ಪ್ರಕಟನೆ 21:10 - ಪರಿಶುದ್ದ ಬೈಬಲ್10 ಆ ದೇವದೂತನು ಪವಿತ್ರಾತ್ಮವಶನಾದ ನನ್ನನ್ನು ಬಹಳ ದೊಡ್ಡದಾದ ಮತ್ತು ಎತ್ತರವಾದ ಬೆಟ್ಟಕ್ಕೆ ಕೊಂಡೊಯ್ದನು. ದೇವದೂತನು ನನಗೆ ಪವಿತ್ರ ನಗರವಾದ ಜೆರುಸಲೇಮನ್ನು ತೋರಿಸಿದನು. ಆ ನಗರವು ಪರಲೋಕದೊಳಗಿಂದ ದೇವರ ಕಡೆಯಿಂದ ಇಳಿದುಬರುತ್ತಿತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ದೇವರಾತ್ಮನಲ್ಲಿ ನನ್ನನ್ನು ಎತ್ತರವಾದ ದೊಡ್ಡ ಬೆಟ್ಟಕ್ಕೆ ಎತ್ತಿಕೊಂಡು ಹೋಗಿ, ಯೆರೂಸಲೇಮೆಂಬ ಪರಿಶುದ್ಧ ಪಟ್ಟಣವು ಪರಲೋಕದೊಳಗಿಂದ, ದೇವರ ಬಳಿಯಿಂದ ಇಳಿದುಬರುವುದನ್ನು ನನಗೆ ತೋರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಆಗ ನಾನು ಪವಿತ್ರಾತ್ಮವಶನಾದೆ. ಆ ದೇವದೂತನು ನನ್ನನ್ನು ಎತ್ತರವಾದ ಬೆಟ್ಟದ ಮೇಲೆ ಕೊಂಡೊಯ್ದನು. ಅಲ್ಲಿ ನನಗೆ ಪವಿತ್ರನಗರವಾದ ಜೆರುಸಲೇಮನ್ನು ತೋರಿಸಿದನು. ಅದು ಸ್ವರ್ಗದಲ್ಲಿರುವ ದೇವರ ಬಳಿಯಿಂದ ಕೆಳಗಿಳಿದು ಬರುತ್ತಿತ್ತು; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10-11 ದೇವರಾತ್ಮವಶನಾದ ನನ್ನನ್ನು ಎತ್ತರವಾದ ದೊಡ್ಡ ಬೆಟ್ಟಕ್ಕೆ ಎತ್ತಿಕೊಂಡು ಹೋಗಿ ಯೆರೂಸಲೇಮೆಂಬ ಪರಿಶುದ್ಧ ಪಟ್ಟಣವು ದೇವರ ತೇಜಸ್ಸುಳ್ಳದ್ದಾಗಿ ಪರಲೋಕದೊಳಗಿಂದ ದೇವರ ಕಡೆಯಿಂದ ಇಳಿದುಬರುವದನ್ನು ನನಗೆ ತೋರಿಸಿದನು. ಪಟ್ಟಣದ ಪ್ರಕಾಶವು ಅಮೂಲ್ಯರತ್ನದ ಪ್ರಕಾಶಕ್ಕೆ ಸಮಾನವಾಗಿತ್ತು, ಥಳಥಳಿಸುವ ವಜ್ರವೋ ಎಂಬಂತೆ ಕಾಣಿಸಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಅವನು ಆತ್ಮದಲ್ಲಿ ನನ್ನನ್ನು ಎತ್ತರವಾದ ದೊಡ್ಡ ಬೆಟ್ಟಕ್ಕೆ ಎತ್ತಿಕೊಂಡು ಹೋಗಿ, ಪರಿಶುದ್ಧ ಪಟ್ಟಣವಾದ ಯೆರೂಸಲೇಮು ಪರಲೋಕದೊಳಗಿಂದ ದೇವರ ಕಡೆಯಿಂದ ಇಳಿದು ಬರುವುದನ್ನು ನನಗೆ ತೋರಿಸಿದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್10 ಪವಿತ್ರ್ ಆತ್ಮ್ಯಾನ್ ಮಾಕಾ ಅಪ್ನಾಚ್ಯಾ ತಾಬೆತ್ ಕರುನ್ ಘೆಟ್ಲ್ಯಾನ್, ಅನಿ ದೆವಾಚ್ಯಾ ದುತಾನ್ ಮಾಕಾ ಎಕ್ ಲೈ ಉಪ್ಪರ್ಲ್ಯಾ ಮಡ್ಡಿ ವರ್ತಿ ಘೆವ್ನ್ ಗೆಲ್ಯಾನ್ ತೆನಿ ಮಾಕಾ ಪವಿತ್ರ್ ಶಾರ್ ಜೆರುಜಲೆಮ್ ದೆವಾಕ್ನಾ ಸರ್‍ಗಾ ವೈನಾ ಉತ್ರುನ್ ಯೆತಲೆ ದಾಕ್ವುಲ್ಯಾನ್. ಅಧ್ಯಾಯವನ್ನು ನೋಡಿ |
ಅವರು ಅವನಿಗೆ, “ನೋಡು, ನಮ್ಮಲ್ಲಿ ಐವತ್ತು ಮಂದಿ ಬಲಿಷ್ಠ ಜನರಿದ್ದಾರೆ. ನಿನ್ನ ಒಡೆಯನನ್ನು ಹುಡುಕಲು ದಯವಿಟ್ಟು ಅವರಿಗೆ ಅವಕಾಶಕೊಡು. ಯೆಹೋವನ ಆತ್ಮವು ಎಲೀಯನನ್ನು ಮೇಲಕ್ಕೆ ಎತ್ತಿಕೊಂಡು ಹೋಗಿ ಯಾವುದಾದರೂ ಬೆಟ್ಟದ ಮೇಲಾಗಲಿ ಅಥವಾ ಕಣಿವೆಯಲ್ಲಾಗಲಿ ಬೀಳಿಸಿರಬೇಕು” ಎಂದು ಹೇಳಿದರು. ಆದರೆ ಎಲೀಷನು, “ಇಲ್ಲ, ಎಲೀಯನನ್ನು ಹುಡುಕಲು ಜನರನ್ನು ಕಳುಹಿಸಬೇಡಿ!” ಎಂದು ಉತ್ತರಿಸಿದನು.
ಜಯಗಳಿಸಿದ ವ್ಯಕ್ತಿಯನ್ನು ನನ್ನ ದೇವರ ಆಲಯದಲ್ಲಿ ಆಧಾರಸ್ತಂಭವನ್ನಾಗಿ ಮಾಡುವೆನು. ಅವನು ದೇವರ ಆಲಯವನ್ನು ಮತ್ತೆಂದಿಗೂ ಬಿಟ್ಟುಹೋಗುವ ಅಗತ್ಯವಿಲ್ಲ. ನನ್ನ ದೇವರ ಹೆಸರನ್ನೂ ನನ್ನ ದೇವರ ಪಟ್ಟಣದ ಹೆಸರನ್ನೂ ಅವನ ಮೇಲೆ ಬರೆಯುತ್ತೇನೆ. ಹೊಸ ಜೆರುಸಲೇಮೇ ಆ ಪಟ್ಟಣ. ಆ ಪಟ್ಟಣವು ನನ್ನ ದೇವರ ಬಳಿಯಿಂದ ಪರಲೋಕದಿಂದ ಇಳಿದುಬರುತ್ತದೆ. ನನ್ನ ಹೊಸ ಹೆಸರನ್ನೂ ಅವನ ಮೇಲೆ ಬರೆಯುತ್ತೇನೆ.