ್ಲಿಂದ ಹೋಗುವರು.
ಬಹುಕಾಲದವರೆಗೆ ಅಗ್ನಿಕುಂಡ ಸಿದ್ಧವಾಗಿತ್ತು. ಅದು ರಾಜನಿಗಾಗಿ ಸಿದ್ಧವಾಗಿದೆ. ಅದು ಆಳವಾಗಿಯೂ ಅಗಲವಾಗಿಯೂ ಮಾಡಲ್ಪಟ್ಟಿದೆ. ಅಲ್ಲಿ ಒಂದು ದೊಡ್ಡ ಕಟ್ಟಿಗೆಯ ರಾಶಿಯೂ ಬೆಂಕಿಯೂ ಇದೆ ಮತ್ತು ಯೆಹೋವನ ಬಾಯುಸಿರು ಗಂಧಕದ ಪ್ರವಾಹದಂತೆ ಬಂದು ಎಲ್ಲವನ್ನು ನಾಶಮಾಡುವದು.
ಎಲೀಷನ ಸೇವಕನು ಹೊತ್ತಾರೆ ನಸುಕಿನಲ್ಲಿಯೇ ಮೇಲಕ್ಕೆದ್ದನು. ಸೇವಕನು ಹೊರಕ್ಕೆ ಹೋದಾಗ ರಥಗಳಿಂದ ಮತ್ತು ಕುದುರೆಗಳಿಂದ ಕೂಡಿದ ಸೈನ್ಯವು ನಗರವನ್ನು ಸುತ್ತುವರಿದಿರುವುದನ್ನು ನೋಡಿದನು! ಆ ಸೇವಕನು ಎಲೀಷನಿಗೆ, “ಅಯ್ಯೋ, ನನ್ನ ಒಡೆಯನೇ, ನಾವು ಈಗ ಏನು ಮಾಡೋಣ?” ಎಂದು ಕೇಳಿದನು.
ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಸಂರಕ್ಷಿಸಲೂ ವೈರಿಗಳನ್ನು ಸೋಲಿಸುವಂತೆ ಸಹಾಯ ಮಾಡಲೂ ನಿಮ್ಮೊಂದಿಗೆ ಪಾಳೆಯದಲ್ಲಿರುವುದರಿಂದ ನಿಮ್ಮ ಪಾಳೆಯವು ಪವಿತ್ರವಾಗಿರಬೇಕು. ಇಲ್ಲದಿದ್ದಲ್ಲಿ ನಿಮ್ಮ ಪಾಳೆಯದಲ್ಲಿರುವ ಹೊಲಸನ್ನು ನೋಡಿ ಆತನು ಹಿಂದಿರುಗಿ ಹೋಗುವನು.